Site icon Vistara News

Dina Bhavishya : ಈ ರಾಶಿಯವರಿಗೆ ಇಂದು ಕೋಪ ಹೆಚ್ಚಾಗುವ ಪ್ರಸಂಗ ನಡೆಯಲಿದೆ; ಇರಲಿ ಎಚ್ಚರ!

daily horoscope predictions for November 2 2023

ಚಂದ್ರನು ಕಟಕ ರಾಶಿಯನ್ನು ಪ್ರವೇಶಿಸಿದ್ದು, ಶನಿವಾರದವರೆಗೆ ಅಲ್ಲಿಯೇ ನೆಲೆಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ವೃಷಭ ರಾಶಿಯವರಿಗೆ ಆಂತರಿಕ ಭಯ ಕಾಡಲಿದ್ದು, ಸಂತೋಷವನ್ನು ಹಾಳುಗೆಡವಬಹುದು. ನಕಾರಾತ್ಮಕ ಆಲೋಚನೆಗಳನ್ನು ಮಾಡದಿರಿ. ದಿನದ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವ ಸಾಧ್ಯತೆ ಇದೆ. ಕಟಕ ರಾಶಿಯವರಿಗೆ ಅನಿವಾರ್ಯ ಪ್ರಸಂಗಗಳು ಕೋಪವನ್ನು ತರಿಸುವ ಸಾಧ್ಯತೆ ಇದೆ. ಭಾವನೆಗಳನ್ನು ನಿಯಂತ್ರಣಕ್ಕೆ ತೆಗೆದುಕೊಂಡರೆ ಉತ್ತಮ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (2-11-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಕೃಷ್ಣ ಪಕ್ಷ
ತಿಥಿ:
ಪಂಚಮಿ 21:51 ವಾರ: ಗುರುವಾರ
ನಕ್ಷತ್ರ: ಆರಿದ್ರಾ 29:56 ಯೋಗ: ಶಿವ 13:11
ಕರಣ: ಕೌಲವ 09:29 ಅಮೃತ ಕಾಲ: ರಾತ್ರಿ 07:23 ರಿಂದ 09:05 ರವರೆಗೆ
ದಿನದ ವಿಶೇಷ: ಚಾಮುಂಡೇಶ್ವರಿ ಮುಡಿ ಉತ್ಸವ

ಸೂರ್ಯೋದಯ : 06:13  ಸೂರ್ಯಾಸ್ತ : 5:53

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ದೈಹಿಕವಾಗಿ ಮಾನಸಿಕವಾಗಿ ಕುಗ್ಗುವ ಸಾಧ್ಯತೆ ಇದೆ. ಬ್ಯಾಂಕ್ ವ್ಯವಹಾರಗಳಲ್ಲಿ ಕಾಳಜಿ ವಹಿಸಬೇಕು. ನಿಮ್ಮ ಬಳಗದಲ್ಲಿ ಯಾವುದಾದರೂ ದುಃಖದ ಸನ್ನಿವೇಶ ನಡೆಯಬಹುದು. ನಿಮ್ಮ ಶ್ರಮ ಮತ್ತು ಸಮರ್ಪಣೆ ನಿಮ್ಮ ಪರವಾಗಿ ಮಾತನಾಡುವಂತೆ ಮಾಡುತ್ತದೆ. ಅಲ್ಲದೆ, ನಿಮಗೆ ವಿಶ್ವಾಸ ಮತ್ತು ಬೆಂಬಲವನ್ನು ಗಳಿಸಿಕೊಡುತ್ತವೆ.
ಅದೃಷ್ಟ ಸಂಖ್ಯೆ: 1

ವೃಷಭ: ಆಂತರಿಕ ಭಯ ನಿಮ್ಮ ಸಂತೋಷವನ್ನು ಹಾಳುಗೆಡವಬಹುದು. ನಕಾರಾತ್ಮಕ ಆಲೋಚನೆಗಳನ್ನು ಮಾಡದಿರಿ. ದಿನದ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವ ಸಾಧ್ಯತೆ ಇದೆ. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 9

