Dina Bhavishya : ಈ ರಾಶಿಯವರಿಗೆ ಇಂದು ಮನೆಯಲ್ಲೂ ಆಫೀಸ್‌ನಲ್ಲೂ ಕಿರಿಕಿರಿ! Vistara News

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರಿಗೆ ಇಂದು ಮನೆಯಲ್ಲೂ ಆಫೀಸ್‌ನಲ್ಲೂ ಕಿರಿಕಿರಿ!

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷದ ಹುಣ್ಣಿಮೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಮೇಷ ರಾಶಿಯಿಂದ ಶನಿವಾರ ಬೆಳಗ್ಗೆ 07:44 ಕ್ಕೆ ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ವೃಷಭ ರಾಶಿಯವರು ಮನೆಯಲ್ಲಿ ಅಪಸ್ವರಗಳು ಮೂಡದಂತೆ ಎಚ್ಚರಿಕೆ ವಹಿಸಿ. ಸಿಂಹ ರಾಶಿಯವರಿಗೂ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ವೃಶ್ಚಿಕ ರಾಶಿಯವರು ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ ಇದೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯನ ಆರೋಗ್ಯ ಹದಗೆಡುವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (27-10-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷ.
ತಿಥಿ: ಹುಣ್ಣಿಮೆ 25:52
ವಾರ: ಶನಿವಾರ
ನಕ್ಷತ್ರ: ರೇವತಿ 07:30 ಯೋಗ: ವಜ್ರ 22:50
ಕರಣ: ವಿಷ್ಟಿ (ಭದ್ರ) 15:02 ಅಮೃತ ಕಾಲ: ರಾತ್ರಿ 11:11 ರಿಂದ 12:41 ರವರೆಗೆ
ದಿನದ ವಿಶೇಷ: ಪಾರ್ಶ್ವ ಚಂದ್ರಗ್ರಹಣ, ಶೀಗಿ ಹುಣ್ಣಿಮೆ, ವಾಲ್ಮೀಕಿ ಜಯಂತಿ

ಸೂರ್ಯೋದಯ : 06:12  ಸೂರ್ಯಾಸ್ತ : 05:55

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನಿರೀಕ್ಷಿತ ಖರ್ಚು ನಿಮ್ಮ ಮನಸ್ಸಿನ ಶಾಂತಿಗೆ ಭಂಗ ತರುವ ಸಾಧ್ಯತೆ ಇದೆ. ಹಾಸಿಗೆ ಇದ್ದಷ್ಟು ಕಾಲು ಚಾಚಿ. ಸ್ನೇಹಿತರು, ಮಿತ್ರರ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವಿರಿ. ಸಹದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಬಗ್ಗೆ ಕೊಂಚ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ದಾಂಪತ್ಯದಲ್ಲಿ ಮಧುರ ಭಾವ ಮೂಡಲಿದೆ.
ಅದೃಷ್ಟ ಸಂಖ್ಯೆ: 9

Horoscope Today

ವೃಷಭ: ದಿನದ ಆರಂಭದಲ್ಲಿ ಇಂದು ನೀವು ಯಾವುದೇ ಆರ್ಥಿಕ ನಷ್ಟವನ್ನು ಹೊಂದಬಹುದು. ಇದರಿಂದ ನಿಮ್ಮ ಪೂರ್ತಿ ದಿನ ಹದಗೆಡವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಆದಷ್ಟು ದೈಹಿಕ ಹಾಗೂ ಮಾನಸಿಕ ದೃಢತೆಗಾಗಿ ಯೋಗ ಹಾಗೂ ಧ್ಯಾನ ಮಾಡುವುದು ಉತ್ತಮ. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಮನೆಯಲ್ಲಿ ಅಪಸ್ವರಗಳು ಮೂಡದಂತೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆ ವಹಿಸಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಸಭಲತೆ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢವಾಗಿ ಇರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಹೆಚ್ಚು. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ, ಅನಗತ್ಯ ಖರ್ಚುಗಳ ಬಗೆಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಕೊಂಚಮಟ್ಟಿಗೆ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮ. ಆರ್ಥಿಕವಾಗಿ ಉತ್ತಮ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟೂ ಆತ್ಮವಿಶ್ವಾಸ ತರಲಿದೆ.ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಆರ್ಥಿಕವಾಗಿ ಸಾಧಾರಣ ಫಲ. ಉದ್ಯೋಗಿಗಳಿಗೆ ಮಿಶ್ರಫಲ.ಕೌಟುಂಬಿಕವಾಗಿ ಸಂತೋಷದ ವಾತಾವರಣ ಇರಲಿದೆ.
ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ: ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ ಇದೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯನ ಆರೋಗ್ಯ ಹದಗೆಡುವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಉದ್ಯೋಗಿಗಳಿಗೆ ಹೆಚ್ಚಿದ ಕಿರಿಕಿರಿ. ಸಂಗಾತಿಯಿಂದ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

ಜೇಡರ ದಾಸಿಮಯ್ಯರ ವಚನ ಎಲ್ಲಿರುಗೂ ಆದರ್ಶ

Horoscope Today

ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಸುದೀರ್ಘವಾದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರಿಂದ ಆರ್ಥಿಕ ಸಹಾಯದ ಬೇಡಿಕೆ, ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಸಂಶೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಕರ: ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು, ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಕುಟುಂಬದವರ ಬೆಂಬಲ ಪ್ರೋತ್ಸಾಹದಿಂದಾಗಿ ಕೊಂಚಮಟ್ಟಿಗೆ ನಿರಾಳವಾಗುವಿರಿ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ.ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಸ್ನೇಹಿತರ ಜೊತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಲಾಭ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಹೂಡಿಕೆಯಲ್ಲಿ ಲಾಭಾಂಶ ಕಡಿಮೆ ಇರಲಿದೆ. ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ಪ್ರೀತಿ ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ ನೀಡಲಿದೆ.
ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

ಮುಸ್ಲಿಮರಿಂದ ಹತ್ಯೆಗೀಡಾದ ಯುವಕನ ತಂದೆ 7 ಬಾರಿಯ ಕಾಂಗ್ರೆಸ್ ಶಾಸಕನನ್ನು ಸೋಲಿಸಿದರು!

