Site icon Vistara News

Dina Bhavishya : ಈ ರಾಶಿಯವರಿಗೆ ಇಂದು ಹಳೇ ಪರಿಚಿತರ ಸಂಪರ್ಕವಾಗಲಿದೆ!

dina bhavishya read your daily horoscope predictions for November 24 2023

ಚಂದ್ರನು ಗುರುವಾರ ಮೇಷ ರಾಶಿಯನ್ನು ಪ್ರವೇಶ ಮಾಡಿದ್ದು, ಶುಕ್ರವಾರ ಮಧ್ಯಾಹ್ನ ವೃಷಭ ರಾಶಿಯನ್ನು ಪ್ರವೇಶ ಮಾಡಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮಿಥುನ ರಾಶಿಯವರು ಆಶಾವಾದಿಗಳಾಗಿರಿ, ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸನ್ನು ತಂದು ಕೊಡುವುದು. ಅನಿವಾರ್ಯ ಕಾರಣಗಳಿಂದ ಖರ್ಚು ಮಾಡುವ ಸಾಧ್ಯತೆ ಇದೆ. ಹಳೆಯ ಪರಿಚಿತರ ಸಂಪರ್ಕ ಪುನಃ ಸ್ಥಾಪಿತವಾಗುವುದು. ವೈವಾಹಿಕ ಜೀವನಕ್ಕೆ ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (24-11-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ
ತಿಥಿ: ದ್ವಾದಶಿ 19:06 ವಾರ: ಶುಕ್ರವಾರ
ನಕ್ಷತ್ರ: ರೇವತಿ 15:59 ಯೋಗ: ಸಿದ್ಧಿ 09:03
ಕರಣ: ವ್ಯತಿಪಾತ 30:22 ಅಮೃತ ಕಾಲ: ಮಧ್ಯಾಹ್ನ 01:44 ರಿಂದ ಮಧ್ಯಾಹ್ನ 03:15 ರವರೆಗೆ

ಸೂರ್ಯೋದಯ : 06:22  ಸೂರ್ಯಾಸ್ತ : 05:50

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ಇಂದಿನ ವಿಶೇಷ: ಉತ್ಥಾನ ದ್ವಾದಶಿ, ತುಳಸೀ ಹಬ್ಬ, ಪ್ರದೋಷ, ಚಾತುರ್ಮಾಸ್ಯ ವ್ರತ ಸಮಾಪ್ತಿ.

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಆರ್ಥಿಕ ವ್ಯವಹಾರಗಳ ಕುರಿತಾಗಿ ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ. ಆರೋಗ್ಯದ ಕುರಿತು ಕಾಳಜಿ ವಹಿಸಿ, ಅದರಲ್ಲಿಯೂ ಕಣ್ಣಿನ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಸೂಕ್ತ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ವ್ಯಾಪಾರ-ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ .
ಅದೃಷ್ಟ ಸಂಖ್ಯೆ: 8

ವೃಷಭ: ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರಲಿದೆ. ಕುಟುಂಬದ ಸದಸ್ಯರ ಬೆಂಬಲ ಕೆಲಸ ಕಾರ್ಯಗಳಲ್ಲಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕು ಪ್ರಶಂಸೆ ಪಡೆಯುವಿರಿ. ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತೆ ಮಾಡಬಹುದು, ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಮಿಥುನ: ಆಶಾವಾದಿಗಳಾಗಿರಿ, ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸನ್ನು ತಂದು ಕೊಡುವುದು. ಅನಿವಾರ್ಯ ಕಾರಣಗಳಿಂದ ಖರ್ಚು ಮಾಡುವ ಸಾಧ್ಯತೆ ಇದೆ. ಹಳೆಯ ಪರಿಚಿತರ ಸಂಪರ್ಕ ಪುನಃ ಸ್ಥಾಪಿತವಾಗುವುದು. ವೈವಾಹಿಕ ಜೀವನಕ್ಕೆ ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಕಟಕ: ಅವಿರತವಾಗಿ ಶ್ರಮಿಸಿದ ಜೀವಕೆ ವಿಶ್ರಾಂತಿಯು ಸಿಗಲಿದೆ. ಸಂಗಾತಿಯೊಂದಿಗೆ ಹೂಡಿಕೆ ಕುರಿತಾಗಿ ಚರ್ಚೆ ಮಾಡಲಿದ್ದೀರಿ. ಉತ್ತಮ ವ್ಯಕ್ತಿಗಳ ಸಂಪರ್ಕ, ಮಾರ್ಗದರ್ಶನ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ ಇದ್ದು, ತಾಳ್ಮೆಯಿಂದ ಸಹಕರಿಸಿ. ಕೌಟುಂಬಿಕವಾಗಿ ಶುಭ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 9

