Dina Bhavishya : ಸ್ವಲ್ಪ ಹುಷಾರು.. ಈ ರಾಶಿಯವರಿಗೆ ಇಂದು ಎದುರಾಗಲಿದೆ ಕಂಟಕ! - Vistara News

ಪ್ರಮುಖ ಸುದ್ದಿ

Dina Bhavishya : ಸ್ವಲ್ಪ ಹುಷಾರು.. ಈ ರಾಶಿಯವರಿಗೆ ಇಂದು ಎದುರಾಗಲಿದೆ ಕಂಟಕ!

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಕೃಷ್ಣ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಕಟಕ ರಾಶಿಯಿಂದ ಶನಿವಾರ ಸಿಂಹ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯ ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಆದರೆ ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಮಿಥುನ ರಾಶಿಯವರು ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಎದುರಾಗಲಿದೆ. ಈ ದಿವಸ ಗಾಬರಿಯಿಂದ ಇರುವ ಸಾಧ್ಯತೆ ಇದೆ. ರಸ್ತೆ ಅಪಘಾತದ ಸಾಧ್ಯತೆ ಇದ್ದು, ನಿಧಾನವಾಗಿ ವಾಹನ ಚಾಲನೆ ಮಾಡಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (4-11-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಕೃಷ್ಣ ಪಕ್ಷ
ತಿಥಿ:
ಸಪ್ತಮಿ 24:58 ವಾರ: ಶನಿವಾರ
ನಕ್ಷತ್ರ: ಪುನರ್ವಸು 07:56 ಯೋಗ:ಸಾಧ್ಯ 13:01
ಕರಣ: ವಿಷ್ಟಿ (ಭದ್ರ) 11:58 ಅಮೃತ ಕಾಲ: ಬೆಳಗ್ಗೆ 3:25 ರಿಂದ 5:11 ರವರೆಗೆ

ಸೂರ್ಯೋದಯ : 06:14  ಸೂರ್ಯಾಸ್ತ : 05:52

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರ್ಥಿಕವಾಗಿ ಬಲಿಷ್ಠರಾಗುವಿರಿ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಹಳೆಯ ಸ್ನೇಹಿತರ ಜತೆ ಕಾಲ ಕಳೆಯುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಪ್ರಯಾಣ ಮಾಡುವ ಸಾಧ್ಯತೆ ಇದೆ. ಅನಿರೀಕ್ಷಿತ ಲಾಭಗಳನ್ನು ಪಡೆಯುವಿರಿ. ಕುಟುಂಬ ಸದಸ್ಯರ ಬೆಂಬಲ ದೊರೆಯಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯಗಳಲ್ಲಿ ತೊಡಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಎದುರಾಗಲಿದೆ. ಈ ದಿವಸ ಗಾಬರಿಯಿಂದ ಇರುವ ಸಾಧ್ಯತೆ ಇದೆ. ರಸ್ತೆ ಅಪಘಾತದ ಸಾಧ್ಯತೆ ಇದೆ, ನಿಧಾನವಾಗಿ ವಾಹನ ಚಾಲನೆ ಮಾಡಿ. ಕುಟುಂಬ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವಿರಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಒತ್ತಡದ ಜೀವನಕ್ಕೆ ವಿಶ್ರಾಂತಿ ಸಿಗಲಿದೆ. ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ಅಗತ್ಯ ವಸ್ತುಗಳ ಖರೀದಿ ಮಾಡುವಿರಿ. ಸಹದ್ಯೋಗಿಗಳ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಮಾನಸಿಕ ಆರೋಗ್ಯ ಸದೃಢವಾಗಿರಲಿದೆ. ಅತಿ ಅವಶ್ಯಕ ಕೆಲಸದ ಕಾರಣ ದೈಹಿಕ ಶ್ರಮ ಇರಲಿದೆ. ಉದ್ಯೋಗಿಗಳಿಗೆ ಸಹಕಾರ ಸಿಗಲಿದೆ. ಆರೋಗ್ಯ ಉತ್ತಮವಾಗಿ ಇರಲಿದೆ. ಕೌಟುಂಬಿಕ ಕಲಹಗಳಿಗೆ ಧ್ವನಿ ಆಗುವುದು ಬೇಡ. ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ದೀರ್ಘಕಾಲದ ಪ್ರಯಾಣ ಮಾಡುವಿರಿ. ನಿರೀಕ್ಷೆಗೆ ತಕ್ಕಂತೆ ಫಲ ಸಿಗಲಿದೆ. ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಅವಕಾಶ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಕುಟುಂಬದಲ್ಲಿನ ಹಿರಿಯರೊಂದಿಗೆ ವಾದಕ್ಕೆ ಇಳಿಯುವುದು ಬೇಡ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹರಟೆಯಿಂದ ಕಾಲ ಹರಣ ಮಾಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವುದು. ಸಕರಾತ್ಮಕ ಆಲೋಚನೆ ಮಾಡುವಿರಿ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಉತ್ತಮ ಫಲಿತಾಂಶ ದೊರೆಯಲಿದೆ. ಆತ್ಮವಿಶ್ವಾಸ ಹೆಚ್ಚಲಿದೆ. ಕುಟುಂಬದ ಸದಸ್ಯರ ಮೇಲೆ ಕೋಪಗೊಳ್ಳುವುದು ಬೇಡ. ಆರೋಗ್ಯ ಮಧ್ಯಮ ಇರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿ ಇರಲಿದೆ. ಉದ್ಯೋಗಿಗಳಿಗೆ ಉತ್ತಮ ಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಪ್ರಮುಖ ಯೋಜನೆ ಕೈಗೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ನಿಮ್ಮ ವರ್ತನೆ ಇತರರಿಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಯಾರೊಂದಿಗೂ ಅತಿಯಾದ ಸಲುಗೆ ಬೇಡ. ಆತುರದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ಒತ್ತಡದ ಕೆಲಸದಿಂದ ಮುಕ್ತಿ ಸಿಗಲಿದೆ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವುದು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Sudha Murthy: ʼಹೆಣ್ಣುಮಕ್ಕಳಿಗೆ ಇದೊಂದು ಕೊಟ್ಟುಬಿಡಿ, ಪ್ಲೀಸ್‌ʼ ಎಂದ ಸುಧಾ ಮೂರ್ತಿ; ರಾಜ್ಯಸಭೆಯಲ್ಲಿ ಭಾಷಣಕ್ಕೆ ಮೋದಿ ಮೆಚ್ಚುಗೆ

