Dina Bhavishya: ಯಾವುದೇ ಕಾರಣಕ್ಕೂ ತರಾತುರಿಯಲ್ಲಿ ಹೂಡಿಕೆ ಮಾಡ್ಬೇಡಿ! - Vistara News

ಪ್ರಮುಖ ಸುದ್ದಿ

Dina Bhavishya: ಯಾವುದೇ ಕಾರಣಕ್ಕೂ ತರಾತುರಿಯಲ್ಲಿ ಹೂಡಿಕೆ ಮಾಡ್ಬೇಡಿ!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಗುರುವಾರ ಮೇಷ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಕನ್ಯಾ ರಾಶಿಯವರಿಗೆ ಮನೆಯಲ್ಲಿ ಕಲಹ ಉಂಟಾಗಿ, ವಾತಾವರಣ ಹದಗೆಡಬಹುದು. ತುಲಾ ರಾಶಿಯವರು ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆ ಮಾಡವುದು ಬೇಡ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (23-11-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ
ತಿಥಿ: ಏಕಾದಶಿ 21:01 ವಾರ: ಗುರುವಾರ
ನಕ್ಷತ್ರ: ಉತ್ತರ ಭಾದ್ರಪದ 17:14 ಯೋಗ: ವಜ್ರ 11:51
ಕರಣ: ವಿಷ್ಟಿ (ಭದ್ರ) 21:01 ಅಮೃತ ಕಾಲ: ಬೆಳಗ್ಗೆ 12:44 ರಿಂದ ಮಧ್ಯಾಹ್ನ 2:15 ರವರೆಗೆ

ಸೂರ್ಯೋದಯ : 06:29  ಸೂರ್ಯಾಸ್ತ : 05:55

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉತ್ಸಾಹದ ವಾತಾವರಣ ಇರಲಿದೆ. ಆಪ್ತರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ವ್ಯಾಪಾರ ವ್ಯವಹಾರಗಳಿಗೆ ಹೆಚ್ಚಿನ ಲಾಭ ದೊರೆಯಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ನಿಮ್ಮ ವ್ಯಕ್ತಿತ್ವ ಇತರರನ್ನು ಆಕರ್ಷಿಸಿ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ಸಂತಸದ ಕ್ಷಣಗಳನ್ನು ಕಳೆಯುವಿರಿ. ಆರ್ಥಿಕ ಪ್ರಗತಿ ಇರಲಿದೆ. ಬಹಳ ದಿನಗಳ ಬಾಕಿ ಇರುವ ಕಾರ್ಯವು ಪೂರ್ಣವಾಗಲಿದೆ. ಮನೆಯಲ್ಲಿ ಪರಸ್ಪರ ಸಹಕಾರ ಸಿಗುವುದು, ಉತ್ಸಾಹದ ದಿನವಿದು.
ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಆಕರ್ಷಕ ವ್ಯಕ್ತಿತ್ವ ಹೊಂದಿರುವ ನೀವು ಇಂದು ಇತರರನ್ನು ಆಕರ್ಷಿಸುವಿರಿ. ಆರ್ಥಿಕ ಪ್ರಗತಿ ಸಾಧಾರಣವಿದ್ದರೂ ಸಮರ್ಥವಾಗಿ ನಿರ್ವಹಿಸುವಿರಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಮಡದಿಯ ಪ್ರೀತಿಗೆ ಸೋಲುವಿರಿ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಉದ್ಯೋಗ ಅಪೇಕ್ಷಿತರಿಗೆ ಇಂದು ಉದ್ಯೋಗದ ಭರವಸೆ. ಆರ್ಥಿಕ ಪ್ರಗತಿ ಇರಲಿದೆ. ಪರಿಶ್ರಮಕ್ಕೆ ತಕ್ಕ ಪ್ರತಿ ಫಲ ಸಿಗುವುದು. ಮನೆಯವರ ಪ್ರೀತಿ ಸಹಕಾರ ಸಿಗಲಿದೆ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಮನೆಯಲ್ಲಿ ಕಲಹ ಉಂಟಾಗಿ, ವಾತಾವರಣ ಹದಗೆಡಬಹುದು. ಕೆಲಸದಲ್ಲಿ ಹಿರಿಯರಿಂದ ಒತ್ತಡ ಹೆಚ್ಚಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆ ಮಾಡವುದು ಬೇಡ. ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಮನೆಯಲ್ಲಿ ಸಂತೋಷದ ದಿನ.
ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಹೊಂದಲು ಹಿರಿಯರು ಮಾರ್ಗದರ್ಶನ ಮಾಡಲಿದ್ದಾರೆ. ಧೈರ್ಯದಿಂದ ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗುವುದು. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಕುಟುಂಬ ಸದಸ್ಯರ ಆರೋಗ್ಯದ ವಿಷಯಕ್ಕೆ ಒತ್ತಡ ಹೆಚ್ಚಾಗಬಹುದು. ಉದಾಸೀನತೆ ಮಾಡುವುದು ಬೇಡ. ಆಶಾವಾದಿಗಳಾಗಿರಿ ಕುಲದೇವರನ್ನು ಸ್ಮರಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಮಕರ: ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಕಿರಿಕಿರಿ ಇರಲಿದ್ದು, ಒತ್ತಡ ಉಂಟಾಗುವ ಸಾಧ್ಯತೆ ಇದೆ. ಆಲಸ್ಯದಿಂದ ದೂರವಿದ್ದು ಕಾರ್ಯ ಪೂರ್ಣ ಮಾಡಿ.ಕೆಲಸದ ಒತ್ತಡದಿಂದ ಮನೆಯ ಸದಸ್ಯರ ಮೇಲೆ ಹಾಕಿ, ವಾತಾವರಣ ಹದಗೆಡಲು ಕಾರಣವಾಗಬೇಡಿ. ಗುರುಗಳ ಆರಾಧನೆ ಮಾಡಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಅನ್ಯರು ಆಡುವ ಮಾತುಗಳಿಗೆ ಧ್ವನಿಯಾಗಬೇಡಿ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 3

Horoscope Today

ಮೀನ: ನಿಮ್ಮ ಮಹತ್ವಾಕಾಂಕ್ಷೆಯ ಕೆಲಸ ಕಾರ್ಯಗಳು ಕುಂಠಿತವಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಆರ್ಥಿಕ ನಷ್ಟವನ್ನು ತಪ್ಪಿಸಿ. ಸಂಗಾತಿಯ ಮಾತುಗಳು ಹಿತವೆನಿಸುದು. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Pushpa 2 : ಪುಷ್ಪಾ 2 ಬಿಡುಗಡೆ ದಿನ ಮುಂದೂಡಿಕೆಯಾಗುತ್ತದೆಯೇ? ಚಿತ್ರ ತಂಡದ ಸ್ಪಷ್ಟನೆಯೇನು?

