Site icon Vistara News

Dina Bhavishya: ಈ ರಾಶಿಯವರು ಇಂದು ಹೂಡಿಕೆ ಮಾಡುವುದಿದ್ದರೆ ತುಂಬಾ ಯೋಚಿಸಿ!

dina bhavishya read your daily horoscope predictions for March 7 2024

ಚಂದ್ರನು ಗುರುವಾರ ಕುಂಭ ರಾಶಿಯಲ್ಲಿಯೇ ನೆಲೆಸಿರಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಕನ್ಯಾ ರಾಶಿಯವರು ನಿಮ್ಮ ಒತ್ತಡವನ್ನು ಇತರರ ಮೇಲೆ ಹಾಕಿ ಕೋಪಗೊಳ್ಳುವುದು ಬೇಡ. ಸಮಾಧಾನದಿಂದ ವರ್ತಿಸಿ. ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (07-03-2024)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ
ತಿಥಿ: ದ್ವಾದಶಿ 25:19 ವಾರ: ಗುರುವಾರ
ನಕ್ಷತ್ರ: ಉತ್ತರಾಷಾಢ 13:02 ಯೋಗ: ವರಿಯಾನ 08:22/ಪರಿಘ 28:44
ಕರಣ: ಕೌಲವ 14:50 ಅಮೃತ ಕಾಲ: ಬೆಳಗ್ಗೆ 07:08 ರಿಂದ 08:37ರ ವರೆಗೆ

ಸೂರ್ಯೋದಯ : 6:32   ಸೂರ್ಯಾಸ್ತ : 06:29

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಆರೋಗ್ಯ ಸುಧಾರಣೆಗಾಗಿ ಮಾಡುವ ಪ್ರಯತ್ನಗಳು ಸಹಕಾರಿಯಾಗಲಿವೆ. ಆರ್ಥಿಕ ಭಾಗವು ಬಲಗೊಳ್ಳುವ ಪೂರ್ಣ ಸಾಧ್ಯತೆ ಇದೆ. ಸಾಲದ ಮರುಪಾವತಿ ಆಗಲಿದೆ. ಇತರರ ದೋಷಗಳನ್ನು ಹುಡುಕುತ್ತಾ ಸಮಯ ವ್ಯರ್ಥ ಮಾಡುವುದು ಬೇಡ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಇರಲಿದೆ.
ಅದೃಷ್ಟ ಸಂಖ್ಯೆ: 1

ವೃಷಭ: ಅನಿವಾರ್ಯ ಕಾರಣಗಳಿಂದ ನೀವು ಯಾವುದಾದರೂ ಸಹಾಯ ಕೋರುವ ಸಾಧ್ಯತೆ ಇದೆ. ನಿಮ್ಮ ಪ್ರಯತ್ನಗಳು ಖಂಡಿತವಾಗಿಯೂ ಸಕಾರಾತ್ಮಕ ಫಲಿತಾಂಶವನ್ನು ತರುತ್ತವೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿ ಕಿರಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಮಿಥುನ: ಮನೆಯ ಸದಸ್ಯರು ಇಂದು ನಿಮ್ಮೊಂದಿಗೆ ಅನೇಕ ಸಮಸ್ಯೆಗಳನ್ನು ಹಂಚಿಕೊಳ್ಳುತ್ತಾರೆ. ಹಿರಿಯರ ಸತತ ಮಾರ್ಗದರ್ಶನ ಸಿಗಲಿದೆ. ಅವಸರದಲ್ಲಿ ಮಾತನಾಡಿದ ಬಗ್ಗೆ ಪಶ್ಚಾತ್ತಾಪ ಉಂಟಾಗಲಿದೆ. ಆರ್ಥಿಕವಾಗಿ ಪ್ರಗತಿ ಸಾಧಾರಣವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದಲ್ಲಿ ಸಾಮರಸ್ಯ ಇರಲಿದೆ.
ಅದೃಷ್ಟ ಸಂಖ್ಯೆ: 7