Sudha Murthy: ಮಂಗಳವಾರ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸುಧಾ ಮೂರ್ತಿ, ಮಹಿಳೆಯರ ಆರೋಗ್ಯದ ಬಗ್ಗೆ ಮಾತನಾಡಿದರು. “ಒಂಬತ್ತರಿಂದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ನೀಡಲಾಗುವ ಗರ್ಭಕಂಠದ ಕ್ಯಾನ್ಸರ್‌ (Cervical cancer) ಪ್ರತಿರೋಧ ಲಸಿಕೆ (Cervical Vaccine) ಎಲ್ಲರಿಗೂ ಒದಗಿಸುವ ತೀವ್ರ ಅವಶ್ಯಕತೆ ಇದೆʼ ಎಂದು ಅವರು ಸರಕಾರವನ್ನು ಒತ್ತಾಯಿಸಿದರು.

VISTARANEWS.COM


on

sudha murthy pm narendra modi
Koo

ಹೊಸದಿಲ್ಲಿ: ರಾಜ್ಯಸಭೆಯಲ್ಲಿ (Rajya Sabha) ನೂತನ ಸಂಸದೆ ಸುಧಾ ಮೂರ್ತಿ (Sudha Murthy) ಅವರು ಮಾಡಿದ ಚೊಚ್ಚಲ ಭಾಷಣ (Speech) ಸಂಸದರ ಮೆಚ್ಚುಗೆಗೆ ಪಾತ್ರವಾಯಿತು. ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಶ್ಲಾಘನೆ ವ್ಯಕ್ತಪಡಿಸಿದರು.

ಮಂಗಳವಾರ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸುಧಾ ಮೂರ್ತಿ, ಮಹಿಳೆಯರ ಆರೋಗ್ಯದ ಬಗ್ಗೆ ಮಾತನಾಡಿದರು. “ಒಂಬತ್ತರಿಂದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ನೀಡಲಾಗುವ ಗರ್ಭಕಂಠದ ಕ್ಯಾನ್ಸರ್‌ (Cervical cancer) ಪ್ರತಿರೋಧ ಲಸಿಕೆ (Cervical Vaccine) ಎಲ್ಲರಿಗೂ ಒದಗಿಸುವ ತೀವ್ರ ಅವಶ್ಯಕತೆ ಇದೆʼ ಎಂದು ಅವರು ಸರಕಾರವನ್ನು ಒತ್ತಾಯಿಸಿದರು. ತಮ್ಮ ತಂದೆಯ ಮಾತನ್ನು ಉಲ್ಲೇಖಿಸಿದ ಅವರು, ʼತಾಯಿ ಸತ್ತಾಗ ಅದನ್ನು ಆಸ್ಪತ್ರೆಯಲ್ಲಿ ಒಂದು ಸಾವು ಎಂದು ಪರಿಗಣಿಸಲಾಗುತ್ತದೆ. ಆದರೆ ಒಂದು ಕುಟುಂಬ ತಾಯಿಯನ್ನು ಶಾಶ್ವತವಾಗಿ ಕಳೆದುಕೊಳ್ಳುತ್ತದೆ. ಹೀಗಾಗಿ ಮಹಿಳೆಯ ಆರೋಗ್ಯ ಅತ್ಯಂತ ಮುಖ್ಯʼ ಎಂದು ಹೇಳಿದರು.

ಗರ್ಭಕಂಠದ ಕ್ಯಾನ್ಸರ್ ವಿರುದ್ಧ ಹೋರಾಡಲು ಸರ್ಕಾರ ಪ್ರಾಯೋಜಿತ ಲಸಿಕೆ ಕಾರ್ಯಕ್ರಮಕ್ಕಾಗಿ ಸುಧಾ ಮೂರ್ತಿ ಒತ್ತಾಯಿಸಿದರು. “ಒಂಬತ್ತರಿಂದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ನೀಡಲಾಗುವ ಸರ್ವಿಕಲ್‌ ಗರ್ಭಕಂಠದ ಲಸಿಕೆ ಅಭಿಯಾನವನ್ನು ನಾವು ಉತ್ತೇಜಿಸಬೇಕು. ಅದರಿಂದ ಗರ್ಭಕೊರಳಿನ ಕ್ಯಾನ್ಸರ್ ತಪ್ಪಿಸಬಹುದು. ನಮ್ಮ ಪ್ರಯೋಜನಕ್ಕಾಗಿ ನಾವು ಲಸಿಕೆಯನ್ನು ಉತ್ತೇಜಿಸಬೇಕು. ಕ್ಯಾನ್ಸರ್‌ ಚಿಕಿತ್ಸೆಗಿಂತ ತಡೆಗಟ್ಟುವಿಕೆ ಉತ್ತಮ” ಎಂದು ಅವರು ರಾಜ್ಯಸಭೆಯಲ್ಲಿ ತಮ್ಮ ಮೊದಲ ಭಾಷಣದಲ್ಲಿ ಹೇಳಿದರು.

