ಚಂದ್ರನು ಗುರುವಾರ ಮಕರ ರಾಶಿಯನ್ನು ಪ್ರವೇಶ ಮಾಡಲಿದ್ದು, ಶನಿವಾರದವರೆಗೂ ಅಲ್ಲಿಯೇ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ ಮತ್ತು ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮಿಥುನ ರಾಶಿಯವರಿಗೆ ಜೀವನದಲ್ಲಿ ಉಂಟಾಗುವ ಅಭದ್ರತೆಯು ಮಾನಸಿಕ ಒತ್ತಡವನ್ನು ಉಂಟು ಮಾಡುವ ಸಾಧ್ಯತೆ ಇದೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕಚೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ ಇರಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (18-11-2023)
ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ
ತಿಥಿ: ಪಂಚಮಿ 09:17 ವಾರ: ಶನಿವಾರ
ನಕ್ಷತ್ರ: ಉತ್ತರಾಷಾಢ 24:05 ಯೋಗ: ಗಂಡ 26:16
ಕರಣ: ಬಾಲವ 09:17 ಅಮೃತ ಕಾಲ: ಸಂಜೆ 06:01 ರಿಂದ 07:33ರ ವರೆಗೆ
ದಿನ ವಿಶೇಷ: ಪಾಂಡವ ಪಂಚಮಿ
ಸೂರ್ಯೋದಯ : 06:19 ಸೂರ್ಯಾಸ್ತ : 05:50
ಮೇಷ: ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ ಇದೆ. ಹಣಕಾಸು ಪ್ರಗತಿಯಲ್ಲಿ ಸಾಧಾರಣ ಪ್ರಗತಿಯನ್ನು ಕಾಣುವಿರಿ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷವಾಗಲಿದೆ. ಆರೋಗ್ಯದಲ್ಲಿ ಉತ್ತಮ ಸ್ಥಿತಿಯನ್ನು ಹೊಂದುವಿರಿ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ವೃಷಭ: ಶಾಂತ ಮನಸ್ಥಿತಿಯನ್ನು ಹೊಂದಿರಿ. ಇದರಿಂದ ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ. ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುತ್ತದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2
ಮಿಥುನ: ಜೀವನದಲ್ಲಿ ಉಂಟಾಗುವ ಅಭದ್ರತೆಯು ಮಾನಸಿಕ ಒತ್ತಡವನ್ನು ಉಂಟು ಮಾಡುವ ಸಾಧ್ಯತೆ ಇದೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕಚೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಕಟಕ: ಬಿಡುವಿಲ್ಲದ ಕೆಲಸದಿಂದ ಆಯಾಸವಾಗಲಿದೆ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನ ಮಾಡುವಿರಿ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಸ್ವಲ್ಪ ಖರ್ಚಿನ ದಿನವಾಗಿದೆ. ಬಹುದಿನಗಳ ಕನಸು ನನಸಾಗುವ ಸಮಯ ಬಂದಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಸಿಂಹ: ಆಪ್ತರು ನಿಮ್ಮ ತಾಳ್ಮೆ ಪರೀಕ್ಷಿಸಲಿದ್ದಾರೆ. ಯಾವುದೇ ವಿಷಯಗಳಲ್ಲಿ ದೃಢ ನಿರ್ಧಾರ ನಿಮ್ಮದಾಗಲಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನೋ ಒತ್ತಡ ಉಂಟಾಗಲಿದೆ. ಉದ್ಯೋಗ ಮತ್ತು ಆರೋಗ್ಯದಲ್ಲಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಕನ್ಯಾ: ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುವಿರಿ. ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ವ್ಯಕ್ತವಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಆರೋಗ್ಯ ಉತ್ತಮವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ನಿಮ್ಮ ಹಿಂದೆ ಪಿತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3
ವೃಶ್ಚಿಕ: ಆಹಾರದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಆಪ್ತರೊಂದಿಗಿನ ಮಾತುಕತೆಯಲ್ಲಿ ವ್ಯತಿರಿಕ್ತವಾದ ಪರಿಣಾಮದಿಂದಾಗಿ ಜಗಳವಾಗುವ ಸಾಧ್ಯತೆ ಇದೆ. ಆದಷ್ಟು ಮಾತು ನಿಯಂತ್ರಣದಲ್ಲಿರಲಿ. ಇದರ ಮಧ್ಯೆ ಉದ್ಯೋಗದ ಸ್ಥಳದಲ್ಲಿ ಕೌಶಲ್ಯದ ಕೆಲಸ ನಿಮಗೆ ಯಶಸ್ಸನ್ನು ತಂದು ಕೊಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಧನಸ್ಸು: ಅತಿಯಾದ ಒತ್ತಡದ ಕಾರ್ಯ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಮಕರ: ನಿಸ್ಪೃಹ ಮನೋಭಾವದ ಕಾರ್ಯ ಸಿದ್ಧಿಸಲಿದೆ. ಈ ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚು. ಅನಗತ್ಯವಾಗಿ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ಕುಂಭ: ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅಗತ್ಯ. ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ವ್ಯಾಪಾರದಲ್ಲಿ ಪ್ರಗತಿ ಕಾಣುವಿರಿ. ಹೊಸದಾಗಿ ಕಾರ್ಯ ಪ್ರಾರಂಭಿಸುವುದು ದಿನದ ಮಟ್ಟಿಗೆ ಬೇಡ. ಜೀವನದ ಭವಿಷ್ಯದ ಬಗ್ಗೆ ಅತಿಯಾಗಿ ಚಿಂತಿಸಿ ಮನಸ್ಥಿತಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ಮೀನ: ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯದಿಂದ ಮಾನಸಿಕ ಅಸಮತೋಲನ ಉಂಟಾಗಲಿದೆ. ನಡೆದು ಹೋದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ಅತಿಥಿಗಳ ಆಗಮನ ಹರ್ಷ ತರುವುದು. ಉದ್ಯೋಗದ ಬಗ್ಗೆ ಸಾಧಾರಣ ಫಲ ಇರಲಿದೆ. ಕೌಟುಂಬಿಕ ವ್ಯಾಜ್ಯಗಳು ಹುಟ್ಟುವ ಸಾಧ್ಯತೆ ಇದೆ. ಕೌಟಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com