ಚಂದ್ರನು ಮಂಗಳವಾರ ಕಟಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಷಭ ರಾಶಿಯವರು ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಪ್ರಶಂಸೆ ಸಿಗುವುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಬಂಧವಿರದ ವಿಷಯಗಳಿಗೆ ಕಿವಿಗೊಡವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆರಳಿಸಿ ಗಾಯ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (22-10-2024)
ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷ.
ತಿಥಿ: ಷಷ್ಠಿ 25:28 ವಾರ: ಮಂಗಳವಾರ
ನಕ್ಷತ್ರ: ಆರಿದ್ರಾ 29:37 ಯೋಗ: ಪರಿಘ 08:44
ಕರಣ: ಗರಜ 13:52 ಅಮೃತಕಾಲ: ರಾತ್ರಿ 07:44 ರಿಂದ 09:19
ಸೂರ್ಯೋದಯ : 06:11 ಸೂರ್ಯಾಸ್ತ : 05:57
ಮೇಷ: ಸ್ನೇಹಿತರು ಅಥವಾ ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಾಸದಿಂದ ಖರ್ಚು ಇರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಅತಿಥಿಗಳ ಆಗಮನ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ ಇದ್ದು, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4
ವೃಷಭ: ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಪ್ರಶಂಸೆ ಸಿಗುವುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಬಂಧವಿರದ ವಿಷಯಗಳಿಗೆ ಕಿವಿಗೊಡವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆರಳಿಸಿ ಗಾಯ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.ಅದೃಷ್ಟ ಸಂಖ್ಯೆ: 3
ಮಿಥುನ: ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದ್ದು, ಇದರಿಂದ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಖರ್ಚು ಇರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1
ಕಟಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಗೃಹಬಳಕೆ ಸಾಧನಗಳ ಖರೀದಿ ಸಾಧ್ಯತೆಯಿಂದ ಖರ್ಚು ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನ ಹರ್ಷ ತರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5
ಸಿಂಹ: ನಿಮ್ಮ ಆಕರ್ಷಕ ಮಾತುಗಳಿಂದ ಇತರರನ್ನು ಆಕರ್ಷಸುವಿರಿ. ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ, ಮಿತಿಯಿರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಂಗಾತಿಯ ಮಾತುಗಳು ಮಧುರವೇನಿಸುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3
ಕನ್ಯಾ: ನಿಮ್ಮ ತ್ಯಾಗದ ಮನೋಭಾವ ನಿಮಗೆ ಸಂತಸ ತರುವುದು. ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ, ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದಲ್ಲಿ ಅನಾವಶ್ಯಕ ಮಾತುಗಳಿಂದ ಜಗಳವಾಗಬಹುದು, ಮೌನದಿಂದ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಇತರರು ನಿಮ್ಮ ಕಾರ್ಯಗಳನ್ನು ಪ್ರಶಂಸೆ ಮಾಡುವರು. ಹಣಕಾಸಿನ ಹರಿವು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಹದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿನಾಕಾರಣ ಜಗಳ ಮಾಡಿ ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4
ವೃಶ್ಚಿಕ:ಇತರರನ್ನು ಟೀಕಿಸಲು ನಿಮ್ಮ ಅಮೂಲ್ಯ ಸಮಯ ವ್ಯರ್ಥ ಮಾಡುವುದು ಬೇಡ. ಅನಾವಶ್ಯಕ ವಿಚಾರ ಮಾಡಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭ. ಕುಟುಂಬದಲ್ಲಿ ಹಳೆಯ ವಿಚಾರಗಳು ಕಲಹ ಸೃಷ್ಟಿಸಬಹುದು, ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5
ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಮೇಲೆ ಗಮನವಿರಲಿ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ನಿಮ್ಮ ಸಿಟ್ಟು ಸಂಗಾತಿಯ ಮೇಲೆ ಹಾಕಿ, ಕುಟುಂಬದ ವಾತಾವರಣ ಕೆಡಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2
ಮಕರ: ನಿಮ್ಮ ಕೋಪದ ಸ್ವಭಾವದಿಂದ ಇತರರೊಂದಿಗೆ ವಾದಕ್ಕೆಳಿಯಬೇಡಿ. ಆತುರದಲ್ಲಿ ಅತಿರೇಕದ ಮಾತುಗಳು ಜಗಳ ತಂದಿತು. ಆರೋಗ್ಯದ ಕಡೆಗೆ ಗಮನವಿರಲಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಆತ್ಮೀಯರೊಂದಿಗೆ ಪ್ರಯಾಣಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2
ಕುಂಭ: ಕೆಲಸಕ್ಕೆ ಹಾಕಿದ ಶ್ರಮ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸಿ. ಆತುರದಲ್ಲಿ ಅತಿರೇಕದ ಮಾತುಗಳನ್ನಾಡುವುದು ಸರಿಯಲ್ಲ, ತಾಳ್ಮೆಯಿಂದ ಮಾತನಾಡಿ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9
ಮೀನ: ರಹಸ್ಯ ಕಾರ್ಯಗಳು ಯಶಸ್ಸು ತಂದು ಕೊಡಲಿವೆ. ಕುಟುಂಬಕ್ಕೆ ಸಮಯವನ್ನು ನೀಡುವಿರಿ. ವಿನಾಕಾರಣ ಕೋಪಗೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ, ಖರ್ಚು ಹೆಚ್ಚಾಗಲಿದೆ. ಸಂಗಾತಿ ನಿಮ್ಮ ಮನಸ್ಸಿನ ಭಾವನೆಗಳಿಗೆ ಸ್ಪಂದಿಸುವಳು. ಮಧುರ ಪ್ರೇಮ ಅಂಕುರವಾಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com