ಚಂದ್ರನು ಮಂಗಳವಾರವೂ ಧನಸ್ಸು ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮಂಗಳವಾರ ಬಹುತೇಕ ರಾಶಿಯವರಿಗೆ ಒತ್ತಡ ಹೆಚ್ಚಾಗಲಿದೆ. ಹೀಗಾಗಿ ತಾಳ್ಮೆಯಿಂದ ವರ್ತಿಸಿ. ತುಲಾ ರಾಶಿಯವರು ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಮಾತಿಗೆ ಮಾತು ಬೆಳೆಸುವುದು ಬೇಡ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (14-11-2023)
ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ
ತಿಥಿ: ಪಾಡ್ಯ 14:35 ವಾರ: ಮಂಗಳವಾರ
ನಕ್ಷತ್ರ: ಅನುರಾಧ 27:23 ಯೋಗ: ಶೋಭನ 13:55
ಕರಣ: ಭವ 14:35 ಅಮೃತ ಕಾಲ: ಸಂಜೆ 5:00 ರಿಂದ 06:36ರವರೆಗೆ
ದಿನದ ವಿಶೇಷ: ಮಕ್ಕಳ ದಿನಾಚರಣೆ, ಬಲಿಪಾಡ್ಯಮಿ
ಸೂರ್ಯೋದಯ : 06:18 ಸೂರ್ಯಾಸ್ತ : 05:50
ಮೇಷ: ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕ ಇದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7
ವೃಷಭ: ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಮಿಥುನ: ಬಂಧುಗಳು ನಿಮ್ಮನ್ನು ಟೀಕೆ ಮಾಡುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಒತ್ತಡ ಹೆಚ್ಚಾಗಿ ಮಾನಸಿಕ ನೆಮ್ಮದಿ ಹಾಳು ಮಾಡುವ ಸಾಧ್ಯತೆ ಇದೆ. ಆದರೆ ಸಂಯಮದಿಂದ ವರ್ತಿಸಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ಕಟಕ: ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಆತುರದ ತೀರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರುತ್ತದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಸಿಂಹ: ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವಾಗಲಿದೆ. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಕನ್ಯಾ: ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸ ಇರಲಿದೆ. ಹಣಕಾಸು ಪ್ರಗತಿ ಇರಲಿದೆ. ಬಂಧುಗಳ ಭೇಟಿ ಕೊಂಚ ಸಮಾಧಾನ ತರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7
ವೃಶ್ಚಿಕ: ಕುಟುಂಬ ಸದಸ್ಯರ ಆರೋಗ್ಯ ಕಡೆ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ಧನಸ್ಸು: ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತ ಸ್ನೇಹಿತ- ಸಂಬಂಧಿಗಳ ಸಮಸ್ಯೆಗಳಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ಮಕರ: ಆರೋಗ್ಯ ಉತ್ತಮವಾಗಿರಲಿದೆ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತರುವುದು. ಅತಿರೇಖದಲ್ಲಿ ಮಾತನಾಡುವುದು ಬೇಡ. ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಕುಂಭ: ಹಿರಿಯರ ಮಾರ್ಗದರ್ಶನ ಸಿಗುವುದು. ಆರೋಗ್ಯ ಉತ್ತಮವಾಗಿರಲಿದೆ. ಅನಿರೀಕ್ಷಿತ ಖರ್ಚು ಹೆಚ್ಚಾಗಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ.
ಅದೃಷ್ಟ ಸಂಖ್ಯೆ: 3
ಮೀನ: ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com