“ಸರ್ಕಾರವು ಕೋವಿಡ್ ಸಮಯದಲ್ಲಿ ಬೃಹತ್‌ ವ್ಯಾಕ್ಸಿನೇಷನ್ ಅಭಿಯಾನವನ್ನು ನಿರ್ವಹಿಸಿದೆ. ಹೀಗೆಯೇ 9-14 ವರ್ಷ ವಯಸ್ಸಿನ ಹುಡುಗಿಯರಿಗೆ ಗರ್ಭಕಂಠದ ಲಸಿಕೆಯನ್ನು ನೀಡುವುದು ಕಷ್ಟಕರವಲ್ಲ. ಇದರ ಗುಣಮಟ್ಟ ತುಂಬಾ ಚೆನ್ನಾಗಿದೆ. ಇವತ್ತು ಅದರ ಬೆಲೆ ಸುಮಾರು ₹1,400 ಇದೆ. ಸರ್ಕಾರ ಮಧ್ಯಸ್ಥಿಕೆ ವಹಿಸಿದರೆ ₹700-800ಕ್ಕೆ ತರಬಹುದು. ನಮ್ಮಲ್ಲಿ ಇಷ್ಟು ದೊಡ್ಡ ಜನಸಂಖ್ಯೆಯಿರುವುದರಂದ ಭವಿಷ್ಯದಲ್ಲಿ ನಮ್ಮ ಸ್ತ್ರೀಯರಿಗೆ ಇದು ಪ್ರಯೋಜನಕಾರಿಯಾಗಿದೆ. ಗರ್ಭಕಂಠದ ಲಸಿಕೆಯನ್ನು ಪಶ್ಚಿಮದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಕಳೆದ 20 ವರ್ಷಗಳಿಂದ ಇದನ್ನು ಬಳಸಲಾಗುತ್ತಿದೆ” ಎಂದು ಅವರು ತಮ್ಮ 13 ನಿಮಿಷಗಳ ಭಾಷಣದಲ್ಲಿ ಹೇಳಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಮುನ್ನಾದಿನದಂದು ಅಧ್ಯಕ್ಷೆ ದ್ರೌಪದಿ ಮುರ್ಮು (President Draupadi Murmu) ಅವರು ಸುಧಾ ಮೂರ್ತಿಯವರನ್ನು ಮೇಲ್ಮನೆಗೆ ನಾಮನಿರ್ದೇಶನ ಮಾಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

“ಮಹಿಳೆಯರ ಆರೋಗ್ಯದ ಬಗ್ಗೆ ವಿವರವಾಗಿ ಮಾತನಾಡಿದ್ದಕ್ಕಾಗಿ ನಾನು ಸುಧಾ ಮೂರ್ತಿ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ” ಪಿಎಂ ಮೋದಿ ಹೇಳಿದರು. ತಾಯಂದಿರ ಕುರಿತು ಮೂರ್ತಿ ಅವರ “ಭಾವನಾತ್ಮಕ” ಹೇಳಿಕೆಯನ್ನು ಉಲ್ಲೇಖಿಸಿ, ಕಳೆದ 10 ವರ್ಷಗಳಲ್ಲಿ ತಮ್ಮ ಸರ್ಕಾರವು ಮಹಿಳೆಯರ ಆರೋಗ್ಯ ಮತ್ತು ನೈರ್ಮಲ್ಯವನ್ನು ಆದ್ಯತೆಯ ವಲಯವಾಗಿ ಕೇಂದ್ರೀಕರಿಸಿದೆ ಎಂದು ಹೇಳಿದರು.

ಕಳೆದ ವಾರ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಅಧ್ಯಕ್ಷೆ ದ್ರೌಪದಿ ಮುರ್ಮು ಮಾಡಿದ ಭಾಷಣಕ್ಕೆ ಧನ್ಯವಾದ ಸಲ್ಲಿಸುವ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಪ್ರಧಾನಿ ಮೋದಿ, “ನಮ್ಮ ದೇಶದ ಮಹಿಳೆಯರು ನಾವು ನಿರ್ಮಿಸಿದ ಶೌಚಾಲಯಗಳಿಂದ ಪ್ರಯೋಜನ ಪಡೆದಿದ್ದಾರೆ. ಸ್ಯಾನಿಟರಿ ಪ್ಯಾಡ್‌ಗಳನ್ನು ಅವರಿಗೆ ಒದಗಿಸಲಾಗಿದೆ. ಮಹಿಳೆಯರಿಗೆ ಗರ್ಭಾವಸ್ಥೆಯಲ್ಲಿ ನೀಡಲಾಗುವ ಲಸಿಕೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: Sudha Murthy : ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರತಿಜ್ಞೆ ಸ್ವೀಕರಿಸಿದ ಸುಧಾ ಮೂರ್ತಿ; ನಾರಾಯಣಮೂರ್ತಿ ಸಾಥ್‌

Continue Reading

ಕರ್ನಾಟಕ

Physical Abuse: ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

Physical Abuse: ಕೂಲಿ ಕೆಲಸ ಮಾಡುವವರ ಮಗಳಾದ ಬಾಲಕಿಯನ್ನು ರೈಲ್ವೆ ಸ್ಟೇಷನ್ ಪಾರ್ಕಿಂಗ್‌ನಲ್ಲೇ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

