ಚಂದ್ರನು ಭಾನುವಾರ ಕುಂಭರಾಶಿಯನ್ನು ಪ್ರವೇಶ ಮಾಡಲಿದ್ದಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರ ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಮಾತಿನಲ್ಲಿ ಹಿಡಿತವಿರಲಿ. ಮಕರ ರಾಶಿಯವರಿಗೆ ಕೋಪದ ಸ್ವಭಾವವು ಜಗಳ ತರುವ ಸಾಧ್ಯತೆ ಇದೆ. ಕಟಕ ರಾಶಿಯವರಿಗೆ ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಹೆಚ್ಚಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (22-10-2023)
ಮೇಷ: ಸ್ನೇಹಿತರು ಅಥವಾ ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಾಸವಾಗಿ ಖರ್ಚು ಹೆಚ್ಚಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಅತಿಥಿಗಳ ಆಗಮನದಿಂದ ನಿಮ್ಮ ಯೋಜಿತ ಕಾರ್ಯದಲ್ಲಿ ವಿಳಂಬವಾಗುವ ಸಾಧ್ಯತೆ ಇದೆ. ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ ಇದ್ದು, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ವೃಷಭ: ಕೆಲಸ ಕಾರ್ಯಗಳಲ್ಲಿ ಯಶಸ್ಸು, ಪ್ರಶಂಸೆ ಸಿಗುವುದು. ದಿನದ ಮಟ್ಟಿಗೆ ಖರ್ಚು ಹೆಚ್ಚಲಿದೆ. ಸಂಬಂಧವಿರದ ವಿಷಯಗಳಿಗೆ ಕಿವಿಗೊಡುವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆದಕಿ ಗಾಯ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮ ಪ್ರಮಾಣದಲ್ಲಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3
ಮಿಥುನ: ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ಇದರಿಂದ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತವಾಗಿ ಖರ್ಚು ಹೆಚ್ಚಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ಕಟಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಗೃಹ ಬಳಕೆ ಸಾಧನಗಳ ಖರೀದಿ ಸಾಧ್ಯತೆಯಿಂದ ಖರ್ಚು ಹೆಚ್ಚಲಿದೆ. ವ್ಯಾಪಾರ – ವ್ಯವಹಾರದಲ್ಲಿ ಪ್ರಗತಿ ಸಾಧಿಸುವಿರಿ. ಅತಿಥಿಗಳ ಆಗಮನ ಹರ್ಷ ತರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಹೆಚ್ಚಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಸಿಂಹ: ನಿಮ್ಮ ಮಾತುಗಳಿಂದ ಇತರರನ್ನು ಆಕರ್ಷಿಸುವಿರಿ. ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ, ಮಿತಿಯಿಂದ ಸೇವನೆ ಮಾಡಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಸಾಧಿಸುವಿರಿ. ಸಂಗಾತಿಯ ಮಾತುಗಳು ಮಧುರವೆನಿಸಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕನ್ಯಾ: ನಿಮ್ಮ ತ್ಯಾಗದ ಮನೋಭಾವವು ಸಂತಸ ತರುವುದು. ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ. ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದಲ್ಲಿ ಅನಾವಶ್ಯಕ ಮಾತುಗಳಿಂದ ಜಗಳವಾಗಬಹುದು, ಮೌನದಿಂದ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ನಿಮ್ಮ ಕಾರ್ಯಗಳ ಬಗ್ಗೆ ಇತರರು ಪ್ರಶಂಸೆ ವ್ಯಕ್ತಪಡಿಸುತ್ತಾರೆ. ಹಣಕಾಸಿನ ಹರಿವು ಹೆಚ್ಚಾಗಲಿದೆ. ವ್ಯಾಪಾರ – ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿನಾಕಾರಣ ಜಗಳ ಮಾಡಿ ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4
ವೃಶ್ಚಿಕ: ಇತರರನ್ನು ಟೀಕಿಸಲು ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುವುದು ಬೇಡ. ಅನಾವಶ್ಯಕವಾಗಿ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳಬೇಡಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಸಾಧಿಸುವಿರಿ. ಉದ್ಯೋಗಿಗಳಿಗೆ ಶುಭ ಫಲ ಉಂಟಾಗಲಿದೆ. ಕುಟುಂಬದಲ್ಲಿ ಹಳೆಯ ವಿಚಾರಗಳು ಕಲಹ ಸೃಷ್ಟಿಸಬಹುದಾಗಿದ್ದು, ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5
ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಮೇಲೆ ಗಮನವಿರಲಿ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ನಿಮ್ಮ ಸಿಟ್ಟನ್ನು ವಿನಾಕಾರಣ ಸಂಗಾತಿಯ ಮೇಲೆ ತೋರಿಸಬೇಡಿ. ಹಾಗೆ ಮಾಡಿ ಕುಟುಂಬದ ವಾತಾವರಣ ಕೆಡಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2
ಮಕರ: ನಿಮ್ಮ ಕೋಪದ ಸ್ವಭಾವದಿಂದ ಇತರರೊಂದಿಗೆ ವಾದಕ್ಕಿಳಿಯಬೇಡಿ. ಆತುರದಲ್ಲಿ ಆಡುವ ಅತಿರೇಕದ ಮಾತುಗಳು ಜಗಳ ತಂದೀತು. ಆರೋಗ್ಯದ ಕಡೆಗೆ ಗಮನವಿರಲಿ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆತ್ಮೀಯರೊಂದಿಗೆ ಪ್ರಯಾಣಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಕುಂಭ: ಕೆಲಸಕ್ಕೆ ಹಾಕಿದ ಶ್ರಮ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸಿ. ಆತುರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ತಾಳ್ಮೆಯಿಂದ ಮಾತನಾಡಿ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಮೀನ: ರಹಸ್ಯ ಕಾರ್ಯಗಳು ಯಶಸ್ಸು ತಂದು ಕೊಡಲಿವೆ. ಕುಟುಂಬಕ್ಕೆ ಸಮಯವನ್ನು ನೀಡುವಿರಿ. ವಿನಾಕಾರಣ ಕೋಪಗೊಂಡು ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಖರ್ಚು ಹೆಚ್ಚಾಗಲಿದೆ. ಸಂಗಾತಿ ನಿಮ್ಮ ಮನಸ್ಸಿನ ಭಾವನೆಗಳಿಗೆ ಸ್ಪಂದಿಸುವರು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com