Dina Bhavishya : ಜಂಟಿ ಹೂಡಿಕೆ ವ್ಯವಹಾರದಲ್ಲಿ ಈ ರಾಶಿಯವರು ತೊಡಗ್ಬೇಡಿ! Vistara News

ಪ್ರಮುಖ ಸುದ್ದಿ

Dina Bhavishya : ಜಂಟಿ ಹೂಡಿಕೆ ವ್ಯವಹಾರದಲ್ಲಿ ಈ ರಾಶಿಯವರು ತೊಡಗ್ಬೇಡಿ!

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷದ ಷಷ್ಠಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಧನಸ್ಸು ರಾಶಿಯಿಂದ ಗುರುವಾರ ರಾತ್ರಿ 09:54ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ವೃಷಭ ರಾಶಿಯವರಿಗೆ ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು. ಮಿಥುನ ರಾಶಿಯವರಿಗೆ ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಸಿಂಹ ರಾಶಿಯವರಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ ಇದೆ. ಅಗತ್ಯವಿದ್ದಷ್ಟೆ ಮಾತನಾಡಿ, ಸಮಾಧಾನದಿಂದ ವರ್ತಿಸಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (20-10-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷ.
ತಿಥಿ:
ಷಷ್ಠಿ 23:24 ವಾರ: ಶುಕ್ರವಾರ
ನಕ್ಷತ್ರ: ಮೂಲಾ 20:40 ಯೋಗ: ಅತಿಗಂಡ 27:00
ಕರಣ:ಕೌಲವ 12:00 ಅಮೃತ ಕಾಲ: ಮಧ್ಯಾಹ್ನ 02:23ರಿಂದ 03:58ರವರೆಗೆ
ದಿನದ ವಿಶೇಷ: ಶರನ್ನವರಾತ್ರಿ ಷಷ್ಠಮ ದಿವಸ ಪೂಜೆ ಮಾತಾ ಕಾತ್ಯಾಯಿನಿ ಅವತಾರ

ಸೂರ್ಯೋದಯ : 06:10  ಸೂರ್ಯಾಸ್ತ : 05:58

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಹಾಸ್ಯದ ಮನೋಭಾವನೆ ಇತರರನ್ನು ಆಕರ್ಷಿಸಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ಸ್ಥಳಗಳಿಗೆ ಹೋಗುವಿರಿ. ಆಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು, ಆದರೆ ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾದಿ ಮರುಕಳಿಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಅತಿಥಿಗಳ ಆಗಮನ ಹರ್ಷ ತರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಘಟಿಸಿದ್ದನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಾಗುವ ಕೆಲಸಗಳ ಬಗ್ಗೆ ಯೋಚಿಸಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವ ಸಾಧ್ಯತೆ ಇದೆ. ಕೋಪದಿಂದ ಏನನ್ನು ಸಾಧಿಸಲಾಗದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಹಣ ದುಪ್ಪಟ್ಟಾಗಲಿದೆ. ಮಾನಸಿಕ ನೆಮ್ಮದಿ ಸಿಗುವುದು. ಹೊಸ ಭರವಸೆಯ ಅವಕಾಶಗಳು ಹುಡುಕಿಕೊಂಡು ಬರಲಿದೆ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಫಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಸಿಂಹ: ಕುಟುಂಬದ ಆಪ್ತರ ಹಾಗೂ ಸ್ನೇಹಿತರ ಸೂಕ್ತ ಸಲಹೆ ಸಹಕಾರ ಸಿಗಲಿದೆ. ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ವಿಶ್ರಾಂತಿ ಸಿಗಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ ಇದೆ. ಅಗತ್ಯವಿದ್ದಷ್ಟೆ ಮಾತನಾಡಿ, ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ ಉಂಟಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತ ಸಂಬಂಧಿಕರಿಂದ ಸಹಾಯ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಸಾಮಾನ್ಯವಾಗಿರಲಿದೆ. ಹಳೆಯ ವಿಚಾರಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗದಲ್ಲಿ ಸಾಧಾರಣ.ಕುಟುಂಬದ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರಿಕೆ ವಹಿಸಿ. ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ, ವ್ಯತಿರಿಕ್ತವಾದ ಪರಿಣಾಮದಿಂದಾಗಿ ಸ್ನೇಹದಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ. ಅನಗತ್ಯ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಅನಿರೀಕ್ಷಿತ ಪ್ರಯಾಣ ಸಾಧ್ಯತೆ ಇದೆ. ಆತುರದ ಭರದಲ್ಲಿ ಅತಿರೇಕದ ಮಾತುಗಳು ಜಗಳ ತರಬಹುದು, ಸಮಾಧಾನದಿಂದ ವರ್ತಿಸಿ. ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ, ಎಚ್ಚರಿಕೆ ಇರಲಿ.ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ವರ್ತಿಸಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ಇದು ಒಂದು ಇದ್ದರೆ ಸಾಕು, ನಿಮ್ಮ ಬಳಿ ಸಮಸ್ಯೆಗಳು ಬರುವುದಿಲ್ಲ