ಛತ್ತೀಸ್‌ಗಢದಲ್ಲಿ ಬಿಜೆಪಿಯ ಈಶ್ವರ್‌ ಸಾಹು ಅವರು ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ, ಕಾಂಗ್ರೆಸ್‌ನ ರವೀಂದ್ರ ಚೌಬೆ ಅವರನ್ನು ಸೋಲಿಸುವ ಮೂಲಕ ರಾಜ್ಯಾದ್ಯಂತ ಸುದ್ದಿಯಾಗಿದ್ದಾರೆ. ಇವರು ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂಬುದು ಗಮನಾರ್ಹ ಸಂಗತಿಯಾಗಿದೆ.

VISTARANEWS.COM


on

Ishwar Sahu
Koo

ರಾಯ್‌ಪುರ: ತೆಲಂಗಾಣದ ಕಾಮರೆಡ್ಡಿ ಕ್ಷೇತ್ರದಲ್ಲಿ ಬಿಜೆಪಿಯ ಕೆ. ವೆಂಕಟರಮಣ ರೆಡ್ಡಿ ಅವರು ಹಾಲಿ ಸಿಎಂ ಕೆ.ಚಂದ್ರಶೇಖರ್‌ ರಾವ್‌ ಹಾಗೂ ಭಾವಿ ಸಿಎಂ ರೇವಂತ್‌ ರೆಡ್ಡಿ ಅವರನ್ನು ಸೋಲಿಸಿ ಅಚ್ಚರಿ (Election Results 2023) ಮೂಡಿಸಿದಂತಹ ಫಲಿತಾಂಶವು ಛತ್ತೀಸ್‌ಗಢದಲ್ಲೂ (Chhattisgarh Assembly Election Result) ಲಭ್ಯವಾಗಿದೆ. ಉದ್ರಿಕ್ತ ಮುಸ್ಲಿಮರ ಗುಂಪಿನಿಂದ ಹತ್ಯೆಗೀಡಾಗಿದ್ದ ಯುವಕನ ತಂದೆಯು ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದವರನ್ನು ಸೋಲಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಛತ್ತೀಸ್‌ಗಢದ ಸಾಜಾ ಕ್ಷೇತ್ರದಲ್ಲಿ ಬಿಜೆಪಿಯ ಈಶ್ವರ್‌ ಸಾಹು (Ishwar Sahu) ಅವರು ಕಾಂಗ್ರೆಸ್‌ನ ರವೀಂದ್ರ ಚೌಬೆ (Ravindra Choubey) ಅವರನ್ನು ಸೋಲಿಸಿದ್ದಾರೆ.

ಈಶ್ವರ್‌ ಸಾಹು ಅವರ ಕುರಿತು ಬಿಜೆಪಿ ಐಟಿ ವಿಭಾಗದ ರಾಷ್ಟ್ರೀಯ ಉಸ್ತುವಾರಿ ಅಮಿತ್‌ ಮಾಳವಿಯ ಅವರು ಮಾಹಿತಿ ನೀಡಿದ್ದಾರೆ. “ಇವರು ಈಶ್ವರ್‌ ಸಾಹು. ಕಾರ್ಮಿಕರಾಗಿದ್ದ ಇವರೀಗ ಛತ್ತೀಸ್‌ಗಢದಲ್ಲಿ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇವರ ಮಗ ಮುಸ್ಲಿಮರಿಂದ ಹತ್ಯೆಗೀಡಾಗಿದ್ದಾನೆ. ಬಿಜೆಪಿಯು ಈಶ್ವರ್‌ ಸಾಹು ಅವರಿಗೆ ಟಿಕೆಟ್‌ ನೀಡಿತು. ಆದರೆ, ಕಾಂಗ್ರೆಸ್‌ ಕೊಲೆಗಾರರ ಪರವಾಗಿ ನಿಂತಿತು. ಆದರೂ, ಈಶ್ವರ್‌ ಸಾಹು ಅವರು ಏಳು ಬಾರಿಯ ಶಾಸಕ ರವೀಂದ್ರ ಚೌಬೆ ಅವರನ್ನು ಸೋಲಿಸಿದ್ದಾರೆ” ಎಂದು ಈಶ್ವರ್‌ ಸಾಹು ಅವರ ಫೋಟೊ ಸಮೇತ ಪೋಸ್ಟ್‌ ಮಾಡಿದ್ದಾರೆ.

ಈಶ್ವರ್‌ ಸಾಹು ಅವರು ಇದಕ್ಕೂ ಮೊದಲು ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಇವರು ಚುನಾವಣೆಯಲ್ಲಿ 1,01,789 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್‌ ಶಾಸಕ ರವೀಂದ್ರ ಚೌಬೆ ಅವರು 96,593 ಮತಗಳನ್ನು ಪಡೆದರು. ಇದರೊಂದಿಗೆ ಈಶ್ವರ್‌ ಸಾಹು ಅವರು 5,196 ಮತಗಳಿಂದ ಗೆಲುವು ಸಾಧಿಸಿದ್ದಾರೆ. ರವೀಂದ್ರ ಚೌಬೆ ಅವರು 1985ರಿಂದ ಇದುವರೆಗೆ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇವರು ಭೂಪೇಶ್‌ ಬಘೇಲ್‌ ಸರ್ಕಾರದಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಇವರನ್ನು ಈಶ್ವರ್‌ ಸಾಹು ಅವರು ಸೋಲಿಸಿರುವುದು ಭಾರಿ ಸುದ್ದಿಯಾಗಿದೆ.