Pushpa 2: ಪುಷ್ಪಾ 2 ವಿಳಂಬವಾಗುತ್ತಿಲ್ಲ ಮತ್ತು ನಿಗದಿಯಂತೆ ಅಂದರೆ ಆಗಸ್ಟ್ 15, 2024 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಯಾರಕರು ಈಗ ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ 15ರಂದು ‘ಪುಷ್ಪ 2’ ರಿಲೀಸ್ ಆಗಲಿದೆ. ಇದು ನಮ್ಮ ಬದ್ಧತೆ ಎಂದು ಸಿನಿಮಾ ತಂಡ ಹತ್ತಿರದ ಮೂಲಗಳು ತಿಳಿಸಿವೆ. ಅಲ್ಲು ಅರ್ಜುನ್ ಈ ತಿಂಗಳು ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಲಿದ್ದು, ಜೂನ್ ವೇಳೆಗೆ ಉಳಿದ ಚಿತ್ರೀಕರಣ ಪೂರ್ಣಗೊಳ್ಳಲಿದೆ. ಆದ್ದರಿಂದ ಚಿತ್ರ ವಿಳಂಬವಾಗುವ ಸಾಧ್ಯತೆ ಇಲ್ಲ ಎಂದು ಮತ್ತೊಬ್ಬ ಆಂತರಿಕ ಮೂಲಗಳು ತಿಳಿಸಿವೆ.

VISTARANEWS.COM


on

Pushpa 2
Koo

ಬೆಂಗಳೂರು: ಐಕಾನ್ ಸ್ಟಾರ್​ ಅಲ್ಲು ಅರ್ಜುನ್ ಮತ್ತು ನ್ಯಾಷನಲ್ ಕ್ರಶ್​ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2: ದಿ ರೂಲ್’ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಅಭಿಮಾನಿಗಳು ಚಿತ್ರಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದ ನಡುವೆ ಪುಷ್ಪಾ 2 ಮುಂದೂಡಲ್ಪಡಬಹುದು (Pushpa 2) ಎಂಬ ವದಂತಿಗಳ ಅವರನ್ನು ಬೇಸರಕ್ಕೆ ತಳ್ಳಿತ್ತು. ಆದರೆ ತಯಾರಕರು ಅಂತಿಮವಾಗಿ ಅದು ನಿಜವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಡೇಟ್ ಸಂಬಂಧಿತ ಸಮಸ್ಯೆಗಳಿಂದಾಗಿ ಎಡಿಟರ್​ ಆಂಟನಿ ರೂಬೆನ್ ಪುಷ್ಪಾ 2 ಬಳಗ ತೊರೆದಿದ್ದಾರೆ ಎಂಬ ಸುದ್ದಿಹರಡಿತ್ತು ಎಂದು ಪೀಪಿಂಗ್ ಮೂನ್ ಇತ್ತೀಚೆಗೆ ವರದಿ ಮಾಡಿದೆ. ಹೀಗಾಗಿ ಚಿತ್ರದ ಸಂಕಲನ ಕಾರ್ಯವನ್ನು ಪೂರ್ಣಗೊಳಿಸಲು ನವೀನ್ ನೂಲಿ ಅವರನ್ನು ಬಳಸಿಕೊಳ್ಳಬಹುದು ಎಂದು ಹೇಳಲಾಗಿತ್ತು. ಈ ಕಾರಣದಿಂದಾಗಿ ಪುಷ್ಪ 2 ಬಿಡುಗಡೆ ವಿಳಂಬಕ್ಕೆ ಕಾರಣವಾಗಬಹುದೇ ಎಂದು ಅನುಮಾನ ಎದ್ದಿದ್ದವು.

ಪುಷ್ಪಾ 2 ವಿಳಂಬವಾಗುತ್ತಿಲ್ಲ ಮತ್ತು ನಿಗದಿಯಂತೆ ಅಂದರೆ ಆಗಸ್ಟ್ 15, 2024 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಯಾರಕರು ಈಗ ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ 15ರಂದು ‘ಪುಷ್ಪ 2’ ರಿಲೀಸ್ ಆಗಲಿದೆ. ಇದು ನಮ್ಮ ಬದ್ಧತೆ ಎಂದು ಸಿನಿಮಾ ತಂಡ ಹತ್ತಿರದ ಮೂಲಗಳು ತಿಳಿಸಿವೆ. ಅಲ್ಲು ಅರ್ಜುನ್ ಈ ತಿಂಗಳು ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಲಿದ್ದು, ಜೂನ್ ವೇಳೆಗೆ ಉಳಿದ ಚಿತ್ರೀಕರಣ ಪೂರ್ಣಗೊಳ್ಳಲಿದೆ. ಆದ್ದರಿಂದ ಚಿತ್ರ ವಿಳಂಬವಾಗುವ ಸಾಧ್ಯತೆ ಇಲ್ಲ ಎಂದು ಮತ್ತೊಬ್ಬ ಆಂತರಿಕ ಮೂಲಗಳು ತಿಳಿಸಿವೆ.

ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆಗೆ ರಶ್ಮಿಕಾ ಮಂದಣ್ಣ ಕೂಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ವರ್ಷದ ಆರಂಭದಲ್ಲಿ, ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ಪುಷ್ಪ 2 ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿದ್ದಾರೆ. ಅವರು ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿದ್ದರು. ಅವರು ಗೂಂಡಾಗಳನ್ನು ಹೊಡೆಯುತ್ತಿರುವುದು ಕಂಡುಬಂದಿದೆ.

ರಶ್ಮಿಕಾ ಅವರು ಬಹುನಿರೀಕ್ಷಿತ ಚಿತ್ರದ ಬಗ್ಗೆ ಮಾತನಾಡುವುದಾದರೆ. ಇದು ಎಂದಿಗಿಂತಲೂ ಭರವಸೆಯ ಸಿನಿಮಾವಾಗಿದೆ. “ಪುಷ್ಪಾ 2 ತುಂಬಾ ದೊಡ್ಡ ಸಿನಿಮಾವಾಗಲಿದೆ. ಎಂದು ನಾನು ನಿಮಗೆ ಭರವಸೆ ನೀಡಬಲ್ಲೆ. ಮೊದಲ ಚಿತ್ರದಲ್ಲಿ ನಾವು ಸ್ವಲ್ಪ ವಿಶೇಷವಾದದನ್ನು ನೀಡಿದ್ದೇವೆ. ಭಾಗ 2 ರಲ್ಲಿ, ನಮಗೆ ಜವಾಬ್ದಾರಿ ಹೆಚ್ಚಿದೆ ಎಂದೂ ನಮಗೆ ತಿಳಿದಿದೆ ಏಕೆಂದರೆ ಜನರು ಚಿತ್ರದ ಬಗ್ಗೆ ತುಂಬಾ ನಿರೀಕ್ಷೆ ಹೊಂದಿದ್ದಾರೆ. ನಾವು ಅದನ್ನು ತಲುಪಿಸಲು ನಿರಂತರವಾಗಿ ಮತ್ತು ಪ್ರಜ್ಞಾಪೂರ್ವಕವಾಗಿ ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಪಿಂಕ್​ವಿಲ್ಲಾಗೆ ತಿಳಿಸಿದ್ದಾರೆ.

ಇದನ್ನೂ ಓದಿ: Namratha Gowda: ರೆಡ್‌ ರಫಲ್‌ ಲೇಯರ್‌ ಮ್ಯಾಕ್ಸಿ ಡ್ರೆಸ್‌ನಲ್ಲಿ ನಟಿ ನಮ್ರತಾ ಗೌಡ ಹಾಲಿಡೇ ಲುಕ್‌!

ಪುಷ್ಪಾ 2 ಅನ್ನು ಚಿತ್ರಮಂದಿರಗಳಲ್ಲಿ ನೋಡಲು ಎಲ್ಲರೂ ಉತ್ಸುಕರಾಗಿದ್ದಾರೆ. ಚಿತ್ರವು ಖಂಡಿತವಾಗಿಯೂ ಬಾಕ್ಸ್ ಆಫೀಸ್ ಆಳುತ್ತಿದೆ. ಪುಷ್ಪಾ 2 ಚಿತ್ರದ ಥಿಯೇಟರ್ ಹಕ್ಕುಗಳನ್ನು ಅನಿಲ್ ತಡಾನಿ 200 ಕೋಟಿ ರೂ.ಗೆ ಮುಂಗಡವಾಗಿ ಖರೀದಿಸಿದ್ದಾರೆ ಎಂದು ಪಿಂಕ್​ವಿಲ್ಲಾ ಇತ್ತೀಚೆಗೆ ವರದಿ ಮಾಡಿತ್ತು. ಇದಕ್ಕೂ ಮೊದಲು, ಸಿಯಾಸತ್​​ನ ಮತ್ತೊಂದು ವರದಿಯು ಎಲ್ಲಾ ಭಾಷೆಗಳ ಹಕ್ಕುಗಳ ಒಪ್ಪಂದಕ್ಕಾಗಿ ತಯಾರಕರು 1,000 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ಬೇಡಿಕೆ ಬಂದಿದೆ. ಈ ಚಿತ್ರವು ಎಸ್.ಎಸ್.ರಾಜಮೌಳಿ ಅವರ ಆರ್​ಆರ್​ಆರ್​ ಮೀರಿಸುವ ನಿರೀಕ್ಷೆಯಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

Continue Reading

ಕರ್ನಾಟಕ

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

HD Revanna Case: ಎಚ್‌.ಡಿ. ರೇವಣ್ಣ ಅವರು ಇಂದು ಬೆಳಗ್ಗಿನಿಂದ ಟೆಂಪಲ್ ರನ್‌ ನಡೆಸಿದರು. ಬಳಿಕ ಇನ್ನೊಂದು ಪ್ರಕರಣದಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರಾದರು. ಈಗಾಗಲೇ ಮೈಸೂರಿನ ಸಂತ್ರಸ್ತೆಯ ಕಿಡ್ನ್ಯಾಪ್‌ (kidnap case) ಪ್ರಕರಣದಲ್ಲಿ ಅವರು ಜಾಮೀನು ಪಡೆದಿದ್ದಾರೆ. ಈಗ ಹೊಳೆನರಸೀಪುರದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಸಿಕ್ಕಿದ್ದು, ಶುಕ್ರವಾರದ ಆದೇಶದ ಮೇಲೆ ಎಲ್ಲವೂ ನಿಂತಿದೆ. ನಾಳೆ ಕೋರ್ಟ್‌ ಯಾವ ನಿರ್ಧಾರವನ್ನು ಪ್ರಕಟಿಸಲಿದೆ ಎಂಬುದರ ಮೇಲೆ ಜೈಲಾ? ಎಸ್‌ಐಟಿ ವಶವೇ? ಅಥವಾ ಜಾಮೀನಾ ಎಂಬುದು ನಿರ್ಧಾರ ಆಗಲಿದೆ.

