Dina Bhavishya : ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಕಂಕಣ ಭಾಗ್ಯ ಒಲಿಯುವ ಸಾಧ್ಯತೆ Vistara News

ಪ್ರಮುಖ ಸುದ್ದಿ

Dina Bhavishya : ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಕಂಕಣ ಭಾಗ್ಯ ಒಲಿಯುವ ಸಾಧ್ಯತೆ

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷದ ಚತುರ್ಥಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for November 17 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಗುರುವಾರ ಮಕರ ರಾಶಿಯನ್ನು ಪ್ರವೇಶ ಮಾಡಲಿದ್ದು, ಶನಿವಾರದವರೆಗೂ ಅಲ್ಲಿಯೇ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ ಮತ್ತು ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಧನಸ್ಸು ರಾಶಿಯವರಿಗೆ ಆರೋಗ್ಯದ ಕುರಿತು ಕಾಳಜಿ ಇರಲಿ. ನ್ಯಾಯಾಲಯದಲ್ಲಿರುವ ವ್ಯಾಜ್ಯಗಳು ವಿಜಯವನ್ನು ತಂದುಕೊಡುವ ಸಾಧ್ಯತೆ ಇದೆ. ಹಣಕಾಸು, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (17-11-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ
ತಿಥಿ: ಚತುರ್ಥಿ 11:02 ವಾರ: ಶುಕ್ರವಾರ
ನಕ್ಷತ್ರ: ಪೂರ್ವಾಷಾಢ 25:16 ಯೋಗ: ಧೃತಿ 07:34
ಕರಣ: ವಿಷ್ಟಿ (ಭದ್ರ) 11:02 ಅಮೃತ ಕಾಲ: ರಾತ್ರಿ 08:41 ರಿಂದ 10:13ರ ವರೆಗೆ
ದಿನ ವಿಶೇಷ: ವೃಶ್ಚಿಕ ಸಂಕ್ರಮಣ

ಸೂರ್ಯೋದಯ : 06:19  ಸೂರ್ಯಾಸ್ತ : 05:50

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕ ಸಮಸ್ಯೆಗಳಿಗೆ ತಕ್ಕ ಪರಿಹಾರ ಸಹ ಇಂದು ಸಿಗುವ ಸಾಧ್ಯತೆ ಹೆಚ್ಚಿದೆ. ಉದ್ಯೋಗಿಗಳಿಗೆ ಮಿಶ್ರ ಫಲವಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದುಂದುವೆಚ್ಚವನ್ನು ತಪ್ಪಿಸಿ. ಬುದ್ಧಿವಂತಿಕೆಯಿಂದ ಕೆಲಸ ಮಾಡಿ ವ್ಯರ್ಥ ಪ್ರಯತ್ನ ಮಾಡುವುದು ಬೇಡ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಸ್ನೇಹಿತರ ಮೂಲಕ ದೊರಕುವ ಮಾರ್ಗದರ್ಶನ ನಿಮ್ಮ ಆರೋಗ್ಯವನ್ನು ಸುಧಾರಿಸಲು ನಿಮ್ಮನ್ನು ಉತ್ತೇಜಿಸುತ್ತದೆ. ಕೆಲವು ದಿನಗಳ ಹಿಂದೆ ಹಣವನ್ನು ಹೂಡಿಕೆ ಮಾಡಿದ್ದರೆ, ಅದರ ಪ್ರಯೋಜನವನ್ನು ಇಂದು ನೀವು ಪಡೆಯಬಹುದು. ನಿಮ್ಮ ಜತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ನಡವಳಿಕೆಯಿಂದ ಕಿರಿಕಿರಿಗೊಳ್ಳಬಹುದು. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ ಇದೆ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಸಂಗಾತಿ ಇಂದು ನಿಮ್ಮೊಂದಿಗೆ ಮುಖ್ಯ ವಿಷಯದ ಕುರಿತು ಚರ್ಚಿಸಬಹುದು. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ದಿನ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ ಇದೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಆಲಸ್ಯದಿಂದ ಕಾರ್ಯ ಹಾನಿಯಾಗಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಸೃಜನಾತ್ಮಕವಾಗಿ ಕೆಲಸ ಮಾಡಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಲಾಭ ತರುವುದು. ಮುಂಗೋಪದಿಂದ ನಷ್ಟ ಸಾಧ್ಯತೆ ಇದೆ. ಸ್ನೇಹಿತರ ಸಲಹೆ ಸಹಕಾರ ಸಿಗಲಿದೆ.
ಅದೃಷ್ಟ ಸಂಖ್ಯೆ: 6

Horoscope Today

ವೃಶ್ಚಿಕ: ದೀರ್ಘಕಾಲದ ಕೆಲಸ ಕಾರ್ಯಗಳು ಇಂದು ಯಶಸ್ಸನ್ನು ತಂದು ಕೊಡಲಿದೆ. ಆದಾಯದ ಮೂಲ ಹೆಚ್ಚಾಗಲಿದೆ. ಆಪ್ತರೊಂದಿಗೆ ಮಾತುಕತೆ ಇರಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ, ಕುಟುಂಬದ ವಾತಾವರಣ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿ ಉಂಟಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಆರೋಗ್ಯದ ಕುರಿತು ಕಾಳಜಿ ಇರಲಿ. ನ್ಯಾಯಾಲಯದಲ್ಲಿರುವ ವ್ಯಾಜ್ಯಗಳು ವಿಜಯವನ್ನು ತಂದುಕೊಡುವ ಸಾಧ್ಯತೆ ಇದೆ. ಹಣಕಾಸು, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