ಇದನ್ನೂ ಓದಿ: ತೆಲಂಗಾಣದಲ್ಲಿ ಹಾಲಿ, ಭಾವಿ ಸಿಎಂಗಳನ್ನೇ ಸೋಲಿಸಿದ ಬಿಜೆಪಿಯ ವೆಂಕಟರಮಣ ರೆಡ್ಡಿ; ಯಾರಿವರು?

ಈಶ್ವರ್‌ ಸಾಹು ಪುತ್ರನ ಕೊಲೆ

ಈಶ್ವರ್‌ ಸಾಹು ಅವರ ಪುತ್ರ ಭುವನೇಶ್ವರ್‌ ಸಾಹು ಅವರನ್ನು 2023ರ ಏಪ್ರಿಲ್‌ನಲ್ಲಿ ಮುಸ್ಲಿಮರ ಗುಂಪೊಂದು ಹತ್ಯೆ ಮಾಡಿದೆ. ಬೆಮೆತಾರ ಜಿಲ್ಲೆಯ ಬಿರಾನ್‌ಪುರ ಗ್ರಾಮದಲ್ಲಿ ಏಪ್ರಿಲ್‌ 8ರಂದು ನಡೆದ ಗಲಾಟೆಯ ವೇಳೆ ಮುಸ್ಲಿಮರ ಗುಂಪೊಂದು ಕತ್ತಿ, ಖಡ್ಗ ಸೇರಿ ಹಲವು ಮಾರಕಾಸ್ತ್ರಗಳಿಂದ ಕೊಚ್ಚಿ ಭುವನೇಶ್ವರ್‌ ಸಾಹು ಅವರನ್ನು ಕೊಲೆ ಮಾಡಿತ್ತು. ಇದಾದ ಬಳಿಕ ಬಿಜೆಪಿಯು ಈಶ್ವರ್‌ ಸಾಹು ಅವರಿಗೆ ಟಿಕೆಟ್‌ ನೀಡಿತ್ತು. ಚುನಾವಣೆ ವೇಳೆ ಈಶ್ವರ್‌ ಸಾಹು ಅವರು ರವೀಂದ್ರ ಚೌಬೆ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೆ, ಅಬ್ಬರದ ಪ್ರಚಾರ ಕೈಗೊಂಡಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ: https://vistaranews.com/tag/assembly-election-2023

Continue Reading

ಅಂಕಣ

Raja Marga Column : ಅನ್ನಕ್ಕಾಗಿ ಕಲ್ಲು ಒಡೆಯೋ ಕೆಲಸ ಮಾಡ್ತಿದ್ದ ಆಕೆ ಈಗ ಅಮೆರಿಕನ್‌ ಕಂಪನಿ ಸಿಇಓ!

Raja Marga Column : ಅವರು 16ನೇ ವರ್ಷಕ್ಕೆ ಮದುವೆಯಾಗಿ ಗಂಡನ ಮನೆ ಸೇರಿದ್ದರು. 18ಕ್ಕೆ ಎರಡು ಮಕ್ಕಳ ತಾಯಿ. ಕೊನೆಗೆ ಅನಾಥೆಯಾದ ಆಕೆ ಈಗ ಇರುವ ಸ್ಥಾನ ನೋಡಿದರೆ ನೀವು ಬೆಚ್ಚಿ ಬೀಳುತ್ತೀರಿ. ಯಾರವರು?

VISTARANEWS.COM


on

Jyothi Reddy CEO of American Company
Koo
RAJAMARGA

ಆಕೆಯ ಹೆಸರು ಜ್ಯೋತಿ ರೆಡ್ಡಿ (Jyothi Reddy). ಆಕೆ ಆಂಧ್ರಪ್ರದೇಶದ ವಾರಂಗಲ್‌ನ ಅತ್ಯಂತ ಬಡ ಕುಟುಂಬದ ಹುಡುಗಿ. ಆಕೆಯ ಹೆತ್ತವರಿಗೆ ಮೂರು ಗಂಡು ಮತ್ತು ಎರಡು ಹೆಣ್ಣು ಮಕ್ಕಳು. ಬಡತನ, ಹಸಿವು ಹೆಚ್ಚಾದ ಕಾರಣ ಅವಳ ಹೆತ್ತವರು ಇಬ್ಬರು ಹೆಣ್ಣು ಮಕ್ಕಳನ್ನು ಅನಾಥಾಶ್ರಮಕ್ಕೆ ಸೇರಿಸಿದರು. ಮತ್ತೆ ಅವರನ್ನು ನೊಡಲಿಕ್ಕೂ ಬರಲಿಲ್ಲ! ಹಿರಿಯ ಮಗಳಾದ ಜ್ಯೋತಿ ರೆಡ್ಡಿ ಅನಾಥ ಮಕ್ಕಳ ಸರಕಾರಿ ಶಾಲೆಗೆ (School for orphan) ಹೋಗಿ 12ನೆಯ ತರಗತಿ ಪಾಸಾದಳು. ಅದರ ಬೆನ್ನಿಗೆ ಅವರ ಕಸಿನ್ ಜೊತೆಗೆ ಮದುವೆ ನಡೆದು ಹೋಯಿತು. ಆಗ ಅವರಿಗೆ 16 ವರ್ಷ (Raja Marga Column).