VISTARANEWS.COM


on

Physical Abuse
Koo

ಬೆಂಗಳೂರು: ನಗರದಲ್ಲಿ ಮತ್ತೊಂದು ರೇಪ್ ಆ್ಯಂಡ್ ಮರ್ಡರ್ ಕೇಸ್‌ ನಡೆದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಘಟನೆ (Physical Abuse) ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಕೂಲಿ ಕೆಲಸ ಮಾಡುವ ದಂಪತಿಯ 6 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಗಳು, ನಂತರ ಕೊಲೆ ಮಾಡಿ ಪಾರ್ಕಿಂಗ್‌ ಪ್ರದೇಶದ ಮರವೊಂದರ ಬಳಿ ಶವ ಎಸೆದಿದ್ದಾರೆ. ರಾತ್ರಿ ವೇಳೆ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪಾರ್ಕಿಂಗ್ ಲಾಟ್‌ನಲ್ಲಿದ್ದರೂ ಬಾಲಕಿ ಕೊಲೆ ವಿಚಾರ ಬೆಳಕಿಗೆ ಬಂದಿರಲಿಲ್ಲ. ಜನರು ಓಡಾಡುತ್ತಿದ್ದರೂ ಯಾರೂ ಗಮನ ಹರಿಸಿರಲಿಲ್ಲ. ಮೈ ಮೇಲೆ ಪರಚಿದ ಗಾಯಗಳು ಹಾಗು ರಕ್ತಸಿಕ್ತ ಬಟ್ಟೆಗಳಿಂದ ಬಾಲಕಿ ಶವ ಕಂಡುಬಂದಿದೆ. ಸದ್ಯ ಬಾಲಕಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಈ ಬಗ್ಗೆ ರೈಲ್ವೆ ಎಸ್ ಪಿ ಡಾ. ಸೌಮ್ಯ ಲತಾ ಅವರು ಪ್ರತಿಕ್ರಿಯಿಸಿ, ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ನಲ್ಲಿ ಒಂದು ಹೆಣ್ಣು ಮಗವಿನ ಮೃತ ದೇಹ ಸಿಕ್ಕಿದೆ. ನಮ್ಮ ಸಿಬ್ಬಂದಿ ಬಂದು ತಿಳಿಸಿದ್ದು, ಪರಿಶೀಲನೆ ನಡೆಸಲಾಗಿದೆ. ದೇಹದ ಮೇಲೆ ಸಾಕಾಷ್ಟು ಗಾಯಗಳಾಗಿವೆ, ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆ ಮಾಡಿ ಎಲ್ಲಿಂದಲ್ಲೋ ತಂದು ಇಲ್ಲಿ ಎಸೆಯಲಾಗಿದೆ. ಭಿಕ್ಷಾಟನೆ ಮಾಡುತ್ತಿದ್ದ ಕುಟುಂಬದ ಮಗು ಎಂದು ತಿಳಿದು ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Actor Darshan: ಮಗುವನ್ನು ಕೈದಿ ಮಾಡಿದವರಿಗೆ ಕಾನೂನು ಕಂಟಕ; ಪಾಲಕರಿಗೆ ನೋಟಿಸ್‌!

Murder Case: ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

bangalore murder case

ಬೆಂಗಳೂರು: ಬೆಂಗಳೂರಿನಲ್ಲಿ‌ ಇನ್ನೊಂದು ಬರ್ಬರ ಹತ್ಯೆ (Murder Case) ನಡೆದಿದೆ. ಅಜಿತ್‌ ಎಂಬ ವ್ಯಕ್ತಿ ಕೊಲೆಯಾದವನು. ಹಣಕಾಸಿನ ವಿಚಾರದಲ್ಲಿ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ.

ಪುಲಿಕೇಶಿನಗರ ಕಾಕ್ಸ್ ಟೌನ್ ಬಳಿ ಅಜಿತ್‌ (35) ಬರ್ಬರ ಹತ್ಯೆಯಾಗಿದೆ. ಬಡ್ಡಿ ವ್ಯವಹಾರದ ಕಾರಣದಿಂದ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಕೊಲೆಯಾದ ವ್ಯಕ್ತಿ ಬಾಣಸವಾಡಿಯಲ್ಲಿ ವಾಸವಾಗಿದ್ದು, ಕೆಲವರ ಬಳಿ ಬಡ್ಡಿಗಾಗಿ ಹಣ ಪಡೆದಿದ್ದ. ಹಣ ಕೊಡದೆ ಸತಾಯಿಸುತ್ತಿದ್ದ ಎಂಬ ಕಾರಣಕ್ಕೆ ಕೊಲೆ ಮಾಡಿರುವ ಶಂಕೆ ಇದೆ. ಘಟನಾ ಸ್ಥಳಕ್ಕೆ ಪುಲಿಕೇಶಿನಗರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಪುಲಿಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಗುಂಟೆ ಸರ್ಕಲ್ ಬಳಿ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿದೆ. ದೊಡ್ಡಗುಬ್ಬಿ ಬಳಿಯ ಐಟಿಸಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಅಜಿತ್, ಕೆಲಸ ಮುಗಿಸಿ ವಾಪಸ್ ಮನೆಗೆ ಬರುವಾಗ ಮನೆ ಮುಂಭಾಗದಲ್ಲೇ ಕೊಲೆ ಮಾಡಲಾಗಿದೆ. ಡ್ಯೂಟಿ ಮುಗಿಸಿ ಬಟ್ಟೆ ಬದಲಿಸಲು ಆಗಮಿಸಿದ್ದ ವೇಳೆ ಅಟ್ಯಾಕ್ ಮಾಡಿದ ನಾಲ್ಕೈದು ಮಂದಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ.

ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

ಮಗನ ಕುಡಿತದಿಂದ ಉಂಟಾಗಿರುವ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಹಿರಿಯ ವಯಸ್ಸಿನ ಪೋಷಕರು ಆತ್ಮಹತ್ಯೆ (Suicide News ) ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಘಟನೆ ನಡೆದಿದೆ. ಚಂದ್ರಶೇಖರ್ (54) ಹಾಗೂ ಶಾರದಮ್ಮ ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಮಗ ಪ್ರಶಾಂತನಿಗೆ ವರ್ಷಗಳ ಹಿಂದೆ ಮದುವೆ ಮಾಡಿದ್ದರು. ಆದರೆ ಮಗ ಕುಡಿತದಿಂದ ಮನೆ ಬರೋದು ಕಡಿಮೆ ಮಾಡಿದ್ದ, ಇದರಿಂದ ನೊಂದು ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತನ ಹೆಂಡತಿ ಮನೆ ಬಿಟ್ಟು ತವರು ಮನೆ ಸೇರಿದ್ದರು. ಇದರಿಂದ‌ ಮಗನ‌ ಬಾಳು ಹೀಗಾಯಿತು ಎಂದು ನೊಂದು ಕೊಂಡಿದ್ದರು.