Horoscope Today

ಮಕರ: ಆರೋಗ್ಯ ಉತ್ತಮವಾಗಿರಲಿದೆ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಪ್ರಯತ್ನಿಸುವಿರಿ.ಸಮಾರಂಭದ ಆಮಂತ್ರಣ ಬರುವ ಸಾಧ್ಯತೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಆಹಾರದ ಕ್ರಮ ಆರೋಗ್ಯದಲ್ಲಿ ವ್ಯತ್ಯಾಸ ಮೂಡಿಸಬಹುದು. ಅಮೂಲ್ಯ ವಸ್ತುಗಳ ಬಗೆಗೆ ಕಾಳಜಿ ವಹಿಸಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ. ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ.ಉದ್ಯೋಗದಲ್ಲಿ ಭರವಸೆ ಮೂಡಲಿದೆ.ಆರೋಗ್ಯ ಉತ್ತಮ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಏರ್‌ ಇಂಡಿಯಾದಲ್ಲಿದೆ ಉದ್ಯೋಗಾವಕಾಶ; ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Job Alert: ಏರ್‌ ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸೆಸ್ ಲಿಮಿಟೆಡ್ ಸುಮಾರು 828 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆಸಕ್ತರು ಡಿಸೆಂಬರ್‌ 18ರಿಂದ 23ರ ವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.

VISTARANEWS.COM


on

air india
Koo

ಬೆಂಗಳೂರು: ಏರ್‌ ಇಂಡಿಯಾದಲ್ಲಿ ಉದ್ಯೋಗಾವಕಾಶಗಳಿವೆ. ಏರ್‌ ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸೆಸ್ ಲಿಮಿಟೆಡ್ ಸುಮಾರು 828 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (AIATSL Recruitment 2023). ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್, ರ‍್ಯಾಂಪ್‌ ಸರ್ವಿಸ್ ಎಕ್ಸಿಕ್ಯೂಟಿವ್, ಡ್ಯೂಟಿ ಆಫೀಸರ್ ಮುಂತಾದ ಹುದ್ದೆಗಳಿವೆ. ಅಭ್ಯರ್ಥಿಗಳನ್ನು 3 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಮುಂಬೈ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಆಸಕ್ತರು ಡಿಸೆಂಬರ್‌ 18ರಿಂದ 23ರ ವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು (Job Alert).

ಹುದ್ದೆಗಳ ವಿವರ

ಡೆಪ್ಯೂಟಿ ಮ್ಯಾನೇಜರ್ ರ‍್ಯಾಂಪ್‌ / ಮೇಂಟೆನೆನ್ಸ್‌: 7, ಡೆಪ್ಯೂಟಿ ಮ್ಯಾನೇಜರ್-ರ‍್ಯಾಂಪ್‌: 28, ಜೂನಿಯರ್ ಆಫೀಸರ್ ಟೆಕ್ನಿಕಲ್: 24, ರ್ಯಾಂಪ್ ಸರ್ವೀಸ್ ಎಕ್ಸಿಕ್ಯೂಟಿವ್: 138, ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್: 167, ಡ್ಯೂಟಿ ಮ್ಯಾನೇಜರ್- ಪ್ಯಾಸೆಂಜರ್: 19, ಡ್ಯೂಟಿ ಆಫೀಸರ್-ಪ್ಯಾಸೆಂಜರ್: 30, ಡ್ಯೂಟಿ ಮ್ಯಾನೇಜರ್-ಕಾರ್ಗೊ: 3, ಡ್ಯೂಟಿ ಆಫೀಸರ್-ಕಾರ್ಗೊ: 8, ಜೂನಿಯರ್ ಆಫೀಸರ್-ಕಾರ್ಗೊ: 9, ಸೀನಿಯರ್ ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್: 178, ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್: 217 ಹುದ್ದೆಗಳಿವೆ.

ಶೈಕ್ಷಣಿಕ ಅರ್ಹತೆ

ಹುದ್ದೆಗಳಿಗೆ ಅನುಗುಣವಾಗಿ ಎಸ್ಸೆಸ್ಸೆಲ್ಸಿ, ಡಿಪ್ಲೊಮ, ಐಟಿಐ, ಪದವಿ, ಇಂಜಿನಿಯರಿಂಗ್, ಇತರ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವವರು, 21 ವರ್ಷದಿಂದ 55 ವರ್ಷದ ಒಳಗಿರುವ ಆಸಕ್ತರು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ವಿಭಾಗದ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿ ಶುಲ್ಕ 500 ರೂ. ಅನ್ನು ಏರ್‌ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್‌ ಸರ್ವೀಸೆಸ್ ಲಿಮಿಟೆಡ್ (AIR INDIA AIR TRANSPORT SERVICES LTD) ಹೆಸರಿನಲ್ಲಿ ಡಿಡಿ ತೆಗೆಯುವ ಮೂಲಕ ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ನಿವೃತ್ತ ಯೋಧರಿಗೆ ಯಾವುದೇ ಶುಲ್ಕವಿಲ್ಲ. ನೇರ ಸಂದರ್ಶನಕ್ಕೆ ಹಾಜರಾಗುವವರು ತಮ್ಮ ವಿದ್ಯಾರ್ಹತೆ ದಾಖಲೆಗಳು, ಕಾರ್ಯಾನುಭವ ದಾಖಲೆಗಳು, ಆಧಾರ್‌ ಕಾರ್ಡ್‌, ಅಪ್‌ಡೇಟ್‌ ಮಾಡಲಾದ ಇತ್ತೀಚಿನ ರೆಸ್ಯೂಮ್‌, ಅರ್ಜಿ ಶುಲ್ಕ ಪಾವತಿಸಿದ ಡಿಡಿ ರಶೀದಿ ತೆಗೆದುಕೊಂಡು ಹೋಗುವುದನ್ನು ಮರೆಯಬೇಡಿ.

ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ವಿಳಾಸ www.aiasl.inಗೆ ಭೇಟಿ ನೀಡಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿ
  • ಎಲ್ಲ ವಿವರಗಳೊಂದಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅಗತ್ಯವಾದ ಎಲ್ಲ ಡ್ಯಾಕುಮೆಂಟ್‌ಗಳನ್ನು ಲಗತ್ತಿಸಿ
  • ಅಭ್ಯರ್ಥಿಗಳು ಸಂದರ್ಶನದ ಸಮಯದಲ್ಲಿ ನಿಗದಿತ ನಮೂನೆಯ ಅರ್ಜಿ ಸಲ್ಲಿಸಬೇಕಾಗುತ್ತದೆ.

ಸಂದರ್ಶನ ನಡೆಯುವ ಸ್ಥಳ:

GSD Complex, Near
Sahar Police Station,
CSMI Airport,
Terminal-2, Gate No.5,
Sahar, AndheriEast, Mumbai 400099.

ಇದನ್ನೂ ಓದಿ: Job Alert: ಬ್ಯಾಂಕ್‌ ಆಫ್‌ ಬರೋಡಾದ 250 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

Continue Reading

ದೇಶ

ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಅಮಾಯಕ, ಲಾ ಓದಿ ತನ್ನ ಕೇಸನ್ನು ತಾನೇ ಗೆದ್ದ!

Murder Case: 2011ರಲ್ಲಿ ಮೀರತ್‌ನಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ ಯುವಕನೊಬ್ಬ ತಪ್ಪಾಗಿ ಸಿಕ್ಕಿಸಲಾಗಿತ್ತು.

VISTARANEWS.COM


on

man accused of murder wins acquittal after studying law and fighting own Case
Koo

ನವದೆಹಲಿ: ಇದು ಅಸಾಧ್ಯವನ್ನು ಸಾಧ್ಯವಾಗಿಸಿದವನ ಕತೆ. ತಾನು ಮಾಡದ ಕೊಲೆಗಳ (Meerut Murder Case) ಆರೋಪಕ್ಕಾಗಿ 12 ವರ್ಷಗಳ ಕಾಲ ಜೈಲಿನಲ್ಲಿದ್ದ ಯುವಕ, ಸೆರೆಮನೆಯಲ್ಲೇ ಕಾನೂನು ಓದಿ, ತನ್ನ ಕೇಸ್ ಅನ್ನು ತಾನೇ ವಾದ ಮಾಡಿ (fight his own Case) ಕೊನೆಗೂ ಕೋರ್ಟ್‍‌ನಿಂದ ಆರೋಪ ಮುಕ್ತನಾಗಿ ಹೊರ ಬಂದಿದ್ದಾರೆ(Court acquitted). ಹೌದು, ಮೀರತ್‌ನ ಅಮಿತ್ ಚೌಧರಿ (Amit Chaudhary) ಇಂಥ ವಿಸ್ಮಯಕಾರಿ ಸಾಹಸವನ್ನು ಮಾಡಿರುವ ಸಾಹಸಿ.

2011ರಲ್ಲಿ ಮೀರತ್‌ನಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ಕೊಲೆಯಾಗಿತ್ತು. ಈ ಕೊಲೆ ಪ್ರಕರಣ ಸಂಬಂಧ ಇವರನ್ನು ಬಂಧಿಸಲಾಗಿತ್ತು. ಕ್ರಮೇಣ ಈ ಕೊಲೆಗೆ ಸಂಚು ರೂಪಿಸಿದ್ದ ಕಾಳಿ ಗ್ಯಾಂಗ್‌ನ ಸದಸ್ಯ ಎಂದು ಆರೋಪಿಸಲಾಯಿತು. ಕೊಲೆ ನಡೆದ ಸಮಯದಲ್ಲಿ ಚೌಧರಿ ತಮ್ಮ ಸಹೋದರಿ ಮನೆ ಇರುವ ಶಾಮ್ಲಿಯಲ್ಲಿದ್ದರು. ಆದರೂ, ಈ ಪ್ರಕರಣದಲ್ಲಿ 17 ಆರೋಪಿಗಳ ಪೈಕಿ ಚೌಧರಿ ಒಬ್ಬರಾದರು. ಅಂತಿಮವಾಗಿ ಭಾರತೀಯ ದಂಡ ಸಂಹಿತೆ ಮತ್ತು ರಾಷ್ಟ್ರೀಯ ಭದ್ರತಾ ಏಜೆನ್ಸಿಯ ಅಡಿಯಲ್ಲಿ ಕಠಿಣ ಶಿಕ್ಷೆಯನ್ನು ಎದುರಿಸಬೇಕಾಯಿತು.