ಹಸಿವು ಎಲ್ಲ ಕೆಲಸಗಳನ್ನೂ ಮಾಡಿಸಿತು

ಹದಿನೆಂಟು ತುಂಬುವಾಗ ಎರಡು ಹೆಣ್ಣು ಮಕ್ಕಳ ತಾಯಿ! ಗಂಡನಿಗೆ ಎಲ್ಲಿಯೂ ಪರ್ಮನೆಂಟ್ ಕೆಲಸ ಇರಲಿಲ್ಲ. ಆಗ ಮಕ್ಕಳ ಜವಾಬ್ದಾರಿ ಕೂಡ ಅವರೇ ಹೊತ್ತರು. ಬತ್ತದ ಗದ್ದೆಯಲ್ಲಿ ನೇಜಿ ನೆಡುವ ಕೆಲಸ, ಕಲ್ಲನ್ನು ಒಡೆಯುವ ಕೆಲಸ ಕೂಡ ಅವರು ಮಾಡಿದರು. ತನ್ನ ಜೀವನದಲ್ಲಿ ಸ್ವಾವಲಂಬಿ ಆಗಬೇಕು ಎನ್ನುವ ತುಡಿತವು ಅವರನ್ನು ಅಂತಹ ಕೆಲಸಕ್ಕೆ ದೂಡಿತು.

ನೆರವಿಗೆ ಬಂದ ನೆಹರೂ ಯುವ ಕೇಂದ್ರ

ಆಗ ಅವರ ನೆರವಿಗೆ ಬಂದದ್ದು ‘ನೆಹರೂ ಯುವ ಕೇಂದ್ರ’ ಎನ್ನುವ ಸರಕಾರದ ಅಧೀನ ಸಂಸ್ಥೆ. ಅದರಲ್ಲಿ ಸ್ವಯಂಸೇವಕಿಯಾಗಿ ಮಕ್ಕಳಿಗೆ ಪಾಠ ಮಾಡುವ ಕೆಲಸ ಮಾಡಿದರು. ಅಂಬೇಡ್ಕರ್ ಮುಕ್ತ ವಿವಿಯ ಮೂಲಕ ಪದವಿ, ಸ್ನಾತಕೋತ್ತರ ಪದವಿ ಎರಡನ್ನೂ ಮುಗಿಸಿದರು. ಕಂಪ್ಯೂಟರ್ ಅಪ್ಲಿಕೇಶನ್ ಡಿಪ್ಲೊಮಾ ಕೂಡ ಪೂರ್ತಿ ಆಯಿತು. ಆಗ ಅವರಿಗೆ ಸರಕಾರಿ ಶಾಲೆಯ ಟೀಚರ್ ಕೆಲಸ ದೊರೆಯಿತು. ತಿಂಗಳಿಗೆ 6,000 ರೂಪಾಯಿ ಸಂಬಳ. ಪುಟ್ಟ ಬಾಡಿಗೆ ಮನೆ. ಆ ಸಂಬಳ ಯಾವುದಕ್ಕೂ ಸಾಲುತ್ತಿರಲಿಲ್ಲ. ಶಾಲೆಗೆ ಎರಡು ಗಂಟೆ ನಡೆದು ಹೋಗುವ ಕಷ್ಟ ಬೇರೆ. ಆಗ ದಾರಿಯಲ್ಲಿ ಸೀರೆ ಮಾರುತ್ತ ಒಂದಿಷ್ಟು ಹಣ ಗಳಿಸಿದರು. ಮನೆಯಲ್ಲಿ ಒಂದು ಹೊಲಿಗೆ ಯಂತ್ರ ಇಟ್ಟುಕೊಂಡು ಸ್ವಲ್ಪ ಸಂಪಾದನೆ ಮಾಡಿದರು.

ಅಮೆರಿಕದಲ್ಲಿ ಕೆಲಸದ ಹುಸಿ ಭರವಸೆ

2001ರ ಹೊತ್ತಿಗೆ ಅವರ ಜೀವನದಲ್ಲಿ ಒಂದು ಮಹತ್ವದ ತಿರುವು ಬಂದಿತು. ಅವರ ಸೋದರ ಮಾವ ಒಬ್ಬರು ಅಮೆರಿಕದಿಂದ ಊರಿಗೆ ಬಂದವರು ಜ್ಯೋತಿ ರೆಡ್ಡಿ ಅವರನ್ನು ಭೇಟಿ ಮಾಡಿದರು. ಅಮೆರಿಕದಲ್ಲಿ ಉದ್ಯೋಗದ ಭರವಸೆ ನೀಡಿದರು. ಆಗ ಅವರ ಮನಸ್ಸಿನಲ್ಲಿ ಗೊಂದಲವು ಆರಂಭ ಆಯಿತು.

ಒಂದು ಕಡೆ ಸಂಸಾರದ ಜವಾಬ್ದಾರಿ. ಇನ್ನೊಂದು ಕಡೆ ಸರಕಾರಿ ನೌಕರಿ. ಮತ್ತೊಂದು ಕಡೆ ಅವರದ್ದೇ ಆದ ಬಹಳ ‘ದೊಡ್ಡ ಕನಸು’. ಅವುಗಳಲ್ಲಿ ಯಾವುದನ್ನು ಆರಿಸುವುದು? ಕೊನೆಗೆ ಅವರು ಗಟ್ಟಿ ನಿರ್ಧಾರ ಮಾಡಿ ಮೂರನೆಯದನ್ನು ಆರಿಸಿಕೊಂಡರು. ಪ್ರೀತಿಸುವ ಎರಡು ಹೆಣ್ಣು ಮಕ್ಕಳನ್ನು ಒಂದು ಮಿಷನರಿ ಹಾಸ್ಟೆಲಿನಲ್ಲಿ ಬಿಟ್ಟರು. ವೀಸಾ ಮಾಡಿಸಲು ತುಂಬಾ ಕಷ್ಟಪಟ್ಟರು. ಕೊನೆಗೆ ಧೈರ್ಯ ಜೋಡಿಸಿಕೊಂಡು ವಾರಂಗಲ್ ಟು ಅಮೆರಿಕ ವಿಮಾನದಲ್ಲಿ ಹಾರಿದರು!