VISTARANEWS.COM


on

HD Revanna case Revanna gets interim bail in Holenarasipura sexual assault case
Koo

ಬೆಂಗಳೂರು: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Case) ಅವರಿಗೆ ಮಧ್ಯಂತರ ಜಾಮೀನು (Bail) ನೀಡಲಾಗಿದ್ದು, ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿದೆ. ಹೀಗಾಗಿ ರೇವಣ್ಣ ಅವರು ಇನ್ನೂ ನಿಟ್ಟುಸಿರು ಬಿಡುವಂತೆ ಇಲ್ಲ. ನಾಳೆ ಕೋರ್ಟ್‌ ಯಾವ ನಿರ್ಧಾರವನ್ನು ಪ್ರಕಟಿಸಲಿದೆ ಎಂಬುದರ ಮೇಲೆ ಜೈಲಾ? ಎಸ್‌ಐಟಿ ವಶವೇ? ಅಥವಾ ಜಾಮೀನಾ ಎಂಬುದು ನಿರ್ಧಾರ ಆಗಲಿದೆ.

ಎಚ್‌.ಡಿ. ರೇವಣ್ಣ ಅವರು ಇಂದು ಬೆಳಗ್ಗಿನಿಂದ ಟೆಂಪಲ್ ರನ್‌ ನಡೆಸಿದರು. ಬಳಿಕ ಇನ್ನೊಂದು ಪ್ರಕರಣದಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರಾದರು. ಈಗಾಗಲೇ ಮೈಸೂರಿನ ಸಂತ್ರಸ್ತೆಯ ಕಿಡ್ನ್ಯಾಪ್‌ (kidnap case) ಪ್ರಕರಣದಲ್ಲಿ ಅವರು ಜಾಮೀನು ಪಡೆದಿದ್ದಾರೆ. ಈಗ ಹೊಳೆನರಸೀಪುರದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಸಿಕ್ಕಿದ್ದು, ಶುಕ್ರವಾರದ ಆದೇಶದ ಮೇಲೆ ಎಲ್ಲವೂ ನಿಂತಿದೆ. ಈಗ ಐದು ಲಕ್ಷ ರೂಪಾಯಿ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡುವಂತೆ ಕೋರ್ಟ್‌ ಸೂಚನೆ ನೀಡಿದೆ.

ವಾದ – ಪ್ರತಿವಾದ

ಗುರುವಾರ (ಮೇ 16) ಬೆಳಗ್ಗೆ 42ನೇ ಎಸಿಎಂಎಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯವು ಎಚ್.ಡಿ. ರೇವಣ್ಣ ಪರ ವಕೀಲರ ವಾದವನ್ನು ಆಲಿಸಿದರು. ಬಳಿಕ ಎಸ್ಐಟಿ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು‌ ಸೂಚಿಸಿದ ನ್ಯಾಯಾಧೀಶೆ ಪ್ರೀತ್ ಜೆ. ವಿಚಾರಣೆಯನ್ನು ಕೆಲ ಕಾಲ ಮುಂದೂಡಿದ್ದರು.

ಜಾಮೀನು ನೀಡದಂತೆ ಜಯ್ನಾ ಕೊಠಾರಿ ಮನವಿ

ಈ ವೇಳೆ ಎಸ್‌ಐಟಿ ಪರ ವಾದ ಮಂಡಿಸಿದ ಎಸ್‌ಪಿಪಿ ಜಯ್ನಾ ಕೊಠಾರಿ, ಎಚ್.‌ ಡಿ. ರೇವಣ್ಣ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲ, ಈ ಕೇಸ್‌ನಲ್ಲಿ ನಾನ್ ಬೇಲಬಲ್‌ ಸೆಕ್ಷನ್ ಇಲ್ಲ. ಹೀಗಾಗಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

ಆಗ ಮಧ್ಯಪ್ರವೇಶ ಮಾಡಿದ ಜಡ್ಜ್‌, ಎಸ್ಐಟಿ ವಾದಕ್ಕೂ ಅವಕಾಶ ನೀಡೋಣ ಎಂದು ಹೇಳಿ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು.

ಮಧ್ಯಾಹ್ನದ ಬಳಿಕ ವಿಚಾರಣೆ ಆರಂಭವಾಗುತ್ತಿದ್ದಂತೆ, ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆ ಆರಂಭಿಸಿದರು. ಈ ವೇಲೆ ಎಚ್.ಡಿ. ರೇವಣ್ಣ ಪರ ವಕೀಲರು ಮಧ್ಯ ಪ್ರವೇಶ ಮಾಡಿ, ಸೀನಿಯರ್ ವಕೀಲರು ಬರ್ತಾರೆ. ಹೀಗಾಗಿ ನಾಳೆಯವರೆಗೂ (ಮೇ 17) ಸಮಯ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಜಯ್ನಾ ಕೊಠಾರಿ ಆಕ್ಷೇಪ ವ್ಯಕ್ತಪಡಿಸಿ, ಹೊಳೆನರಸೀಪುರ ಕೇಸಲ್ಲಿ ವಿಚಾರಣೆಗೆ ಬರುವುದಾಗಿ ಹೇಳಿದ್ದಾರೆ. ಇನ್ನೂ ವಿಚಾರಣೆಗೆ ಬಂದಿಲ್ಲ. ಈಗಲೇ ವಿಚಾರಣೆ ನಡೆಯಲಿ. ಅಥವಾ ಆರೋಪಿ ರೇವಣ್ಣ ಅವರನ್ನು ಪೊಲೀಸರ ವಶಕ್ಕೆ ನೀಡಬೇಕು. ಇದೇ ಪ್ರಕರಣ ಆರೋಪಿ ವಿಚಾರಣೆಗೆ ಹಾಜರಾಗಿಲ್ಲ. ಮತ್ತೊಬ್ಬ ಆರೋಪಿ ದೇಶ ಬಿಟ್ಟು ಹೋಗಿದ್ದಾರೆ. ಹೀಗಾಗಿ ಸಮಯ ನೀಡಬಾರದು. ಇಂದೇ ವಿಚಾರಣೆ ನಡೆಸಿ ಆದೇಶ ನೀಡಿ ಅಥವಾ ಪೊಲೀಸರ ವಶಕ್ಕೆ ನೀಡಬೇಕು ಎಂದು ವಾದಿಸಿದರು.

