Site icon Vistara News

Dina Bhavishya : ಆಪ್ತರೊಂದಿಗೆ ಅತಿಯಾದ ಸಲುಗೆ ಈ ರಾಶಿಯವರಿಗೆ ಒಳ್ಳೆಯದಲ್ಲ!

Dina Bhavishya

ಚಂದ್ರನು ಭಾನುವಾರವೂ ವೃಷಭ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯ ಅಪರೂಪದ ವ್ಯಕ್ತಿಗಳ ಪರಿಚಯದಿಂದಾಗಿ ಅನೇಕ ವಿಚಾರಗಳು ಮನಸ್ಸಿನ ಆಳಕ್ಕೆ ಇಳಿಯಲಿದೆ. ಮಿಥುನ ರಾಶಿಯವರು ಯಾರನ್ನೂ ನಂಬಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕನ್ಯಾ ರಾಶಿಯವರಿಗೆ ಬಹಳ ದಿನಗಳಿಂದ ಬರದೆ ಇರುವ ನಿಮ್ಮ ಹಣ ಮರಳುವ ಸಾಧ್ಯತೆ ಇದೆ. ತುಲಾ ರಾಶಿಯವರು ಅನಿವಾರ್ಯ ಕಾರಣಗಳಿಂದ ನೀವು ಇತರರೊಂದಿಗೆ ಜಗಳಕ್ಕೆ ಇಳಿಯುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (1-10-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ.
ತಿಥಿ:
ಬಿದಿಗೆ 09:41 ವಾರ: ಭಾನುವಾರ
ನಕ್ಷತ್ರ: ಅಶ್ವಿನಿ 19:26 ಯೋಗ: ವ್ಯಾಘಾತ 13:12
ಕರಣ: ಗರಜ 09:41 ಅಮೃತಕಾಲ : ಮಧ್ಯಾಹ್ನ 12:46ರಿಂದ 02:15ವರೆಗೆ
ದಿನದ ವಿಶೇಷ : ಅಂತರಾಷ್ಟ್ರೀಯ ಹಿರಿಯರ ದಿನ

ಸೂರ್ಯೋದಯ : 06:20  ಸೂರ್ಯಾಸ್ತ : 07:19

ರಾಹುಕಾಲ: ಸಾಯಂಕಾಲ 4.30 ರಿಂದ 6.00
ಗುಳಿಕಕಾಲ: ಸಾಯಂಕಾಲ 03:10ರಿಂದ 04:40
ಯಮಗಂಡಕಾಲ: ಮಧ್ಯಾಹ್ನ 12:09 ರಿಂದ 01:39

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಆತ್ಮವಿಶ್ವಾಸದ ಕೊರತೆಯಿಂದಾಗಿ ಕಾರ್ಯದಲ್ಲಿ ನಿಧಾನಗತಿ ಇರಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಕುಟುಂಬ ಸದಸ್ಯರ ಸಂಪೂರ್ಣ ಬೆಂಬಲ ಸಿಗಲಿದೆ. ಅಪರೂಪದ ವ್ಯಕ್ತಿಗಳ ಪರಿಚಯದಿಂದಾಗಿ ಅನೇಕ ವಿಚಾರಗಳು ಮನಸ್ಸಿನ ಆಳಕ್ಕೆ ಇಳಿಯಲಿದೆ. ಉದ್ಯೋಗಿಗಳಿಗೆ ಶುಭ ಫಲ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

