ಚಂದ್ರನು ಸೋಮವಾರ ಬೆಳಗ್ಗೆ 09:29ಕ್ಕೆ ಮೀನ ರಾಶಿಯನ್ನು ಪ್ರವೇಶ ಮಾಡಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಕನ್ಯಾ ರಾಶಿಯವರಿಗೆ ಅನೇಕ ವಿಷಯಗಳು ಒತ್ತಡವನ್ನು ಉಂಟು ಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ ಉಂಟಾಗಬಹುದು. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (20-11-2023)
ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ
ತಿಥಿ: ಅಷ್ಟಮಿ 27:15 ವಾರ: ಸೋಮವಾರ
ನಕ್ಷತ್ರ: ಧನಿಷ್ಠಾ 21:24 ಯೋಗ: ಧ್ರುವ 20:33
ಕರಣ: ವಿಷ್ಟಿ (ಭದ್ರ) 16:18 ಅಮೃತ ಕಾಲ: ಬೆಳಗ್ಗೆ 11:38 ರಿಂದ ಮಧ್ಯಾಹ್ನ 01:08 ರ ವರೆಗೆ
ದಿನ ವಿಶೇಷ: ಗೋಪಾಷ್ಟಮಿ, ಕಾರ್ತಿಕ ಸೋಮವಾರ
ಸೂರ್ಯೋದಯ : 06:20 ಸೂರ್ಯಾಸ್ತ : 05:50
ಮೇಷ: ನಿಮ್ಮ ಹಾಸ್ಯದ ಮನೋಭಾವನೆ ಇತರರನ್ನು ಆಕರ್ಷಿಸುವುದು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಧಾರ್ಮಿಕ ಸ್ಥಳಗಳ ಭೇಟಿ ನೀಡುವ ಸಾಧ್ಯತೆ ಇದೆ. ಅಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8
ವೃಷಭ: ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು. ಆದರೆ, ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಲಿದೆ. ಏತನ್ಮಧ್ಯೆ ಅತಿಥಿಗಳ ಆಗಮನ ಹರ್ಷ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಮಿಥುನ: ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಿನ ಕೆಲಸಗಳ ಬಗ್ಗೆ ಕಾರ್ಯಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಲಿದೆ. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವ ಸಾಧ್ಯತೆ ಇದೆ. ಕೋಪದಿಂದ ಏನನ್ನೂ ಸಾಧಿಸಲಾಗದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5
ಕಟಕ: ಹಣದ ಹರಿವು ಹೆಚ್ಚಾಗಲಿದೆ. ಮಾನಸಿಕ ನೆಮ್ಮದಿ ಸಿಗುವುದು. ಹೊಸ ಭರವಸೆಯ ಅವಕಾಶಗಳು ಹುಡುಕಿಕೊಂಡು ಬರಲಿದೆ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಫಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಸಿಂಹ: ಕುಟುಂಬದ ಆಪ್ತರ ಹಾಗೂ ಸ್ನೇಹಿತರ ಸೂಕ್ತ ಸಲಹೆ – ಸಹಕಾರ ಸಿಗುವುದು. ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ವಿಶ್ರಾಂತಿ ಸಿಗಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ ಇದೆ. ಅಗತ್ಯವಿದ್ದಷ್ಟೆ ಮಾತನಾಡಿ. ಜತೆಗೆ ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಕನ್ಯಾ: ಅನೇಕ ವಿಷಯಗಳು ನಿಮಗೆ ಒತ್ತಡವನ್ನು ಉಂಟು ಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ ಉಂಟಾಗಬಹುದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಆಪ್ತ ಸಂಬಂಧಿಕರಿಂದ ಸಹಾಯ, ವ್ಯಾಪಾರ – ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಹಣಕಾಸು ಪ್ರಗತಿ ನಿಮ್ಮದಾಗಲಿದೆ. ಹಳೆಯ ವಿಚಾರಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಎಚ್ಚರಿಕೆ ಇರಲಿ. ಉತ್ತಮ ಆರೋಗ್ಯ ನಿಮ್ಮದಾಗಲಿದೆ. ಉದ್ಯೋಗದಲ್ಲಿ ಸಾಧಾರಣ ಪ್ರಗತಿ ಕಾಣುವಿರಿ. ಕುಟುಂಬದ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ವೃಶ್ಚಿಕ: ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರಿಕೆ ವಹಿಸಿ. ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ, ವ್ಯತಿರಿಕ್ತವಾದ ಪರಿಣಾಮದಿಂದಾಗಿ ಸ್ನೇಹದಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ. ಅನಗತ್ಯ ಖರ್ಚು ಉಂಟಾಗಲಿದೆ. ಆರೋಗ್ಯ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1
ಧನಸ್ಸು: ಅನಿರೀಕ್ಷಿತ ಪ್ರಯಾಣ ನಿಮ್ಮದಾಗಲಿದೆ. ಆತುರದ ಭರದಲ್ಲಿ ಅತಿರೇಕದ ಮಾತುಗಳು ಜಗಳ ತರಬಹುದು. ಸಮಾಧಾನದಿಂದ ವರ್ತಿಸಿ. ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ ಇದೆ. ಈ ಬಗ್ಗೆ ಎಚ್ಚರಿಕೆ ಇರಲಿ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7
ಮಕರ: ಆರೋಗ್ಯ ಉತ್ತಮವಾಗಿರಲಿದೆ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಭರವಸೆ ಇದೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಪ್ರಯತ್ನಿಸುವಿರಿ. ಸಮಾರಂಭದ ಆಮಂತ್ರಣ ಬರುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಕುಂಭ: ಆಹಾರದ ಕ್ರಮದಿಂದಾಗಿ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ಅಮೂಲ್ಯ ವಸ್ತುಗಳ ಬಗ್ಗೆ ಕಾಳಜಿ ವಹಿಸಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ಮೀನ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ. ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಭರವಸೆ ಮೂಡಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com