ಇದನ್ನೂ ಓದಿ: Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

ಸೋಮವಾ ಎರಡನೇ‌ ಮಗನನ್ನ ಅಂಗಡಿ ಕಳಿಸಿ ದಂಪತಿ ನೇಣಿಗೆ ಶರಣಾಗಿದ್ದರು. ಮಗ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರು ಹೊಸಕೋಟೆ ಮೂಲದವರು. ಅವರು ಹಲವು ವರ್ಷಗಳಿಂದ‌ ಹಳೆ ಬೈಯಪ್ಪನಹಳ್ಳಿ ಯಲ್ಲಿ ವಾಸ ಮಾಡಿಕೊಂಡಿದ್ದರು. ಬೆಂಗಳೂರಿನಲ್ಲೊ ಕೂಲಿ ಕೆಲಸ ಮಾಡಿಕೊಂಡಿದ್ದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ದೇಶ

Nitin Gadkari: ರಸ್ತೆಗಿಳಿಯಲಿದೆ 132 ಸೀಟು, ಹೋಸ್ಟೆಸ್‌ ಒಳಗೊಂಡ ಬಸ್‌; ಸಾರಿಗೆ ವಲಯದಲ್ಲಿನ ಯೋಜನೆ ವಿವರಿಸಿದ ಸಚಿವ ನಿತಿನ್‌ ಗಡ್ಕರಿ

Nitin Gadkari: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಸಾರಿಗೆ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಮುಂದಾಗಿದ್ದಾರೆ. ”132 ಸೀಟುಗಳ ಬಸ್‌ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಇದರಲ್ಲಿ ವಿಮಾನದಲ್ಲಿರುವಂತೆ ಸಕಲ ಸೌಲಭ್ಯಗಳೂ ಇರಲಿದೆ. ಏರ್‌ ಹೋಸ್ಟೆಸ್‌ನಂತೆ ಬಸ್‌ ಹೋಸ್ಟೆಸ್‌ಗಳೂ ಕಾರ್ಯ ನಿರ್ವಹಿಸಲಿದ್ದು, ಈ ಬಸ್‌ನಿಂದ ಪರಿಸರಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Nitin Gadkari
Koo

ಮುಂಬೈ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ (Nitin Gadkari) ಅವರು ಸಾರಿಗೆ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಮುಂದಾಗಿದ್ದಾರೆ. ”132 ಸೀಟುಗಳ ಬಸ್‌ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಇದರಲ್ಲಿ ವಿಮಾನದಲ್ಲಿರುವಂತೆ ಸಕಲ ಸೌಲಭ್ಯಗಳೂ ಇರಲಿದೆ. ಏರ್‌ ಹೋಸ್ಟೆಸ್‌ನಂತೆ ಬಸ್‌ ಹೋಸ್ಟೆಸ್‌ಗಳೂ ಕಾರ್ಯ ನಿರ್ವಹಿಸಲಿದ್ದು, ಈ ಬಸ್‌ನಿಂದ ಪರಿಸರಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ” ಎಂದು ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ʼʼಪರಿಸರ ಮಾಲಿನ್ಯ ಎನ್ನುವುದು ಸದ್ಯ ದೇಶ, ಜಗತ್ತು ಎದುರಿಸುವ ಬಹುದೊಡ್ಡ ಸಮಸ್ಯೆ. ಹೀಗಾಗಿ ಸರ್ಕಾರ ಪರಿಸರಕ್ಕೆ ಹಾನಿ ಉಂಟು ಮಾಡದ ಪರ್ಯಾಯ ವ್ಯವಸ್ಥೆಗಳಿಗೆ ಒತ್ತು ನೀಡಲಿದೆ. ಅದರ ಭಾಗವಾಗಿ ಸಾರ್ವಜನಿಕ ಸಾರಿಗೆ ವಿಭಾಗದಲ್ಲಿಯೂ ಅಮೂಲಾಗ್ರ ಬದಲಾವಣೆ ಜಾರಿಗೆ ತರಲಾಗುವುದುʼʼ ಎಂದು ಹೇಳಿದ್ದಾರೆ.

ಕನಸಿನ ಯೋಜನೆ

ಈ ವೇಳೆ ಅವರು ತಮ್ಮ ಕನಸಿನ 132 ಸೀಟುಗಳ ಬಸ್‌ನ ಯೋಜನೆ ಬಗ್ಗೆ ಮಾಹಿತಿ ನೀಡಿದ್ದಾರೆ. ʼʼ132 ಆಸನಗಳ ಬಸ್ ಅನ್ನು‌ ಪಚಯಿಸಲು ಮುಂದಾಗಿದ್ದೇವೆ. ಇದರ ಪ್ರಾಯೋಗಿಕ ಸಂಚಾರ ನಾಗ್ಪುರದಲ್ಲಿ ನಡೆಯಲಿದೆ. ಈ ಬಸ್‌ ವಿಮಾನದಂತಹ ಆಸನ ಮತ್ತು ಬಸ್ ಹೋಸ್ಟೆಸ್ ಅನ್ನು ಒಳಗೊಂಡಿದೆ. ಸಾಮಾನ್ಯ ಡೀಸೆಲ್ ಬಸ್‌ಗಳಿಗಿಂತ ಅಗ್ಗವಾಗಿರಲಿದೆ. ಮಾಲಿನ್ಯರಹಿತ ಶಕ್ತಿಯ ಮೂಲಗಳಲ್ಲಿ ಚಲಿಸಲಿದೆʼʼ ಎಂದು ವಿವರಿಸಿದ್ದಾರೆ. ʼʼಭಾರತವನ್ನು ಇಂಧನದ ಆಮದುದಾರ ದೇಶವನ್ನಾಗಿಸುವ ಬದಲು ಬದಲು ರಫ್ತುದಾರ ದೇಶವನ್ನಾಗಿಸುವುದೇ ನಮ್ಮ ಸರ್ಕಾರದ ಗುರಿʼʼ ಎಂದು ಅವರು ತಿಳಿಸಿದ್ದಾರೆ.

