ಚಂದ್ರನು ಗುರುವಾರ ಕರ್ಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಇಂದು ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಕನ್ಯಾ ರಾಶಿಯವರಿಗೆ ದೀರ್ಘಕಾಲದ ಕೆಲಸ ಕಾರ್ಯಗಳು ಇಂದು ಯಶಸ್ಸನ್ನು ತಂದು ಕೊಡಲಿದೆ. ಆದಾಯದ ಮೂಲ ಹೆಚ್ಚಾಗಲಿದೆ. ಮೀನ ರಾಶಿಯವರಿಗೆ ಇಂದು ಸಂಗಾತಿಯು ಮುಖ್ಯ ವಿಷಯದ ಕುರಿತು ಚರ್ಚಿಸಬಹುದು. ಉದ್ಯೋಗಿಗಳಿಗೆ ಮಧ್ಯಮ ಫಲ ದೊರೆಯಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (5-10-2023)
ಮೇಷ: ಇಂದು ನಿಮ್ಮ ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ ಸುದ್ದಿ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಜಾಸ್ತಿ. ಸಂಗಾತಿಯ ಮಧುರ ಮಾತುಗಳು ಹಿತವೆನಿಸುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ವೃಷಭ: ಕುಟುಂಬದ ಆಪ್ತರಿಂದ ಆರ್ಥಿಕ ಸಹಾಯದ ಬೇಡಿಕೆ ಬರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ವಿದ್ಯಾರ್ಥಿಗಳು ಮನೋಬಲ ಹೆಚ್ಚಿಸಿಕೊಳ್ಳುವುದು ಅವಶ್ಯಕ. ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗುವುದು. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಉಂಟಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3
ಮಿಥುನ: ಸದಾ ಕಲ್ಪನೆಯಲ್ಲಿ ಕನಸುಗಳನ್ನು ಕಾಣುವುದು ವೃಥಾ ಕಾಲಹರಣ ಮಾಡಿದಂತೆ. ಬೇರೆಯವರಿಗೆ ಆರ್ಥಿಕವಾಗಿ ಸಹಾಯ ಮಾಡಿ ನೀವು ಹಣಕಾಸಿನ ಸಮಸ್ಯೆಯಲ್ಲಿ ಸಿಲುಕುವುದು ಬೇಡ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಹಾಗೂ ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1
ಕಟಕ: ಕುಟುಂಬದ ಸದಸ್ಯರಿಂದ ಆರ್ಥಿಕ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಶುಭಫಲ ಇರಲಿದೆ. ಹಣದ ಹರಿವು ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಪ್ರಗತಿ ಸಾಧಿಸುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತ ವ್ಯಕ್ತಿಗಳೊಂದಿಗೆ ಮಾತುಕತೆ ನಡೆಸುವಿರಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4
ಸಿಂಹ: ಕೆಲವು ಘಟನೆಗಳು ಮನಸ್ಸಿನ ಮೇಲೆ ಪರಿಣಾಮ ಬೀರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹೋದ್ಯೋಗಿಗಳಿಂದ ಬೆಂಬಲ ಸಿಗಲಿದೆ. ಕ್ಷೇತ್ರ ದರ್ಶನದಿಂದ ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 3
ಕನ್ಯಾ: ದೀರ್ಘಕಾಲದ ಕೆಲಸ ಕಾರ್ಯಗಳು ಇಂದು ಯಶಸ್ಸನ್ನು ತಂದು ಕೊಡಲಿದೆ. ಆದಾಯದ ಮೂಲ ಹೆಚ್ಚಾಗಲಿದೆ. ಆಪ್ತರೊಂದಿಗೆ ಮಾತುಕತೆ ನಡೆಸುವಿರಿ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ, ಕುಟುಂಬದ ವಾತಾವರಣ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿ ಉಂಟಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಆತ್ಮವಿಶ್ವಾಸದಿಂದ ಕೆಲಸಕಾರ್ಯಗಳಲ್ಲಿ ಪ್ರಗತಿ ಸಾಧಿಸಿ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ಹಣಕಾಸು, ಉದ್ಯೋಗ ಹಾಗೂ ವ್ಯಾಪಾರದಲ್ಲಿ ಪ್ರಗತಿಯನ್ನು ಹೊಂದುವಿರಿ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಕಾಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3
ವೃಶ್ಚಿಕ: ಆರೋಗ್ಯದ ಕುರಿತು ಕಾಳಜಿ ಇರಲಿ. ನ್ಯಾಯಾಲಯದಲ್ಲಿರುವ ವ್ಯಾಜ್ಯಗಳು ವಿಜಯವನ್ನು ತಂದುಕೊಡುವ ಸಾಧ್ಯತೆ ಇದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿಯನ್ನು ಹೊಂದುವಿರಿ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5
ಧನಸ್ಸು: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಹಾದಿ ಅತ್ಯವಶ್ಯಕ. ಹಣಕಾಸು ವಿಷಯದಲ್ಲಿ ಪ್ರಗತಿ ಸಾಧಿಸುವಿರಿ. ಉದ್ಯೋಗಿಗಳಿಗೆ ಮಿಶ್ರಫಲ ಇರಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಾಧಿಸುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2
ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ?
ಮಕರ: ಬುದ್ಧಿವಂತಿಕೆಯಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಮತ್ತು ಕೀರ್ತಿ ಸಿಗುವುದು. ಶೀಘ್ರ ಕೋಪ ಅಪಾಯ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಲಾಭವಾಗಲಿದೆ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 2
ಕುಂಭ: ದುಂದು ವೆಚ್ಚವನ್ನು ತಪ್ಪಿಸಿ. ಬುದ್ಧಿವಂತಿಕೆಯಿಂದ ಕೆಲಸ ಮಾಡಿ. ಆದರೆ, ವ್ಯರ್ಥ ಪ್ರಯತ್ನ ಮಾಡುವುದು ಬೇಡ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9
ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?
ಮೀನ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಸಂಗಾತಿ ಇಂದು ನಿಮ್ಮೊಂದಿಗೆ ಮುಖ್ಯ ವಿಷಯದ ಕುರಿತು ಚರ್ಚಿಸಬಹುದು. ಉದ್ಯೋಗಿಗಳಿಗೆ ಮಧ್ಯಮ ಫಲ ದೊರೆಯಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com