Site icon Vistara News

Dina Bhavishya: ಎಚ್ಚರ.. ಎಚ್ಚರ.. ಈ ರಾಶಿಯವರು ಇತರರನ್ನು ನಂಬಿ ಹೂಡಿಕೆ ಮಾಡಿದರೆ ಭಾರಿ ನಷ್ಟ!

dina bhavishya read your daily horoscope predictions for May 01 2024

ಚಂದ್ರನು ಬುಧವಾರವೂ ಕುಂಭ ರಾಶಿಯಲ್ಲಿಯೇ ನೆಲೆಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ ಹಾಗೂ ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮಿಥುನ ರಾಶಿಯವರು ಜೀವನ ಸಂಗಾತಿಯೊಂದಿಗೆ ಸೇರಿ ಇಂದು ಭವಿಷ್ಯಕ್ಕೆ ಯಾವುದೇ ಆರ್ಥಿಕ ಯೋಜನೆಯನ್ನು ರೂಪಿಸಬಹುದು. ಜತೆಗೆ ಈ ಯೋಜನೆಯು ಯಶಸ್ವಿಯಾಗಲಿದೆ. ಆದರೆ, ಹತಾಶೆಯ ಭಾವನೆ ನಿಮ್ಮನ್ನು ಆವರಿಸಲು ಬಿಡಬೇಡಿ. ಆರೋಗ್ಯ ಮಧ್ಯಮ ಪ್ರಮಾಣದಲ್ಲಿರಲಿದೆ. ಉದ್ಯೋಗಿಗಳಿಗೆ ಹೊಸ ಅವಕಾಶಗಳು ತೆರೆದುಕೊಳ್ಳಲಿವೆ. ಪ್ರೇಮಿಗಳಿಗೆ ಶುಭ ಸೂಚನೆ ಸಿಗಲಿದೆ. ಧನಸ್ಸು ರಾಶಿಯವರು ಚಿಕ್ಕ ಪುಟ್ಟ ವಿಷಯಗಳಿಗೆ ತಲೆಕೆಡಿಸಿಕೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವುದು ಬೇಡ. ನೀವು ಇತರರ ಮಾತುಗಳನ್ನು ನಂಬಿ ಇಂದು ಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟ ಅನುಭವಿಸುವ ಸಾಧ್ಯತೆ ಇದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ. ಉದ್ಯೋಗಿಗಳಿಗೆ ಆಲಸ್ಯದಿಂದಾಗಿ ಕಿರಿಕಿರಿ ಅನುಭವಿಸುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (01-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ಅಷ್ಟಮಿ 28:00 ವಾರ: ಬುಧವಾರ
ನಕ್ಷತ್ರ: ಶ್ರವಣ 27:09 ಯೋಗ: ಶುಭ 20:00
ಕರಣ: ಬಾಲವ 16:56 ಅಮೃತಕಾಲ: ಸಂಜೆ 05:12 ರಿಂದ 06:44

