Dina Bhavishya : ಈ ರಾಶಿಯವರಿಗೆ ಅತ್ತೆ ಮನೆಯಿಂದ ಸಿಗಲಿದೆ ಭರಪೂರ ಉಡುಗೊರೆ - Vistara News

ಭವಿಷ್ಯ

Dina Bhavishya : ಈ ರಾಶಿಯವರಿಗೆ ಅತ್ತೆ ಮನೆಯಿಂದ ಸಿಗಲಿದೆ ಭರಪೂರ ಉಡುಗೊರೆ

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina Bhvishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಮಿಥುನ ರಾಶಿಯಿಂದ ಭಾನುವಾರ ಬೆಳಗ್ಗೆ 05:40ಕ್ಕೆ ಕಟಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಮೇಷ ರಾಶಿಯವರು ಭೂಮಿ ಖರೀದಿ ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಇರಲಿದೆ. ಹಣಕಾಸು ವ್ಯವಹಾರಗಳಲ್ಲಿ ಲಾಭ ಇರಲಿದೆ. ಕನ್ಯಾ ರಾಶಿಯವರಿಗೆ ಈ ರಾಶಿ ಚಕ್ರದ ವಿವಾಹಿತ ಜನರಿಗೆ ಇಂದು ಅತ್ತೆ ಮನೆ ಕಡೆಯಿಂದ ಹಣದ ಪ್ರಯೋಜನವಾಗುವ ಸಾಧ್ಯತೆ ಇದೆ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಕುಂಭ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಂಡು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (17-03-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ.
ತಿಥಿ: ಅಷ್ಟಮಿ 21:52 ವಾರ: ಭಾನುವಾರ
ನಕ್ಷತ್ರ: ಮೃಗಶಿರಾ 16:46 ಯೋಗ: ಆಯುಸ್ಮಾನ್ 17:04
ಕರಣ: ಭವ 21:52 ಅಮೃತ ಕಾಲ: ಬೆಳಗ್ಗೆ 07:44 ರಿಂದ 09:23 ರವರೆಗೆ
ದಿನದ ವಿಶೇಷ: ನಂದೀಶ್ವರ ಅಷ್ಕಾಹ್ನಿತ್ಕ ವ್ರತಾರಂಭ, ಕಾಶಿಲಿಂಗೇಶ್ವರ ಶರಣಬಸವೇಶ್ವರ ಪುಣ್ಯಾರಾಧನೆ

