Site icon Vistara News

Dina Bhavishya : ಮುಂಗೋಪದಿಂದ ಈ ರಾಶಿಯವರಿಗೆ ನಷ್ಟ ಸಂಭವ

dina bhavishya

ಚಂದ್ರನು ಸೋಮವಾರ ವೃಶ್ಚಿಕ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ವೃಷಭ ರಾಶಿಯವರು ಸಂಗಾತಿಯೊಂದಿಗೆ ವಿನಾ ಕಾರಣ ವಾದಕ್ಕೆ ಇಳಿಯುವುದು ಬೇಡ. ಕಟಕ ರಾಶಿಯವರು ಬಿಡುವಿಲ್ಲದ ಕೆಲಸದಿಂದ ಒತ್ತಡ, ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಲಿದೆ. ಸಿಂಹ ರಾಶಿಯ ಬಹುದಿನಗಳ ಕನಸು ನನಸಾಗುವ ಸಮಯವಿದು. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (16-10-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷ.
ತಿಥಿ:
ಬಿದಿಗೆ 25:12 ವಾರ: ಸೋಮವಾರ
ನಕ್ಷತ್ರ: ಸ್ವಾತಿ 19:34 ಯೋಗ: ವಿಷ್ಕುಂಭ 10:02
ಕರಣ: ಬಾಲವ 12:55 ಅಮೃತ ಕಾಲ: ಬೆಳಗ್ಗೆ 10:17 ರಿಂದ 11:58 ರವರೆಗೆ
ದಿನದ ವಿಶೇಷ: ಶರನ್ನವರಾತ್ರಿ ದ್ವಿತೀಯ ದಿವಸ ಪೂಜೆ ಬ್ರಹ್ಮಚಾರಿಣಿ ಅವತಾರ, ವಿಶ್ವ ಆಹಾರ ದಿನ, ಚಂದ್ರದರ್ಶನ

ಸೂರ್ಯೋದಯ : 06:24  ಸೂರ್ಯಾಸ್ತ : 07:00

ರಾಹುಕಾಲ: ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕ ಸಮಸ್ಯೆಗಳಿಗೆ ತಕ್ಕ ಪರಿಹಾರವೂ ಇಂದು ಸಿಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ವೃಷಭ: ಉದ್ಯೋಗಿಗಳಿಗೆ ಪ್ರೋತ್ಸಾಹವೂ ಸೇರಿದಂತೆ ಅನೇಕ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ವಿವಿಧ ಮೂಲಗಳಿಂದ ಆರ್ಥಿಕವಾಗಿ ಲಾಭ ಸಿಗಲಿದೆ. ಸಂಗಾತಿಯೊಂದಿಗೆ ವಿನಾ ಕಾರಣ ವಾದಕ್ಕೆ ಇಳಿಯುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ಮಿಥುನ: ಸ್ನೇಹಿತರ ಮೂಲಕ ದೊರಕುವ ಮಾರ್ಗದರ್ಶನ ನಿಮ್ಮ ಆರೋಗ್ಯವನ್ನು ಸುಧಾರಿಸಲು ನಿಮ್ಮನ್ನು ಉತ್ತೇಜಿಸುತ್ತದೆ. ನೀವು ಇಂದಿನ ದಿನವನ್ನು ಉತ್ತಮಗೊಳಿಸಲು ಕಳೆದ ದಿನಗಳಲ್ಲಿ ಹಣವನ್ನು ಹೂಡಿಕೆ ಮಾಡಿದ್ದರೆ, ಅದರ ಪ್ರಯೋಜನವನ್ನು ಪಡೆಯಬಹುದು. ನಿಮ್ಮ ಜತೆಗಿರುವ ಯಾರಾದರೂ ನಿಮ್ಮ ಇತ್ತೀಚೆನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಕಟಕ: ಬಿಡುವಿಲ್ಲದ ಕೆಲಸದಿಂದ ಒತ್ತಡ, ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಸಿಂಹ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯವಿದು. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕನ್ಯಾ: ಸಂತೋಷದಿಂದ ಇದ್ದು, ಇತರರಿಗೆ ಸಂತಸ ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆತುರದ ಭರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸಿಗೆ ನೋವು ಆಗಲಿದೆ. ಹೀಗಾಗಿ ಆಲೋಚಿಸಿ ಮಾತನಾಡಿ. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ, ಇದರಿಂದ ಮನಸ್ಸು ಘಾಸಿಯಾಗುವುದು. ಆಧ್ಯಾತ್ಮದತ್ತ ಚಿಂತಿಸಿ. ಗುರು ದತ್ತಾತ್ರೇಯನನ್ನು ಆರಾಧಿಸಿ.
ಅದೃಷ್ಟ ಸಂಖ್ಯೆ: 7

ವೃಶ್ಚಿಕ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಗಾಗಿ ಆಲೋಚನೆ ಮಾಡುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಧನಸ್ಸು: ದೀರ್ಘಕಾಲದ ಪ್ರಯಾಣ ಮಾಡುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ನವರಾತ್ರಿಯ ವಾರಭವಿಷ್ಯ ಹೇಗಿದೆ ನೋಡಿ

ಮಕರ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಸಾಧ್ಯತೆ ಇದೆ. ಸ್ನೇಹಿತರ ಸಲಹೆ ಸಹಕಾರ ಸಿಗುವುದು.
ಅದೃಷ್ಟ ಸಂಖ್ಯೆ: 6

ಕುಂಭ: ಆಲಸ್ಯದಿಂದ ಕಾರ್ಯ ಹಾನಿಯಾಗಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸೃಜನಾತ್ಮಕವಾಗಿ ಕೆಲಸ ಮಾಡಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ.ದಿನ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ ಇದೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸವಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version