Site icon Vistara News

Dina Bhavishya : ಈ ರಾಶಿಯವರು ಇಂದು ಭೂ, ಹೂಡಿಕೆ ವ್ಯವಹಾರಗಳಲ್ಲಿ ತೊಡಗಲೇಬೇಡಿ!

Astrology and investment

ಚಂದ್ರನು ಮಿಥುನ ರಾಶಿಯಯಿಂದ ಬುಧವಾರ ಕಟಕ ರಾಶಿಯನ್ನು ಪ್ರವೇಶಿಸಿದ್ದು, ಶುಕ್ರವಾರ ಬೆಳಗ್ಗೆವರೆಗೆ ಅಲ್ಲಿಯೇ ನೆಲೆಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ವೃಷಭ ರಾಶಿಯವರು ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ. ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ತುಸು ಹೆಚ್ಚೇ ಇದೆ. ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತರರನ್ನು ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಧನಸ್ಸು ರಾಶಿಯವರಿಗೆ ಅನೇಕ ದಿನಗಳಿಂದ ನನೆಗುದಿಗೆ ಬಿದ್ದಿರುವ ಕೋರ್ಟ್ ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಿಂಚಿತ್ತು ಕಾಳಜಿ ವಹಿಸುವುದು ಉತ್ತಮ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (30-11-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ.
ತಿಥಿ: ತದಿಗೆ 14:24 ವಾರ: ಗುರುವಾರ
ನಕ್ಷತ್ರ: ಆರಿದ್ರಾ 15:00 ಯೋಗ: ಶುಭ 20:13
ಕರಣ: ವಿಷ್ಟಿ (ಭದ್ರ) 14:24
ದಿನದ ವಿಶೇಷ: ಕನಕದಾಸ ಜಯಂತಿ, ಸಂಕಷ್ಟ ಚತುರ್ಥಿ

ಸೂರ್ಯೋದಯ : 06:25  ಸೂರ್ಯಾಸ್ತ : 05:51

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ನಿಮಗೆ ಈ ದಿನ ಒತ್ತಡದಿಂದ ಕೂಡಿದ ದಿನವಾಗಿದೆ. ಇದರ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ವೃಷಭ: ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ. ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ತುಸು ಹೆಚ್ಚೇ ಇದೆ. ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತರರನ್ನು ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಮಿಥುನ: ಉತ್ಸಾಹ ತುಂಬಿದ ವಾತಾವರಣ ನಿಮ್ಮದಾಗಲಿದೆ. ಇಂದು ನೀವು ಚೈತನ್ಯದಿಂದ ಇರುತ್ತೀರಿ. ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಅನಾವಶ್ಯಕ ಖರ್ಚು ಮಾಡಿ ಆಮೇಲೆ ಹಳಹಳಿಸುವುದು ಬೇಡ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡದ ವಾತಾವರಣ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಕಟಕ: ನೀವು ಇತರರನ್ನು ಶ್ಲಾಘಿಸುವ ಮೂಲಕ ಯಶಸ್ಸನ್ನು ಆನಂದಿಸುವ ಸಾಧ್ಯತೆ ಇದೆ. ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಹೆಚ್ಚಿದೆ. ಆರ್ಥಿಕವಾಗಿ ಪ್ರಗತಿ ಸಾಧಿಸುವಿರಿ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಸಿಂಹ: ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ ಹೆಚ್ಚಿಗೆ ಇರುವುದರಿಂದ ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಾಣುವಿರಿ. ಇಂದಿನ ಮಟ್ಟಿಗೆ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಕನ್ಯಾ: ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ. ಸಕಾರಾತ್ಮಕ ಆಲೋಚನೆಗಳು ನಿಮಗೆ ಪುಷ್ಟಿ ನೀಡಲಿವೆ. ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸದೃಢರಾಗುವಿರಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚಿಸುವ ಸಾಧ್ಯತೆ ಇದೆ. ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಕೊಂಚ ಮಟ್ಟಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ವೃಶ್ಚಿಕ: ಭವಿಷ್ಯದ ಜೀವನಕ್ಕಾಗಿ ಹೂಡಿಕೆ ಕುರಿತು ಆಲೋಚನೆ ಮಾಡುವಿರಿ. ಸ್ನೇಹಿತರೊಂದಿಗೆ ಆತ್ಮೀಯ ಮಾತುಕತೆ ನಡೆಸುವಿರಿ. ಸಂಗಾತಿಯಿಂದ ಸಲಹೆ ಪಡೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಧನಸ್ಸು: ಅನೇಕ ದಿನಗಳಿಂದ ನನೆಗುದಿಗೆ ಬಿದ್ದಿರುವ ಕೋರ್ಟ್ ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಿಂಚಿತ್ತು ಕಾಳಜಿ ವಹಿಸುವುದು ಉತ್ತಮ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಮಕರ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೋ ಮೂಲದಿಂದ ಧನಲಾಭವಾಗಲಿದೆ. ಹೀಗಾಗಿ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಕುಟುಂಬದ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಮಾತಿಗೆ ವಿರಾಮ ನೀಡಿ. ಉದ್ಯೋಗಿಗಳಿಗೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಕುಂಭ: ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡುವ ಸಾಧ್ಯತೆ ಇದೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದಲಿದ್ದೀರಿ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮೀನ: ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪವಾಗಲಿದೆ. ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನೂ ಸರಿಗೊಳಿಸಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ತುಸು ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version