ಕೊಲೆಯಂಥ ಗಂಭೀರ ಆರೋಪಗಳನ್ನು ಎದುರಿಸಿದ ನಂತರ, ಕಿರ್ತಾಲ್ ಗ್ರಾಮದ ರೈತ ಕುಟುಂಬದಿಂದ ಬಂದ ಚೌಧರಿ, ಹಠಾತ್ತನೆ ಪಾತಾಳ ಕಂಡ ತನ್ನ ಮತ್ತು ತಮ್ಮ ಕುಟುಂಬವನ್ನು ಮತ್ತೆ ಹೋರಾಡಲು ಮತ್ತು ಅವರ ಜೀವನದ ದಿಕ್ಕನ್ನು ಬದಲಾಯಿಸಲು ಯೋಚಿಸಿದರು. ಮತ್ತು ಆ ನಿಟ್ಟಿನಲ್ಲಿ ಪ್ರಯತ್ನಪಡಲು ಆರಂಭಿಸಿದರು.

ಅಮಿತ್ ಚೌಧರಿ ಜೈಲಿನಲ್ಲಿದ್ದಾಗಲೂ ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದಾರೆ. ಚೌಧರಿ ಇದ್ದ ಮುಜಾಫ್ಫರ್‌ನಗರ ಜೈಲಿನಲ್ಲಿ ಗ್ಯಾಂಗಸ್ಟರ್‌ಗಳಾದ ಅನಿಲ್ ದುಜನಾ, ವಿಕ್ಕಿ ತ್ಯಾಗಿಯಂಥವರಿದ್ದರು. ಅವರು ಚೌಧರಿಯನ್ನು ತಮ್ಮ ಗ್ಯಾಂಗಿ‌ಗೆ ಸೇರಿಸಿಕೊಳ್ಳಲು ಮುಂದಾದರು. ಆದರೆ, ಅಲ್ಲಿನ ಜೈಲರ್ ಗೂಂಡಾಗಳಿಂದ ಚೌಧರಿಯನ್ನು ದೂರ ಇಡುವುದಕ್ಕಾ ಬೇರೆ ಬ್ಯಾರಾಕ್‌ಗೆ ವರ್ಗಾಯಿಸಿದರು.

2013ರಲ್ಲಿ ಜಾಮೀನು ಮೇಲೆ ಬಿಡುಗಡೆಯಾದ ಬಳಿಕ ಚೌಧರಿ ಕಾನೂನು ಪದವಿ ಕಲಿಯಲು ಮುಂದಾದರು. ಬಿಎ ಪೂರ್ಣಗೊಳಿಸಿ, ಎಲ್ಎಲ್‌ಬಿ, ಎಲ್‌ಎಲ್‌ಎಂ ಪಾಸು ಮಾಡಿದರು. ಅಷ್ಟೇ ಅಲ್ಲದೇ, ಬಾರ್ ಕೌನ್ಸಿಲ್ ಪರೀಕ್ಷೆಯನ್ನೂ ಪಾಸು ಮಾಡಿದರು. ಪೊಲೀಸ್ ಅಧಿಕಾರಿಗಳ ಕೊಲೆ ಪ್ರಕರಣದಲ್ಲಿ ತಾನು ನಿರಪರಾಧಿ ಎಂದು ಸಾಬೀತುಪಡಿಸಿ, ತಮ್ಮ ಕುಟುಂಬವು ಸಮಾಜದಲ್ಲಿ ತಲೆ ಎತ್ತಿ ನಡೆಯುವುದನ್ನು ನೋಡುವುದೇ ಗುರಿಯಾಗಿತ್ತು.

ಲಾಯರ್ ಆದ ಮೇಲೆ ತಮ್ಮ ಕೇಸನ್ನು ತಾವೇ ನಡೆಸಲು ಆರಂಭಿಸಿದರು ಚೌಧರಿ. ಆದರೆ, ಪ್ರಕರಣದ ವಿಚಾರಣೆ ತುಂಬ ನಿಧಾನವಾಗಿ ನಡೆಯುತ್ತಿತ್ತು. ಯಾರ ಹೇಳಿಕೆಯನ್ನು ದಾಖಲಿಸಲಿಲ್ಲ. ಈ ಪ್ರಕರಣದಲ್ಲಿ ಚೌಧರಿ ನಿರಪರಾಧಿ ಎಂಬುದಕ್ಕೆ ಸಾಕ್ಷ್ಯ ಕೊಡ ದೊರೆಯಿತು. ಈ ಪ್ರಕರಣದಲ್ಲಿ ಹೇಳಿಕೆ ದಾಖಲಿಸಲು ಆಗಮಿಸಿದ ಸಾಕ್ಷಿಯೊಬ್ಬರು, ಕೋರ್ಟ್‌ನಲ್ಲಿ ವಕೀಲ ಹಾಗೂ ಆರೋಪಿಯಾಗಿರುವ ಅಮಿತ್ ಚೌಧರಿ ಪಕ್ಕದಲ್ಲೇ ನಿಂತರೂ ಗುರುತಿಸಲಿಲ್ಲ. ಈ ಬೆಳವಣಿಗೆಯು ನ್ಯಾಯಾಧೀಶರಿಗೆ ತನ್ನನ್ನು ತಪ್ಪಾಗಿ ಈ ಕೇಸಿನಲ್ಲಿ ಸಿಕ್ಕಿಸಲಾಗಿದೆ ಎಂದು ಮನವರಿಕೆಯಾಯಿತು ಎನ್ನುತ್ತಾರೆ ಚೌಧರಿ ಅವರು.