ಸೂರ್ಯೋದಯ : 6:26   ಸೂರ್ಯಾಸ್ತ : 06:30

ರಾಹುಕಾಲ : ಸಾಯಂಕಾಲ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಚಿಂತನೆ ಮತ್ತು ಶಕ್ತಿಯನ್ನು ನೀವು ವಾಸ್ತವವಾಗಿ ಏನನ್ನು ನೋಡ ಬಯಸುತ್ತಿರೋ ಅದನ್ನು ಸಾಧಿಸುವಲ್ಲಿ ಪ್ರಯತ್ನಿಸಿ. ಭೂಮಿ ಖರೀದಿ ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಇರಲಿದೆ. ಹಣಕಾಸು ವ್ಯವಹಾರಗಳಲ್ಲಿ ಲಾಭ ಇರಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ .ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಸ್ನೇಹಿತರೊಂದಿಗೆ ಮನೋರಂಜನೆ ಜತೆಗೆ ಕಾಲಕಳೆಯುವ ಸಾಧ್ಯತೆ ಇದೆ. ಯಾರ ಹತ್ತಿರವಾದರೂ ಸಾಲವನ್ನು ತೆಗೆದುಕೊಂಡಿರುವ ಜನರು, ಇಂದು ಯಾವುದೇ ಪರಿಸ್ಥಿತಿಯಲ್ಲೂ ಸಾಲವನ್ನು ಮರುಪಾವತಿಸಬೇಕಾಗುತ್ತದೆ. ಇದರಿಂದ ಆರ್ಥಿಕ ಪರಿಸ್ಥಿತಿ ಸ್ವಲ್ಪ ದುರ್ಬಲವಾಗುತ್ತದೆ. ಪ್ರೇಮಿಗಳಿಗೆ ಇಂದು ಹೇಳಿಕೊಳ್ಳುವ ದಿನವೆಲ್ಲಾ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಮನಸ್ಸು ಉತ್ಸಾಹದಿಂದ ಕೂಡಿರಲಿದೆ. ನಿಮಗೆ ನಿಮ್ಮ ಸಹೋದರ ಅಥವಾ ಸಹೋದರಿಯ ಸಹಾಯದಿಂದ ಲಾಭವಾಗುವ ಸಾಧ್ಯತೆ ಇದೆ. ಹೊಸ ಸಂಬಂಧಗಳು ಕೂಡಿ ಬರಲಿದೆ ಮತ್ತು ಹೆಚ್ಚು ಅನುಕೂಲಕರವಾಗಿರುತ್ತವೆ. ಆರ್ಥಿಕವಾಗಿ ಸದೃಢ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಮನೆಯಲ್ಲಿ ಒತ್ತಡ ನಿಮಗೆ ಸಿಟ್ಟು ತರಿಸಬಹುದು. ಅವುಗಳನ್ನು ದಮನಗೊಳಿಸುವುದು ಕೇವಲ ದೈಹಿಕ ಸಮಸ್ಯೆಯನ್ನು ಹೆಚ್ಚಿಸುತ್ತದೆ. ದೈಹಿಕ ಚಟುವಟಿಕೆಯೊಂದಿಗೆ ಇದನ್ನು ತೊಡೆದುಹಾಕಿ. ಕಿರಿಕಿರಿಯುಂಟು ಮಾಡುವ ಪರಿಸ್ಥಿತಿಯಿಂದ ಹೊರಬರುವುದು ಉತ್ತಮ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ತಕ್ಕ ಮಟ್ಟಿಗೆ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಕುಟುಂಬದ ಸದಸ್ಯರೊಂದಿಗೆ ನಿಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳುವುದರಿಂದ ಒಳ್ಳೆಯದಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಈ ರಾಶಿ ಚಕ್ರದ ವಿವಾಹಿತ ಜನರಿಗೆ ಇಂದು ಅತ್ತೆ ಮನೆ ಕಡೆಯಿಂದ ಹಣದ ಪ್ರಯೋಜನವಾಗುವ ಸಾಧ್ಯತೆ ಇದೆ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಭಾವನಾತ್ಮಕ ತೊಂದರೆಗಳು ನಿಮ್ಮನ್ನು ಕಾಡುತ್ತವೆ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಪ್ರಯಾಣ ಸಂತೋಷಕರ ಮತ್ತು ಹೆಚ್ಚು ಅನುಕೂಲಕರವಾಗಿರುತ್ತದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದು, ಇದು ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ದೀರ್ಘಕಾಲ ಬಾಕಿಯಿದ್ದ ಕೆಲಸಗಳು ಕೊನೆಗೂ ದೊರಕುತ್ತವೆ. ನಿಮ್ಮ ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗಳನ್ನು ಮಾಡುತ್ತೀರಿ. ಕೆಲಸದ ಒತ್ತಡ ಇನ್ನೂ ನಿಮ್ಮ ಮನಸ್ಸನ್ನು ಆವರಿಸುತ್ತದೆ ಹಾಗೂ ಇದು ಕುಟುಂಬ ಮತ್ತು ಸ್ನೇಹಿತರಿಗೆ ಯಾವುದೇ ಸಮಯವಿಲ್ಲದಂತೆ ಮಾಡುತ್ತದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ನಿಮ್ಮ ಹಠಮಾರಿ ಧೋರಣೆಯಿಂದಾಗಿ ಮನೆಯಲ್ಲಿ ಕಿರಿಕಿರಿ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಒಟ್ಟಾಗುವಿಕೆಯಲ್ಲಿ ನೀವೆ ಕೇಂದ್ರ ಬಿಂದುವಾಗಿರಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಅಸಮಾಧಾನ ತರಬಹುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಅನೇಕ ಒತ್ತಡಗಳಿಂದ ವಿಶ್ರಾಂತಿ ಸಿಗಲಿದೆ. ಆಭರಣ, ಹೂಡಿಕೆ ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಅನಿರೀಕ್ಷಿತವಾಗಿ ಸ್ನೇಹಿತರ ಭೇಟಿ ಮಾಡುವಿರಿ. ಆರೋಗ್ಯ ಪರಿಪೂರ್ಣ ಇರಲಿದೆ. ಉದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗಲಿವೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಕೌಟುಂಬಿಕವಾಗಿ ಒತ್ತಡ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ ಇದೆ. ಕೋಪದಲ್ಲಿ ಆಡಿದ ಮಾತುಗಳು ಮನವರಿಕೆ ಆಗುವುದು. ಜೀವನದಲ್ಲಿ ಹೊಸ ಪಾಠ ಕಲಿಯುವಿರಿ.ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಪ್ರೋತ್ಸಾಹ ಸಿಗಲಿದೆ.
ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ,ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳನ್ನು ಹಂಚಿಕೊಂಡು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ಸಮಾಧಾನದ ಮಾತುಗಳು ಸೂಕ್ತ ವ್ಯಕ್ತಿಗಳಿಂದ ಸಿಗಲಿವೆ. ನಿಮ್ಮ ವರ್ತನೆಯಿಂದ ಕುಟುಂಬದ ಸದಸ್ಯರು ಕೋಪಗೊಳ್ಳವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅವಶ್ಯಕ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya: ಈ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ಕುಂಭ ರಾಶಿಯಿಂದ ಬುಧವಾರ ರಾತ್ರಿ 08:32ಕ್ಕೆ ಮೀನ ರಾಶಿಯನ್ನು ಪ್ರವೇಶಿಸಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಕಟಕ ರಾಶಿಯವರು ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಬೇಕು. ಇನ್ನು ಕುಂಭ ರಾಶಿಯವರು ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡುವ ಸಾಧ್ಯತೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (30-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಸಪ್ತಮಿ 11:43 ವಾರ: ಗುರುವಾರ
ನಕ್ಷತ್ರ: ಧನಿಷ್ಠಾ 07:30 ಯೋಗ: ವೈಧೃತಿ 20:51
ಕರಣ: ಭವ 20:51 ಅಮೃತ ಕಾಲ: ರಾತ್ರಿ 11:25 ರಿಂದ 12:56 ರವರಗೆ
ದಿನದ ವಿಶೇಷ: ಶ್ರೀರಾಮ ಪಟ್ಟಾಭಿಷೇಕ, ತುಂಬುರರ ಜಯಂತಿ