Horoscope Today

ಮಕರ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಹಾದಿ ಅತ್ಯವಶ್ಯಕವಾಗಿದೆ. ಹಣಕಾಸು ವಿಷಯದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ನೀವು ಸಂತೋಷವನ್ನು ಪಡೆಯಲಿದ್ದೀರಿ. ಇತರರಿಗೆ ಸಂತಸ ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆತುರದ ಭರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಮೀನ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯ ನಿಮ್ಮದಾಗಲಿದೆ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Assembly Elections 2023 : ನಮ್ಮ ಗ್ಯಾರಂಟಿ ಯಶಸ್ಸಿನಿಂದ ತೆಲಂಗಾಣದಲ್ಲಿ ಗೆಲುವು: ಸಿಎಂ ಸಿದ್ದರಾಮಯ್ಯ

Assembly Elections 2023 : ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

CM Siddaramaiah
Koo

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇರುತ್ತದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ. ಇನ್ನು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ (Assembly Elections 2023) ಕಾಂಗ್ರೆಸ್‌ ಗೆಲುವಿಗೆ ಕರ್ನಾಟಕದ ಗ್ಯಾರಂಟಿ ಯೋಜನೆಯ (Congress Guarantee Scheme) ಕೊಡುಗೆ ಬಹಳ ದೊಡ್ಡದಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ತಾನ, ಚತ್ತೀಸ್‌ಗಢಗಳಲ್ಲಿ ಹಿನ್ನಡೆ ಆಗಿದೆ. ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ ಎಂದು ಹೇಳಿದರು. ‌

ಇದನ್ನೂ ಓದಿ: Assembly Session: ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೊ; ಪಿಡಬ್ಲ್ಯುಡಿ ಎಂಜಿನಿಯರ್‌ಗೆ ಸ್ಪೀಕರ್ ಕ್ಲಾಸ್

ನಮ್ಮ ಗ್ಯಾರಂಟಿಯಿಂದ ಜನ ಭರವಸೆ ಇಟ್ಟರು

ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ.
ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ. ಅದರ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ ನಡೆಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸಿದ್ದು ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ ಬಿಆರ್‌ಎಸ್ ಪಕ್ಷದ ಜತೆ ಒಳ ಒಪ್ಪಂದ ಮಾಡಿಕೊಂಡದ್ದು ಮತದಾರರು ಎರಡೂ ಪಕ್ಷಗಳ ಮೇಲೆ ಭರವಸೆ ಕಳೆದುಕೊಳ್ಳುವಂತೆ ಮಾಡಿತು. ಈ ಒಳ ಒಪ್ಪಂದದ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ಪ್ರಚಾರದ ಸಮಯದಲ್ಲಿ ಬಯಲು ಮಾಡಿದ್ದು‌, ಕೂಡಾ ನಮ್ಮ ಗೆಲುವಿಗೆ ಕಾರಣ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ಆಟ

ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು ಕೋಮುವಾದಿ ರಾಜಕಾರಣದ ಪಾತ್ರ ಕೂಡಾ ಇದೆ. ಈ ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಕ್ರಮ ಗಳಿಕೆಯನ್ನು ನೀರಿನಂತೆ ಚೆಲ್ಲಿದೆ. ಅದರ ಜತೆ ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ತಮ್ಮ ಹಳೆಯ ಆಟವನ್ನು‌ ಮುಂದುವರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಇಲ್ಲದೆ ಇರುವ ಕಾರಣಕ್ಕೆ ಬಿಜೆಪಿ‌ ಅಲ್ಲಿ ಹೆಚ್ಚು ಹಣವನ್ನು ವ್ಯರ್ಥಮಾಡಲು ಹೋಗಿಲ್ಲ. ಅಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಕೂಡಾ ಅವಕಾಶ ಇರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜಸ್ಥಾನದಲ್ಲಿ ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ ಜನರು ಪಕ್ಷವನ್ನು‌ ಬದಲಾಯಿಸುವ ಪರಿಪಾಠವನ್ನು ನಡೆಸಿಕೊಂಡು ಬಂದಿದ್ದಾರೆ. ಈ ಬಾರಿಯೂ ಅದೇ ಪದ್ಧತಿಯನ್ನು ಮುಂದುವರಿಸಿದ್ದಾರೆ. ಈ ಕಾರಣದಿಂದಾಗಿ ಅಶೋಕ್ ಗೆಹ್ಲೋಟ್‌ ಸರ್ಕಾರ ಒಳ್ಳೆಯ ಕೆಲಸ ಮಾಡಿದ್ದರೂ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: Assembly Elections 2023 : ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮುಂದುವರಿಕೆಯ ಸಂಕೇತ: ಡಿಕೆಶಿ

