Site icon Vistara News

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಹೊರ ಬರುತ್ತೀರಿ

Dina Bhavishya

ಚಂದ್ರನು ಮಂಗಳವಾರವೂ ಕುಂಭ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆಯ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ವೃಶ್ಚಿಕ ರಾಶಿಯವರು ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯರೊಬ್ಬರ ಆರೋಗ್ಯ ಹದಗೆಡವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (28-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಪಂಚಮಿ 15:23 ವಾರ: ಮಂಗಳವಾರ
ನಕ್ಷತ್ರ: ಉತ್ತರಾಷಾಡ 09:32 ಯೋಗ: ಬ್ರಹ್ಮ 26:04
ಕರಣ: ತೈತುಲ 15:23 ಅಮೃತ ಕಾಲ: ರಾತ್ರಿ 10:38 ರಿಂದ 12:10ರವರಗೆ

ಸೂರ್ಯೋದಯ : 05:52   ಸೂರ್ಯಾಸ್ತ : 06:42

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕ ಜೀವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆಯ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

ವೃಷಭ:ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ನೀವು ದೀರ್ಘಕಾಲದ ಪ್ರಯೋಜನಗಳನ್ನು ಹೊಂದಿರುವ ಯೋಜನೆಗಳ ಮೇಲೆ ಕೆಲಸ ಮಾಡವ ಸಾಧ್ಯತೆ ಇದೆ. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದಲ್ಲಿ ಅನೇಕ ಏರಿಳಿತಗಳ ನಂತರ, ಇಂದು ಪರಸ್ಪರರಿಗೆ ನಿಮ್ಮ ಪ್ರೀತಿಯನ್ನು ಆಸ್ವಾದಿಸುವ ಸುವರ್ಣ ದಿನವಿದು. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ ಇರಲಿದೆ. ಉದ್ಯೋಗಿಗಳಿಗೆ ಶುಭ. ಅದೃಷ್ಟ ಸಂಖ್ಯೆ: 8

ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆವಹಿಸಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಸಭಲತೆ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ಸಿಂಹ: ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಹೆಚ್ಚು. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ, ಅನಗತ್ಯ ಖರ್ಚುಗಳ ಬಗ್ಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 8

ಕನ್ಯಾ:ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಕೊಂಚಮಟ್ಟಿಗೆ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟೂ ಆತ್ಮವಿಶ್ವಾಸ ತರಲಿದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಸಾಧಾರಣ ಫಲ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಸಂತೋಷದ ವಾತಾವರಣ ಇರಲಿದೆ. ಅದೃಷ್ಟ ಸಂಖ್ಯೆ: 9

ವೃಶ್ಚಿಕ: ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯರೊಬ್ಬರ ಆರೋಗ್ಯ ಹದಗೆಡವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಉದ್ಯೋಗಿಗಳಿಗೆ ಕಿರಿಕಿರಿ ಇರಲಿದೆ. ಸಂಗಾತಿಯಿಂದ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಸುದೀರ್ಘವಾದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರಿಂದ ಆರ್ಥಿಕ ಸಹಾಯವನ್ನು ಬೇಡುವರು ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಸಂಶೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

ಮಕರ: ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು, ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಕುಟುಂಬದವರ ಬೆಂಬಲ ಪ್ರೋತ್ಸಾಹದಿಂದಾಗಿ ಕೊಂಚಮಟ್ಟಿಗೆ ನಿರಾಳವಾಗುವಿರಿ. ಆರೋಗ್ಯದ ಬಗ್ಗೆ ಕಿಂಚಿತ್ತು ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

ಕುಂಭ: ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ. ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಸ್ನೇಹಿತರ ಜತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಲಾಭ ಇರಲಿದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿಯಾಗಿರಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

ಮೀನ: ಹೂಡಿಕೆಯಲ್ಲಿ ಲಾಭಾಂಶ ಕಡಿಮೆ ಇರಲಿದೆ. ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ಪ್ರೀತಿ ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ ನೀಡಲಿದೆ. ಅದೃಷ್ಟ ಸಂಖ್ಯೆ: 3

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version