ಕಟಕ: ಗಾಳಿಯಲ್ಲಿ ಮನೆ ಕಟ್ಟುವ ವ್ಯರ್ಥ ಪ್ರಯತ್ನ ನಿಮ್ಮದಾಗದಿರಲಿ. ಬದಲಿಗೆ ಏನಾದರೂ ಅರ್ಥಪೂರ್ಣವಾದದ್ದನ್ನು ಮಾಡಲು ನಿಮ್ಮ ಶಕ್ತಿ ಮತ್ತು ಯುಕ್ತಿಯನ್ನು ವ್ಯಯಿಸಿ. ಇಂದು ನಿಮಗೆ ಹಣದ ಲಾಭವಾಗುವ ಪೂರ್ತಿ ಸಾಧ್ಯತೆ ಇದೆ. ಆದರೆ, ಇದರೊಂದಿಗೆ ನೀವು ದಾನವನ್ನು ಸಹ ಮಾಡಬೇಕು. ಏಕೆಂದರೆ ಇದರಿಂದ ನಿಮಗೆ ಮಾನಸಿಕ ಶಾಂತಿ ಸಿಗುತ್ತದೆ. ಆರೋಗ್ಯ ಕುರಿತಾಗಿ ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 2

ಸಿಂಹ: ಸಂಶಯಾಸ್ಪದ ಹಣಕಾಸು ವ್ಯವಹಾರಗಳಲ್ಲಿ ಸಿಲುಕಿಕೊಳ್ಳದಂತೆ ಎಚ್ಚರಿಕೆ ವಹಿಸಿ. ಕುಟುಂಬದಲ್ಲಿ ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಮಾನಸಿಕ ಹಾಗೂ ದೈಹಿಕವಾಗಿ ಜರ್ಜರಿತರಾಗುವ ಬದಲು ಯೋಗ, ಧ್ಯಾನ ಮಾಡಿ. ಆಗ ಮನಸ್ಸಿನ ಮೂಲೆಯಲ್ಲಿ ಸಂತಸ ಚಿಗುರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 9

ಕನ್ಯಾ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆಕ್ರಮಿಸಿಕೊಳ್ಳಲು ಬಿಡಬೇಡಿ. ಶಾಂತವಾಗಿ ಮತ್ತು ಒತ್ತಡ ಮುಕ್ತವಾಗಿ ಉಳಿಯಲು ಪ್ರಯತ್ನಿಸಿ ಹಾಗೂ ಅದು ನಿಮ್ಮ ಮಾನಸಿಕ ದೃಢತೆಯನ್ನು ಹೆಚ್ಚಿಸುತ್ತದೆ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತವಾಗಿರಲಿದೆ. ಸಂಬಂಧಿಗಳ ಆಗಮನ ಸಂತಸ ತರಲಿದೆ. ಸಂಗಾತಿಯ ಹಸ್ತಕ್ಷೇಪ ಮುಜುಗರವನ್ನುಂಟು ಮಾಡಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಸಂತಸದ ಪ್ರಯಾಣ ಮತ್ತು ಸಾಮಾಜಿಕ ಕಾರ್ಯಕ್ರಮಗಳು ನಿಮಗೆ ಆರಾಮ ಮತ್ತು ಸಂತೋಷವನ್ನು ತರುತ್ತದೆ. ಈ ರಾಶಿಚಕ್ರದ ದೊಡ್ಡ ಉದ್ಯಮಿಗಳು ಇಂದು ಹೂಡಿಕೆ ಮಾಡಬೇಕಾದರೆ ತುಂಬಾ ಯೋಚಿಸಿ ತೀರ್ಮಾನಕ್ಕೆ ಬರಬೇಕು. ನಿಮ್ಮ ಸ್ಪರ್ಧಾತ್ಮಕ ಸ್ವಭಾವ ನೀವು ಪ್ರವೇಶಿಸುವ ಯಾವುದೇ ಸ್ಪರ್ಧೆಯಲ್ಲೂ ನಿಮ್ಮನ್ನು ಗೆಲ್ಲಿಸುತ್ತದೆ. ಪ್ರೇಮಿಗಳಿಗೆ ಮನೆಯಿಂದ ಹಸಿರು ನಿಶಾನೆ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ವೃಶ್ಚಿಕ: ಭಾವನಾತ್ಮಕ ನಿರ್ಧಾರ ಕೈಗೊಳ್ಳುವ ಭರದಲ್ಲಿ ಮನಸ್ಸಿನ ಸ್ಥಿಮಿತವನ್ನು ಕಳೆದುಕೊಳ್ಳುವುದು ಬೇಡ. ಅಜಾಗರೂಕತೆಯಿಂದ ಹೂಡಿಕೆ ಮಾಡಿದರೆ ನಿಮಗೆ ಆರ್ಥಿಕ ನಷ್ಟ ಉಂಟಾಗಬಹುದು. ಕಠಿಣ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಹಿರಿಯ ಅಧಿಕಾರಿಗಳಿಂದ ಕಿರಿ ಕಿರಿ ಉಂಟಾಗಲಿದೆ. ಕುಟುಂಬದಲ್ಲಿ ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ.
ಅದೃಷ್ಟ ಸಂಖ್ಯೆ: 7