ಅಂತಿಮವಾಗಿ ಪುರಾವೆಗಳು ಇಲ್ಲದ್ದರಿಂದ ಇಬ್ಬರು ಪೊಲೀಸ್ ಅಧಿಕಾರಿಗಳ ಕೊಲೆ ಪ್ರಕರಣದಲ್ಲಿ ಅಮಿತ್ ಚೌಧರಿ ಸೇರಿದಂತೆ 13 ಜನರನ್ನು ಇತ್ತೀಚೆಗಷ್ಟೇ ಖುಲಾಸೆಗೊಳಿಸಿತು. ಯಾವುದೇ ತಪ್ಪು ಮಾಡದೇ 12 ವರ್ಷ ಜೈಲಿನಲ್ಲಿ ಕಳೆದ ಚೌಧರಿಗೆ ಸೇನೆ ಸೇರಬೇಕು ಎಂಬ ಆಸೆ ಇತ್ತು. ಆದರೆ, ಈಗ ಎಲ್ಲ ಆದ್ಯತೆಗಳು ಬದಲಾಗಿವೆ. ಅಪರಾಧ ನ್ಯಾಯದಲ್ಲಿ ಪಿಎಚ್‌ಡಿ ಮಾಡುವ ಆಸೆಯನ್ನು ಅಮಿತ್ ಚೌಧರಿ ಹೊಂದಿದ್ದಾರೆ.

ಈ ಸುದ್ದಿಯನ್ನೂ ಓದಿ: ನಿಠಾರಿ ಸರಣಿ ಕೊಲೆ ಪ್ರಕರಣ: ಕೋಲಿ, ಪಂಧೇರ್‌ ಎದುರಿಸುತ್ತಿದ್ದ ಆರೋಪ ಏನು? ಅವರಿಗೇಕೆ ಗಲ್ಲು ಶಿಕ್ಷೆಯಾಗಿತ್ತು?

Continue Reading

ದೇಶ

Akash Anand: ಯಾರಿವರು ಮಾಯಾವತಿ ಉತ್ತರಾಧಿಕಾರಿ ಆಕಾಶ್ ಆನಂದ್?

Akash Anand: 28 ವರ್ಷದ ಆಕಾಶ್ ಆನಂದ್ ಅವರು ಮಾಯಾವತಿಯ ಸಹೋದರನ ಪುತ್ರರಾಗಿದ್ದಾರೆ. ಲಂಡನ್‌ನಲ್ಲಿ ವ್ಯಾಸಂಗ ಮಾಡಿ, ಎಂಬಿಎ ಪದವಿ ಪಡೆದಿದ್ದಾರೆ.

VISTARANEWS.COM


on

Akash anand is BSP Leader mayawati's political heir
Koo

ನವದೆಹಲಿ: ಉತ್ತರ ಪ್ರದೇಶ (Uttar Pradesh) ಮತ್ತು ಉತ್ತರಾಖಂಡ (Uttarakhand) ಹೊರತುಪಡಿಸಿ ಬಹುಜನ ಸಮಾಜ ಪಕ್ಷದ (BSP) ಉತ್ತರಾಧಿಕಾರಿಯಾಗಿ ಮಾಯಾವತಿ (Mayawati) ತಮ್ಮ ಸೋದರಳಿಯ ಆಕಾಶ್ ಆನಂದ್ (Akash Anand) ಅವರನ್ನು ಭಾನುವಾರ ಘೋಷಿಸಿದ್ದಾರೆ. ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಆಕಾಶ್ ಆನಂದ್ (ಮಾಯಾವತಿ ಅವರ ಸೋದರಳಿಯ) ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಘೋಷಿಸಿದ್ದಾರೆ” ಎಂದು ಪಕ್ಷದ ಮುಖಂಡ ಉದಯ್​ವೀರ್ ಸಿಂಗ್ ಸುದ್ದಿ ಸಂಸ್ಥೆ ಎಎನ್ಐಗೆ ಮಾಹಿತಿ ನೀಡಿದ್ದಾರೆ. ಪಕ್ಷದೊಳಗೆ ಆಕಾಶ್ ಆನಂದ್ ಬಗ್ಗೆ ಪರಿಚಯವಿತ್ತು. ಆದರೆ, ದೇಶದ ರಾಜಕಾರಣದಲ್ಲಿ ಅವರು ಹೆಸರು ಅಷ್ಟೇನೂ ಚಿರಪರಿಚಿತವಾಗಿರಲಿಲ್ಲ.