ಆಡಳಿತ ವಿರೋಧಿ ಅಲೆ ಸೋಲಿಗೆ ಕಾರಣ

ರಾಜಸ್ಥಾನ ಮತ್ತು ಚತ್ತೀಸ್‌ಗಢ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಆಡಳಿತ ವಿರೋಧಿ ಅಲೆ ಕೂಡಾ ಕಾರಣ. ಇತ್ತೀಚಿನ ವರ್ಷಗಳಲ್ಲಿ ರಾಜಸ್ಥಾನದಲ್ಲಿ ಯಾವುದೇ ಆಡಳಿತ ಪಕ್ಷ ಮರಳಿ ಅಧಿಕಾರಕ್ಕೆ ಬಂದಿರುವ ಉದಾಹರಣೆ ಇಲ್ಲ. ಅಲ್ಲಿನ ಮತದಾರರು ಪ್ರತಿ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಸೋಲಿಸುತ್ತಾ ಬಂದಿದ್ದಾರೆ. ಈ ಚುನಾವಣೆಯಲ್ಲಿಯೂ ಆ ಪರಂಪರೆಯನ್ನು‌ ಮುಂದುವರಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Continue Reading

ಕರ್ನಾಟಕ

Assembly Elections 2023 : ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮುಂದುವರಿಕೆಯ ಸಂಕೇತ: ಡಿಕೆಶಿ

Assembly Elections 2023 : ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ನೆರೆ ರಾಜ್ಯಗಳ ನಮ್ಮ ನಾಯಕರು ಇಲ್ಲಿ ಪ್ರತಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದು, ಚುನಾವಣೆ ಫಲಿತಾಂಶದ ನಂತರ ಮುಂದಿನ ಕ್ರಮಗಳ ಬಗ್ಗೆ ನಾವು ಎಚ್ಚರಿಕೆಯಿಂದ ಇದ್ದೇವೆ. ಪ್ರತಿ ಕ್ಷೇತ್ರದಿಂದ ನಮ್ಮ ಅಭ್ಯರ್ಥಿಗಳನ್ನು ಕರೆ ತರಲು ವ್ಯವಸ್ಥೆ ಮಾಡಲಾಗಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

VISTARANEWS.COM


on

DK shivakumar
Koo

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆ (Assembly Elections 2023) ಫಲಿತಾಂಶವು ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮುಂದುವರಿದಿರುವುದರ ಸಂಕೇತ (Congress dominance in South India) ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ತಿಳಿಸಿದ್ದಾರೆ.

ತೆಲಂಗಾಣ ರಾಜ್ಯ ವಿಧಾನಸಭೆ ಚುನಾವಣೆ (Telangana Election) ಫಲಿತಾಂಶ ಪ್ರಕಟವಾದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, ನಮ್ಮ ಕಾರ್ಯಕರ್ತರು ಹಾಗೂ ಮತದಾರರು ಬದಲಾವಣೆ ತರಲು ತೀರ್ಮಾನ ಮಾಡಿದ್ದರು. ಹೀಗಾಗಿ ತೆಲಂಗಾಣದಲ್ಲಿ ನಿಚ್ಚಳ ಬಹುಮತ ಸಿಕ್ಕಿದೆ. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ನೆರೆ ರಾಜ್ಯಗಳ ನಮ್ಮ ನಾಯಕರು ಇಲ್ಲಿ ಪ್ರತಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದು, ಚುನಾವಣೆ ಫಲಿತಾಂಶದ ನಂತರ ಮುಂದಿನ ಕ್ರಮಗಳ ಬಗ್ಗೆ ನಾವು ಎಚ್ಚರಿಕೆಯಿಂದ ಇದ್ದೇವೆ. ಪ್ರತಿ ಕ್ಷೇತ್ರದಿಂದ ನಮ್ಮ ಅಭ್ಯರ್ಥಿಗಳನ್ನು ಕರೆ ತರಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವ ತೆಲಂಗಾಣ ರಾಜ್ಯದ ಜನರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ಹಾಗೂ ವೈಯಕ್ತಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಇದು ನನ್ನ ವೈಯಕ್ತಿಕ ಗೆಲುವಲ್ಲ

ಈ ಗೆಲುವನ್ನು ನಿಮ್ಮ ವೈಯಕ್ತಿಕ ಗೆಲುವು ಎಂದು ಭಾವಿಸುತ್ತೀರಾ ಎಂದು ಮಾಧ್ಯಮಗಳು ಕೇಳಿದಾಗ, “ಖಂಡಿತ ಇಲ್ಲ. ಇದು ನನ್ನ ವೈಯಕ್ತಿಕ ಗೆಲುವಲ್ಲ. ಇದು ತೆಲಂಗಾಣ ರಾಜ್ಯದ ಜನರ ಗೆಲುವು. ತೆಲಂಗಾಣ ರಾಜ್ಯ ರಚನೆ ಮಾಡಿದ ಸೋನಿಯಾ ಗಾಂಧಿ ಅವರಿಗೆ ಈ ರಾಜ್ಯದ ಜನರು ಈ ರೀತಿ ಧನ್ಯವಾದ ಅರ್ಪಿಸಿದ್ದಾರೆ. ಕಳೆದ ಹತ್ತು ವರ್ಷಗಳ ಆಡಳಿತ ನೋಡಿ ಇಲ್ಲಿನ ಜನ ಬೇಸತ್ತಿದ್ದರು. ಹೀಗಾಗಿ ಜನ ಅಭಿವೃದ್ಧಿ ಹಾಗೂ ಪ್ರಗತಿಯ ಬದಲಾವಣೆ ಬಯಸಿದ್ದಾರೆ. ನಮ್ಮ ಮೇಲೆ ನಂಬಿಕೆ ಇಟ್ಟ ಜನರಿಗೆ ಧನ್ಯವಾದಗಳು. ನಾವು ಅವರ ನಂಬಿಕೆ ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಸಾಮೂಹಿಕ ನಾಯಕತ್ವದ ಮೇಲೆ ಚುನಾವಣೆ