ಇದಕ್ಕೆ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಅರುಣ್, ಎಚ್.ಡಿ. ರೇವಣ್ಣ ವಿರುದ್ಧ ಯಾವುದೇ ನಾನ್ ಬೇಲೆಬಲ್ ಸೆಕ್ಷನ್ ಇಲ್ಲ. ಜಾಮೀನು ನೀಡುವಂತಹ ಸೆಕ್ಷನ್‌ಗಳು ಇವೆ ಎಂದು ಹೇಳಿದರು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಸ್‌ಪಿಪಿ ಜಯ್ನಾ ಕೋಠಾರಿ, ಆರೋಪಿಯು ಪೊಲೀಸರ ಮುಂದೆ ಶರಣಾಗಲಿ ಅಥವಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿ. ಆರೋಪಿ ತುಂಬಾ ಪ್ರಭಾವಿ ಆಗಿದ್ದಾರೆ. ಹೀಗಾಗಿ ಆರೋಪಿಯೇ ಸ್ವ – ಇಚ್ಛೆಯಿಂದ ಬಂದು ಶರಣಾಗಲಿ ಎಂದು ವಾದಿಸಿದರು.

ಆಗ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಅರುಣ್‌, ನಾನ್ ಬೇಲೆಬಲ್ ಸೆಕ್ಷನ್ ಪ್ರಕರಣದಲ್ಲಿ ಸರ್ಕಾರದ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರವೇ ಇಲ್ಲ. ಎಸ್‌ಪಿಪಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರ ಇದೆಯೇ ಎಂಬುದು ಮೊದಲು ನಿರ್ಧಾರ ಆಗಲಿ. ಇನ್ನು ಈಗಾಗಲೇ ಎಚ್.ಡಿ. ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆಗಲೇ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಬಹುದಿತ್ತು. ಈಗ ಎಸ್ಐಟಿ ಕಸ್ಟಡಿಗೆ ಕೇಳುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ಇದನ್ನೂ ಓದಿ: Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

ರೇವಣ್ಣ ಹಾಜರಾಗಲು ಜಡ್ಜ್‌ ಸೂಚನೆ

ಪುನಃ ವಾದ ಮಂಡಿಸಿದ ಜಯ್ನಾ ಕೊಠಾರಿ, ಆರೋಪಿ ಬೆಳಗ್ಗೆ ಶರಣಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈಗ ಕೋರ್ಟ್‌ಗೆ ಶರಣಾಗಲು ಸಿದ್ಧರಿಲ್ಲ. ಸದ್ಯ ಇಲ್ಲೇ ಎಲ್ಲಿಯೋ ಕಾರಿನಲ್ಲಿ ಕುಳಿತಿರಬಹುದು ಎಂದು ಹೇಳಿದರು. ಈ ವೇಳೆ ರೇವಣ್ಣ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದರು. ಬಳಿಕ ವಿಚಾರಣೆ ಆರಂಭವಾಗುತ್ತಿದ್ದಂತೆ ಎಚ್‌.ಡಿ. ರೇವಣ್ಣ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ರೇವಣ್ಣ ಟೆಂಪಲ್‌ ರನ್‌ ಹೀಗಿತ್ತು

ಇಂದು ಮುಂಜಾನೆ ತಾವು ಉಳಿದುಕೊಂಡಿದ್ದ ದೇವೇಗೌಡರ ಮನೆಯಿಂದ ಹೊರಟ ರೇವಣ್ಣ ಅವರು ವೈದ್ಯ ಸಿಎನ್ ಮಂಜುನಾಥ್ ಅವರ ನಿವಾಸಕ್ಕೆ ಬಂದು, ಅಲ್ಲಿಂದ ಟೆಂಪಲ್ ರನ್ ಶುರು ಮಾಡಿದರು. ಬೆಳಗ್ಗೆ 8:26ಕ್ಕೆ ಜಯನಗರ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನ, 8:50ಕ್ಕೆ ಗವಿಗಂಗಾಧರೇಶ್ವರ ದೇವಸ್ಥಾನ, 9:10ಕ್ಕೆ ಶ್ರೀ ಶೃಂಗೇರಿ ಶಂಕರ ಮಠ, 10:31ಕ್ಕೆ ಬಸವನಗುಡಿಯ ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿ ನಂತರ ಕೋರ್ಟ್‌ಗೆ ಹಾಜರಾದರು.

Continue Reading

ಕ್ರೀಡೆ

Sunil Chhetri: ಭಾರತದ ಕಾಲ್ಚೆಂಡಿನ ಮಾಂತ್ರಿಕ ಸುನೀಲ್ ಚೆಟ್ರಿ ಸಾಧನೆಯೇ ರೋಚಕ

Sunil Chhetri: ಭಾರತಕ್ಕಾಗಿ 145 ಪಂದ್ಯಗಳನ್ನು ಆಡಿರುವ ಚೆಟ್ರಿ 20 ವರ್ಷಗಳ ವೃತ್ತಿಜೀವನದಲ್ಲಿ 93 ಗೋಲುಗಳನ್ನು ಗಳಿಸಿದ್ದಾರೆ. ಭಾಗವಹಿಸಿದ ಎಲ್ಲ ಜಾಗತಿಕ ಕೂಟಗಳಲ್ಲಿ ಒಂದಲ್ಲ ಒಂದು ಪ್ರಶಸ್ತಿ ಗೆಲ್ಲದೇ ಸುನೀಲ್ ಹಿಂದೆ ಬಂದ ಒಂದು ಉದಾಹರಣೆ ಕೂಡ ದೊರೆಯುವುದಿಲ್ಲ