Jyothi Reddy: old and New avtar
ಹೇಗಿದ್ದ ಜ್ಯೋತಿ ರೆಡ್ಡಿ ಹೇಗಾದರು ನೋಡಿ

ಈಗ ಅವರಿಗೆ ನಿಜವಾದ ಸಮಸ್ಯೆಗಳು ಆರಂಭವಾದವು. ಕೆಲಸ ಕೊಡಿಸುವ ಭರವಸೆ ಕೊಟ್ಟಿದ್ದ ಸೋದರ ಮಾವ ಅಲ್ಲಿ ಕೈ ಎತ್ತಿ ಬಿಟ್ಟರು. ಮಹಾನಗರದಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿಬಿಟ್ಟ ಅನುಭವ ಅವರಿಗೆ ಆಯಿತು. ಅವರು ಯಾವತ್ತೂ ಅಮೆರಿಕ ನೋಡಿದವರೇ ಅಲ್ಲ! ಹಿಂದೆ ಬರುವ ಬಾಗಿಲು ಕೂಡ ಮುಚ್ಚಿತ್ತು.

ಆದರೆ ಗುಂಡಿಗೆಯಲ್ಲಿ ಧೈರ್ಯ ಇತ್ತು. ತಮ್ಮ ಪದವಿ, ಸ್ಟೇಟಸ್ ಎಲ್ಲವನ್ನೂ ಮರೆತು ಗ್ಯಾಸ್ ಸ್ಟೇಶನ್, ಬೇಬಿ ಸಿಟ್ಟಿಂಗ್, ವಿಡಿಯೋ ಗೇಮ್ಸ್ ಶಾಪ್ ಎಲ್ಲಾ ಕಡೆ ದುಡಿದರು. ಆಗ ಸೂಕ್ಷ್ಮವಾಗಿ ಅಮೆರಿಕದ ಜನ ಜೀವನವನ್ನು, ಉದ್ಯೋಗದ ಅವಕಾಶಗಳನ್ನು ಅಭ್ಯಾಸ ಮಾಡಿದರು. ಅವರು ಒಂದೂವರೆ ವರ್ಷದಲ್ಲಿ 40,000 ಅಮೆರಿಕನ್ ಡಾಲರ್ ಸಂಪಾದನೆ ಮಾಡಿದ್ದರು! ಅಮೆರಿಕಾ ಎಂಬ ಮಾಯಾನಗರದ ದೇಶದಲ್ಲಿ ಒಬ್ಬಳೇ ಹೆಂಗಸು ಯಾರ ನೆರವೂ ಇಲ್ಲದೆ ದುಡಿಯುತ್ತಿದ್ದರು ಎಂದರೆ ನಮಗೆ ಅವರ ಸಾಹಸದ ಅರಿವಾಗುತ್ತದೆ.

ಅಮೆರಿಕಾದಲ್ಲಿ ಅವಕಾಶಗಳ ಹುಡುಕಾಟ

ತನ್ನ ಸಂಪಾದನೆಯನ್ನು ಬಂಡವಾಳ ಮಾಡಿಕೊಂಡು ಅಮೆರಿಕದ ಫೀನಿಕ್ಸ್ ಎಂಬಲ್ಲಿ ಒಂದು ಕಚೇರಿ ತೆರೆದು ‘KEY SOFTWARE SOLUTIONS’ ಎಂಬ ಕನ್ಸಲ್ಟೆನ್ಸಿ ಕಂಪೆನಿ ತೆರೆದರು. ಅವರು ಕಲಿತಿದ್ದ ಕಂಪ್ಯೂಟರ್ ತರಬೇತಿಯು ಈಗ ಅವರಿಗೆ ಸಹಾಯಕ್ಕೆ ಬಂದಿತು. ಅಮೆರಿಕದಲ್ಲಿ ಹೊರಗಿಂದ ಬರುವವರಿಗೆ ಅಲ್ಲಿನ ಉದ್ಯೋಗದ ಅವಕಾಶಗಳ ಬಗ್ಗೆ, ವೀಸಾ ಇತ್ಯಾದಿ ಪಡೆಯುವ ಬಗ್ಗೆ ಮಾರ್ಗದರ್ಶನ ನೀಡುವ ಸಂಸ್ಥೆಯಾಗಿ ತಮ್ಮ ಸಂಸ್ಥೆಯನ್ನು ಬೆಳೆಸಿದರು. ಒಬ್ಬರೇ ಹೆಣ್ಣು ಮಗಳು ಅಮೆರಿಕದಲ್ಲಿ ಮಾಡಿದ ಭಾರಿ ಹೋರಾಟ ಕೊನೆಗೂ ಫಲ ನೀಡಿತು. ಅವರ ಕಠಿಣ ಪರಿಶ್ರಮ, ಬದ್ಧತೆ, ಬಲವಾದ ನಂಬಿಕೆ ಇವುಗಳು ಅವರನ್ನು ಬಹಳ ಎತ್ತರಕ್ಕೆ ಬೆಳೆಸಿದವು.

