Site icon Vistara News

Dina Bhavishya: ಇಂದು ಹೂಡಿಕೆ ಮಾಡುವವರಿಗೆ ಹೆಚ್ಚು ಲಾಭ; ಈ ರಾಶಿಯವರ ಸಮಸ್ಯೆ ಪರಿಹಾರ!

dina bhavishya read your daily horoscope predictions for March 20 2024

ಚಂದ್ರನು ಶುಕ್ರವಾರದ ವರೆಗೆ ಸಿಂಹ ರಾಶಿಯಲ್ಲಿಯೇ ನೆಲೆಸಿರುತ್ತಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ ಹಾಗೂ ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಕಟಕ ರಾಶಿಯವರಿಗೆ ಬಿಡುವಿಲ್ಲದ ಕಾರ್ಯ ಯೋಜನೆಯು ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡಲಿದೆ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರಲಿದೆ. ಕನ್ಯಾ ರಾಶಿಯವರಿಗೆ ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಆಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (20-03-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ.
ತಿಥಿ: ಏಕಾದಶಿ 26:22 ವಾರ: ಬುಧವಾರ
ನಕ್ಷತ್ರ: ಪುಷ್ಯ 22:37 ಯೋಗ: ಅತಿಗಂಡ 16:59
ಕರಣ: ವಣಿಜ 13:18 ಅಮೃತ ಕಾಲ: ಮಧ್ಯಾಹ್ನ 03:35 ರಿಂದ ಸಂಜೆ 05:20ರವರೆಗೆ
ದಿನದ ವಿಶೇಷ: ಅಮಲಕಿ ಏಕಾದಶಿ

ಸೂರ್ಯೋದಯ : 6:24   ಸೂರ್ಯಾಸ್ತ : 06:30

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.0030
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಗೆ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ವೃಷಭ: ಕುಟುಂಬದ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು. ಆದರೆ, ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತಿರ್ಮಾನವನ್ನು ಸಹ ತೆಗೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆಯು ನಿಮಗೆ ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡಲಿದೆ. ಪ್ರಯಾಣದ ಕುರಿತಾಗಿ ಚಿಂತನೆ ಮಾಡುವಿರಿ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರಲಿದೆ. ಪರಿಪೂರ್ಣ ಆರೋಗ್ಯ ನಿಮ್ಮದಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆ ವಹಿಸಿ. ವಿಶ್ವಾಸದಿಂದ ಕಾರ್ಯ ಸಿದ್ಧಿ ಆಗಲಿದೆ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯವನ್ನು ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಆಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ ವಹಿಸುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಕಾಣುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ವೃಶ್ಚಿಕ: ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ. ವೃತಾ ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ದೂಡಲಿದೆ. ಹಾಗಾಗಿ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ. ಇದರಿಂದ ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯವನ್ನು ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು ನಿಮ್ಮದಾಗಲಿದೆ. ಇದರ ಹೊರಾತಾಗಿಯೂ ಲಾಭವನ್ನು ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಮಕರ: ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಅತಿರೇಕವಾಗಿ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಕುಂಭ: ನಿಮ್ಮ ಸಹಾಯ ಮಾಡುವ ಗುಣಕ್ಕೆ ಇತರರಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version