ಪರಿಸರ ಮಾಲಿನ್ಯ ಪ್ರಮುಖ ಸಮಸ್ಯೆ

ʼʼನಾವು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಪರಿಸರ ಮಾಲಿನ್ಯ ಮುಖ್ಯವಾದುದು. ದೇಶದಲ್ಲಿ ಅದರಲ್ಲಿಯೂ ರಾಜಧಾನಿ ದೆಹಲಿಯಲ್ಲಿ ವಾಯು, ಜಲ, ಶಬ್ದ ಮಾಲಿನ್ಯ ಮಿತಿ ಮೀರಿದೆ. ಹೀಗಾಗಿ ನಾವು ಮಾಲಿನ್ಯ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಹೀಗಾಗಿ ಕಡಿಮೆ ವೆಚ್ಚದ, ಪರಿಸರ ಸ್ನೇಹಿ ಸಂಚಾರ ವ್ಯವಸ್ಥೆ ಪರಿಚಯಿಸಲು ಚಿಂತನೆ ನಡೆಸಿದ್ದೇವೆ. ಅದರ ಭಾಗವಾಗಿ ಇಂಡಿಯನ್ ಆಯಿಲ್ 300 ಎಥೆನಾಲ್ ಪಂಪ್‌ಗಳನ್ನು ಸ್ಥಾಪಿಸಲಿದೆ. ಹೊಸ ಮಾದರಿಯ ವಾಹನ ನಿರ್ಮಾಣಕ್ಕೆ ತಯಾರಕರೂ ಮುಂದಾಗಿದ್ದಾರೆ. ಆದ್ದರಿಂದ 100 ರೂ. ಕೊಟ್ಟು ಒಂದು ಲೀಟರ್‌ ಪೆಟ್ರೋಲ್ ಖರೀದಿಸುವ ಬದಲು, 60 ರೂ. ಪಾವತಿಸಿ ಎಥೆನಾಲ್ ಖರೀದಿಸಬಹುದು. ಈ ಹೊಸ ಮಾದರಿಯ ವಾಹನವು ಶೇ. 60 ವಿದ್ಯುತ್ ಮತ್ತು ಶೇ. 40ರಷ್ಟು ಎಥೆನಾಲ್‌ನಲ್ಲಿ ಚಲಿಸಲಿದೆ. ಇದು ಮಾಲಿನ್ಯವನ್ನು ಸಹ ಕಡಿಮೆ ಮಾಡುತ್ತದೆ” ಎಂದು ಸಚಿವರು ಹೇಳಿದ್ದಾರೆ.

“ನಾವು ಟಾಟಾ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು ನಾಗ್ಪುರದಲ್ಲಿ ಪ್ರಾಯೋಗಿಕ ಯೋಜನೆಯನ್ನು ಜಾರಿಗೊಳಿಸಲಿದ್ದೇವೆ. ಜೆಕ್ ಗಣರಾಜ್ಯದಲ್ಲಿ ಮೂರು ಬಸ್ಸುಗಳನ್ನು ಸೇರಿಸಿ ಓಡಿಸುತ್ತಾರೆ. ಅದರಂತೆ ನಮ್ಮ ಈ ಯೋಜನೆ 132 ಸೀಟುಗಳ ಬಸ್‌ ಅನ್ನು ಹೊಂದಿದೆ. ಈ ಬಸ್‌ ರಿಂಗ್ ರಸ್ತೆಯಲ್ಲಿ 49 ಕಿ.ಮೀ. ಪ್ರಯಾಣಿಸುತ್ತದೆ. ಕೇವಲ 40 ಸೆಕೆಂಡು ಚಾರ್ಜ್ ಮಾಡಿದರೆ 40 ಕಿ.ಮೀ. ದೂರ ಸಂಚರಿಸಲಿದೆʼʼ ಎಂದು ಗಡ್ಕರಿ ತಿಳಿಸಿದ್ದಾರೆ.

ಬಸ್‌ನ ವೈಶಿಷ್ಟ್ಯ

“ಬಸ್‌ನಲ್ಲಿ ಎಲ್ಲ ಸೌಲಭ್ಯಗಳನ್ನು ಅಳವಡಿಸುವಂತೆ ಸೂಚಿಸಿದ್ದೇನೆ. ಸೀಟಿನ ಮುಂದೆ ಲ್ಯಾಪ್‌ಟಾಪ್‌ ಇಡಲು ಸ್ಥಳಾವಕಾಶ, ಹವಾನಿಯಂತ್ರಣ ವ್ಯವಸ್ಥೆ, ಆರಾಮದಾಯಕ ಕುರ್ಚಿಗಾಗಿ ಬೇಡಿಕೆ ಇಟ್ಟಿದ್ದೇನೆ. ಏರ್ ಹೋಸ್ಟೆಸ್‌ಗಳಂತೆ ಪ್ರಯಾಣಿಕರಿಗೆ ಹಣ್ಣು, ಪ್ಯಾಕ್ ಮಾಡಿದ ಆಹಾರ ಮತ್ತು ಪಾನೀಯಗಳನ್ನು ನೀಡಲು ಬಸ್ ಹೋಸ್ಟೆಸ್‌ಗಳು ಇರಲಿದ್ದಾರೆ. ನನ್ನ ಲೆಕ್ಕಾಚಾರದ ಪ್ರಕಾರ ಈ ಬಸ್‌ನ ವೆಚ್ಚ ಡೀಸೆಲ್ ಬಸ್‌ಗಿಂತ ಶೇ. 30ರಷ್ಟು ಕಡಿಮೆ ಇರಲಿದೆ. ಸೌರಶಕ್ತಿಯನ್ನು ಬಳಸಿದರೆ, ವೆಚ್ಚ ಇನ್ನೂ ಕಡಿಮೆಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