ಭಾರತದಿಂದ ಬಂದ ಅನಾಥ ಹುಡುಗಿ ಅಮೇರಿಕನ್ ಕಂಪೆನಿಯ ಸಿಇಒ ಆದರು

ಕೇವಲ ಒಂದು ದಶಕದಲ್ಲಿ ಈಗ ಅವರ ಕಂಪೆನಿಯು ವಾರ್ಷಿಕ ಹದಿನೈದು ಮಿಲಿಯನ್ ಡಾಲರ್ಸ್ ಟರ್ನ್ ಓವರನ್ನು ಹೊಂದಿತು. ನೂರಾರು ಮಂದಿಗೆ ಉದ್ಯೋಗ ನೀಡಿತು. ಅವರ ಇಬ್ಬರು ಮಕ್ಕಳನ್ನು ಕೂಡ ಜ್ಯೋತಿ ರೆಡ್ಡಿ ಅಲ್ಲಿಗೆ ಕರೆಸಿ ಸಾಫ್ಟವೇರ್ ಎಂಜಿನಿಯರ್ ಆಗಿ ಓದಿಸಿ ಮದುವೆಯನ್ನು ಕೂಡ ಮಾಡಿದ್ದಾರೆ. ಅವರಿಗೆ ಅಮೆರಿಕದಲ್ಲಿ NRI OF THE YEAR ಪ್ರಶಸ್ತಿ ದೊರೆತಿದೆ!

Jyothi Reddy- Raja Marga column
Jyothi Reddi

ಇದನ್ನೂ ಓದಿ: ರಾಜ ಮಾರ್ಗ ಅಂಕಣ : ಬಾರ್‌ ಡ್ಯಾನ್ಸರ್‌ to ಕಥೆಗಾರ್ತಿ; ಲೇಖಕಿ ಶಗುಫ್ತ ರಫೀಕ್ ಬರ್ಬಾದಿ ಬದುಕಿನ ರೋಚಕ ಕಥೆ!

ಭಾರತದ ಬಡ ಮಕ್ಕಳ ನೆರವಿಗೆ ನಿಂತಿದ್ದಾರೆ ಜ್ಯೋತಿ

ವಿಶೇಷ ಎಂದರೆ ಜ್ಯೋತಿ ರೆಡ್ಡಿ ಇಂದಿಗೂ ತನ್ನ ಬಾಲ್ಯದ ಕಷ್ಟಗಳನ್ನು ಮರೆತಿಲ್ಲ. ವರ್ಷಕ್ಕೊಮ್ಮೆ ಆದರೂ ಭಾರತಕ್ಕೆ ಬಂದೇ ಬರುತ್ತಾರೆ. ಅನಾಥಾಶ್ರಮಗಳಿಗೆ ಭೇಟಿ ನೀಡಿ ನೆರವು ನೀಡುತ್ತಾರೆ. ಸರಕಾರಿ ಶಾಲೆಯ ಮಕ್ಕಳ ಶಿಕ್ಷಣದ ವೆಚ್ಚವನ್ನು ತುಂಬಿಸುತ್ತಾರೆ. ತಮ್ಮ ವಾರಂಗಲ್ ಜಿಲ್ಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಬಡಮಕ್ಕಳಿಗೆ ತಲಾ ಐದು ಸಾವಿರ ರೂಪಾಯಿ ಬಹುಮಾನ ಕೊಟ್ಟು ಬೆನ್ನು ತಟ್ಟುತ್ತಾರೆ.

“ಬಾಲ್ಯದ ಬಡತನ ನನ್ನ ಮನಸ್ಸು ಮತ್ತು ಹೃದಯವನ್ನು ನೋಯಿಸಿತ್ತು. ಆದರೆ ಭಾರತದ ಪ್ರತಿ ಅನಾಥ ಮಗು ನನ್ನಂತೆ ಬೆಳೆಯಬೇಕು ಎಂದು ಆಸೆ ಪಡುತ್ತೇನೆ” ಎಂದು ಆಕೆ ಹೇಳುವಾಗ ಅವರ ಕಣ್ಣಲ್ಲಿ ಗೆದ್ದ ಖುಷಿ ಇತ್ತು!

Continue Reading

ದೇಶ

ತೆಲಂಗಾಣದಲ್ಲಿ ಹಾಲಿ, ಭಾವಿ ಸಿಎಂಗಳನ್ನೇ ಸೋಲಿಸಿದ ಬಿಜೆಪಿಯ ವೆಂಕಟರಮಣ ರೆಡ್ಡಿ; ಯಾರಿವರು?

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶವೊಂದು ಲಭ್ಯವಾಗಿದೆ. ಕಾಮರೆಡ್ಡಿ ಕ್ಷೇತ್ರದಲ್ಲಿ ಬಿಜೆಪಿಯ ಕೆ. ವೆಂಕಟರಮಣ ರೆಡ್ಡಿ ಅವರು ಕಾಂಗ್ರೆಸ್‌ ಹಾಗೂ ಬಿಆರ್‌ಎಸ್‌ನ ದೈತ್ಯರನ್ನು ಸೋಲಿಸುವ ಮೂಲಕ ರಾಜ್ಯಾದ್ಯಂತ ಸುದ್ದಿಯಾಗಿದ್ದಾರೆ.

VISTARANEWS.COM


on

Venkataramana Reddy
Koo

ಹೈದರಾಬಾದ್:‌ ಚುನಾವಣೆಗಳು ಎಂದರೇನೇ ಹಾಗೆ. ಬಲಿಷ್ಠ ನಾಯಕರು ಎನಿಸಿಕೊಂಡವರು, ಅಹಂಕಾರದಿಂದ ಮೆರೆದವರು, ಸೋಲೇ ಕಾಣದವರು ಕೂಡ ಸೋಲನುಭವಿಸುತ್ತಾರೆ. ಹಾಗೆಯೇ, ಹೆಚ್ಚು ಸುದ್ದಿಯಾಗದವರು, ಸಾಮಾನ್ಯ ಹಿನ್ನೆಲೆ ಹೊಂದಿದವರು ಕೂಡ ಭರ್ಜರಿ ಗೆಲುವು ಸಾಧಿಸಿ ಅಚ್ಚರಿ ಮೂಡಿಸುತ್ತಾರೆ. ತೆಲಂಗಾಣದಲ್ಲಿ ಹೀಗೆ ಬಲಿಷ್ಠರನ್ನು ಸೋಲಿಸುವ ಮೂಲಕ ಬಿಜೆಪಿಯ ಕೆ. ವೆಂಕಟರಮಣ ರೆಡ್ಡಿ ಅವರು ಅಚ್ಚರಿ ಮೂಡಿಸಿದ್ದಾರೆ. ಇವರು ಹಾಲಿ ಮುಖ್ಯಮಂತ್ರಿ, ಬಿಆರ್‌ಎಸ್‌ನ ಕೆ. ಚಂದ್ರಶೇಖರ್‌ ರಾವ್‌ ಹಾಗೂ ಭಾವಿ ಸಿಎಂ ಎಂದೇ ಹೇಳಲಾಗುತ್ತಿರುವ ಕಾಂಗ್ರೆಸ್‌ನ ರೇವಂತ್‌ ರೆಡ್ಡಿ ಅವರನ್ನು ಸೋಲಿಸುವ ಮೂಲಕ ಸುದ್ದಿಯಾಗಿದ್ದಾರೆ.

