ಚಂದ್ರನು ತುಲಾ ರಾಶಿಯಿಂದ ಶನಿವಾರ ಮಧ್ಯಾಹ್ನ 01:39ಕ್ಕೆ ವೃಶ್ಚಿಕ ರಾಶಿಯನ್ನು ಪ್ರವೇಶಿಸಿದ್ದು, ಸೋಮವಾರ ರಾತ್ರಿವರೆಗೆ ಅಲ್ಲಿಯೇ ನೆಲೆಸಿರುತ್ತಾನೆ. ಇದರಿಂದಾಗಿ ಮೇಷ, ವೃಶ್ಚಿಕ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮಿಥುನ ರಾಶಿಯವರಿಗೆ ಇಂದು ನಿಮಗೆ ಅನೇಕ ಹೊಸ ಆರ್ಥಿಕ ಯೋಜನೆಗಳು ಲಭ್ಯವಾಗುತ್ತವೆ. ಯಾವುದೇ ಬದ್ಧತೆಗೆ ಒಳಗಾಗುವ ಮುನ್ನ ಸಾಧಕ – ಬಾಧಕಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿಕೊಳ್ಳಬೇಕು. ವೃಶ್ಚಿಕ ರಾಶಿಯವರಿಗೆ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ಲಭ್ಯವಾಗುತ್ತದೆ. ಇದಕ್ಕಾಗಿ ಸ್ವಲ್ಪ ತಾಳ್ಮೆ ವಹಿಸಿ. ವ್ಯಾಪಾರ ಅಥವಾ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (12-11-2023)
ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಕೃಷ್ಣ ಪಕ್ಷ
ತಿಥಿ: ಚತುರ್ದಶಿ 13:57 ವಾರ: ಭಾನುವಾರ
ನಕ್ಷತ್ರ: ಸ್ವಾತಿ 26:50 ಯೋಗ: ಆಯುಷ್ಮಾನ್ 16:22
ಕರಣ: ಶಕುನಿ 14:44 ಅಮೃತ ಕಾಲ: ಸಂಜೆ 05:40 ರಿಂದ 07:20ರ ವರೆಗೆ
ಸೂರ್ಯೋದಯ : 06:17 ಸೂರ್ಯಾಸ್ತ : 05:50
ಮೇಷ: ಅನಿವಾರ್ಯ ಕಾರಣದಿಂದ ಸಮಯ ವ್ಯರ್ಥವಾಗುತ್ತದೆ. ಸಂಬಂಧಿಗಳು ಇಂದು ನಿಮ್ಮ ಸಂಗಾತಿಯ ಜತೆಗೆ ವಾದ ಮಾಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲವಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ವೃಷಭ: ನಕಾರಾತ್ಮಕ ಭಾವನೆಗಳನ್ನು ಬಿಡಲು ಸಿದ್ಧರಾಗಿ. ಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ವ್ಯಾಪಾರವನ್ನು ಬಲಪಡಿಸಲು ಇಂದು ನೀವು ಧೈರ್ಯದಿಂದ ಹೆಜ್ಜೆ ಇಡಬಹುದು. ಇದಕ್ಕಾಗಿ ನಿಮ್ಮ ಆಪ್ತರು ನಿಮಗೆ ಆರ್ಥಿಕವಾಗಿ ಸಹಾಯ ಮಾಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ದಿನ ಇದಾಗಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಮಿಥುನ: ಇಂದು ನಿಮಗೆ ಅನೇಕ ಹೊಸ ಆರ್ಥಿಕ ಯೋಜನೆಗಳು ಲಭ್ಯವಾಗುತ್ತವೆ. ಯಾವುದೇ ಬದ್ಧತೆಗೆ ಒಳಗಾಗುವ ಮುನ್ನ ಸಾಧಕ – ಬಾಧಕಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ. ಮಕ್ಕಳು ತಮ್ಮ ಸಾಧನೆಗಳಿಂದ ನೀವು ಹೆಮ್ಮೆ ಪಡುವಂತೆ ಮಾಡಬಹುದು. ಜನರ ಸಹಕಾರ ಸಿಗಲಿದೆ. ನಿಮ್ಮ ಕೋಪದಿಂದ ಇತರರ ಮೇಲೆ ಒತ್ತಡ ಹೇರುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಕಟಕ: ಇಂದು ನಿಮಗೆ ಹಣದ ಅಗತ್ಯ ಹೆಚ್ಚು ಇರುತ್ತದೆ. ಆದ್ದರಿಂದ ಹಣದ ಸಂಗ್ರಹದ ಬಗ್ಗೆ ಚಿಂತಿಸಿ. ನಿಮ್ಮ ಕೆಲಸಗಳನ್ನು ಬೇರೆಯವರು ಮೆಚ್ಚಿ ನಿಮ್ಮನ್ನು ಶ್ಲಾಘಿಸಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7