ಸೂರ್ಯೋದಯ : 05:52   ಸೂರ್ಯಾಸ್ತ : 06:42

ರಾಹುಕಾಲ : ಮಧ್ಯಾಹ್ನ 1:30 ರಿಂದ 3:00
ಗುಳಿಕಕಾಲ: ಬೆಳಗ್ಗೆ 9:00 ರಿಂದ 10:30
ಯಮಗಂಡಕಾಲ: ಬೆಳಗ್ಗೆ 06:00 ರಿಂದ 07:30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಇಂದು ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇದೆ, ಹೀಗಾಗಿ ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಸಾಧ್ಯತೆಗಳು ಇದ್ದು, ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತರರನ್ನು ಚುಂಬಕದಂತೆ ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ. ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ.
ಆರೋಗ್ಯ ಪರಿಪೂರ್ಣ.ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಉತ್ಸಾಹ ತುಂಬಿದ ವಾತಾವರಣ. ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ. ಅನಾವಶ್ಯಕ ಖರ್ಚು ಮಾಡಿ ನಂತರ ದುಃಖಿಸುಸುವುದು ಬೇಡ. ನಿಮಗೆ ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಒತ್ತಡ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ನೀವು ಇತರರನ್ನು ಶ್ಲಾಘಿಸುವ ಮೂಲಕ ಯಶಸ್ಸನ್ನು ಆನಂದಿಸುವ ಸಾಧ್ಯತೆ ಇದೆ. ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಆರ್ಥಿಕವಾಗಿ ಪ್ರಗತಿ. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆತ್ಮವಿಶ್ವಾಸತೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ ಇದ್ದು, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣ, ಅನಿವಾರ್ಯ ಕಾರಣಗಳಿಂದ ಖರ್ಚು. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳು ನಿಮಗೆ ಪುಷ್ಟಿ ನೀಡಲಿವೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ. ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಸದೃಢ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ. ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚಸುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಹಳೆಯ ಸ್ನೇಹಿತರೊಂದಿಗೆ ಆತ್ಮೀಯ ಮಾತುಕತೆ. ಭವಿಷ್ಯದ ಜೀವನಕ್ಕಾಗಿ ಹೂಡಿಕೆ ಕುರಿತು ಆಲೋಚನೆ ಇರಲಿದ್ದು, ಸಂಗಾತಿಯಿಂದ ಸಲಹೆ ಪಡೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದ್ದು, ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅನೇಕ ದಿನಗಳಿಂದ ನನೆಗುದಿಗೆ ಬಿದ್ದಿರುವ ಕೋರ್ಟ್, ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣ, ಆರ್ಥಿಕವಾಗಿ ಪ್ರಗತಿ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೋ ಮೂಲದಿಂದ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಕುಟುಂಬದ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ. ಮಾತಿಗೆ ವಿರಾಮ ನೀಡುವುದು ಉತ್ತಮ. ಉದ್ಯೋಗಿಗಳಿಗೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡುವ ಸಾಧ್ಯತೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದಲಿದ್ದೀರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ, ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನು ಸರಿಗೊಳಿಸಬಹುದು. ಆರೋಗ್ಯ ಪರಿಪೂರ್ಣವಾಗಿರಲಿದ್ದು, ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಇನ್ನು ಉದ್ಯೋಗಿಗಳಿಗೆ ಹೆಚ್ಚಿನ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಜಂಟಿ ಹೂಡಿಕೆ ವ್ಯವಹಾರದಿಂದ ದೂರವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಷಷ್ಠಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕುಂಭ ರಾಶಿಯಿಂದ ಬುಧವಾರ ರಾತ್ರಿ 08:32ಕ್ಕೆ ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಕಟಕ ರಾಶಿಯವರು ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಕುಂಭ ರಾಶಿಯವರು ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ, ಆದರೆ ಅದೇ ಸಮಯದಲ್ಲಿ ಖರ್ಚು ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಮಾಡುವುದು ಬೇಡ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (29-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಷಷ್ಠಿ 13:39 ವಾರ: ಬುಧವಾರ
ನಕ್ಷತ್ರ: ಶ್ರವಣಾ 08:37 ಯೋಗ: ಇಂದ್ರ 23:32
ಕರಣ: ವಣಿಜ 13:39 ಅಮೃತ ಕಾಲ: ರಾತ್ರಿ 09:36 ರಿಂದ 11:08 ರವರಗೆ
ದಿನದ ವಿಶೇಷ: ಜೇವರ್ಗಿ ಷಣ್ಮುಖ ಶಿವಯೋಗಿ ರಥ

ಸೂರ್ಯೋದಯ : 05:52   ಸೂರ್ಯಾಸ್ತ : 06:42

ರಾಹುಕಾಲ : ಮಧ್ಯಾಹ್ನ 12:17 ರಿಂದ 01:53
ಗುಳಿಕಕಾಲ: ಮಧ್ಯಾಹ್ನ 10:41 ರಿಂದ 12:17
ಯಮಗಂಡಕಾಲ: ಬೆಳಗ್ಗೆ 07:29 ರಿಂದ 09:05