ಸೂರ್ಯೋದಯ : 05:59   ಸೂರ್ಯಾಸ್ತ : 06:35

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿಯ ಒರಟು ವರ್ತನೆ ನಿಮ್ಮ ಮೇಲೆ ಒತ್ತಡ ಉಂಟಾಗುವಂತೆ ಮಾಡಬಹುದು. ವ್ಯಾಪಾರ – ವ್ಯವಹಾರದಲ್ಲಿ ಲಾಭ ಆಗಲಿದೆ. ಆರ್ಥಿಕವಾಗಿ ಲಾಭವನ್ನು ಹೊಂದುವಿರಿ. ತಿಂಗಳ ಆರಂಭದ ದಿನವೇ ಉದ್ಯೋಗದ ಸ್ಥಳದಲ್ಲಿ ನೀವು ಕಿರಿಕಿರಿಯನ್ನು ಅನುಭವಿಸುವ ಸಾಧ್ಯತೆ ಇರುವುದರಿಂದ ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ವೃಷಭ: ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಖುಷಿಯಲ್ಲಿಟ್ಟಿರುತ್ತದೆ. ಜತೆಗೆ ನೀವು ಯಾವುದೇ ಅವಕಾಶವನ್ನು ಕೂಡಾ ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡವು ಇರಲಿದೆ. ಆದರೆ, ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ. ನಿಮ್ಮ ಆಕರ್ಷಣೀಯ ವ್ಯಕ್ತಿತ್ವದಿಂದ ನೀವು ಹೊಸ ಸ್ನೇಹಿತರನ್ನು ಪಡೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ವಿಶೇಷ ಅನುಕೂಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಮಿಥುನ: ಜೀವನ ಸಂಗಾತಿಯೊಂದಿಗೆ ಸೇರಿ ಇಂದು ನೀವು ಭವಿಷ್ಯಕ್ಕೆ ಯಾವುದೇ ಆರ್ಥಿಕ ಯೋಜನೆಯನ್ನು ಮಾಡಬಹುದು ಮತ್ತು ಈ ಯೋಜನೆ ಯಶಸ್ವಿಯಾಗಲಿದೆ. ಆದರೆ, ಹತಾಶೆಯ ಭಾವನೆ ನಿಮ್ಮನ್ನು ಆವರಿಸಲು ಬಿಡಬೇಡಿ. ಆರೋಗ್ಯ ಮಧ್ಯಮ ಪ್ರಮಾಣದಲ್ಲಿರಲಿದೆ. ಉದ್ಯೋಗಿಗಳಿಗೆ ಹೊಸ ಅವಕಾಶಗಳು ತೆರೆದುಕೊಳ್ಳಲಿವೆ. ಪ್ರೇಮಿಗಳಿಗೆ ಶುಭ ಸೂಚನೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ ಇದೆ.
ಅದೃಷ್ಟ ಸಂಖ್ಯೆ: 5

ಕಟಕ: ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಅನಿರೀಕ್ಷಿತ ಲಾಭದ ಮೂಲಕ ಆರ್ಥಿಕ ಬಲಗಳು ಸುಧಾರಿಸುತ್ತವೆ. ನಿಮ್ಮ ಸಹೋದ್ಯೋಗಿಗಳು ಎಂದಿಗಿಂತಲೂ ಉತ್ತಮವಾಗಿ ನಿಮ್ಮನ್ನು ಅರ್ಥ ಮಾಡಿಕೊಳ್ಳುತ್ತಾರೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ಸಿಂಹ: ಧರ್ಮಕಾರ್ಯಗಳು / ಹವನಗಳು / ಮಂಗಳಕರ ಸಮಾರಂಭಗಳನ್ನು ಮನೆಯಲ್ಲಿ ಕೈಗೊಳ್ಳವ ಸಾಧ್ಯತೆ ಇದೆ. ಅತಿಯಾದ ದ್ವೇಷದ ಭಾವನೆಯಿಂದ ನಿಮ್ಮ ಮನಸ್ಸುನ್ನು ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದಲ್ಲಿ ಕೊಂಚ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಅನುಭವಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕನ್ಯಾ: ಕೆಲವು ಅನಿವಾರ್ಯ ಸಂದರ್ಭಗಳು ನಿಮಗೆ ಅಹಿತಕರವೆನಿಸಬಹುದು. ಆತುರದಲ್ಲಿ ಮಾತನಾಡಿ ಅಪಾಯವನ್ನು ತಂದುಕೊಳ್ಳುವುದು ಬೇಡ. ಇದು ನಿಮ್ಮ ಮನಸ್ಥಿತಿಯನ್ನು ಬದಲಾಯಿಸುವುದಷ್ಟೇ ಅಲ್ಲದೆ ನಿಮ್ಮ ತಪ್ಪು ತಿಳಿವಳಿಕೆಗಳನ್ನೂ ಹೋಗಲಾಡಿಸುತ್ತದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ದಿನದ ಮಟ್ಟಿಗೆ ಆದಾಯಕ್ಕಿಂತ ಹೆಚ್ಚಿನ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಸ್ನೇಹಿತರ ಬಗ್ಗೆ ಅಪಾರ್ಥ ಮಾಡಿಕೊಂಡು ಕೆಲವು ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಇದೆ. ಹೀಗಾಗಿ ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸಂಯಮದಿಂದ ವರ್ತಿಸಿ. ನಿಮ್ಮ ವೈಯಕ್ತಿಕ ವಿಷಯದಲ್ಲಿ ಮುಖ್ಯ ಬೆಳವಣಿಗೆಯೊಂದು ನಡೆಯಲಿದ್ದು, ಇದು ನಿಮಗೆ ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷವನ್ನು ತರಲಿದೆ. ಆರ್ಥಿವಾಗಿ ಉತ್ತಮ ಫಲ ಇರಲಿದೆ. ಆರೋಗ್ಯದ ಬಗ್ಗೆ ಜಾಗೃತಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ ನಿಮ್ಮದಾಗಲಿದೆ.
ಅದೃಷ್ಟ ಸಂಖ್ಯೆ: 7