VISTARANEWS.COM


on

Sunil Chhetri
Koo

ಬೆಂಗಳೂರು: ಭಾರತದಲ್ಲಿ ಆಳವಾಗಿ ಬೇರೂರಿರುವ ಕ್ರಿಕೆಟ್, ಕ್ರಿಕೆಟಿಗರೆಂದರೆ ದೇವರು ಎಂದು ಪೂಜಿಸಲ್ಪಡುವ ಜಾಯಮಾನದಲ್ಲಿ ಒಬ್ಬ ಫುಟ್ಬಾಲ್ ಆಟಗಾರ (Indian Football player) 20 ವರ್ಷಗಳಿಂದ ದೇಶಕ್ಕಾಗಿ ಆಡುತ್ತಾನೆ ಅಂದರೆ ನಂಬಲು ಕಷ್ಟ ಆಗಬಹುದು. ಫುಟ್ಬಾಲಿಗೆ ಕೆಲವು ಶ್ರೀಮಂತ ಕ್ಲಬ್ ಬಿಟ್ಟರೆ ಬೇರೆ ಯಾವ ಸಪೋರ್ಟ್ ಕೂಡ ಇಲ್ಲದ ಸನ್ನಿವೇಶದಲ್ಲಿ ಕೂಡ ಈ ದೈತ್ಯ ಪ್ರತಿಭೆಯ ಆಟಗಾರ ದಾಖಲೆಗಳ ಮೇಲೆ ದಾಖಲೆಗಳನ್ನು ಮಾಡುತ್ತಾನೆ ಅಂದರೆ ಅದು ನಿಜವಾಗಿಯೂ ಅದ್ಭುತ! ಭಾರತೀಯ ಫುಟ್ಬಾಲ್ ತಂಡದ (Indian Football team) ಕ್ಯಾಪ್ಟನ್ ಆಗಿ ಭಾರತದಲ್ಲಿ ಫುಟ್ಬಾಲ್ ಕ್ರೇಜನ್ನು ಜೀವಂತವಾಗಿ ಉಳಿಸಿದ ಲೆಜೆಂಡ್ ಮಿಂಚು ಹರಿಸುವ ಫಾರ್ವರ್ಡ್ ಆಟಗಾರ ಸುನೀಲ್ ಚೆಟ್ರಿ (Sunil Chhetri) ಕೊನೆಗೂ ತನ್ನ ನೆಚ್ಚಿನ ಫುಟ್ಬಾಲ್​ ಆಟಕ್ಕೆ ವಿದಾಯ(Sunil Chhetri Announces Retirement) ಹೇಳಲು ನಿರ್ಧರಿಸಿದ್ದಾರೆ.


ಜೂನ್​ 6 ರಂದು ಕುವೈತ್​(Kuwait) ವಿರುದ್ಧದ ಫಿಫಾ ವಿಶ್ವಕಪ್ ಅರ್ಹತಾ(FIFA World Cup 2026 qualifier) ಪಂದ್ಯ ಅವರಿಗೆ ಕೊನೆಯ ಪಂದ್ಯವಾಗಿರಲಿದೆ. ಅವರ ನಿವೃತ್ತಿಯ ನಿರ್ಧಾರ ಕೇಳಿ ಅನೇಕರು ಬೇಸರಗೊಂಡರೂ ಕೂಡ ಅವರ ಸಾಧನೆಗೆ ಸಲಾಂ ಎಂದಿದ್ದಾರೆ. ಚೆಟ್ರಿ ಕುರಿತ ಸಾರಸ್ಯರ ಸಂಗತಿ ಇಂತಿದೆ.


2021 ರಲ್ಲಿ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಸುನೀಲ್​ ಚೆಟ್ರಿ ಅವರಿಗೆ ಭಾರತದ ಅತ್ಯುನ್ನತ ಕ್ರೀಡಾ ಗೌರವ – ಖೇಲ್ ರತ್ನ ಪ್ರಶಸ್ತಿಯನ್ನು ನೀಡಿತು. ಅವರು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಮೊದಲ ಮತ್ತು ಏಕೈಕ ಫುಟ್ಬಾಲ್ ಆಟಗಾರ. ನೀರಜ್ ಚೋಪ್ರಾ ಮತ್ತು ಮಿಥಾಲಿ ರಾಜ್ ಸೇರಿದಂತೆ ಇತರ ಪ್ರಸಿದ್ಧ ಕ್ರೀಡಾಪಟುಗಳೊಂದಿಗೆ ಅವರು ಈ ಗೌರವವನ್ನು ಸ್ವೀಕರಿಸಿದ್ದರು.

ಇದನ್ನೂ ಓದಿ Sunil Chhetri: ಕ್ಲಬ್​ ತೊರೆದು ದೇಶದ ಪರ ಆಡಲು ನಿರ್ಧರಿಸಿದ ಸುನೀಲ್​ ಚೆಟ್ರಿಗೆ ಮೆಚ್ಚುಗೆ

sunil chhetri khel ratna award


2005ರಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಪದಾರ್ಪಣೆ ಮಾಡಿದ ಸುನೀಲ್‌ ಚೆಟ್ರಿ 93 ಗೋಲು ದಾಖಲಿಸಿ ಅತ್ಯಧಿಕ ಗೋಲು ಬಾರಿಸಿದ ಆಟಗಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೋನೆಲ್‌ ಮೆಸ್ಸಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ.

sunil chhetri 2005


ಜೂನ್ 12, 2005 ರಂದು ಕ್ವೆಟ್ಟಾದಲ್ಲಿ ಪಾಕಿಸ್ತಾನದ ವಿರುದ್ಧದ ಸೌಹಾರ್ದ ಪಂದ್ಯದಲ್ಲಿ ಚೆಟ್ರಿ ಮೊದಲ ಬಾರಿಗೆ ಹಿರಿಯ ರಾಷ್ಟ್ರೀಯ ತಂಡದ ಜರ್ಸಿಯನ್ನು ತೊಟ್ಟಿದ್ದರು. ಆ ಪಂದ್ಯ 1-1 ಡ್ರಾದಲ್ಲಿ ಅತ್ಯಂಕಡಿತ್ತು. ಭಾರತದ ಈ ಒಂದು ಗೋಲ್​ ಬಾರಿಸಿದ್ದು ಚೆಟ್ರಿ. ಅಂದಿನಿಂದ, ಅವರು ಇದುವರೆಗೂ ರಾಷ್ಟ್ರೀಯ ತಂಡದ ಪರ ಹಲವು ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ Sunil Chhetri: ಮೈ ಬ್ರದರ್, ನಿಮ್ಮ ಬಗ್ಗೆ ಹೆಮ್ಮೆಯಿದೆ ಎಂದು ಚೆಟ್ರಿಗೆ ಶುಭ ಹಾರೈಸಿದ ಗೆಳೆಯ ವಿರಾಟ್​ ಕೊಹ್ಲಿ