ಆಕಾಶ್ ಆನಂದ್ ಬಿಎಸ್‌ಪಿಯ ರಾಷ್ಟ್ರೀಯ ಸಂಯೋಜಕರಾಗಿದ್ದಾರೆ ಮತ್ತು ಇತ್ತೀಚೆಗೆ ನಡೆದ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಬಿಎಸ್‌ಪಿಯ ಉಸ್ತುವಾರಿಯಾಗಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅವರು ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಬಿಎಸ್‌ಪಿಗಾಗಿ ವ್ಯಾಪಕವಾಗಿ ಕೆಲಸ ಮಾಡಿದರು. ದಲಿತರು, ಧಾರ್ಮಿಕ ಅಲ್ಪಸಂಖ್ಯಾತರು, ಒಬಿಸಿಗಳು ಮತ್ತು ಬುಡಕಟ್ಟು ಜನಾಂಗದವರ ಸಮಸ್ಯೆಗಳನ್ನು ಒಳಗೊಂಡ ಪಕ್ಷದ ಚುನಾವಣಾ ಪ್ರಚಾರವನ್ನು ತಯಾರಿಸಲು ನಿಯೋಗದ ಭಾಗವಾಗಿ ಮಾಯಾವತಿ ಅವರನ್ನು ನಿಯೋಜಿಸಿದ್ದರು.

2017ರಲ್ಲಿ ರಾಜಕೀಯ ಪ್ರವೇಶಿಸಿದ ಆಕಾಶ್

ಆಕಾಶ್ ಆನಂದ್ ತಮ್ಮ 22ನೇ ವಯಸ್ಸಿನಲ್ಲಿ 2017ರಲ್ಲಿ ರಾಜಕಾರಣವನ್ನು ಪ್ರವೇಶಿಸಿದರು. ಲಂಡನ್‌ನಲ್ಲಿ ಓದಿರುವ ಆಕಾಶ್ ಎಂಬಿಎ ಪದವೀಧರರು. ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾಯಾವತಿಯವರೊಂದಿಗೆ ಅವರ ರಾಜಕೀಯ ಚೊಚ್ಚಲ ಪ್ರವೇಶವಾಗಿತ್ತು, ಅಲ್ಲಿ ಅವರು ಅಖಿಲೇಶ್ ಯಾದವ್ ಮತ್ತು ಅಜಿತ್ ಸಿಂಗ್ ಅವರೊಂದಿಗೆ ವೇದಿಕೆ ಹಂಚಿಕೊಂಡರು.

2019ರಲ್ಲಿ ಆಕಾಶ್ ಆನಂದ್ ಉತ್ತರ ಪ್ರದೇಶದ ಆಗ್ರಾದಲ್ಲಿ ತಮ್ಮ ಮೊದಲ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಆಗ ಬಿಎಸ್‌ಪಿ ಮಹಾಘಟಬಂಧನ್‌ನ ಒಂದು ಭಾಗವಾಗಿತ್ತು, ಇದು 2019 ರ ಸಾರ್ವತ್ರಿಕ ಚುನಾವಣೆಯ ಪೂರ್ವದಲ್ಲಿ ಅಜಿತ್ ಸಿಂಗ್ ಅವರ ರಾಷ್ಟ್ರೀಯ ಲೋಕದಳದೊಂದಿಗೆ ಅಖಿಲೇಶ್ ಯಾದವ್ ಮತ್ತು ಮಾಯಾವತಿ ನೇತೃತ್ವದಲ್ಲಿ ರಚನೆಯಾದ ಕಾಂಗ್ರೆಸ್ ಮತ್ತು ಬಿಜೆಪಿ ವಿರೋಧಿ ಬಣವಾಗಿತ್ತು.

ಪಾದಯಾತ್ರೆ ಸಂಘಟಿಸಿದ್ದ ಆಕಾಶ್ ಆನಂದ್

ಸಾಮಾನ್ಯವಾಗಿ ಬಹುಜನ ಸಮಾಜ ಪಾರ್ಟಿಯ ಪಾದಯಾತ್ರೆಗಳಂಥ ರಾಜಕೀಯ ಚಟುವಟಿಕೆಗಳನ್ನು ನಡೆಸುವುದಿಲ್ಲ. ಆದರೆ, ಆಕಾಶ್ ಆನಂದ್ ಅವರು ಈ ಪದ್ಧತಿಯನ್ನು ಮುರಿದು ಇದೇ ಮೊದಲ ಬಾರಿಗೆ, 14 ದಿನಗಳ ಸರ್ವಜನ ಹಿತಾಯ, ಸರ್ವಜನ ಸುಖಾಯ ಸಂಕಲ್ಪ ಯಾತ್ರೆಯನ್ನು ಕೈಗೊಂಡಿದ್ದರು. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಮತ್ತು ರಾಜಸ್ಥಾನದ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅವರು ಈ ಯಾತ್ರೆ ನಡೆಸಿದ್ದರು.

ಮಾಯಾವತಿ ಅವರು ಆಕಾಶ್ ಆನಂದ್ ಅವರನ್ನು ದೀರ್ಘಾವಧಿಗೆ ಸಿದ್ಧ ಮಾಡುತ್ತಿದ್ದರು. ಮಾಯಾವತಿಯವರ ಸಹೋದರ ಆನಂದ್ ಕುಮಾರ್ ಅವರ ಪುತ್ರರಾಗಿರುವ 28 ವರ್ಷದ ಆಕಾಶ್ ಆನಂದ್ ಬಿಎಸ್ಪಿ ವಲಯಗಳಲ್ಲಿ ಚಿರಪರಿಚಿತ ಹೆಸರು. ಇನ್‌ಸ್ಟಾಗ್ರಾಮದಲ್ಲಿ ಅವರು ತಮ್ಮನ್ನು ತಾವು “ಬಾಬಾ ಸಾಹೇಬ್ ಅವರ ದೃಷ್ಟಿಯ ಯುವ ಬೆಂಬಲಿಗರು. ನಾನು ಶಿಕ್ಷಣ, ಸಬಲೀಕರಣ ಮತ್ತು ಸಮಾನತೆಗಾಗಿ ನಿಲ್ಲುತ್ತೇನೆ” ಎಂದು ಕರೆದುಕೊಂಡಿದ್ದಾರೆ.