ರೇವಂತ್ ರೆಡ್ಡಿ ಅವರನ್ನು ಈ ಗೆಲುವಿನ ರೂವಾರಿ ಎಂದು ಕರೆಯುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್‌, ರೇವಂತ್ ರೆಡ್ಡಿ ಅವರು ಟಿಪಿಸಿಸಿ ಅಧ್ಯಕ್ಷರು. ಅವರು ಈ ತಂಡದ ನಾಯಕರಾಗಿದ್ದರು. ನಮ್ಮ ಪಕ್ಷ ಸಾಮೂಹಿಕ ನಾಯಕತ್ವದ ಮೇಲೆ ಚುನಾವಣೆ ಮಾಡಿದ್ದು, ಪಕ್ಷ ಈ ಬಗ್ಗೆ ಸೂಕ್ತ ತೀರ್ಮಾನ ಮಾಡಲಿದೆ. ಇಂತಹ ವಿಚಾರವಾಗಿ ನಾನು ಹೆಚ್ಚು ಚರ್ಚೆ ಮಾಡುವುದಿಲ್ಲ. ನಾವು ಸಾಮಾನ್ಯ ಕಾರ್ಯಕರ್ತರಂತೆ ಕೆಲಸ ಮಾಡಿದ್ದೇವೆ. ಉಳಿದಂತೆ ನಮ್ಮ ನಾಯಕರು ತೀರ್ಮಾನ ಮಾಡುತ್ತಾರೆ. ಅವರ ತೀರ್ಮಾನ ಗೌರವಿಸಿ ಪಾಲಿಸುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: Assembly Session: ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೊ; ಪಿಡಬ್ಲ್ಯುಡಿ ಎಂಜಿನಿಯರ್‌ಗೆ ಸ್ಪೀಕರ್ ಕ್ಲಾಸ್

ತೆಲಂಗಾಣದ ಜನ ಉತ್ತರ ಕೊಟ್ಟಿದ್ದಾರೆ

ಈ ಗೆಲುವಿನ ನಂತರ ಕೆಸಿಆರ್ ಹಾಗೂ ಕೆಟಿಆರ್ ಅವರಿಗೆ ಯಾವ ಸಂದೇಶ ನೀಡುತ್ತೀರಿ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, “ನಾನು ಅವರ ಬಗ್ಗೆ ಏನೂ ಮಾತನಾಡುವುದಿಲ್ಲ. ಅವರು ನಮ್ಮ ಬಗ್ಗೆ ಏನೆಲ್ಲ ಟ್ವೀಟ್ ಮಾಡಿದ್ದರೋ ಅದಕ್ಕೆ ತೆಲಂಗಾಣ ರಾಜ್ಯದ ಜನ ಉತ್ತರ ನೀಡಿದ್ದಾರೆ ಎಂದು ತಿಳಿಸಿದರು.

Continue Reading

ಕ್ರಿಕೆಟ್

ಪಾಕಿಸ್ತಾನ ಕ್ರಿಕೆಟ್​ ತಂಡದ ದುರ್ಗತಿ; ನೇಮಕವಾದ ಒಂದೇ ದಿನದಲ್ಲಿ ತಂಡದ ಸಲಹೆಗಾರ ಔಟ್​

Pakistan Cricket Team : ಸಲ್ಮಾನ್ ಬಟ್​ ನೇಮಕಗೊಂಡ ಬಳಿಕ ದೊಡ್ಡ ಮಟ್ಟದ ಪ್ರತಿರೋಧ ವ್ಯಕ್ತಗೊಂಡಿತು.

VISTARANEWS.COM


on

Salman Butt
Koo

ಕರಾಚಿ: ಪಾಕಿಸ್ತಾನ ಕ್ರಿಕೆಟ್ ಮಂಡಳಿ (Pakistan Cricket Team) ಶುಕ್ರವಾರ (ಡಿಸೆಂಬರ್ 1ರಂದು) ಮ್ಯಾಚ್​ ಫಿಕ್ಸಿಂಗ್​ ಕಳಂಕಿತ ಸಲ್ಮಾನ್ ಬಟ್ ಅವರನ್ನು ತಂಡದ ಸಲಹೆಗಾರನನ್ನಾಗಿ ಆಯ್ಕೆ ಮಾಡಿತ್ತು. ಇದೀಗ ಒಂದೇ ದಿನದಲ್ಲಿ ಅವರು ಅಧಿಕಾರ ಕಳೆದುಕೊಂಡಿದ್ದು ವಿರೋಧದ ಹಿನ್ನೆಲೆಯಲ್ಲಿ ಅವರನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಲಾಗಿದೆ. ಕಮ್ರಾನ್ ಅಕ್ಮಲ್ ಮತ್ತು ರಾವ್ ಇಫ್ತಿಕಾರ್ ಅಂಜುಮ್ ಕೂಡ ಬಟ್​ ಜತೆ ಸಲಹೆಗಾರರಾಗಿ ನೇಮಕಗೊಂಡಿದ್ದರು.

