Site icon Vistara News

Dina Bhavishya : ಈ ದಿನ ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ

Dina Bhavishya

ಚಂದ್ರನು ಗುರುವಾರ ಮಕರ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣ, ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಶುಭ. ಕೌಟುಂಬಿಕವಾಗಿ ಶುಭ ಫಲ. ವೃಷಭ ರಾಶಿಯವರು ಆತ್ಮ ವಿಶ್ವಾಸ ಹೆಚ್ಚಾಗಲಿದೆ.ಆರ್ಥಿಕವಾಗಿ ಸದೃಢ . ಅತಿರೇಕದ ಮಾತುಗಳನ್ನು ಆಡಿ, ಅಪಾಯ ತಂದುಕೊಳ್ಳುವುದು ಬೇಡ.ಆರೋಗ್ಯ ದಿನದ ಕೊನೆಯಲ್ಲಿ ಹದಗೆಡವ ಸಾಧ್ಯತೆ ಎಚ್ಚರಿಕೆ ಇರಲಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (10-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷ.
ತಿಥಿ: ಸಪ್ತಮಿ 12:31ವಾರ: ಗುರುವಾರ
ನಕ್ಷತ್ರ: ಪೂರ್ವಷಾಢ 29:40 ಯೋಗ: ಅತಿಗಂಡ 28:35
ಕರಣ: ವಣಿಜ 12:31 ಅಮೃತಕಾಲ: ಮಧ್ಯರಾತ್ರಿ 12:48ರಿಂದ 02:26
ದಿನದ ವಿಶೇಷ: ಶರನ್ನವರಾತ್ರಿ ಎಂಟನೇ ದಿವಸ ಬ್ರಹ್ಮಚಾರಿಣಿ ಅವತಾರ.

ಸೂರ್ಯೋದಯ : 06:09   ಸೂರ್ಯಾಸ್ತ : 06:03

ರಾಹುಕಾಲ: ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ
9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣ, ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಶುಭ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ:6

ವೃಷಭ: ಆತ್ಮ ವಿಶ್ವಾಸ ಹೆಚ್ಚಾಗಲಿದೆ.ಆರ್ಥಿಕವಾಗಿ ಸದೃಢ . ಅತಿರೇಕದ ಮಾತುಗಳನ್ನು ಆಡಿ, ಅಪಾಯ ತಂದುಕೊಳ್ಳುವುದು ಬೇಡ.ಆರೋಗ್ಯ ದಿನದ ಕೊನೆಯಲ್ಲಿ ಹದಗೆಡವ ಸಾಧ್ಯತೆ ಎಚ್ಚರಿಕೆ ಇರಲಿ.ಉದ್ಯೋಗಿಗಳಿಗೆ ಶುಭ ಫಲ ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ:5

ಮಿಥುನ: ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಆರೋಗ್ಯ ಮಧ್ಯಮ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ. ಆರ್ಥಿಕ ಲಾಭ ಸಾಧಾರಣ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

ಕಟಕ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ.ಆರ್ಥಿಕವಾಗಿ ಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ.ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ.ಆರೋಗ್ಯ ಪರಿಪೂರ್ಣ.ಉದ್ಯೋಗಿಗಳಿಗೆ ಶುಭಫಲ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

ಸಿಂಹ: ಆರೋಗ್ಯ ಕಾಳಜಿ ಇರಲಿ ಅವಶ್ಯಕ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಆದ್ದರಿಂದ ಹಾದಿ ಅವಶ್ಯಕ. ಆರ್ಥಿಕವಾಗಿ ಕೊಂಚ ಲಾಭ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

ಕನ್ಯಾ: ಶುಭ ಕಾರ್ಯಗಳಿಗಾಗಿ ಖರ್ಚು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ.ಜವಾಬ್ದಾರಿಗಳು ಹೆಚ್ಚಾಗಲಿದೆ, ಕೋಪದಿಂದ ವರ್ತಿಸುವ ಸಾಧ್ಯತೆ. ಆತುರದಲ್ಲಿ ಮಾತುಗಳು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ:ಆರೋಗ್ಯ ಪರಿಪೂರ್ಣ.ಕುಟುಂಬದ ಹಿರಿಯರಿಂದ ಒತ್ತಡ. ಹಣಕಾಸು,ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಆರ್ಥಿಕ ಲಾಭ.ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ.ಆಪ್ತರಿಂದ ಸಲಹೆ ಸಹಕಾರ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

ವೃಶ್ಚಿಕ: ಸಂಗಾತಿಯ ಆರೋಗ್ಯದ ಸಲವಾಗಿ ಖರ್ಚು. ವೃತಾ ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿ. ವ್ಯಾಪಾರ ವ್ಯವಹಾರ ಸಾಧಾರಣ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಮಿಶ್ರಫಲ .
ಅದೃಷ್ಟ ಸಂಖ್ಯೆ: 7

ಧನಸ್ಸು: ಆಪ್ತರಿಂದ ಬೆಂಬಲ. ಕೆಲಸಕಾರ್ಯಗಳಲ್ಲಿ ಪ್ರಗತಿ. ಆಪ್ತರಿಂದ ಹಣದ ಸಹಾಯದ ಕೋರಿಕೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣ.ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಮಕರ: ಉತ್ಸಾಹಭರಿತ ಜೀವನ. ಆರ್ಥಿಕವಾಗಿ ಲಾಭ.ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ. ಯಾವುದಾದರೂ ಸಭೆ-ಸಮಾರಂಭಗಳಿಗೆ ಭಾಗವಹಿಸುವ ಆಮಂತ್ರಣ.ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ.ಆಪ್ತರೊಂದಿಗೆ ಮಾತುಕತೆ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

ಕುಂಭ: ಇತರರನ್ನು ಟೀಕಿಸುತ್ತ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ. ಪ್ರಯಾಣ ಸಾಧ್ಯತೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಮೀನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ.ನಿಮ್ಮ ನಿರೀಕ್ಷೆಗೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರಿಂದ ಒತ್ತಡ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣ. ದಿಢೀರ್ ಧನಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version