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ:ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ .ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ:ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಸಿಗಲಿದೆ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡುವಿರಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಕುರಿತು ಜಾಗೃತಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ, ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಬಿಡುವಿಲ್ಲದ ಕಾರ್ಯದಿಂದ ಆಯಾಸ, ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆದಷ್ಟು ವಿಶ್ರಾಂತಿ ಪಡೆಯಿರಿ. ಅನಗತ್ಯ ಖರ್ಚು ಇರಲಿದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಂತೋಷ ತುಂಬಿದ ವಾತಾವರಣ ಇರಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ, ಆದರೆ ಅದೇ ಸಮಯದಲ್ಲಿ ಖರ್ಚು ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಮಾಡುವುದು ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಹೊರ ಬರುತ್ತೀರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಂಗಳವಾರವೂ ಕುಂಭ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆಯ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ವೃಶ್ಚಿಕ ರಾಶಿಯವರು ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯರೊಬ್ಬರ ಆರೋಗ್ಯ ಹದಗೆಡವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (28-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಪಂಚಮಿ 15:23 ವಾರ: ಮಂಗಳವಾರ
ನಕ್ಷತ್ರ: ಉತ್ತರಾಷಾಡ 09:32 ಯೋಗ: ಬ್ರಹ್ಮ 26:04
ಕರಣ: ತೈತುಲ 15:23 ಅಮೃತ ಕಾಲ: ರಾತ್ರಿ 10:38 ರಿಂದ 12:10ರವರಗೆ

ಸೂರ್ಯೋದಯ : 05:52   ಸೂರ್ಯಾಸ್ತ : 06:42

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕ ಜೀವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆಯ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ:ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ನೀವು ದೀರ್ಘಕಾಲದ ಪ್ರಯೋಜನಗಳನ್ನು ಹೊಂದಿರುವ ಯೋಜನೆಗಳ ಮೇಲೆ ಕೆಲಸ ಮಾಡವ ಸಾಧ್ಯತೆ ಇದೆ. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದಲ್ಲಿ ಅನೇಕ ಏರಿಳಿತಗಳ ನಂತರ, ಇಂದು ಪರಸ್ಪರರಿಗೆ ನಿಮ್ಮ ಪ್ರೀತಿಯನ್ನು ಆಸ್ವಾದಿಸುವ ಸುವರ್ಣ ದಿನವಿದು. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ ಇರಲಿದೆ. ಉದ್ಯೋಗಿಗಳಿಗೆ ಶುಭ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆವಹಿಸಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಸಭಲತೆ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಹೆಚ್ಚು. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ, ಅನಗತ್ಯ ಖರ್ಚುಗಳ ಬಗ್ಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ:ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಕೊಂಚಮಟ್ಟಿಗೆ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟೂ ಆತ್ಮವಿಶ್ವಾಸ ತರಲಿದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಸಾಧಾರಣ ಫಲ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಸಂತೋಷದ ವಾತಾವರಣ ಇರಲಿದೆ. ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ: ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯರೊಬ್ಬರ ಆರೋಗ್ಯ ಹದಗೆಡವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಉದ್ಯೋಗಿಗಳಿಗೆ ಕಿರಿಕಿರಿ ಇರಲಿದೆ. ಸಂಗಾತಿಯಿಂದ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಸುದೀರ್ಘವಾದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರಿಂದ ಆರ್ಥಿಕ ಸಹಾಯವನ್ನು ಬೇಡುವರು ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಸಂಶೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮಕರ: ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು, ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಕುಟುಂಬದವರ ಬೆಂಬಲ ಪ್ರೋತ್ಸಾಹದಿಂದಾಗಿ ಕೊಂಚಮಟ್ಟಿಗೆ ನಿರಾಳವಾಗುವಿರಿ. ಆರೋಗ್ಯದ ಬಗ್ಗೆ ಕಿಂಚಿತ್ತು ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ. ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಸ್ನೇಹಿತರ ಜತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಲಾಭ ಇರಲಿದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿಯಾಗಿರಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಹೂಡಿಕೆಯಲ್ಲಿ ಲಾಭಾಂಶ ಕಡಿಮೆ ಇರಲಿದೆ. ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ಪ್ರೀತಿ ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ ನೀಡಲಿದೆ. ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ಇಂದು ಆಪ್ತರಿಂದಲೇ ಸಮಸ್ಯೆ; ದಿನದ ಕೊನೆಯಲ್ಲಿ ಕೌಟುಂಬಿಕ ಕಲಹ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಚೌತಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಭಾನುವಾರವು ಮಕರ ರಾಶಿಯಲ್ಲೆ ನೆಲಸಲ್ಲಿದ್ದಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ನಿಮ್ಮ ಆಪ್ತರು ಸಮಸ್ಯೆಯನ್ನು ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಅನಗತ್ಯ ಒತ್ತಡದಿಂದ ನಿಮ್ಮ ಮನಸ್ಸಿಗೆ ಘಾಸಿಯಾಗುವ ಸಾಧ್ಯತೆ ಇದೆ. ವೃಷಭ ರಾಶಿಯವರು ದೀರ್ಘಕಾಲದ ಪ್ರಯತ್ನ ನಿಮಗೆ ಯಶಸ್ಸು ತಂದು ಕೊಡಲಿದೆ. ಈ ಹಿಂದೆ ನೀವು ಮಾಡಿದ ಸಹಾಯ ಇಂದು ಫಲ ನೀಡಲಿದೆ. ಹಿರಿಯರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ವ್ಯಾಪಾರದಲ್ಲಿ ಅಭಿವೃದ್ಧಿ ಕಾಣುವಿರಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (27-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಚೌತಿ 16:53 ವಾರ: ಸೋಮವಾರ
ನಕ್ಷತ್ರ: ಪೂರ್ವಾಆಷಾಢ 10:12 ಯೋಗ: ಶುಭ 06:35
ಕರಣ: ಶುಕ್ಲ 28:26 ಅಮೃತ ಕಾಲ: ಬೆಳಗಿನ ಜಾವ 03:20ರಿಂದ 04:53ರ ವರೆಗೆ