ವಹಾಬ್ ರಿಯಾಜ್​ ನೇತೃತ್ವದ ಸಮಿತಿಯಲ್ಲಿ ಬಟ್​ ಸದಸ್ಯರಾಗಿ ನೇಮಕಗೊಂಡಿದ್ದರು. ಆದರೆ ಅವರ ಆಯ್ಕೆ ಬಗ್ಗೆ ಸಿಕ್ಕಾಪಟ್ಟೆ ಟೀಕೆಗಳು ವ್ಯಕ್ತಗೊಂಡವು. ಬಳಿಕ ಅವರನ್ನು ಶನಿವಾರ (ಡಿಸೆಂಬರ್ 2ರಂದು) ಉಚ್ಛಾಟನೆ ಮಾಡಲಾಯಿತು. ಈ ಕುರಿತು ವಹಾಬ್​ ರಿಯಾಜ್​ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಪ್ರಕಟಿಸಿದ್ದಾರೆ.

“ಸಲ್ಮಾನ್ ಬಟ್ ಪಿಸಿಬಿಯ ಯಾವುದೇ ಸಮಿತಿಯಲ್ಲಿಲ್ಲ. ನನ್ನ ಪ್ರಕಾರ, ಅವರು ಕ್ರಿಕೆಟ್ ಅನ್ನು ಅರ್ಥಮಾಡಿಕೊಳ್ಳುವ ಉತ್ತಮ ಆಟಗಾರ. ಕಳೆದ 2-3 ವರ್ಷಗಳಿಂದ ದೇಶೀಯ ಕ್ರಿಕೆಟ್​ನಲ್ಲಿ ಉತ್ತಮಾಗಿ ವರದಿ ಮಾಡುತ್ತಿದ್ದಾರೆ. ಅವರ ಅಭಿಪ್ರಾಯವನ್ನು ಪಡೆಯಲು ಅವರನ್ನು ನನ್ನ ಸಲಹೆಗಾರರನ್ನಾಗಿ ಮಾಡಲಾಯಿತು, ಅದರ ಕೆಲವು ಮಾಧ್ಯಮ ಸಂಸ್ಥೆಗಳು ಮತ್ತು ಜನರು ಅಪಪ್ರಚಾರ ಮಾಡಲು ಪ್ರಾರಂಭಿಸಿದರು” ಎಂದು ವಹಾಬ್ ಸುದ್ದಿಗಾರರಿಗೆ ತಿಳಿಸಿದರು.

“ಮುಖ್ಯ ಆಯ್ಕೆಗಾರನಾಗಿ, ನನ್ನೊಂದಿಗೆ ಯಾರು ಕೆಲಸ ಮಾಡಬೇಕು ಮತ್ತು ನನಗೆ ಯಾರ ಬೆಂಬಲ ಬೇಕು ಎಂಬುದು ನನ್ನ ನಿರ್ಧಾರ. ಆದರೆ ಜನರು ಸ್ವಜನಪಕ್ಷಪಾತ ಮತ್ತು ಗೆಳೆತದನ ಬಗ್ಗೆ ಚರ್ಚಿಸಲು ಪ್ರಾರಂಭಿಸಿದರು. ಈ ಕಾರಣದಿಂದಾಗಿ ನಾನು ಈ ನಿರ್ಧಾರವನ್ನು ಹಿಂತೆಗೆದುಕೊಳ್ಳುತ್ತಿದ್ದೇನೆ. ನಾನು ಈಗಾಗಲೇ ಸಲ್ಮಾನ್ ಬಟ್ ಅವರೊಂದಿಗೆ ಮಾತನಾಡಿದ್ದೇನೆ. ಅವರು ನನ್ನ ತಂಡದ ಭಾಗವಾಗಲು ಸಾಧ್ಯವಿಲ್ಲ ಎಂದು ಅವರಿಗೆ ತಿಳಿಸಿದ್ದೇನೆ, “ಎಂದು ಅವರು ಮಾಹಿತಿ ನೀಡಿದರು.

ಸ್ಪಾಟ್​ ಫಿಕ್ಸಿಂಗ್ ಕಳಂಕಿತ

ಸಲ್ಮಾನ್ ಬಟ್ 2010 ರಲ್ಲಿ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾಗಿದ್ದರು. ಇದರ ಪರಿಣಾಮವಾಗಿ, ಅವರು ಐಸಿಸಿಯಿಂದ 10 ವರ್ಷಗಳ ನಿಷೇಧಕ್ಕೆ ಒಳಗಾಗಿದ್ದರು. ಯುಕೆಯಲ್ಲಿ ಅವರು ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಬೇಕಾಯಿತು.

ಸಲ್ಮಾನ್ ಅವರನ್ನು ನೇಮಕ ಮಾಡುವುದು ಸಂಪೂರ್ಣವಾಗಿ ತಮ್ಮ ನಿರ್ಧಾರವಾಗಿದೆ ಮತ್ತು ಯಾವುದೇ ರೀತಿಯ ಒತ್ತಡದಲ್ಲಿ ತೆಗೆದುಕೊಳ್ಳಲಾಗಿಲ್ಲ ಎಂದು ವಹಾಬ್ ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ, ಪಿಸಿಬಿ ಹಿನ್ನಡೆಯನ್ನು ಎದುರಿಸಿದ ನಂತರ ಅವರು ತಮ್ಮ ನಿರ್ಧಾರವನ್ನು ಬದಲಾಯಿಸಬೇಕಾಯಿತು ಎಂಬುದು ಸ್ಪಷ್ಟ.

ಇದನ್ನೂ ಓದಿ : Ind vs Aus : ಬೆಂಗಳೂರಿನಲ್ಲಿಂದು ನಡೆಯಲಿದೆ ಔಪಚಾರಿಕ ಪಂದ್ಯ

“ಪಿಸಿಬಿಯನ್ನು ಅವಮಾನಿಸುವುದು ಕೆಲವರ ಉದ್ದೇಶ. ಕ್ರಿಕೆಟ್ ಮಂಡಳಿಯ ಮೇಲೆ ಕೆಸರು ಎರಚಲು ಮತ್ತು ವೈಯಕ್ತಿಕ ಲಾಭ ಪಡೆಯಲು ಕೆಲವು ಬಯಸಿದ್ದರಿಂದ ಅವರು ಸಂಚು ರೂಪಿಸಿದರು. ನಾನು ಈ ಸಂಸ್ಥೆಯ ಭಾಗವಾಗಿರುವುದರಿಂದ ಅಂತಹ ಯಾವುದೇ ಅನಪೇಕ್ಷಿತ ಸಂಗತಿಗಳಿಗೆ ನಾನು ಅವಕಾಶಗಳನ್ನು ಕೊಡುವುದಿಲ್ಲ. , ನನ್ನ ನಿರ್ಧಾರದಿಂದಾಗಿ ಆದ್ದರಿಂದ ನಾನು ಅದನ್ನು ಹಿಂತೆಗೆದುಕೊಂಡೆ” ಎಂದು ಅವರು ಹೇಳಿದರು.

ಮುಖ್ಯ ಆಯ್ಕೆದಾರರಿಗೆ ಸಲಹೆಗಾರ ಸದಸ್ಯರಾಗಿ ಅವರ ಮೊದಲ ನೇಮಕವು ಜನವರಿ 12ರಿಂದ ಪ್ರಾರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಐ ಸರಣಿಯನ್ನು ಒಳಗೊಂಡಿದೆ.

Continue Reading

ದೇಶ

Rajasthan Election Result: ರಾಜಸ್ಥಾನದಲ್ಲಿ ನೆಕ್ಸ್ಟ್ ಸಿಎಂ ‘ರಾಜಕುಮಾರಿ’; ಆದರೆ, ವಸುಂಧರಾ ರಾಜೆ ಅಲ್ಲ!

Rajasthan Election Result: ಮಹಾರಾಜ ಮಾನ್ ಸಿಂಗ್ ಅವರ ಮೊಮ್ಮಗಳಾದ ದಿಯಾ ಕುಮಾರಿ ಅವರು ರಾಜಸ್ಥಾನದ ಸಿಎಂ ಅಭ್ಯರ್ಥಿಗಳ ಪೈಕಿ ಒಬ್ಬರಾಗಿದ್ದಾರೆ.

VISTARANEWS.COM


on

Rajasthan Election Result, Diya Kumari is next CM post favorite
Koo

ನವದೆಹಲಿ: ರಾಜಸ್ಥಾನದಲ್ಲಿ ಭಾರತೀಯ ಜನತಾ ಪಾರ್ಟಿ (Bhartiya Janata Party) ಕಂ ಬ್ಯಾಕ್ ಮಾಡಿದ್ದು, ಕಾಂಗ್ರೆಸ್ ಪಕ್ಷವು (Congress Party) ಸೋಲೋಪ್ಪಿಕೊಂಡಿದೆ. ಆದರೆ, ಭಾರತೀಯ ಜನತಾ ಪಾರ್ಟಿಯಲ್ಲೀಗ, ಮುಂದಿನ ಮುಖ್ಯಮಂತ್ರಿ(Rajasthan Chief minister) ಯಾರು ಎಂಬ ಚರ್ಚೆಗಳು ಜೋರಾಗಿವೆ. ಚುನಾವಣೆ ಪೂರ್ವದಲ್ಲಿ ಬಿಜೆಪಿಯು ಯಾವ ನಾಯಕರನ್ನೂ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿರಲಿಲ್ಲ. ಹಾಗಾಗಿ, ಸಿಎಂ ರೇಸ್‌ನಲ್ಲಿ ಹಲುವಾರು ನಾಯಕ, ನಾಯಕಿಯರ ಹೆಸರು ಕೇಳಿ ಬರುತ್ತಿವೆ. ಆ ಪೈಕಿ ದಿಯಾ ಕುಮಾರಿ (Princess Diya Kumari) ಹೆಸರು ತುಸು ಜೋರಾಗಿಯೇ ಓಡುತ್ತಿದೆ. ರಾಜಸ್ಥಾನದ 199ರ ಸ್ಥಾನಗಳ ಪೈಕಿ ಬಿಜೆಪಿ 112 ಕ್ಷೇತ್ರಗಳಲ್ಲಿ ಜಯ ಕಂಡಿದ್ದು, ಕಾಂಗ್ರೆಸ್ 70 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಅಧಿಕಾರವಂಚಿತವಾಗಿದೆ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