ತಮ್ಮ ಸಲಹೆಯನ್ನು ಸ್ವೀಕರಿಸಿದ್ದಕ್ಕಾಗಿ ಪೆಟ್ರೋಲಿಯಂ ಸಚಿವ ಹರ್ದೀಪ್ ಪುರಿ ಅವರಿಗೆ ಧನ್ಯವಾದ ಅರ್ಪಿಸಿದ ಗಡ್ಕರಿ, ʼʼಇಂಡಿಯನ್ ಆಯಿಲ್ ಕಸದಿಂದ 1 ಲಕ್ಷ ಲೀಟರ್ ಎಥೆನಾಲ್ ಮತ್ತು ಜೈವಿಕ ಬಿಟುಮೆನ್ ಉತ್ಪಾದಿಸುವ ಯೋಜನೆಯನ್ನು ಪ್ರಾರಂಭಿಸಿದೆ. 76,000 ಟನ್ ಜೈವಿಕ ವಾಯುಯಾನ ಇಂಧನವನ್ನು ಸಹ ಉತ್ಪಾದಿಸುತ್ತದೆʼʼ ಎಂದಿದ್ದಾರೆ.

ಇದನ್ನೂ ಓದಿ: Nitin Gadkari : ಕೆಟ್ಟದಾಗಿರುವ ಹೈವೆಗಳಿಗೆ ಟೋಲ್​ ಶುಲ್ಕ ಕಟ್ಟಬೇಡಿ; ನಿತಿನ್​ ಗಡ್ಕರಿ ಸೂಚನೆ

Continue Reading

Latest

Amarnath Tragedy: ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು! ವಿಡಿಯೊ ಇದೆ

Amarnath Tragedy: ಅಮರನಾಥ ಯಾತ್ರೆಗೆ ತೆರಳಿದವರಿಗೆ ದುರಂತವೊಂದು ಎದುರಾಗಿದೆ. ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದ ಕೆಲವು ಯಾತ್ರಾರ್ಥಿಗಳು ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಚಲಿಸುತ್ತಿರುವ ಬಸ್ಸಿನಿಂದ ಜಿಗಿದು ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಸ್‌ ಬ್ರೇಕ್ ಫೇಲ್ ಆದ ಕಾರಣ ಬನಿಹಾಲ್ ಬಳಿಯ ನಾಚ್ಲಾನಾ ಬಳಿ ಚಾಲಕನಿಗೆ ಬಸ್ ಅನ್ನು ನಿಯಂತ್ರಿಸಲು ಆಗಲಿಲ್ಲ. ಇದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಭಯಗೊಂಡು ತಮ್ಮ ಜೀವ ಉಳಿಸಿಕೊಳ್ಳಲು ಬಸ್ಸಿನಿಂದ ಜಿಗಿದು ಗಾಯಗೊಂಡಿದ್ದಾರೆ.

VISTARANEWS.COM


on

Amarnath Tragedy
Koo

ಶ್ರೀನಗರ : ಪ್ರತಿವರ್ಷ ಅಮರನಾಥ ಯಾತ್ರೆಗೆ (Amarnath Tragedy) ಹಲವಾರು ಮಂದಿ ಯಾತ್ರಾರ್ಥಿಗಳು ಪ್ರಯಾಣ ಮಾಡುತ್ತಿರುತ್ತಾರೆ. ಆದರೆ ಇತ್ತೀಚೆಗೆ ಅಮರನಾಥ ಯಾತ್ರೆಗೆ ತೆರಳಿದವರಿಗೆ ದುರಂತವೊಂದು ಎದುರಾಗಿದೆ. ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದ ಕೆಲವು ಯಾತ್ರಾರ್ಥಿಗಳು ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಚಲಿಸುತ್ತಿರುವ ಬಸ್ಸಿನಿಂದ ಜಿಗಿದು ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅನೇಕರು ವಿಡಿಯೊ ನೋಡಿ ಶಾಕ್ ಆಗಿದ್ದಾರೆ.

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಪಂಜಾಬ್‌ನ ಹೋಶಿಯಾರ್ಪುರಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಹದಿನೇಳು ಮಂದಿ ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಒಟ್ಟು 45 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಆದರೆ ರಸ್ತೆ ಮಧ್ಯದಲ್ಲಿ ಬಸ್‌ನ ಬ್ರೇಕ್ ಫೇಲ್ ಆಗಿದೆ. ಇದರ ಪರಿಣಾಮ ಬನಿಹಾಲ್ ಬಳಿಯ ನಾಚ್ಲಾನಾ ಬಳಿ ಚಾಲಕನಿಗೆ ಬಸ್ ಅನ್ನು ನಿಯಂತ್ರಿಸಲು ಆಗಲಿಲ್ಲ. ಇದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಭಯಗೊಂಡು ತಮ್ಮ ಜೀವ ಉಳಿಸಿಕೊಳ್ಳಲು ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಹಲವಾರು ಪ್ರಯಾಣಿಕರು ಬಸ್ಸಿನಿಂದ ಜಿಗಿದ ಗಾಯಗೊಂಡಿದ್ದಾರೆ.