ಸಿಂಹ: ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಹಣಕಾಸು ವಿಷಯಗಳಿಗೆ ಸಂಬಂಧಪಟ್ಟಂತೆ ವ್ಯಾಪಾರ – ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಅಗತ್ಯ ವಸ್ತುಗಳ ಖರೀದಿ ಸಾಧ್ಯತೆ ಹೆಚ್ಚಿದೆ. ಆತುರದ ಮಾತುಗಳು ಸುತ್ತಮುತ್ತಲಿನ ಜನರೊಂದಿಗೆ ವಾದಕ್ಕೆ ಇಳಿಯುವಂತೆ ಮಾಡಬಹುದು. ಹೀಗಾಗಿ ಈ ಬಗ್ಗೆ ಎಚ್ಚರಿಕೆ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಕನ್ಯಾ: ಹೊಸ ಆರ್ಥಿಕ ಒಪ್ಪಂದಗಳು ಗರಿಗೆದರಲಿವೆ. ಆಪ್ತರಿಂದ ಆಮಂತ್ರಣ ಸಿಗಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆಸ್ತಿ ಖರೀದಿ ವ್ಯವಹಾರದ ಕುರಿತು ಚರ್ಚೆ ನಡೆಸುವಿರಿ. ಸಂಗಾತಿಯ ಮಾತುಗಳಿಗೆ ಮನ್ನಣೆ ಸಿಗದೇ ಇರುವುದರಿಂದ ನಿಮ್ಮ ಮೇಲೆ ಕೋಪಿಸಿಕೊಳ್ಳುವ ಸಾಧ್ಯತೆ ಇದೆ. ನಗುವಿನ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಗಾಳಿಯಲ್ಲಿ ಗೋಪುರ ಕಟ್ಟಿಕೊಂಡು ವೃತಾ ಸಮಯ, ವ್ಯರ್ಥ ಮಾಡಬೇಡಿ. ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ಕುಟುಂಬದ ಸದಸ್ಯರ ಮಾರ್ಗದರ್ಶನ ಪಡೆಯುವುದು ಒಳ್ಳೆಯದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಸಂಗಾತಿಯ ಮಧುರ ಪ್ರೀತಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ವೃಶ್ಚಿಕ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಹಣಕಾಸಿನ ವ್ಯವಹಾರ ನಿರೀಕ್ಷಿಸಿದಷ್ಟು ಸಾಧ್ಯವಿಲ್ಲ. ಅತಿಥಿಗಳ ಆಗಮನದಿಂದ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಹೆಚ್ಚಿದೆ. ಆತುರದಲ್ಲಿ ಯಾವುದೇ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ, ಯಾವುದೇ ಹಣಕಾಸು ಒಪ್ಪಂದಗಳನ್ನು ಮಾಡಿಕೊಳ್ಳುವುದು ಬೇಡ. ಪ್ರೀತಿ ಪಾತ್ರರೊಂದಿಗೆ ಆತುರದ ಮಾತುಗಳನ್ನಾಡಿ ಬಾಂಧವ್ಯವನ್ನು ಕೆಡಿಸಿಕೊಳ್ಳಬೇಡಿ. ನಿಧಾನಿಸಿ, ಯೋಚಿಸಿ ಮಾತನಾಡಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ಮಕರ: ಬಹಳ ದಿನಗಳ ಕನಸು ನನಸಾಗುವ ಕಾಲ ಇದಾಗಿದೆ. ಆತುರದಲ್ಲಿ ಯಾವುದೇ ಸಂಕಲ್ಪ ಮಾಡುವುದು ಬೇಡ. ಸ್ನೇಹಿತರ ಕಷ್ಟಕಾಲಕ್ಕೆ ಸ್ಪಂದಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದಲ್ಲಿ ಯಶಸ್ಸು ಕಾಣುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕುಂಭ: ಅತಿಯಾದ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯಿರಿ. ತಾಳ್ಮೆಯಿಂದ ವರ್ತಿಸಿ. ಆತುರದಿಂದ ಮಾತನಾಡುವುದು ಬೇಡ. ಉದ್ಯೋಗಿಗಳಿಗೆ ಹೆಚ್ಚಿನ ಒತ್ತಡ ಇರಲಿದೆ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಮೀನ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಹೀಗಾಗಿ ಕಾಳಜಿ ವಹಿಸುವುದು ಸೂಕ್ತ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಪ್ರಗತಿ ಇರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಬಹುದಾಗಿದೆ. ಸಂಗಾತಿಯ ವರ್ತನೆ ನಿಮಗೆ ಕೋಪ ತರಿಸಬಹುದು. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version