Site icon Vistara News

Dina Bhavishya: ಈ ರಾಶಿಯವರು ಆತುರದ ತೀರ್ಮಾನ ತೆಗೆದುಕೊಳ್ಳುವುದು ಬೇಡ

Dina Bhavishya

ಚಂದ್ರನು ಸೋಮವಾರವು ಮೀನ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ. ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (14-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷ.
ತಿಥಿ: ಏಕಾದಶಿ 06:40 /ದ್ವಾದಶಿ 27:41 ವಾರ: ಸೋಮವಾರ
ನಕ್ಷತ್ರ: ಶತಭಿಷಾ 24:41 ಯೋಗ: ಗಂಡ 18:00
ಕರಣ: ವಿಷ್ಟಿ (ಭದ್ರ) 06:40/ಭವ 17:14 ಅಮೃತಕಾಲ: ಸಂಜೆ 06:09 ರಿಂದ 07:37
ದಿನದ ವಿಶೇಷ: ವೈಷ್ಣವ ಏಕಾದಶಿ, ಹೊರನಾಡು ಅನ್ನಪೂಣೇಶ್ವರಿ ಚಂಡೀಹೋಮ

ಸೂರ್ಯೋದಯ : 06:10   ಸೂರ್ಯಾಸ್ತ : 06:01

ರಾಹುಕಾಲ: ಬೆಳಗ್ಗೆ 07:39ರಿಂದ 09:08
ಗುಳಿಕಕಾಲ: ಮಧ್ಯಾಹ್ನ
01:34ರಿಂದ 03:03
ಯಮಗಂಡಕಾಲ: ಬೆಳಗ್ಗೆ
10:36 ರಿಂದ 12:05

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ. ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

ವೃಷಭ: ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಸಾಧಿಸಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಹದ್ಯೋಗಿಗಳಿಂದ ಕಿರಿಕಿರಿ, ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

ಮಿಥುನ: ಬಂಧುಗಳು ಟೀಕೆಗಳನ್ನು ಮಾಡುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಒತ್ತಡ ಇರಲಿದೆ, ಮಾನಸಿಕ ನೆಮ್ಮದಿ ಹಾಳು ಮಾಡುವ ಸಾಧ್ಯತೆ ಇದೆ. ಸಂಯಮದಿಂದ ವರ್ತಿಸಿ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

ಕಟಕ: ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಆತುರದ ತೀರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರುತ್ತದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಸಿಂಹ:ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವು, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

ಕನ್ಯಾ: ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸ ಆಗಲಿದೆ. ಹಣಕಾಸು ಪ್ರಗತಿ ಇರಲಿದೆ. ಬಂಧುಗಳ ಭೇಟಿ ಕೊಂಚ ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

ವೃಶ್ಚಿಕ:ಕುಟುಂಬ ಸದಸ್ಯರ ಆರೋಗ್ಯದ ಕಡೆ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

ಧನಸ್ಸು: ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತ ಸ್ನೇಹಿತ- ಸಂಬಂಧಿಗಳ ಸಮಸ್ಯೆಗಳಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

ಮಕರ: ಆರೋಗ್ಯ ಉತ್ತಮವಾಗಿರಲಿದೆ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತರುವುದು. ಅತಿರೇಖದಲ್ಲಿ ಮಾತನಾಡುವುದು ಬೇಡ. ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಕುಂಭ: ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಹಿರಿಯರ ಮಾರ್ಗದರ್ಶನ ಸಿಗುವುದು. ಆರೋಗ್ಯ ಉತ್ತಮವಾಗಿರಲಿದೆ. ಅನಿರೀಕ್ಷಿತ ಖರ್ಚು.ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಅದೃಷ್ಟ ಸಂಖ್ಯೆ: 3

ಮೀನ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version