ಹೌದು, ಕೆ. ವೆಂಕಟರಮಣ ರೆಡ್ಡಿ ಅವರು ಕಾಮರೆಡ್ಡಿ ವಿಧಾಣಸಭೆ ಕ್ಷೇತ್ರದಲ್ಲಿ ಕೆಸಿಆರ್‌ ಹಾಗೂ ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ರೇವಂತ್‌ ರೆಡ್ಡಿ ಅವರನ್ನು ಸೋಲಿಸಿದ್ದಾರೆ. ಇವರು ಕೆಸಿಆರ್‌ ಅವರಿಗಿಂತ 6,741 ಅಧಿಕ ಮತಗಳನ್ನು ಪಡೆಯುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಅಲ್ಲದೆ, ಘಟಾನುಘಟಿಗಳನ್ನೇ ಸೋಲಿಸಿ ದೇಶಾದ್ಯಂತ ಸುದ್ದಿಯಾಗಿದ್ದಾರೆ. ಇದರಿಂದಾಗಿ ಅವರು ರಾಜ್ಯದಲ್ಲಿ ಬಿಜೆಪಿ ಪ್ರಮುಖ ನಾಯಕರಾಗಿಯೂ ಹೊರಹೊಮ್ಮಿದ್ದಾರೆ.

ಯಾರಿವರು ವೆಂಕಟರಮಣ ರೆಡ್ಡಿ?

ಕೆವಿಆರ್‌ ಎಂದೇ ಖ್ಯಾತಿಯಾಗಿರುವ ಕಾಟಿಪಳ್ಳಿ ವೆಂಕಟರಮಣ ರೆಡ್ಡಿ ಅವರು ಕಾಮರೆಡ್ಡಿ ವಿಧಾನಸಭೆ ಕ್ಷೇತ್ರದ ನಾಯಕರಾಗಿದ್ದಾರೆ. ಕೆ. ಚಂದ್ರಶೇಖರ್‌ ರಾವ್‌ ಅವರ ತೆಲಂಗಾಣ ರಾಷ್ಟ್ರ ಸಮಿತಿ (ಈಗ ಬಿಆರ್‌ಎಸ್)‌ ಪಕ್ಷದಲ್ಲಿದ್ದ ಇವರು ಬಳಿಕ ಬಿಜೆಪಿ ಸೇರಿದ್ದರು. ಉದ್ಯಮಿಯಾಗಿದ್ದ ಇವರು ರಾಜಕೀಯ ಪ್ರವೇಶಿಸಿ, ಟಿಆರ್‌ಎಸ್‌ ಬಿಟ್ಟು, ಬಿಜೆಪಿ ಸೇರಿ ಈಗ ಇತಿಹಾಸ ಸೃಷ್ಟಿಸಿದ್ದಾರೆ.

ಇವರ ಗೆಲುವಿಗೆ ಕಾರಣವೇನು?

ಕೆ. ವೆಂಕಟರಮಣ ರೆಡ್ಡಿ ಅವರು ಕಾಮರೆಡ್ಡಿ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಲು ಹಲವು ಕಾರಣಗಳಿವೆ. ಕೆ. ಚಂದ್ರಶೇಖರ್‌ ರಾವ್‌ ಹಾಗೂ ರೇವಂತ್‌ ರೆಡ್ಡಿ ಅವರು ಸ್ಥಳೀಯರಲ್ಲ. ಆದರೆ, 53 ವರ್ಷದ ಕೆ. ವೆಂಕಟರಮಣ ರೆಡ್ಡಿ ಅವರು ಸ್ಥಳೀಯ ನಾಯಕರಾಗಿದ್ದಾರೆ. ಅಲ್ಲದೆ, ಬಿರುಸಿನ ಪ್ರಚಾರ, ಕೆಸಿಆರ್‌ ಹಾಗೂ ರೇವಂತ್‌ ರೆಡ್ಡಿ ಅವರು ಹೊರಗಿನವರು, ಅವರಿಂದ ಕ್ಷೇತ್ರದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಜನರಿಗೆ ಮನವರಿಕೆ ಮಾಡಿದ್ದರಿಂದ ಮುನ್ನಡೆ ಸಾಧಿಸಲು ಸಾಧ್ಯವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಇದನ್ನೂ ಓದಿ: ತೆಲಂಗಾಣ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆ ಹಕ್ಕು ಮಂಡಿಸಿದ ಕಾಂಗ್ರೆಸ್