ಮಿಥುನ: ಬೇರೆಯವರ ಮಾತನ್ನು ಕೇಳಿಕೊಂಡು ನಿಮ್ಮನ್ನು ಪ್ರೀತಿಯಿಂದ ಕಾಣುವ ವ್ಯಕ್ತಿಗಳನ್ನು ದ್ವೇಷಿಸುವುದು ಬೇಡ. ಇತರರ ಸಮಸ್ಯೆಗಳನ್ನು ಪರಿಹರಿಸಲು ನೀವು ಮಧ್ಯಪ್ರವೇಶ ಮಾಡುವ ಸಾಧ್ಯತೆ ಇದೆ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಾವಶ್ಯಕ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ ಉಂಟಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕಟಕ: ಅನಿವಾರ್ಯ ಪ್ರಸಂಗಗಳು ನಿಮಗೆ ಕೋಪವನ್ನು ತರಿಸುವ ಸಾಧ್ಯತೆ ಇದೆ. ನಿಮ್ಮ ಭಾವನೆಗಳನ್ನು ನಿಯಂತ್ರಣಕ್ಕೆ ತೆಗೆದುಕೊಂಡರೆ ಉತ್ತಮ. ನಿಮ್ಮ ಕಠಿಣ ಪರಿಶ್ರಮ ನಿಮಗೆ ಫಲ ನೀಡಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಆರೋಗ್ಯದಲ್ಲಿ ವ್ಯತ್ಯಾಸ ಆಗಲಿದೆ. ಆರ್ಥಿಕವಾಗಿ ಲಾಭವಾಗಲಿದೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಒತ್ತಡದ ವಾತಾವರಣ ಉಂಟಾಗಬಹುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಸಿಂಹ: ನಿಮ್ಮ ಸಭ್ಯ ನಡವಳಿಕೆಯು ಇತರರಿಂದ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ದಿನದ ಆರಂಭದಲ್ಲಿ ಇಂದು ನೀವು ಯಾವುದೇ ಆರ್ಥಿಕ ನಷ್ಟವನ್ನು ಹೊಂದಬಹುದು. ಇದರಿಂದ ನಿಮ್ಮ ಪೂರ್ತಿ ದಿನ ಹದಗೆಡಬಹುದು. ಇತರರಿಗೆ ಪ್ರತಿಫಲಗಳು ತರುವ ನಿಮ್ಮ ಸಾಮರ್ಥ್ಯ ಪ್ರತಿಫಲ ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಅವಕಾಶ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಕನ್ಯಾ: ಒತ್ತಡದಿಂದ ವಿಮುಕ್ತಿ ಹೊಂದಿ ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ದೀರ್ಘಕಾಲದ ದೃಷ್ಟಿಕೋನದಿಂದ ಮಾಡಿದ ಹೂಡಿಕೆಯಿಂದ ಲಾಭವಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಸಂಪೂರ್ಣ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಅದೃಷ್ಟ ಖುಲಾಯಿಸಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ದಿಢೀರ್ ಧನಾಗಮನದಿಂದ ಸಂತೋಷ ಇಮ್ಮಡಿಯಾಗಲಿದೆ.‌ ಅನೇಕ ಸಮಸ್ಯೆಗಳು ಇಂದು ಪರಿಹಾರವಾಗುವುದು. ಆರೋಗ್ಯ ಪರಿಪೂರ್ಣ. ಬಹಳ ದಿನಗಳಿಂದ ಕಂಡ ಕನಸು ನನಸಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ.
ಅದೃಷ್ಟ ಸಂಖ್ಯೆ: 1

ವೃಶ್ಚಿಕ: ಇಂದು ಪ್ರಮುಖ ನಿರ್ಧಾರಗಳಿಂದಾಗಿ ಮಾನಸಿಕವಾಗಿ ನೀವು ಬಳಲುವ ಸಾಧ್ಯತೆ ಇದೆ. ಅನಾವಶ್ಯಕವಾಗಿ ಖರ್ಚು ಮಾಡಿ ಕೊರಗುವ ಸಾಧ್ಯತೆ ಇದ್ದು, ಆದಷ್ಟು ನಿಯಂತ್ರಣದಲ್ಲಿರಿ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲವಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

ಧನಸ್ಸು: ಆರೋಗ್ಯದ ಆರೈಕೆ ಇಂದು ಅಗತ್ಯವಿದೆ. ಆಪ್ತರೊಂದಿಗೆ ಸೇರಿಕೊಂಡು ಮಾಡುವ ವ್ಯಾಪಾರ ನಷ್ಟ ತಂದೀತು. ಹೀಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ನಿಮ್ಮ ಆಂತರಿಕ ಶಕ್ತಿ ದಿನದ ಕೆಲಸವನ್ನು ಉತ್ತಮಗೊಳಿಸುವಲ್ಲಿ ನಿಮ್ಮನ್ನು ಬೆಂಬಲಿಸುತ್ತದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

ಮಕರ: ಆಹಾರ ಕ್ರಮದ ವ್ಯತ್ಯಾಸದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರಾಗುವ ಸಾಧ್ಯತೆ ಇದೆ. ಆದಷ್ಟು ಆಹಾರದ ಕ್ರಮದಲ್ಲಿ ನಿಯಂತ್ರಣ ಮಾಡಿ.
ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದ್ದು, ಆದಷ್ಟು ಮಾತಿನಲ್ಲಿ ಹಿಡಿತವಿರಲಿ.
ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

ಕುಂಭ: ನಿಮ್ಮ ಸಾಧನೆಗೆ ಇಂದು ಪ್ರೋತ್ಸಾಹ ಸಿಗಲಿದೆ. ಅನೇಕ ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರಯಾಣವು ನಿಮಗೆ ಲಾಭವನ್ನು ತಂದುಕೊಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಮೀನ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಆದಷ್ಟು ಸಕಾರಾತ್ಮಕವಾಗಿ ಆಲೋಚಿಸಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ. ನಿಮ್ಮ ಸಹೋದ್ಯೋಗಿಗಳು ನಿಮ್ಮನ್ನು ಟೀಕಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version