ಭಾರತಕ್ಕಾಗಿ 145 ಪಂದ್ಯಗಳನ್ನು ಆಡಿರುವ ಅವರು 20 ವರ್ಷಗಳ ವೃತ್ತಿಜೀವನದಲ್ಲಿ 93 ಗೋಲುಗಳನ್ನು ಗಳಿಸಿದ್ದಾರೆ. ಭಾಗವಹಿಸಿದ ಎಲ್ಲ ಜಾಗತಿಕ ಕೂಟಗಳಲ್ಲಿ ಒಂದಲ್ಲ ಒಂದು ಪ್ರಶಸ್ತಿ ಗೆಲ್ಲದೇ ಸುನೀಲ್ ಹಿಂದೆ ಬಂದ ಒಂದು ಉದಾಹರಣೆ ಕೂಡ ದೊರೆಯುವುದಿಲ್ಲ. ಸುನೀಲ್ ಕಾರಣಕ್ಕೆ ಭಾರತದಲ್ಲಿ ಫುಟ್ಬಾಲ್ ಆಕರ್ಷಣೆ ಹೆಚ್ಚಿತು ಮತ್ತು ಹೆಚ್ಚು ಯುವಜನತೆ ಫುಟ್ಬಾಲ್ ಆಡಲು ಶುರು ಮಾಡಿದರು ಅನ್ನುವ ಮಾತಿನಲ್ಲಿ ಉತ್ಪ್ರೇಕ್ಷೆ ಇಲ್ಲ!


18ನೆಯ ವರ್ಷದಲ್ಲಿ ವೃತ್ತಿಪರ ಫುಟ್ಬಾಲ್ ಆಟಗಾರನಾಗಿ ಆಡಲು ಆರಂಭ ಮಾಡಿದ್ದ ಸುನೀಲ್ ಹೆಚ್ಚು ಕಡಿಮೆ ಭಾರತದ ಎಲ್ಲ ಕ್ಲಬ್​ಗಳ ಪರವಾಗಿ ಆಡಿದ್ದಾರೆ. ಮೋಹನ್ ಬಗಾನ್, ಜೆಸಿಟಿ, ಬಂಗಾಳ ತಂಡಗಳ ಆಟಗಾರನಾಗಿ ಮಿಂಚು ಹರಿಸಿದ್ದಾರೆ. 2015ರಿಂದ ಇಂದಿನವರೆಗೆ ಬೆಂಗಳೂರು ತಂಡದ ಪರವಾಗಿ ಆಡುತ್ತ ಬಂದಿದ್ದಾರೆ.

ಇದನ್ನೂ ಓದಿ Sunil Chhetri: 20 ವರ್ಷಗಳ ಫುಟ್ಬಾಲ್ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ ಸುನೀಲ್‌ ಚೆಟ್ರಿ; ಕುವೈತ್ ವಿರುದ್ಧ ಅಂತಿಮ ಪಂದ್ಯ


ಭಾರತದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ಫುಟ್ಬಾಲ್ ಆಟಗಾರ ಎಂದರೆ ಅದು ಸುನೀಲ್ ಅನ್ನೋದು ನಿಜಕ್ಕೂ ಗ್ರೇಟ್. ಭಾರತ ಸರಕಾರ ಕೊಡಮಾಡುವ ಪದ್ಮಶ್ರೀ, 2011ರ ಅರ್ಜುನ ಪ್ರಶಸ್ತಿ ಅವರಿಗೆ ಈಗಾಗಲೇ ದೊರೆತಿವೆ.


1984 ಆಗಸ್ಟ್ 3ರಂದು ಸಿಕಂದರಾಬಾದನಲ್ಲಿ ಹುಟ್ಟಿದ ಸುನೀಲ್ ತಂದೆ ಒಬ್ಬ ಸೈನಿಕ ಆಗಿದ್ದರು ಮತ್ತು ಭಾರತದ ಆರ್ಮಿ ಫುಟ್ಬಾಲ್ ಟೀಮ್‌ನಲ್ಲಿ ಆಡಿದ್ದರು. ಅದರಿಂದಾಗಿ ಫುಟ್ಬಾಲ್ ಆಸಕ್ತಿ ಈ ಹುಡುಗನಿಗೆ ರಕ್ತದಲ್ಲಿಯೇ ಬಂದಿತ್ತು ಎನ್ನಬಹುದು.

Continue Reading

ದೇಶ

Fire Accident: ಬಿಜೆಪಿ ಕಚೇರಿಯಲ್ಲಿ ಭಾರಿ ಅಗ್ನಿ ಅವಘಡ; ಅಗ್ನಿಶಾಮಕ ಸಿಬ್ಬಂದಿ ದೌಡು

Fire Accident: ಪಂಡಿತ್‌ ಪಂತ್‌ ಮಾರ್ಗದಲ್ಲಿ ದೆಹಲಿ ಬಿಜೆಪಿ ಘಟಕದ ಕಚೇರಿ ಇದೆ. ಸಂಜೆ 4.25ರ ಸುಮಾರಿಗೆ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಅಗ್ನಿ ದುರಂತ ಸಂಭವಿಸುತ್ತಲೇ ಕಚೇರಿಯಲ್ಲಿದ್ದವರು ಓಡಿ ಹೊರಬಂದರು ಎಂದು ಹೇಳಲಾಗುತ್ತಿದೆ.