ವೃಶ್ಚಿಕ: ಅತಿಥಿಗಳ ಆಗಮನದಿಂದಾಗಿ ಪ್ರಮುಖ ಕೆಲಸಗಳಲ್ಲಿ ಕೊಂಚಮಟ್ಟಿಗೆ ವಿಳಂಬವಾಗುವ ಸಾಧ್ಯತೆ ಇದೆ. ಅನೇಕ ಒತ್ತಡದಿಂದ ಹೊರಬರವಿರಿ. ಹಣಕಾಸಿನಲ್ಲಿ ಸುಧಾರಣೆಯಾಗಲಿದೆ. ದೀರ್ಘಕಾಲದ ಬಾಕಿ ಮರುಪಾವತಿ ಆಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ ಉಂಟು. ಕುಟುಂಬದಲ್ಲಿ ದಿನದ ಕೊನೆಯಲ್ಲಿ ಮನಸ್ತಾಪ ಆಗುವ ಸಂಭವ ಇದೆ. ಹೀಗಾಗಿ ಆದಷ್ಟು ಮಾತಿನ ಬಗ್ಗೆ ನಿಗಾ ಇರಲಿ.
ಅದೃಷ್ಟ ಸಂಖ್ಯೆ: 9

ಧನಸ್ಸು: ಚಿಕ್ಕ ಪುಟ್ಟ ವಿಷಯಗಳಿಗೆ ತಲೆಕೆಡಿಸಿಕೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವುದು ಬೇಡ. ನೀವು ಇತರರ ಮಾತುಗಳನ್ನು ನಂಬಿ ಇಂದು ಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟ ಅನುಭವಿಸುವ ಸಾಧ್ಯತೆ ಇದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ. ಉದ್ಯೋಗಿಗಳಿಗೆ ಆಲಸ್ಯದಿಂದಾಗಿ ಕಿರಿಕಿರಿ ಅನುಭವಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

ಮಕರ: ಬಹು ದಿನಗಳಿಂದ ನನೆಗುದಿಗೆ ಬಿದ್ದಿರುವ ಕೆಲಸ ಕಾರ್ಯಗಳು ಯಶಸ್ಸನ್ನು ತಂದುಕೊಡಲಿವೆ. ವಿದೇಶ ಪ್ರವಾಸಕ್ಕೆ ಕಾಯುತ್ತಿರುವವರಿಗೆ ಶುಭ ಸೂಚನೆ ಸಿಗಲಿದೆ. ಸೃಜನಶೀಲ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ.
ಅದೃಷ್ಟ ಸಂಖ್ಯೆ: 6

ಕುಂಭ: ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಹಣಕ್ಕೆ ಸಂಬಂಧಿಸಿದಂತೆ ವಿವಾದಗಳಿದ್ದಲ್ಲಿ ಇಂದು ನಿಮಗೆ ಶುಭ ಸುದ್ದಿಯನ್ನು ಕೊಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆ ಇಮ್ಮಡಿ ಆಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಮೀನ: ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ಕೆಲವು ಊಹೆಗಳು ಲಾಭಗಳನ್ನು ತರುತ್ತವೆ. ಪ್ರಮುಖ ವ್ಯಕ್ತಿಗಳೊಂದಿಗೆ ಮಾತನಾಡುವಾಗ ಜಾಗ್ರತೆ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ ನಿಮ್ಮದಾಗಲಿದೆ.
ಅದೃಷ್ಟ ಸಂಖ್ಯೆ: 2

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version