ಚಂದ್ರನು ಬುಧವಾರದಂದು ಕನ್ಯಾರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯ ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಕಟಕ ರಾಶಿಯವರು ಅತಿರೇಕದ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಸಿಂಹ ರಾಶಿಯವರಿಗೆ ಸಹದ್ಯೋಗಿಗಳಿಂದ ಕಿರಿಕಿರಿ ಉಂಟಾಗಲಿದೆ. ಮೀನ ರಾಶಿಯವರಿಗೆ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದ್ದು, ಮಾತು ಬೆಳೆಸುವುದು ಬೇಡ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (11-10-2023)
ಮೇಷ: ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಅತಿರೇಕದ ಮಾತುಗಳು ಜಗಳವನ್ನುಂಟು ಮಾಡಬಹುದು. ಹೀಗಾಗಿ ಮಾತಿನಲ್ಲಿ ಹಿಡಿತವಿರಲಿ. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ ಸಿಗಲಿದೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ವೃಷಭ: ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಕುಟುಂಬದ ಆಪ್ತರಿಂದ ಆಮಂತ್ರಣ ಸಿಗಲಿದೆ. ಆರೋಗ್ಯದ ಕುರಿತು ವಿಶೇಷ ಕಾಳಜಿವಹಿಸುವುದು ಅವಶ್ಯಕ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಮಿಥುನ: ಈ ದಿನ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಮಧ್ಯಮವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8
ಕಟಕ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿರೇಕದಲ್ಲಿ ಆಡುವ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2
ಸಿಂಹ: ದಿಢೀರ್ ಕೋಪದಿಂದ ಕಾರ್ಯದಲ್ಲಿ ಹಾನಿಯಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಸಂಬಂಧಿಗಳೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿ ಉಂಟಾಗಲಿದೆ. ಆರೋಗ್ಯದ ಕಾಳಜಿ ಇರಲಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ಕನ್ಯಾ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಪಾಲುದಾರಿಕೆ- ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿ. ನಂಬಿದ ವ್ಯಕ್ತಿಗಳಿಂದ ನೀವೂ ಮೋಸ ಹೋಗಬಹುದು. ತಪ್ಪು ತಿಳುವಳಿಕೆ ಉಂಟಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಸಕಾರಾತ್ಮಕ ಆಲೋಚನೆಗಳಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹಳೆಯ ವಿಚಾರ ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ವೃಶ್ಚಿಕ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಅಮೂಲ್ಯ ವಸ್ತುಗಳು ಕೈಗೆ ಸಿಗುವುದರಿಂದ ಸಂತಸ ಇರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3
ಧನಸ್ಸು: ಭೂಮಿ ಸಂಬಂಧ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕೂಡಿಬರಲಿದೆ. ಕುಟುಂಬದಲ್ಲಿ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಈ ಕೆಲಸಗಳನ್ನು ಮಾಡಿದರೆ ಪುಣ್ಯ ಜಾಸ್ತಿ ಸಿಗುತ್ತಾ?
ಮಕರ: ಭರವಸೆಯ ಹೊಸ ಜೀವನ ಶುರುವಾಗಲಿದೆ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ,ಆರ್ಥಿಕ ಪ್ರಗತಿ ಇರಲಿದೆ. ನೀವು ಮಾಡಿದ ಕೆಲಸ ಕಾರ್ಯಗಳ ಫಲಿತಾಂಶ ಬೇರೆಯವರು ತೆಗೆದುಕೊಂಡು ಪ್ರಶಂಸೆ ಪಡುವ ಸಾಧ್ಯತೆ ಇದ್ದು ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಕುಂಭ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿದೆ. ಅವಶ್ಯಕ ವಸ್ತುಗಳ ಖರೀದಿ ಮಾಡುವಿರಿ. ಅಷ್ಟೇ ಆರ್ಥಿಕ ಲಾಭ ಇರಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದ್ದು, ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯದಲ್ಲಿ ತೊಡಗುವ ಸಾಧ್ಯತೆ ಇದೆ.
ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?
ಮೀನ: ಹಳೆಯ ನೋವು ಉಲ್ಬಣಗೊಳ್ಳವ ಸಾಧ್ಯತೆ ಇದೆ. ಆರೋಗ್ಯದ ಕಡೆಗೆ ಗಮನ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಹೆಚ್ಚಾಗಲಿದೆ. ಸಂಬಂಧಿಕರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com