Site icon Vistara News

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಹೂಡಿಕೆ ಮಾಡ್ಬೇಡಿ

Dina Bhavishya

ಚಂದ್ರನು ಸೋಮವಾರವೂ ಕುಂಭ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ ಹಾಗೂ ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಸಿಂಹ ರಾಶಿಯ ಉದ್ಯೋಗ ಅಪೇಕ್ಷಿತರಿಗೆ ಇಂದು ಉದ್ಯೋಗದ ಭರವಸೆ ಸಿಗಲಿದೆ. ತುಲಾ ರಾಶಿಯವರು ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆ ಬೇಡ ಮಾಡಬೇಡಿ. ಮೀನ ರಾಶಿಯವರು ಮಹತ್ವಾಕಾಂಕ್ಷೆಯ ಕೆಲಸ ಕಾರ್ಯಗಳು ಕುಂಠಿತವಾಗುವ ಸಾಧ್ಯತೆ ಇದೆ ಹೀಗಾಗಿ ಗೌಪ್ಯ ವಿಷಯಗಳು ಬಹಿರಂವಾಗದಿರಲಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (23-10-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷ.
ತಿಥಿ: ನವಮಿ 17:44
ವಾರ: ಸೋಮವಾರ
ನಕ್ಷತ್ರ: ಶ್ರವಣಾ 17:13 ಯೋಗ: ಶೂಲ 18:51
ಕರಣ: ಬಾಲವ 06:53 ಅಮೃತ ಕಾಲ: ಬೆಳಗ್ಗೆ 7:29ರಿಂದ 8:59ರವರೆಗೆ
ದಿನದ ವಿಶೇಷ: ಶರನ್ನವರಾತ್ರಿ ಮಾತಾ ಸಿದ್ಧಿರಾತ್ರಿ ಅವತಾರ, ಮಹಾನವಮಿ, ಆಯುಧ ಪೂಜೆ

ಸೂರ್ಯೋದಯ : 06:11  ಸೂರ್ಯಾಸ್ತ : 05:57

ರಾಹುಕಾಲ: ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಉತ್ಸಾಹದ ವಾತಾವರಣ ಇರಲಿದೆ. ಆಪ್ತರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ ದೊರೆಯಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ವೃಷಭ: ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ನಿಮ್ಮ ವ್ಯಕ್ತಿತ್ವ ಇತತರನ್ನು ಆಕರ್ಷಿಸಿ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಅದೃಷ್ಟ ಸಂಖ್ಯೆ: 5

ಮಿಥುನ: ಸಂತಸದ ಕ್ಷಣಗಳನ್ನು ಕಳೆಯುವಿರಿ. ಆರ್ಥಿಕ ಪ್ರಗತಿ ಇರಲಿದೆ. ಬಹಳ ದಿನಗಳ ಬಾಕಿ ಇರುವ ಕಾರ್ಯವು ಪೂರ್ಣವಾಗುವುದು. ಮನೆಯಲ್ಲಿ ಪರಸ್ಪರ ಸಹಕಾರ ಸಿಗುವುದು, ಉತ್ಸಾಹದ ದಿನವಿದು.
ಅದೃಷ್ಟ ಸಂಖ್ಯೆ: 3

ಕಟಕ: ಆಕರ್ಷಕ ವ್ಯಕ್ತಿತ್ವ ಹೊಂದಿರುವ ನೀವು ಇಂದು ಇತತರನ್ನು ಆಕರ್ಷಿಸುವಿರಿ. ಆರ್ಥಿಕ ಪ್ರಗತಿ ಸಾಧಾರಣವಾಗಿದ್ದರೂ ಸಮರ್ಥವಾಗಿ ನಿರ್ವಹಿಸುವಿರಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಮಡದಿಯ ಪ್ರೀತಿಗೆ ಸೋಲುವಿರಿ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 7

ಸಿಂಹ: ಉದ್ಯೋಗ ಅಪೇಕ್ಷಿತರಿಗೆ ಇಂದು ಉದ್ಯೋಗದ ಭರವಸೆ ಸಿಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಪರಿಶ್ರಮಕ್ಕೆ ಪ್ರತಿ ಫಲ ಸಿಗುವುದು. ಮನೆಯವರ ಪ್ರೀತಿ ಸಹಕಾರ ಸಿಗಲಿದೆ.ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 5

ಕನ್ಯಾ: ಮನೆಯಲ್ಲಿ ಕಲಹದಿಂದ ವಾತಾವರಣ ಹದಗೆಡಬಹುದು.ಕೆಲಸದಲ್ಲಿ ಹಿರಿಯರಿಂದ ಒತ್ತಡ ಇರಲಿದೆ. ಹೀಗಾಗಿ ಎಚ್ಚರಿಕೆ ವಹಿಸಿ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆ ಬೇಡ ಮಾಡಬೇಡಿ. ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಮನೆಯಲ್ಲಿ ಸಂತೋಷದ ದಿನ.
ಅದೃಷ್ಟ ಸಂಖ್ಯೆ: 8

ವೃಶ್ಚಿಕ: ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಹೊಂದಲು ಹಿರಿಯರು ಮಾರ್ಗದರ್ಶನ ನೀಡಲಿದ್ದಾರೆ. ಧೈರ್ಯದಿಂದ ಕಾರ್ಯದಲ್ಲಿ ಮುನ್ನುಗ್ಗಿ ಯಶ ಸಿಗುವುದು. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 5

ನವರಾತ್ರಿಯಲ್ಲಿ ಈ ಪೂಜೆಯನ್ನು ಏಕೆ ಮಾಡಬೇಕು

ಧನಸ್ಸು: ಕುಟುಂಬ ಸದಸ್ಯರ ಆರೋಗ್ಯ ಸಂಬಂಧಿ ವಿಷಯಗಳು ಒತ್ತಡ ಉಂಟುಮಾಡಬಹುದು. ಉದಾಸೀನತೆ ಮಾಡುವುದು ಬೇಡ. ಆಶಾವಾದಿಗಳಾಗಿರಿ ಕುಲದೇವರನ್ನು ಸ್ಮರಿಸಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಮಕರ: ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಕಿರಿಕಿರಿ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಆಲಸ್ಯದಿಂದ ದೂರವಿದ್ದು ಕಾರ್ಯ ಪೂರ್ಣ ಮಾಡಿ. ಕೆಲಸದ ಒತ್ತಡದಿಂದ ಮನೆಯ ಸದಸ್ಯರ ಮೇಲೆ ಹಾಕಿ, ವಾತಾವರಣ ಹದಗೆಡಲು ಕಾರಣವಾಗಬೇಡಿ. ಗುರುಗಳ ಆರಾಧನೆ ಮಾಡಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಕುಂಭ: ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರುವುದು. ಅನ್ಯರು ಆಡುವ ಕುಹುಕು ಮಾತುಗಳಿಗೆ ಧ್ವನಿಯಾಗಬೇಡಿ.ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 3

ಮೀನ: ನಿಮ್ಮ ಮಹತ್ವಾಕಾಂಕ್ಷೆಯ ಕೆಲಸ ಕಾರ್ಯಗಳು ಕುಂಠಿತವಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂವಾಗದಿರಲಿ. ಆರ್ಥಿಕ ನಷ್ಟದಿಂದ ತಪ್ಪಿಸಿಕೊಳ್ಳಿ. ಸಂಗಾತಿಯ ಮಾತುಗಳು ಹಿತವೆನಿಸುದು. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 9

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version