ವಿಡಿಯೊದಲ್ಲೊ ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಪ್ರಯಾಣಿಕರು ಒಬ್ಬರಾಗಿಯೇ ಜಿಗಿದು ಕೆಳಗೆ ಬೀಳುತ್ತಿದ್ದಾರೆ. ಹಾಗೇ ಬಿದ್ದ ಪ್ರಯಾಣಿಕರಲ್ಲಿ ಕೆಲವರು ತಮ್ಮವರನ್ನು ಕಾಪಾಡಲು ಬಸ್ಸಿನ ಹಿಂದೆ ಓಡುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಪೊಲೀಸರು ಸೇನೆಯ ಜೊತೆಗೆ ಬಸ್ ಇದ್ದ ಕಡೆ ಬಂದು ತ್ವರಿತ ಕ್ರಮ ತೆಗೆದುಕೊಂಡಿದ್ದಾರೆ. ಸೈನಿಕರು ಬಸ್ ಅನ್ನು ನಿಲ್ಲಿಸಲು ಮತ್ತು ಹತ್ತಿರದ ಹೊಳೆಗೆ ಹೋಗದಂತೆ ತಡೆಯಲು ಕಲ್ಲುಗಳನ್ನು ಬಸ್‌ ನ ಚಕ್ರದ ಕೆಳಗೆ ಇಟ್ಟಿದ್ದಾರೆ. ಇದರಿಂದ ಆಗಬಹುದಾದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಸೇನೆಯ ತಂಡಗಳು, ಆಂಬ್ಯುಲೆನ್ಸ್ ನೊಂದಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುಗಳಿಗೆ ವೈದ್ಯಕೀಯ ನೆರವು ಮತ್ತು ಪ್ರಥಮ ಚಿಕಿತ್ಸೆಯನ್ನು ನೀಡಿದ್ದಾರೆ.

Amarnath Tragedy

ಇದನ್ನೂ ಓದಿ: ನೀವೂ ಕೂಡ ನಿಮ್ಮ ಹೆಂಡತಿಯನ್ನು ಇವರಂತೆ ಪ್ರೀತಿಸಬಲ್ಲಿರಾ? ಈ ಫೋಟೊ, ವಿಡಿಯೊ ನೋಡಿ ಹೇಳಿ!

ಈ ಹಿಂದೆ ಈ ವರ್ಷದ ಜೂನ್ ತಿಂಗಳಿನಲ್ಲಿ ಭಯೋತ್ಪಾದಕರು ಶಿವಖೋರಿ ದೇವಸ್ಥಾನದಿಂದ ಮಾತಾ ವೈಷ್ಣೋದೇವಿ ದೇಗುಲಕ್ಕೆ ಹಿಂದಿರುಗುತ್ತಿದ್ದ ಪ್ರಯಾಣಿಕರಿದ್ದ ಬಸ್‌ನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಭಯೋತ್ಪಾದಕರ ಗುಂಡಿನ ದಾಳಿಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತಕ್ಕೀಡಾಗಿ ಕಂದಕಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದರು.

Continue Reading
Advertisement
sudha murthy pm narendra modi
ಪ್ರಮುಖ ಸುದ್ದಿ1 min ago

Sudha Murthy: ʼಹೆಣ್ಣುಮಕ್ಕಳಿಗೆ ಇದೊಂದು ಕೊಟ್ಟುಬಿಡಿ, ಪ್ಲೀಸ್‌ʼ ಎಂದ ಸುಧಾ ಮೂರ್ತಿ; ರಾಜ್ಯಸಭೆಯಲ್ಲಿ ಭಾಷಣಕ್ಕೆ ಮೋದಿ ಮೆಚ್ಚುಗೆ

James Anderson
ಕ್ರೀಡೆ6 mins ago

James Anderson: 41ನೇ ವಯಸ್ಸಿನಲ್ಲಿಯೂ 7 ವಿಕೆಟ್​ ಕಿತ್ತ ಜೇಮ್ಸ್ ಆಂಡರ್ಸನ್

Mangalore News
ಕರ್ನಾಟಕ16 mins ago

Mangalore News: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

Parliament Sessions
ದೇಶ25 mins ago

Parliament Sessions: “ಕಾಂಗ್ರೆಸ್‌ನದ್ದು ರಿಮೋಟ್‌ ಕಂಟ್ರೋಲ್‌ ಸರ್ಕಾರ”-ಸೋನಿಯಾ ವಿರುದ್ಧ ಮೋದಿ ವಾಗ್ಬಾಣ

Physical Abuse
ಕರ್ನಾಟಕ1 hour ago

Physical Abuse: ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

Narendra Modi
ದೇಶ1 hour ago

Narendra Modi: ಮುಂದಿನ 5 ವರ್ಷ ಬಡತನ ವಿರುದ್ಧದ ಹೋರಾಟಕ್ಕೆ ಮೀಸಲು; ರಾಜ್ಯಸಭೆಯಲ್ಲಿ ಮೋದಿ ಭರವಸೆ

Double Ismart Steppa Maar electrifies with mass beats
ಟಾಲಿವುಡ್1 hour ago

Double Ismart: ಪ್ರಚಾರ ಅಖಾಡದಲ್ಲಿ ‘ಡಬಲ್ ಇಸ್ಮಾರ್ಟ್’: ಮೊದಲ ಹಾಡು ರಿಲೀಸ್!

Actor Darshan
ಕರ್ನಾಟಕ2 hours ago

Actor Darshan: ಮಗುವನ್ನು ಕೈದಿ ಮಾಡಿದವರಿಗೆ ಕಾನೂನು ಕಂಟಕ; ಪಾಲಕರಿಗೆ ನೋಟಿಸ್‌!

IPL 2025
ಕ್ರೀಡೆ2 hours ago

IPL 2025: ಮುಂದಿನ ವರ್ಷ ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ?

Kannada New Movie kannnajaru teaser teaser Out
ಸಿನಿಮಾ2 hours ago

Kannada New Movie: ‘ಕಣಂಜಾರು’ ಟೀಸರ್ ಮೆಚ್ಚಿದ ಚಂದನವನ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ20 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