VISTARANEWS.COM


on

Fire Accident
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ (Delhi BJP Office) ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯು ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯು ಅಗ್ನಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಅಗ್ನಿ ದುರಂತ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಸದ್ಯ, ಮೂರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಸುತ್ತಮುತ್ತಲೂ ಹೊಗೆ ಆವರಿಸಿದ ಕಾರಣ ಜನರಿಗೆ ಆತಂಕ ಎದುರಾಗಿದೆ ಎಂದು ತಿಳಿದುಬಂದಿದೆ.

ಪಂಡಿತ್‌ ಪಂತ್‌ ಮಾರ್ಗದಲ್ಲಿ ದೆಹಲಿ ಬಿಜೆಪಿ ಘಟಕದ ಕಚೇರಿ ಇದೆ. ಸಂಜೆ 4.25ರ ಸುಮಾರಿಗೆ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಅಗ್ನಿ ದುರಂತ ಸಂಭವಿಸುತ್ತಲೇ ಕಚೇರಿಯಲ್ಲಿದ್ದವರು ಓಡಿ ಹೊರಬಂದರು ಎಂದು ಹೇಳಲಾಗುತ್ತಿದೆ. ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್‌, ಯಾರಿಗೂ ತೊಂದರೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಕೆಲ ತಿಂಗಳ ಹಿಂದೆ ಮಧ್ಯಪ್ರದೇಶ ವಿಧಾನಸೌಧದ ಸಚಿವಾಲಯದ ಕಟ್ಟಡದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿತ್ತು. ಭೋಪಾಲ್‌ನ ಅರೇರಾ ಹಿಲ್‌ನಲ್ಲಿರುವ ವಲ್ಲಭ ಭವನ ರಾಜ್ಯ ಸಚಿವಾಲಯದ ಕಟ್ಟಡದಲ್ಲಿ (State Secretariat) ಏಕಾಏಕಿ ಅಗ್ನಿ ದುರಂತ ಸಂಭವಿಸಿದ್ದು, ಸುಮಾರು 10-15 ಅಗ್ನಿ ಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸಿದ್ದವು. ಅಗ್ನಿಯ ಕೆನ್ನಾಲಗೆಗೆ ಹಲವು ಕಡತಗಳು ಭಸ್ಮವಾಗಿವೆ ಎಂದು ತಿಳಿದುಬಂದಿತ್ತು.

ಕೆಲವು ದಿನಗಳ ಹಿಂದೆ ದೆಹಲಿಯ ಅಲಿಪುರ್ ಪ್ರದೇಶದಲ್ಲಿರುವ ಬಣ್ಣದ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಬೆಂಕಿ ಆಕಸ್ಮಿಕದಲ್ಲಿ 11 ಜನರು ಮೃತಪಟ್ಟಿದ್ದರು ಮತ್ತು ನಾಲ್ವರು ಗಾಯಗೊಂಡಿದ್ದರು. ಅಗ್ನಿಶಾಮಕ ದಳದ ಪ್ರಕಾರ ಎರಡು ಬಣ್ಣ ಮತ್ತು ರಾಸಾಯನಿಕ ಗೋದಾಮುಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಇದನ್ನೂ ಓದಿ: Fire Tragedy: ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ; 6 ಮಂದಿ ಸಾವು

Continue Reading
Advertisement
Pushpa 2
ಪ್ರಮುಖ ಸುದ್ದಿ3 mins ago

Pushpa 2 : ಪುಷ್ಪಾ 2 ಬಿಡುಗಡೆ ದಿನ ಮುಂದೂಡಿಕೆಯಾಗುತ್ತದೆಯೇ? ಚಿತ್ರ ತಂಡದ ಸ್ಪಷ್ಟನೆಯೇನು?

HD Revanna case Revanna gets interim bail in Holenarasipura sexual assault case
ಕರ್ನಾಟಕ22 mins ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

Murder case in Belgavi
ಬೆಳಗಾವಿ23 mins ago

Murder Case : ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

Sunil Chhetri
ಕ್ರೀಡೆ50 mins ago

Sunil Chhetri: ಭಾರತದ ಕಾಲ್ಚೆಂಡಿನ ಮಾಂತ್ರಿಕ ಸುನೀಲ್ ಚೆಟ್ರಿ ಸಾಧನೆಯೇ ರೋಚಕ

Fire Accident
ದೇಶ50 mins ago

Fire Accident: ಬಿಜೆಪಿ ಕಚೇರಿಯಲ್ಲಿ ಭಾರಿ ಅಗ್ನಿ ಅವಘಡ; ಅಗ್ನಿಶಾಮಕ ಸಿಬ್ಬಂದಿ ದೌಡು

XVU300
ಆಟೋಮೊಬೈಲ್52 mins ago

Mahindra XUV 3XO : ಮಹೀಂದ್ರಾದ ವಿಶೇಷ ದಾಖಲೆ; 60 ನಿಮಿಷದಲ್ಲಿ 50 ಸಾವಿರ ಕಾರು ಬುಕಿಂಗ್​!

Namrata Gowda Holiday Look in Red Ruffle Layered Maxi Dress
ಫ್ಯಾಷನ್58 mins ago

Namratha Gowda: ರೆಡ್‌ ರಫಲ್‌ ಲೇಯರ್‌ ಮ್ಯಾಕ್ಸಿ ಡ್ರೆಸ್‌ನಲ್ಲಿ ನಟಿ ನಮ್ರತಾ ಗೌಡ ಹಾಲಿಡೇ ಲುಕ್‌!

Viral News
ವೈರಲ್ ನ್ಯೂಸ್58 mins ago

Viral News: ಶ್ವಾನದ ಜತೆ ವಾಕಿಂಗ್‌ ಹೋಗುತ್ತಿದ್ದ ವ್ಯಕ್ತಿಯ ವೇಳೆ ಹಲ್ಲೆ; ಶಾಕಿಂಗ್‌ ವಿಡಿಯೊ ಇಲ್ಲಿದೆ

Karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

BMW X3 xDrive20d
ಪ್ರಮುಖ ಸುದ್ದಿ1 hour ago

BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು7 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