ಸೂರ್ಯೋದಯ : 05:52   ಸೂರ್ಯಾಸ್ತ : 06:41

ರಾಹುಕಾಲ : ಬೆಳಗ್ಗೆ 07:29 ರಿಂದ 09:05
ಗುಳಿಕಕಾಲ: ಮಧ್ಯಾಹ್ನ 01:53 ರಿಂದ 03:29
ಯಮಗಂಡಕಾಲ: ಬೆಳಗ್ಗೆ 10:41 ರಿಂದ 12:17

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಆಪ್ತರು ಸಮಸ್ಯೆಯನ್ನು ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಅನಗತ್ಯ ಒತ್ತಡದಿಂದ ನಿಮ್ಮ ಮನಸ್ಸಿಗೆ ಘಾಸಿಯಾಗುವ ಸಾಧ್ಯತೆ ಇದೆ. ಸಂಗಾತಿಯ ಮಧುರ ಮಾತುಗಳು ಹಿತವೆನಿಸುಬಹುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ:ದೀರ್ಘಕಾಲದ ಪ್ರಯತ್ನ ನಿಮಗೆ ಯಶಸ್ಸು ತಂದು ಕೊಡಲಿದೆ. ಈ ಹಿಂದೆ ನೀವು ಮಾಡಿದ ಸಹಾಯ ಇಂದು ಫಲ ನೀಡಲಿದೆ. ಹಿರಿಯರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ವ್ಯಾಪಾರದಲ್ಲಿ ಅಭಿವೃದ್ಧಿ ಕಾಣುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಿಥುನ:ಹತಾಶೆಯ ಭಾವನೆಯಿಂದ ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಲಾಭ ಸಿಗುವ ಸಾಧ್ಯತೆ ಇದೆ. ಪ್ರೀತಿಪಾತ್ರರ ಜತೆ ವಾದಗಳಿಗೆ ಕಾರಣವಾಗಬಹುದಾದ ವಿವಾದಾತ್ಮಕ ವಿಷಯಗಳನ್ನು ತಪ್ಪಿಸಿ, ಎಚ್ಚರಿಕೆಯಿಂದ ಮಾತನಾಡಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಮಾನಸಿಕವಾಗಿ ದೈಹಿಕವಾಗಿ ಆರೋಗ್ಯ ಪರಿಪೂರ್ಣವಾಗಿರಲಿದೆ. ಹರ್ಷ ತುಂಬಿದ ಮನಸ್ಸು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಹಳೆಯ ಬಾಕಿ ಮರುಪಾವತಿ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯಮಿಗಳಿಗೆ ಒಳ್ಳೆಯ ದಿನವಿದು. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರವಾಸ ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಬಹಳ ದಿನಗಳಿಂದ ಕಾಡುತ್ತಿರುವ ಸಮಸ್ಯಗೆ ಪರಿಹಾರ ಸಿಗಲಿದೆ. ಭವಿಷ್ಯದ ಹೂಡಿಕೆ ವ್ಯವಹಾರದ ಕುರಿತಾಗಿ ಆಲೋಚನೆ ಮಾಡುವಿರಿ. ನಿಮಗೆ ಆಗದವರು ನಿಮ್ಮಿಂದೆ ಪಿತೂರಿ ನಡೆಸುವ ಸಾಧ್ಯತೆ ಇದೆ, ಅಂತವರಿಂದ ಎಚ್ಚರಿಕೆ ಇರಲಿ. ದಿಢೀರ್‌ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಸೃಜನಾತ್ಮಕ ಕ್ಷೇತ್ರಗಳಲ್ಲಿ ಇರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಯಶಸ್ವಿ ದಿನವಿದು. ಭೂಮಿ ಸಂಬಂಧಿ ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ದಿನಕ್ಕಿಂತ ಹೆಚ್ಚಿನ ಸಂತೋಷ ಸಿಗಲಿದೆ. ಆರ್ಥಿಕ ಚಟುವಟಿಕೆಗೆ ಗರಿಗೆದರಲಿದೆ. ದಿನದ ಕೊನೆಯಲ್ಲಿ ಕೌಟುಂಬಿಕ ಕಲಹಗಳು ನಡೆಯುವ ಸಾಧ್ಯತೆ ಇದೆ. ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಒತ್ತಡ ತುಂಬಿದ ವಾತಾವರಣ ಇರಲಿದೆ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ತೊಡಗಿರುವವರಿಗೆ ದಿನದ ಮಟ್ಟಿಗೆ ಹೆಚ್ಚಿನ ಲಾಭ ಸಿಗಲಿದೆ. ಕುಟುಂಬ ಸಹಿತರಾಗಿ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಾಗಲಿದೆ. ನಿಮ್ಮ ಸಂತೋಷದ ಸಂಗತಿಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಅಮೂಲ್ಯ ವಸ್ತುಗಳ ಬಗ್ಗೆ ಜಾಗೃತಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಧನಸ್ಸು: ಕೆಲವು ಪ್ರಮುಖ ನಿರ್ಧಾರಗಳು ನಿಮ್ಮ ಮೇಲೆ ಪರಿಣಾಮ ಬೀರಬಹುದು. ಅದರ ಹೊರತಾಗಿ ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಕುಟುಂಬ ಸದಸ್ಯರ ಮಾತುಗಳು ನಿಮ್ಮನ್ನು ಘಾಸಿಗೊಳಿಸಬಹುದು.
ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಮಿಶ್ರ ಫಲ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮಕರ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅದರಲ್ಲಿಯೂ ಗರ್ಭಿಣಿಯರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಅನಾವಶ್ಯಕ ಖರ್ಚುಗಳಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಸಂಬಂಧ ಪಡದೆ ಇರುವ ವಿಷಯದ ಕುರಿತು ಮೂಗು ತೂರಿಸುವುದು ಬೇಡ. ಟೀಕೆಗಳನ್ನು ಎದಿರಿಸಬೇಕಾದಿತು, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ವಿವಾದಾತ್ಮಕ ವಿಷಯಗಳಿಂದ ದೂರ ಇರಿ. ಮಾತಿನಲ್ಲಿ ಹಿಡಿತವಿರಲಿ. ತಮ್ಮ ಬಳಿ ಯಾರಾದರೂ ಹಣದ ಸಹಾಯ ಬೇಡುವ ಸಾಧ್ಯತೆ ಇದೆ, ಆದರೆ ಆಲೋಚಿಸಿ ಹೆಜ್ಜೆ ಇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮೀನ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆ ಮಾರ್ಗಸೂಚಿಯಾಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಸದೃಢವಾಗಿರಲಿದೆ. ಉದ್ಯೋಗಿಗಳಿಗೆ ಅಭದ್ರತೆಯ ಭಾವನೆ ಕಾಡಲಿದೆ. ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Star Fashion
ಫ್ಯಾಷನ್22 mins ago

Star Fashion: ಪಂಚೆ ಜೊತೆ ಟ್ರೋಫಿ ಜಾಕೆಟ್‌ ಧರಿಸಿದ ನಟಿ ತಮನ್ನಾಳ ಯೂನಿಕ್‌ ಫ್ಯಾಷನ್‌!