ವೃಷಭ: ಹೂಡಿಕೆಯಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಇದೆ. ಆರ್ಥಿಕವಾಗಿ ಸದೃಢತೆ ಇರಲಿದೆ. ಅನೇಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದು ಉತ್ತಮ. ಕಾಲಹರಣ ಮಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಉದ್ಯೋಗಿಗಳಿಗೆ ಶುಭ ಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಮಿಥುನ: ಸಂತೃಪ್ತ ಜೀವನ ನಿಮದಾಗಲಿದೆ. ಕಾರ್ಯದಲ್ಲಿ ಯಶಸ್ಸು ಸಿಗುವುದು. ಯಾರನ್ನೂ ನಂಬಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಆಪ್ತ ಸ್ನೇಹಿತರೊಂದಿಗೆ ಮಾತುಕತೆ ಇರಲಿದೆ. ದಿನದ ಕೊನೆಯ ಭಾಗದಲ್ಲಿ ಮಾನಸಿಕವಾಗಿ ದುರ್ಬಲವಾಗುವ ಸಾಧ್ಯತೆ ಇದೆ. ಮಕ್ಕಳು ಸಿಟ್ಟು ತರಿಸಬಹುದು. ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಗುರುಗಳ ಅನುಗ್ರಹ ಪಡೆಯಿರಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ಕಟಕ: ಬೇರೆಯವರನ್ನು ಟೀಕೆ ಮಾಡುವ ಭರದಲ್ಲಿ ನೀವು ಟೀಕೆಗೆ ಒಳಗಾಗುವುದು ಬೇಡ. ಆಪ್ತರೊಂದಿಗೆ ಅತಿಯಾದ ಸಲುಗೆ ಒಳ್ಳೆಯದಲ್ಲ. ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಆತುರದ ಮಾತುಗಳಿಗೆ ನಿಯಂತ್ರಣ ಇರಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಅತಿಥಿಗಳ ಆಗಮನದಿಂದ ಕಾರ್ಯ ವಿಳಂಬವಿದೆ. ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ಸಿಂಹ: ಒತ್ತಡದಿಂದ ಹೊರಬಂದು ಉತ್ಸಾಹದ ದಿನ ನಿಮದಾಗಲಿದೆ. ದೈಹಿಕವಾಗಿ ಮಾನಸಿಕವಾಗಿ ಆರೋಗ್ಯ ಉತ್ತಮವಾಗಿರಲಿದೆ. ಹಣಕಾಸು, ಹೂಡಿಕೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ದಿಢೀರ್‌ ಧನಾಗಮನವಾಗಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಉದ್ಯೋಗಿಗಳಿಗೆ ಹೊಸ ಅವಕಾಶಗಳ ಸೂಚನೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕನ್ಯಾ: ಬಹಳ ದಿನಗಳಿಂದ ಬರದೆ ಇರುವ ನಿಮ್ಮ ಹಣ ಮರಳುವ ಸಾಧ್ಯತೆ ಇದೆ. ಆರೋಗ್ಯದ ಕಾಳಜಿ ವಹಿಸಿ. ದಿನದ ಮಟ್ಟಿಗೆ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ. ಕುಟುಂಬದಲ್ಲಿ ಸಾಮರಸ್ಯ ಮೂಡಲಿದೆ. ಆಪ್ತರೊಂದಿಗೆ ಮಾತುಕತೆ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಅನಿವಾರ್ಯ ಕಾರಣಗಳಿಂದ ನೀವು ಇತರರೊಂದಿಗೆ ಜಗಳಕ್ಕೆ ಇಳಿಯುವ ಸಾಧ್ಯತೆ ಇದೆ. ಆದಷ್ಟು ಮಾತಿನಲ್ಲಿ ನಿಯಂತ್ರಣ ಇರಲಿ. ಕುಟುಂಬದ ಆಪ್ತರು, ಸ್ನೇಹಿತರಿಂದ ಉಡುಗೊರೆ ಸಿಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ವೃಶ್ಚಿಕ: ಇಂದು ಮನೋರಂಜನೆಗೆ ಹೆಚ್ಚು ಮಹತ್ವ ಕೊಡುವ ಸಾಧ್ಯತೆ ಇದೆ. ಆಪ್ತರು ಹಾಗೂ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಧನಸ್ಸು: ಬಹಳ ದಿನಗಳ ಕನಸು ನನಸಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಇಂದು ಸಬಲತೆ ಹೊಂದುವಿರಿ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಂತೋಷದ ಜತೆ ಜತೆಗೆ ನಿಮ್ಮನ್ನು ಯಾರಾದರೂ ಟೀಕಿಸುವ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಕೌಟುಂಬಿಕ ತಾಪತ್ರಯ ನಿಮ್ಮನ್ನು ನಿರಾಸೆಗೊಳಿಸಬಹುದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

ಈ ರಾಶಿಯವರಿಗೆ ತುಂಬಾ ಒಳಿತಾಗುತ್ತೆ

ಮಕರ: ಆರೋಗ್ಯ ದಿನದ ಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ ಆದಷ್ಟು ಎಚ್ಚರಿಕೆ ಇರಲಿ. ಕುಟುಂಬದ ಸದಸ್ಯರ ಬೆಂಬಲ ನಿಮಗೆ ಪುಷ್ಟಿ ನೀಡಲಿದೆ. ಆರ್ಥಿಕವಾಗಿ ಬಲಗೊಳ್ಳುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಕುಂಭ: ಒಂಟಿತನ ನಿಮ್ಮನ್ನು ಕಾಡಬಹುದು. ಕುಟುಂಬ ಸದಸ್ಯರ ಅನಾರೋಗ್ಯ ಕಾರಣಗಳಿಂದ ಖರ್ಚು ಸಾಧ್ಯತೆ ಇದೆ. ಬಾಕಿ ಇರುವ ಕೆಲಸ ಕಾರ್ಯಗಳನ್ನು ಮುಂದೂಡುವುದು ಬೇಡ. ಅತಿಯಾದ ಆಲಸ್ಯದಿಂದ ಹೊರ ಬಂದು ಮಾಡುವ ಕೆಲಸದಲ್ಲಿ ತೊಡಗಿಸಿಕೊಳ್ಳುವುದು ಉತ್ತಮ.
ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?

ಮೀನ: ಭರವಸೆಯ ಬದುಕು ರೂಪುಗೊಳ್ಳಲಿದೆ. ಆಪ್ತರು ನೀಡುವ ಶುಭ ಸಂದೇಶ ನಿಮ್ಮನ್ನು ಹರ್ಷಿತರನ್ನಾಗಿ ಮಾಡುವುದು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೊಗದಲ್ಲಿ ಹೊಸ ಭರವಸೆ ಮೂಡಲಿದೆ. ಆರ್ಥಿಕವಾಗಿ ಬಲಿಷ್ಠರಾಗುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version