ಜೈಪುರ ರಾಜ ಕುಟುಂಬದ ರಾಜಕುಮಾರಿ ದಿಯಾ ಕುಮಾರಿ ಹಾಲಿ ಸಂಸದೆಯೂ ಹೌದು. ದಿಯಾ ಕುಮಾರಿ ಅವರು ಜೈಪುರದ ರಾಜವಂಶದ ಕೊನೆಯ ಆಡಳಿತದ ಮಹಾರಾಜ ಮಾನ್ ಸಿಂಗ್ II ಅವರ ಮೊಮ್ಮಗಳು. ಪ್ರಚಾರದ ವೇಳೆ ದಿಯಾ ಕುಮಾರಿಯನ್ನು ಜೈಪುರದ ಮಗಳು, ಬೀದಿಗಳಲ್ಲಿ ನಡೆಯುವ ರಾಜಕುಮಾರಿ ಎಂದೇ ಪ್ರಚಾರ ಮಾಡಲಾಯಿತು. ರಾಜಸ್ಥಾನದ ಪರಂಪರೆ ಮತ್ತು ಸರಳತೆಯ ಮಿಶ್ರಣವಾಗಿರುವ ದಿಯಾ ಕುಮಾರಿ ಅವರು ರಾಜಸ್ಥಾನದಲ್ಲಿ ಸದ್ಯ ಅತ್ಯಂತ ಜನಪ್ರಿಯ ನಾಯಕಿ. ಹಾಗಾಗಿ, ಅವರು ಈಗ ಮುಖ್ಯಮಂತ್ರಿಯೇ ದಾವೆದಾರ ಆಗುತ್ತಿದ್ದಾರೆ.

2013ರಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಸೇರ್ಪಡೆಯಾದ ದಿಯಾ ಕುಮಾರಿ ಅವರು ಈವರೆಗೆ ಎರಡು ಚುನಾವಣೆಗಳನ್ನು ಗೆದ್ದಿದ್ದಾರೆ. 2013ರಲ್ಲಿ ಅವರು ಸವಾಯಿ ಮಾಧೋಪುರ ಕ್ಷೇತ್ರದಿಂದ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದರು. 2019ರಲ್ಲಿ ರಾಜಸಮಂದ್ ಕ್ಷೇತ್ರದಿಂದ ಸ್ಪರ್ಧಿಸಿ 5.51 ಲಕ್ಷ ಮತಗಳ ಅಂತರದಿಂದ ಲೋಕಸಭೆಗೆ ಆಯ್ಕೆಯಾದರು. ಪರಿಸರ, ಶಿಕ್ಷಣ, ಆರೋಗ್ಯ ಮತ್ತು ಮಹಿಳಾ ಸಬಲೀಕರಣ ವಿಷಯಗಳ ಮೂಲಕವೇ ಹೆಚ್ಚು ಪ್ರಸಿದ್ಧಿಗೆ ಬಂದಿರುವ 52 ವರ್ಷದ ದಿಯಾ ಕುಮಾರಿ ಅವರು, 2019 ರಲ್ಲಿ ಸರ್ಕಾರದ ರಾಷ್ಟ್ರೀಯ ಹುಲಿ ಸಂರಕ್ಷಣಾ ಸದಸ್ಯರಾಗಿ ಸೇವೆ ಸಲ್ಲಿಸಲು ಆಯ್ಕೆಯಾದರು.

2023ರ ಚುನಾವಣೆಯಲ್ಲಿ ದಿಯಾ ಕುಮಾರಿ ಅವರು ಜೈಪುರದ ವಿದ್ಯಾನಗರದ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಮತ್ತೊಬ್ಬ ರಾಜಕುಮಾರಿ ವಸುಂದಾರಾಜೆ ಅರಸ್ ಅವರ ಜತೆಗೆ ದಿಯಾ ಅವರ ಕೂಡ ಸಿಎಂ ಹುದ್ದೆಗೆ ಕೇಳಿ ಬರುತ್ತಿರುವ ಪ್ರಮುಖ ಹೆಸರಾಗಿದೆ. ಸಾರ್ವಜನಿಕರು “ಭ್ರಷ್ಟ” ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುತ್ತಾರೆ ಮತ್ತು ಬಿಜೆಪಿಯನ್ನು ಬೆಂಬಲಿಸುತ್ತಾರೆ ಎಂಬುದು ಸ್ಪಷ್ಟವಾಗಿದೆ ಎಂದು ಕುಮಾರಿ ಹಲವು ಬಾರಿ ಹೇಳಿದ್ದರು.