ಈ ಸುದ್ದಿಯನ್ನೂ ಓದಿ: Mayawati : ಸೋದರಳಿಯನನ್ನೇ ಉತ್ತರಾಧಿಕಾರಿಯಾಗಿ ಘೋಷಿಸಿದ ಬಿಎಸ್​ಪಿ ನಾಯಕಿ ಮಾಯಾವತಿ

Continue Reading

ದೇಶ

Chhattisgarh CM: ವಿಷ್ಣು ದೇವ ಸಾಯಿ ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿ

Vishnu Deo Sai: 90 ಸ್ಥಾನಗಳಿರುವ ಛತ್ತೀಸ್‌ಗಢ ವಿಧಾನಸಭೆಯಲ್ಲಿ ಬಿಜೆಪಿ 54 ಸ್ಥಾನಗಳನ್ನು ಗೆದ್ದುಕೊಂಡು ಭರ್ಜರಿ ಜಯ ಸಾಧಿಸಿತ್ತು.

VISTARANEWS.COM


on

Vishnu Deo Sai New chief minister of Chhattisgarh
Koo

ನವದೆಹಲಿ: ಛತ್ತೀಸ್‌ಗಢ ನೂತನ ಮುಖ್ಯಮಂತ್ರಿಯಾಗಿ (Chhattisgarh Chief Minister) ಭಾರತೀಯ ಜನತಾ ಪಾರ್ಟಿಯು (BJP Party) ವಿಷ್ಣು ದೇವ ಸಾಯಿ (Vishnu Deo Sai) ಅವರನ್ನು ಆಯ್ಕೆ ಮಾಡಿದೆ. ಈ ಮೂಲಕ ಒಂದು ವಾರದಿಂದ ಉಂಟಾಗಿದ್ದ ಕುತೂಹಲಕ್ಕೆ ತೆರೆ ಬಿದ್ದಿದೆ. ಮುಖ್ಯಮಂತ್ರಿ ರೇಸ್‌ನಲ್ಲಿ ಮಾಜಿ ಸಿಎಂ ರಮಣ್ ಸಿಂಗ್, ಬಿಜೆಪಿ ಅಧ್ಯಕ್ಷ ಅರುಣ್ ಸಾವೋ ಸೇರಿದಂತೆ ಹಲವು ನಾಯಕರ ಹೆಸರಿದ್ದವು. ಅಂತಿಮವಾಗಿ ಕೇಂದ್ರ ನಾಯಕತ್ವ ವಿಷ್ಣು ದೇವ ಸಾಯಿ ಅವರನ್ನು ಆಯ್ಕೆ ಮಾಡಿದೆ. ವಿಷ್ಮು ದೇವ ಸಾಯಿ ಅವರು ಆದಿವಾಸಿ ಸಮುದಾಯದ ಮುಖವಾಗಿದ್ದಾರೆ.

ಭಾನುವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಈ ವೇಳೆ, ಎಲ್ಲ ಶಾಸಕರ ಅಭಿಪ್ರಾಯವನ್ನು ಪಡೆದು ಅಂತಿಮವಾಗಿ ಹೊಸ ಮುಖ್ಯಮಂತ್ರಿಯನ್ನು ಘೋಷಣೆ ಮಾಡಲಾಗಿದೆ. ವೀಕ್ಷಕರಾಗಿ ಬಿಜೆಪಿ ನಾಯಕರಾದ ಬಿಜೆಪಿ ನಾಯಕರಾದ ಸರ್ಬಾನಂದ್ ಸೋನೋವಾಲ, ಅರ್ಜುನ ಮುಂಡಾ ಆಗಮಿಸಿದ್ದರು.

ವಿಷ್ಣು ದೇವ ಸಾಯಿ ಅವರು ಕುಂಕುರಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 87,604 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಬಿಜೆಪಿಯ ಮಾಜಿ ರಾಜ್ಯ ಮುಖ್ಯಸ್ಥರಾದ ದೇವ್ ಸಾಯಿ ಅವರು ಬುಡಕಟ್ಟು ಮುಖವನ್ನು ಆಯ್ಕೆ ಮಾಡಿದರೆ ಮುಖ್ಯಮಂತ್ರಿ ಹುದ್ದೆಗೆ ಪಕ್ಷದ ಮೊದಲ ಆಯ್ಕೆಯಾಗುತ್ತಾರೆ ಎಂದು ಊಹಿಸಲಾಗಿತ್ತು.