ಸಿಂಹ: ಅನಿರೀಕ್ಷಿತ ಮೂಲಗಳಿಂದ ಗಳಿಕೆಯನ್ನು ಪಡೆಯುವ ಸಾಧ್ಯತೆ ಇದೆ. ಕುಟುಂಬದ ಬೆಂಬಲ ಸಿಗಲಿದೆ. ಆತುರದ ತೀರ್ಮಾನ ಕೈಗೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಕನ್ಯಾ: ಹತಾಶೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಭರವಸೆಯ ಅವಕಾಶ ಇರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಅನಿವಾರ್ಯ ಕಾರಣದಿಂದ ಖರ್ಚು ಹೆಚ್ಚಾಗಲಿದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ನಿಮ್ಮ ಸಂಗಾತಿಯ ವರ್ತನೆ ಇಂದು ನಿಮ್ಮ ವೃತ್ತಿಪರ ಸಂಬಂಧಗಳಿಗೆ ತೊಂದರೆಯನ್ನುಂಟು ಮಾಡಬಹುದು. ಉದ್ಯೋಗಿಗಳಿಗೆ ಒತ್ತಡದ ವಾತಾವರಣ ನಿರ್ಮಾಣವಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 6
ವೃಶ್ಚಿಕ: ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ ತಾಳ್ಮೆಯಿಂದಿರಿ. ವ್ಯಾಪಾರ ಅಥವಾ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಇದೆ. ನಿಜವಾಗಿಯೂ ಅದ್ಭುತ ಆಲೋಚನೆಗಳು ಬರಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8
ಧನಸ್ಸು: ಒತ್ತಡದ ವಾತಾವರಣದಿಂದ ಹೊರ ಬರಲು ಧ್ಯಾನ,ಯೋಗ ಮಾಡಿ. ಇಂದು ವ್ಯಾಪಾರದಲ್ಲಿ ಲಾಭ ಗಳಿಸಲು ನಿಮಗೆ ಸಲಹೆ ನೀಡಬಹುದು, ನೀವು ಈ ಸಲಹೆಯನ್ನು ಅನುಸರಿಸಿದರೆ, ನೀವು ಖಂಡಿತವಾಗಿಯೂ ಹಣವನ್ನು ಗಳಿಸುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ವಿರಾಮದ ವಾತಾವರಣ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5
ಮಕರ: ಧಾರ್ಮಿಕ ಭಾವನೆ ನಿಮ್ಮಲ್ಲಿ ಮೂಡಿ ದೈವಿಕ ಜ್ಞಾನವನ್ನು ಪಡೆಯಲು ನೀವು ಒಂದು ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವಂತೆ ಮಾಡುತ್ತವೆ. ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಇಂದು ಪರಿಹರಿಸಬಹುದು ಮತ್ತು ನೀವು ಧನಲಾಭ ಪಡೆಯಬಹುದು. ಉದ್ಯೋಗಿಗಳಿಗೆ ಹೊಸ ಉತ್ಸಾಹ ಇರಲಿದೆ. ಕೌಟುಂಬಿಕವಾಗಿ ಶುಭ ಫಲ ಇದೆ.
ಅದೃಷ್ಟ ಸಂಖ್ಯೆ: 5
ಕುಂಭ: ಅನೇಕ ವಿಷಯಗಳು ನಿಮಗೆ ಸಂತಸ ತರುವುದು. ದೀರ್ಘಕಾಲದ ಕೆಲಸ ಇಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆರ್ಥಿಕ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಟೀಕಿಸುವವರ ಮಾತುಗಳಿಗೆ ಕಿವಿ ಕೊಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3
ಮೀನ: ಉದ್ಯೋಗಿಗಳು ಅನುಮಾನದಿಂದ ಕಾರ್ಯದಲ್ಲಿ ತೊಡಗುವುದು ಬೇಡ. ಹೊಸ ಅವಕಾಶಗಳು ಒದಗಿ ಬರುವ ಸಾಧ್ಯತೆ ಇದೆ. ಮಕ್ಕಳ ಆರೋಗ್ಯದ ಕಡೆಗೆ ಗಮನ ಇರಲಿ. ಕುಟುಂಬದಲ್ಲಿ ವ್ಯತಿರಿಕ್ತವಾದ ವಾತಾವರಣ ಸೃಷ್ಟಿಯಾಗುವ ಮುಂಚೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com