ಹಾಗಂತ ಮುಂದಿನ ಮುಖ್ಯಮಂತ್ರಿ ನೀವೇನಾ ಅಂತ ದಿಯಾ ಕುಮಾರಿ ಅವರಿ ಕೇಳಿದ್ರೆ ಅಷ್ಟೇ ನಯವಾಗಿ ನಿರಾಕರಿಸುತ್ತಾರೆ. ಇದು ಅರ್ಥವಿಲ್ಲದ ಪ್ರಶ್ನೆ. ಮುಂದಿನ ಸಿಎಂ ಯಾರಾಗಬೇಕು ಎಂಬುದನ್ನು ಭಾರತೀಯ ಜನತಾ ಪಾರ್ಟಿಯ ಹೈ ಕಮಾಂಡ್ ನಿರ್ಧರಿಸುತ್ತದೆ ಎನ್ನುತ್ತಾರೆ. ಆದರೆ, ರಾಜಸ್ಥಾನದಲ್ಲಿ ಬಿಜೆಪಿ ಬಹುಮತದ ಗೆರೆಯನ್ನು ದಾಟುತ್ತಿದ್ದಂತೆ ದಿಯಾ ಕುಮಾರಿ ಅವರೇ ಮುಂದಿನ ಸಿಎಂ ಎಂಬ ಸುದ್ದಿ ಬಲವಾಗಿ ಹರಡಿದೆ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Continue Reading
Advertisement
CM Siddaramaiah
ಕರ್ನಾಟಕ4 mins ago

Assembly Elections 2023 : ನಮ್ಮ ಗ್ಯಾರಂಟಿ ಯಶಸ್ಸಿನಿಂದ ತೆಲಂಗಾಣದಲ್ಲಿ ಗೆಲುವು: ಸಿಎಂ ಸಿದ್ದರಾಮಯ್ಯ

ಕರ್ನಾಟಕ27 mins ago

ವಿಶೇಷಚೇತನರ ಬೇಡಿಕೆ ಶೀಘ್ರ ಈಡೇರಿಕೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

DK shivakumar
ಕರ್ನಾಟಕ29 mins ago

Assembly Elections 2023 : ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮುಂದುವರಿಕೆಯ ಸಂಕೇತ: ಡಿಕೆಶಿ

Salman Butt
ಕ್ರಿಕೆಟ್30 mins ago

ಪಾಕಿಸ್ತಾನ ಕ್ರಿಕೆಟ್​ ತಂಡದ ದುರ್ಗತಿ; ನೇಮಕವಾದ ಒಂದೇ ದಿನದಲ್ಲಿ ತಂಡದ ಸಲಹೆಗಾರ ಔಟ್​

Rajasthan Election Result, Diya Kumari is next CM post favorite
ದೇಶ34 mins ago

Rajasthan Election Result: ರಾಜಸ್ಥಾನದಲ್ಲಿ ನೆಕ್ಸ್ಟ್ ಸಿಎಂ ‘ರಾಜಕುಮಾರಿ’; ಆದರೆ, ವಸುಂಧರಾ ರಾಜೆ ಅಲ್ಲ!

Rain alert
ಉಡುಪಿ35 mins ago

Karnataka weather : ಸೈಕ್ಲೋನ್‌ ಎಫೆಕ್ಟ್‌; ನಾಳೆ ಮಳೆ ಜತೆಗೆ ಥಂಡಿ ಗಾಳಿ

Kiccha canceled the elimination to save Michael ajay
ಬಿಗ್ ಬಾಸ್36 mins ago

BBK SEASON 10: ಮೈಕಲ್‌ ಉಳಿಸಲು ಎಲಿಮಿನೇಶನ್‌ ಕ್ಯಾನ್ಸಲ್‌ ಮಾಡಿದ್ರಾ ಕಿಚ್ಚ?

A country made bomb exploded in Ramanagara injuring a person and 7 live bombs found in Haveri
ಕರ್ನಾಟಕ37 mins ago

Bomb Blast : ನಾಡಬಾಂಬ್ ಸಿಡಿದು ವ್ಯಕ್ತಿ ಕೈ ಛಿದ್ರ; ಹಾವೇರಿಯಲ್ಲಿ 7 ಜೀವಂತ ಬಾಂಬ್ ಪತ್ತೆ

baba balakanath
ದೇಶ37 mins ago

Assembly Election Result 2023: ರಾಜಸ್ಥಾನದಲ್ಲಿ ಇನ್ನೊಬ್ಬ ʼಯೋಗಿʼಯ ಉದಯ! ಇವರೇನಾ ಮುಖ್ಯಮಂತ್ರಿ?

Chief Minister Siddaramaiah inquired about actress Leelavati health
South Cinema50 mins ago

Actress Leelavathi: ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Police call off protest FIR against lawyer who slapped police
ಕರ್ನಾಟಕ6 hours ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ12 hours ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ1 day ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

ಟ್ರೆಂಡಿಂಗ್‌