Site icon Vistara News

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya

ಚಂದ್ರನು ಭಾನುವಾರವು ಮೇಷ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ ಹಾಗೂ ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ ಸುದ್ದಿ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಮಿಥುನ ರಾಶಿಯವರು ಸದಾ ಕಲ್ಪನೆಯಲ್ಲಿ ಕನಸುಗಳನ್ನು ಕಾಣುವುದು ಬೇಡ. ಆರ್ಥಿಕವಾಗಿ ಸಹಾಯ ಮಾಡಿ ನೀವು ಹಣಕಾಸಿನ ಸಮಸ್ಯೆಯಲ್ಲಿ ಸಿಲುಕುವುದು ಬೇಡ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಶುಭಫಲ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (05-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ದ್ವಾದಶಿ 17:41 ವಾರ: ಭಾನುವಾರ
ನಕ್ಷತ್ರ: ಉತ್ತರ ಭಾದ್ರಪದ 19:56 ಯೋಗ: ವೈಧೃತಿ 07:35
ಕರಣ: ಕೌಲವ 07:10 ಅಮೃತಕಾಲ: ಮಧ್ಯಾಹ್ನ 02:47 ರಿಂದ 04:15

ಸೂರ್ಯೋದಯ : 05:58   ಸೂರ್ಯಾಸ್ತ : 06:35

ರಾಹುಕಾಲ : ಸಾಯಂಕಾಲ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ:ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ ಸುದ್ದಿ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಗಾತಿಯ ಮಧುರ ಮಾತುಗಳು ಹಿತವೇನಿಸುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

ವೃಷಭ:ಕುಟುಂಬದ ಆಪ್ತರಿಂದ ಆರ್ಥಿಕ ಸಹಾಯದ ಬೇಡಿಕೆ ಇರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ವಿದ್ಯಾರ್ಥಿಗಳು ಮನೋಬಲ ಹೆಚ್ಚಿಸಿಕೊಳ್ಳುವುದು ಅವಶ್ಯಕ. ಧೈರ್ಯ ಕಾಡಬಹುದು. ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗುವುದು. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

ಮಿಥುನ: ಸದಾ ಕಲ್ಪನೆಯಲ್ಲಿ ಕನಸುಗಳನ್ನು ಕಾಣುವುದು ಬೇಡ. ಆರ್ಥಿಕವಾಗಿ ಸಹಾಯ ಮಾಡಿ ನೀವು ಹಣಕಾಸಿನ ಸಮಸ್ಯೆಯಲ್ಲಿ ಸಿಲುಕುವುದು ಬೇಡ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1

ಕಟಕ: ಕುಟುಂಬದ ಸದಸ್ಯರಿಂದ ಆರ್ಥಿಕ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಶುಭಫಲ. ಹಣದ ಹರಿವು ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತ ವ್ಯಕ್ತಿಗಳೊಂದಿಗೆ ಮಾತುಕತೆ ಇರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

ಸಿಂಹ:ಕೆಲವು ಘಟನೆಗಳು ಮನಸ್ಸಿನ ಮೇಲೆ ಪರಿಣಾಮ ಬೀರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹೋದ್ಯೋಗಿಗಳಿಂದ ಬೆಂಬಲ ಸಿಗಲಿದೆ. ಕ್ಷೇತ್ರ ದರ್ಶನ ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 3

ಕನ್ಯಾ: ದೀರ್ಘಕಾಲದ ಕೆಲಸ ಕಾರ್ಯಗಳು ಇಂದು ಯಶಸ್ಸನ್ನು ತಂದು ಕೊಡಲಿದೆ. ಆದಾಯದ ಮೂಲ ಹೆಚ್ಚಾಗಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ, ಕುಟುಂಬದ ವಾತಾವರಣ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆತ್ಮವಿಶ್ವಾಸದಿಂದ ಕೆಲಸಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ಹಣಕಾಸು, ಉದ್ಯೋಗ ಹಾಗೂ ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಕಾಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

ವೃಶ್ಚಿಕ: ಆರೋಗ್ಯದ ಕುರಿತು ಕಾಳಜಿ ಇರಲಿ. ನ್ಯಾಯಾಲಯದಲ್ಲಿರುವ ವ್ಯಾಜ್ಯಗಳು ವಿಜಯವನ್ನು ತಂದುಕೊಡುವ ಸಾಧ್ಯತೆ ಇದೆ. ಹಣಕಾಸು, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಯಶಸ್ಸು. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

ಧನಸ್ಸು: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಹಾದಿ ಅತ್ಯವಶ್ಯಕವಿದೆ. ಹಣಕಾಸು ವಿಷಯದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

ಮಕರ: ಬುದ್ಧಿವಂತಿಕೆಯಿಂದ ಕೆಲಸಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗುವುದು. ಕೋಪವು ಅಪಾಯ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಲಾಭ ಇರಲಿದೆ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 2

ಕುಂಭ: ದುಂದುವೆಚ್ಚವನ್ನು ತಪ್ಪಿಸಿ. ಬುದ್ಧಿವಂತಿಕೆಯಿಂದ ಕೆಲಸ ಮಾಡಿ ವ್ಯರ್ಥ ಪ್ರಯತ್ನ ಮಾಡುವುದು ಬೇಡ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 9

ಮೀನ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಸಂಗಾತಿ ಇಂದು ನಿಮ್ಮೊಂದಿಗೆ ಮುಖ್ಯ ವಿಷಯದ ಕುರಿತು ಚರ್ಚಿಸಬಹುದು. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version