ವಿಷ್ಣದೇವ್ ಸಾಯ ಅವರು ಈ ಮೊದಲು ಮೋದಿ ಸಂಪುಟದಲ್ಲ ಕೇಂದ್ರ ಉಕ್ಕು ಇಲಾಖೆಯ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 16 ನೇ ಲೋಕಸಭೆಯಲ್ಲಿ ಛತ್ತೀಸ್‌ಗಢದ ರಾಯಗಢ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ವಿಷ್ಣು ದೇವ ಸಾಯಿ ಅವರು 2020ರಿಂದ 2022ರವರೆಗೆ ಛತ್ತೀಸ್‌ಗಢ ಬಿಜೆಪಿ ಅಧಯಕ್ಷರೂ ಆಗಿ ಕಾರ್ಯ ನಿರ್ವಹಿಸಿದ್ದಾರೆ.

ರಾಜಸ್ಥಾನ ಮತ್ತು ಛತ್ತೀಸ್‌ಗಢದಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಯಶಸ್ವಿಯಾಗಿದೆ. ಮಧ್ಯಪ್ರದೇಶವನ್ನು ಭರ್ಜರಿ ಜಯದೊಂದಿಗೆ ಉಳಿಸಿಕೊಂಡಿದೆ. ಇದು ಕೇಸರಿ ಪಕ್ಷವು ಹಿಂದಿಯ ಹೃದಯಭಾಗದಲ್ಲಿ ತನ್ನ ಹಿಡಿತವನ್ನು ಬಿಗಿಗೊಳಿಸುವುದಕ್ಕೆ ಕಾರಣವಾಯಿತು ಮತ್ತು 2024 ರ ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ದೊಡ್ಡ ಉತ್ತೇಜನವನ್ನು ನೀಡಲಿದೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನೂ ಓದಿ: Revanth Reddy: ರೇವಂತ್ ರೆಡ್ಡಿ ತೆಲಂಗಾಣ ನೂತನ ಮುಖ್ಯಮಂತ್ರಿ; ಕಾಂಗ್ರೆಸ್ ಘೋಷಣೆ

Continue Reading
Advertisement
Killers who killed lawyer for property in kalaburagi
ಕರ್ನಾಟಕ24 mins ago

ವಕೀಲನ ಹತ್ಯೆ ಮಾಡಿ ರಕ್ತದ ಕೈಯಲ್ಲೇ ದಂಪತಿಯಿಂದ ಹಣ ಪಡೆದಿದ್ದ ಸುಪಾರಿ ಕಿಲ್ಲರ್ಸ್‌!

air india
ಉದ್ಯೋಗ25 mins ago

Job Alert: ಏರ್‌ ಇಂಡಿಯಾದಲ್ಲಿದೆ ಉದ್ಯೋಗಾವಕಾಶ; ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

man accused of murder wins acquittal after studying law and fighting own Case
ದೇಶ28 mins ago

ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಅಮಾಯಕ, ಲಾ ಓದಿ ತನ್ನ ಕೇಸನ್ನು ತಾನೇ ಗೆದ್ದ!

Kate Cross reveals ‘soft spot for RCB’ after bagging deal
ಕ್ರಿಕೆಟ್29 mins ago

ಚೆನ್ನೈ ತಂಡದ ಕಟ್ಟರ್‌ ಅಭಿಮಾನಿಯನ್ನು ಖರೀದಿ ಮಾಡಿದ ಆರ್​ಸಿಬಿ ಫ್ರಾಂಚೈಸಿ

Mysore people
ಕರ್ನಾಟಕ37 mins ago

Congress Guarantee: ಸಿಎಂ ಸಿದ್ದರಾಮಯ್ಯ ತವರಲ್ಲೇ ಸಿಗದ ಗ್ಯಾರಂಟಿ ಯೋಜನೆಗಳು; ಸ್ಲಂ ನಿವಾಸಿಗಳ ಪರದಾಟ

Winter Food Tips
ಆಹಾರ/ಅಡುಗೆ52 mins ago

Winter Food Tips: ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡುವ ದೇಸೀ ಸಿಹಿತಿಂಡಿಗಳಿವು!

ipl fans
ಕ್ರಿಕೆಟ್1 hour ago

IPL 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​; ಐಪಿಎಲ್​ ಆರಂಭಕ್ಕೆ ಡೇಟ್​ ಫಿಕ್ಸ್!​

Moral policing
ಕರ್ನಾಟಕ2 hours ago

Moral Policing: ಉಪ್ಪಿನಂಗಡಿಯಲ್ಲಿ ಮುಸ್ಲಿಂ ವಿದ್ಯಾರ್ಥಿ ಜೋಡಿಗೆ ತಡೆದು ಧಮಕಿ!

Akash anand is BSP Leader mayawati's political heir
ದೇಶ2 hours ago

Akash Anand: ಯಾರಿವರು ಮಾಯಾವತಿ ಉತ್ತರಾಧಿಕಾರಿ ಆಕಾಶ್ ಆನಂದ್?

Cloudy weather in Bengaluru for the entire day Rain Forecast
ಉಡುಪಿ2 hours ago

Karnataka weather: ಬೆಂಗಳೂರಲ್ಲಿ ನಾಳೆ ಇಡೀ ದಿನ ಮೋಡ ಕವಿದ ವಾತಾವರಣ; ಇಲ್ಲಷ್ಟೇ ಮಳೆ ಸೂಚನೆ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ3 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ6 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ14 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