ಚಂದ್ರನು ಕಟಕ ರಾಶಿಯನ್ನು ಪ್ರವೇಶಿಸಿದ್ದು, ಶನಿವಾರದವರೆಗೆ ಅಲ್ಲಿಯೇ ನೆಲೆಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಸಿಂಹ ರಾಶಿಯವರು ಪ್ರಮುಖ ವ್ಯಕ್ತಿಗಳೊಂದಿಗೆ ಮಾತನಾಡುವಾಗ ಎಚ್ಚರಿಕೆ ಇರಲಿ. ವೃಶ್ಚಿಕ ರಾಶಿಯ ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಪ್ರೀತಿ-ಪಾತ್ರರೊಡನೆ ಪ್ರಯಾಣ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (3-11-2023)
ಮೇಷ: ಕುಟುಂಬ ಸದಸ್ಯರ ಆರೋಗ್ಯದ ಕುರಿತು ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಸ್ವಲ್ಪ ಒತ್ತಡ ಇರಲಿದೆ. ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2
ವೃಷಭ: ಹಿರಿಯರು ಆರೋಗ್ಯದ ಕುರಿತು ಕಾಳಜಿ ವಹಿಸಲೇಬೇಕು. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯುವಿರಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕಾರ್ಯ ನಿಮಿತ್ತ ಮಾಡಿದ ಪ್ರಯಾಣವು ಫಲಪ್ರದವಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಮಿಥುನ: ಸಂತಸದ ಸುದ್ದಿ ನಿಮ್ಮ ಮನಸ್ಸಿಗೆ ಇನ್ನಷ್ಟು ಮುದ ನೀಡಲಿದೆ. ಮನೆಯ ಅಗತ್ಯ ವಸ್ತುಗಳ ಖರೀದಿಯಿಂದಾಗಿ ಖರ್ಚು ಹೆಚ್ಚಾಗಲಿದೆ. ಪ್ರೀತಿ ಪಾತ್ರರಿಂದ ಉಡುಗೊರೆ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಉತ್ಸಾಹ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಕಟಕ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸಲಿದೆ. ಕುಟುಂಬ ಸದಸ್ಯರ ಒಳ್ಳೆಯ ಸಲಹೆ ನಿಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಒತ್ತಡ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3
ಸಿಂಹ: ಹೂಡಿಕೆ ವ್ಯವಹಾರ ತಕ್ಕ ಮಟ್ಟಿಗೆ ಲಾಭ ತರಲಿದೆ. ಉದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗಲಿವೆ. ಆರೋಗ್ಯ ಮಧ್ಯಮವಾಗಿರಲಿದೆ. ಪ್ರಮುಖ ವ್ಯಕ್ತಿಗಳೊಂದಿಗೆ ಮಾತನಾಡುವಾಗ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಕನ್ಯಾ: ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢವಾಗಿ ಇರಲಿದ್ದೀರಿ. ಹಿಂದೆ ಹೂಡಿಕೆ ಮಾಡಿದ ವ್ಯವಹಾರಗಳು ಈಗ ಲಾಭ ತಂದು ಕೊಡಲಿದೆ. ಉದ್ಯೋಗದ ಭರವಸೆಯಲ್ಲಿ ಇರುವವರಿಗೆ ಶುಭ ಸುದ್ದಿ ಸಿಗಲಿದೆ. ಕಲಾ ಪ್ರತಿಭೆಗಳಿಗೆ ಅವಕಾಶದ ಜತೆಗೆ ಪ್ರೋತ್ಸಾಹ ಸಿಗಲಿದೆ. ಸಾಮಾಜಿಕವಾಗಿ ನಿಮಗೆ ಗೌರವ ಪುರಸ್ಕಾರಗಳು ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಕಳೆದುಹೋಗಿರುವ ಬಗ್ಗೆ ಯೋಚಿಸುತ್ತಿದ್ದರೆ ನಿಮ್ಮ ಹತಾಶೆ ನಿಮ್ಮ ಆರೋಗ್ಯವನ್ನು ನಾಶಮಾಡಬಹುದು. ಸಾಧ್ಯವಾದಷ್ಟೂ ವಿಶ್ರಾಂತಿ ತಗೆದುಕೊಳ್ಳಲು ಪ್ರಯತ್ನಿಸಿ. ದಿನದ ಮಟ್ಟಿಗೆ ಯಾವುದೇ ಹೊಸ ವ್ಯವಹಾರಗಳಲ್ಲಿ ಕೈ ಹಾಕದಿರಿ. ಸಹದ್ಯೋಗಿಗಳ ಸಹಕಾರ ಸಿಗಲಿದೆ. ಕೆಲಸದ ಸಂಬಂಧ ಪ್ರಯಾಣ ಲಾಭ ತರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2
ವೃಶ್ಚಿಕ: ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಪ್ರೀತಿ-ಪಾತ್ರರೊಡನೆ ಪ್ರಯಾಣ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ತಕ್ಕ ಮಟ್ಟಿಗಿನ ಲಾಭ ಸಿಗಲಿದೆ. ಆದರೆ ಇಂದು ಹೂಡಿಕೆ ಮಾಡುವಾಗ ಎಚ್ಚರಿಕೆ ವಹಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಧನಸ್ಸು: ನಿಮ್ಮ ಸಭ್ಯ ನಡವಳಿಕೆ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ನಿಮ್ಮ ಸಂಬಂಧಿಗಳ ಆರೋಗ್ಯದ ಕುರಿತು ವಿಚಾರ ಮಾಡುವಿರಿ. ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ
ಅದೃಷ್ಟ ಸಂಖ್ಯೆ: 1
ಮಕರ: ಜವಾಬ್ದಾರಿಗಳು ಹೆಚ್ಚಾಗಲಿವೆ. ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಉತ್ತಮವಾಗಿರಲಿದೆ. ಆದರೆ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ ಜೀವನದ ರಕ್ಷಣೆ ನಿಮ್ಮ ನಿಜವಾದ ಹೊಣೆಗಾರಿಕೆಯೆಂದು ಅರ್ಥ ಮಾಡಿಕೊಳ್ಳಿ. ಬಂಧು ಮಿತ್ರರೊಡನೆ ಪ್ರೀತಿಯಿಂದ ವರ್ತಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಕುಂಭ: ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ಉತ್ಸಾಹ ಕಳೆಯಬಹುದು. ಆದಷ್ಟು ಕುಲದೇವರ ದರ್ಶನ ಹಾಗೂ ಆಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ಪಡೆಯಿರಿ.ಕುಟುಂಬದ ಸದಸ್ಯರ ವಿರೋಧದಿಂದಾಗಿ ಕಾರ್ಯದಲ್ಲಿ ಅಡೆತಡೆ ಉಂಟಾಗಲಿದೆ. ವ್ಯಾಪಾರ ವ್ಯವಹಾರ ನಡೆಸುವವರಿಗೆ ಉತ್ತಮ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಒತ್ತಡದ ವಾತಾವರಣ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6
ಮೀನ: ನಿಮ್ಮ ಕನಸು ನನಸಾಗುತ್ತದೆ. ಆದರೆ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com