ಧನಸ್ಸು: ನೀವು ದೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಸಣ್ಣ ಉದ್ಯೋಗವನ್ನು ಮಾಡುವ ಜನರು, ಇಂದು ತಮ್ಮ ಆಪ್ತರಿಂದ ಯಾವುದೇ ಸಲಹೆಯನ್ನು ಪಡೆಯಬಹುದು. ಇದರಿಂದ ಅವರಿಗೆ ಆರ್ಥಿಕವಾಗಿ ಲಾಭ ಆಗುವ ಸಾಧ್ಯತೆ ಇದೆ. ಇಂದು ಹಣದ ಬಗ್ಗೆ ಕುಟುಂಬ ಸದಸ್ಯರಲ್ಲಿ ಗೊಂದಲ ಉಂಟಾಗಬಹುದು. ಆದಷ್ಟು ಸಾಲ ಮಾಡದಂತೆ ಎಚ್ಚರಿಕೆ ವಹಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಮೇಲಧಿಕರಿಗಳು ನಿಮ್ಮ ಸಹನೆ ಪರೀಕ್ಷಿಸುವ ಸಾಧ್ಯತೆ ಇದೆ. ಹೀಗಾಗಿ ಆದಷ್ಟು ಮೌನದಿಂದ ಕೆಲಸವನ್ನು ಸಾಧಿಸಿಕೊಳ್ಳಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 9

ಮಕರ: ಮನಸ್ಸಿನ ಭಾವನೆಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳಿ ಆ ಸಿಟ್ಟನ್ನು ಇತರರ ಮೇಲೆ ಹಾಕಿ ಪಶ್ಚಾತ್ತಾಪ ಪಡುವುದು ಬೇಡ. ಹಳೆಯ ಪ್ರೀತಿಯ ನೆನಪು ಮರುಕಳಿಸಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಸಿಗಲಿದೆ. ಆರೋಗ್ಯದ ಕುರಿತು ಕೊಂಚ ಕಾಳಜಿ ವಹಿಸಬೇಕಿದೆ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

ಕುಂಭ: ಈ ದಿನ ಲಾಭವನ್ನು ತಂದು ಕೊಡಲಿದೆ. ಇನ್ನು ಆರೋಗ್ಯದ ಬಗ್ಗೆ ನೋಡುವುದಾದರೆ ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ಮೂರನೇ ವ್ಯಕ್ತಿಯ ಹಸ್ತಕ್ಷೇಪ ಆಗುವ ಸಾಧ್ಯತೆ ಇದ್ದು, ಇದರಿಂದ ನಿಮ್ಮ ಪ್ರೀತಿಪಾತ್ರರ ಜತೆಗೆ ಕಂದಕ ಸೃಷ್ಟಿಯಾಗಬಹುದು. ಹೀಗಾಗಿ ಎಚ್ಚರಿಕೆ ವಹಿಸಿ. ಆರೋಗ್ಯ ಪರಿಪೂರ್ಣ ಇರಲಿದೆ. ಉದ್ಯೋಗಿಗಳಿಗೆ ಕಿರಿ ಕಿರಿ ಆಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

ಮೀನ: ಅಧ್ಯಾತ್ಮದ ಒಲವು ಹೆಚ್ಚಾಗಲಿದೆ. ನಿಮ್ಮ ಕನಸು ನನಸಾಗುವ ಕಾಲ ಇದು. ಆರೋಗ್ಯ ಪರಿಪೂರ್ಣವಾಗಿರಲಿದೆ. ನೀವು ಹಣಕಾಸಿನ ಲಾಭ ತರುವ ಅದ್ಭುತವಾದ ಹೊಸ ಕಲ್ಪನೆಗಳನ್ನು ಪ್ರಸ್ತುತಪಡಿಸುತ್ತೀರಿ. ಉದ್ಯೋಗಿಗಳಿಗೆ ಶುಭ ಫಲ ಉಂಟಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version