Health Insurance
ಮನಿ-ಗೈಡ್36 mins ago

Health Insurance: ಕ್ಯಾಶ್​ಲೆಸ್​ ಕ್ಲೈಮ್‌ ಗಳಿಗೆ ಆಸ್ಪತ್ರೆಯಲ್ಲಿ ಇನ್ನು ಹೆಚ್ಚು ಹೊತ್ತು ಕಾಯಬೇಕಿಲ್ಲ; ಇಲ್ಲಿದೆ ಹೊಸ ನಿಯಮ

First successful TAVR surgery in the state at Fortis Hospital
ಬೆಂಗಳೂರು38 mins ago

Fortis Hospital: ರಾಜ್ಯದಲ್ಲೇ ಮೊದಲ ಬಾರಿಗೆ ಅಪರೂಪದ ಶಸ್ತ್ರಚಿಕಿತ್ಸೆ

MLA Belur Gopalakrishna election campaign for Congress candidates at ripponpete
ರಾಜಕೀಯ46 mins ago

MLC Election: ವಿಧಾನಪರಿಷತ್ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳ ಪರ ಶಾಸಕ ಬೇಳೂರು ಗೋಪಾಲಕೃಷ್ಣ ಮತಯಾಚನೆ

Vijayanagara News Distribute good quality sowing seeds and fertilizers says Tehsildar Amaresh G K
ವಿಜಯನಗರ47 mins ago

Vijayanagara News: ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಿ: ತಹಸೀಲ್ದಾರ್‌ ಅಮರೇಶ್

Vishwadarshan Education Institute President Hariprakash konemane spoke in Training Workshop for Vishwadarshan Central School Teachers at Yallapura
ಉತ್ತರ ಕನ್ನಡ49 mins ago

Uttara Kannada News: ಸಂಸ್ಕಾರಯುತ, ಗುಣಾತ್ಮಕ ಶಿಕ್ಷಣ ನೀಡುವಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಮುಂಚೂಣಿ: ಹರಿಪ್ರಕಾಶ್‌ ಕೋಣೆಮನೆ

indo Chaina border
ದೇಶ49 mins ago

Indo China Border : ಸಿಕ್ಕಿಂನಿಂದ 150 ಕಿ.ಮೀ ದೂರದಲ್ಲಿ ಚೀನಾದಿಂದ ಅತ್ಯಾಧುನಿಕ ಯುದ್ಧ ವಿಮಾನ ನಿಯೋಜನೆ

Prevention Of Obesity
ಆರೋಗ್ಯ52 mins ago

Prevention Of Obesity: ಆರೋಗ್ಯಪೂರ್ಣ ಜೀರ್ಣಕ್ರಿಯೆ ಮೂಲಕ ಬೊಜ್ಜು ನಿವಾರಣೆ ಸಾಧ್ಯ

Karnataka Weather Forecast
ಮಳೆ54 mins ago

Karnataka Weather : ರಾಜ್ಯಾದ್ಯಂತ ಜೂನ್‌ ಮೊದಲ ವಾರ ಅಬ್ಬರಿಸಲಿದ್ಯಾ ಮಳೆ; ಕುಸಿಯಲಿದೆ ತಾಪಮಾನ

Union Minister Pralhad Joshi Statement
ಕರ್ನಾಟಕ1 hour ago

Pralhad Joshi: ಕನ್ನಡಿಗರ ತೆರಿಗೆಯಲ್ಲಿ ಕೇರಳಿಗರನ್ನು ಸಾಕುತ್ತಿದ್ದಾರೆ ಸಿದ್ದರಾಮಯ್ಯ: ಜೋಶಿ ಆರೋಪ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ6 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