“ನಾನು ಇಲ್ಲಿಯೇ ಹುಟ್ಟಿದ್ದೇನೆ ಹಾಗೂ ಸಾಯುವತನಕ ಇಲ್ಲಿಯೇ ಇರುತ್ತೇನೆ. ಹೊರಗಿನವರಿಗೆ ಮತ ಹಾಕುವುದು ಎಂದರೆ, ನಾವೇ ಮುಳುಗಿದಂತೆ” ಎಂದು ಚುನಾವಣೆ ಪ್ರಚಾರದ ವೇಳೆ ಕೆ. ವೆಂಕಟರಮಣ ರೆಡ್ಡಿ ಅಬ್ಬರದ ಭಾಷಣ ಮಾಡುತ್ತಿದ್ದರು. ಯುವಕರನ್ನು ಸೆಳೆದು, ಕಾರ್ಯಕರ್ತರನ್ನು ಹಿಡಿದಿಟ್ಟುಕೊಂಡು ಗೆಲುವು ಸಾಧಿಸಿದ ಇವರೀಗ ಸೆಲೆಬ್ರಿಟಿ ರಾಜಕಾರಣಿಯಾಗಿಯೂ ಬದಲಾಗಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಯಾರು ಏನು ಬೇಕಾದರೂ ಆಗಬಹುದು, ಯಾರು ಯಾರನ್ನು ಬೇಕಾದರೂ ಸೋಲಿಸಬಹುದು ಎಂಬುದಕ್ಕೆ ಇವರೇ ಸಾಕ್ಷಿಯಾಗಿದ್ದಾರೆ. ತೆಲಂಗಾಣದಲ್ಲಿ ಕಾಂಗ್ರೆಸ್‌ 64 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಏರಿದೆ. ರೇವಂತ್‌ ರೆಡ್ಡಿ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಬಿಆರ್‌ಎಸ್‌ 39 ಕ್ಷೇತ್ರಗಳಲ್ಲಿ ಗೆದ್ದರೆ, ಬಿಜೆಪಿ 8 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ: https://vistaranews.com/tag/assembly-election-2023

Continue Reading

ಕರ್ನಾಟಕ

Complaint to CM : ಸಿಎಂಗೆ ದೂರು ನೀಡಬೇಕೇ? ಈ ನಂಬರ್‌ಗೆ ಕರೆ ಮಾಡಿ!

Complaint to CM : ತಮ್ಮ ಸಮಸ್ಯೆಗಳಿಗೆ ಸರ್ಕಾರಿ ವ್ಯವಸ್ಥೆಯಲ್ಲಿ ಪರಿಹಾರ ಸಿಗದೇ ಇದ್ದಾಗ ನಾಗರಿಕರು ಅನಿವಾರ್ಯವಾಗಿ ಮುಖ್ಯಮಂತ್ರಿಯತ್ತ ದೃಷ್ಟಿ ನೆಡುತ್ತಾರೆ. ಹೇಗಾದರೂ ಮಾಡಿ ಅವರಿಗೊಂದು ದೂರು ಕೊಡಬೇಕು ಎಂದು ಅಂದುಕೊಳ್ಳುತ್ತಾರೆ. ಆದರೆ, ಇದಕ್ಕೆ ಅವರಿಗೆ ಯಾವ ಮಾರ್ಗ ಎಂಬುದು ಮಾತ್ರ ತಿಳಿದಿರುವುದಿಲ್ಲ. ಇದಕ್ಕೆ ಈಗ ಎರಡು ಮಾರ್ಗಗಳು ಇವೆ. ಸಹಾಯವಾಣಿಗೆ ಕರೆ ಮಾಡಿ ದೂರು ನೀಡುವುದು ಸರಳ ಮಾರ್ಗವಾಗಿದೆ.

VISTARANEWS.COM


on

Complaint to CM Siddaramaiah
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ದೂರು ನೀಡಬೇಕೇ? (Complaint to CM) ಇದಕ್ಕಾಗಿ ನೀವು ಜನತಾ ದರ್ಶನಕ್ಕೆ (Janatha Darshan) ಹೋಗಬೇಕೆಂದೇನೂ ಇಲ್ಲ. ನೀವು ಕುಳಿತಲ್ಲಿಯೇ ದೂರು ದಾಖಲು ಮಾಡಬಹುದು. ಅದಕ್ಕೆ ಇದೊಂದು ನಂಬರ್‌ಗೆ ಕರೆ ಮಾಡಿದರೆ ಸಾಕು ನಿಮ್ಮ ದೂರನ್ನು ದಾಖಲಿಸಿಕೊಳ್ಳಲಾಗುತ್ತದೆ.

ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದರೆ ತುಸು ಕಷ್ಟವನ್ನೇ ಪಡಬೇಕು. ರೈತರಿಗೆ ಒಂದು ಖಾತೆ ಮಾಡಿಸಿಕೊಳ್ಳಲೋ, ರಸ್ತೆ ಸಮಸ್ಯೆಯೋ ಅದೇ ದೊಡ್ಡದಾಗಿರುತ್ತದೆ. ಆದರೆ, ಇದಕ್ಕೆ ಅಧಿಕಾರಿಗಳು ಸೊಪ್ಪು ಹಾಕುವುದಿಲ್ಲ. ಇನ್ನು ಮಹಿಳೆಯರಿಗೆ, ವೃದ್ಧರಿಗೆ ಸೇರಿದಂತೆ ನಾಗರಿಕರಿಗೆ ಒಂದಲ್ಲ ಒಂದು ಸಮಸ್ಯೆಗಳು ಇದ್ದೇ ಇರುತ್ತವೆ. ಇದಕ್ಕೆ ಸರ್ಕಾರಿ ವ್ಯವಸ್ಥೆಯಲ್ಲಿ ಪರಿಹಾರ ಸಿಗದೇ ಇದ್ದಾಗ ಅನಿವಾರ್ಯವಾಗಿ ಮುಖ್ಯಮಂತ್ರಿಯತ್ತ ದೃಷ್ಟಿ ನೆಡುತ್ತಾರೆ. ಹೇಗಾದರೂ ಮಾಡಿ ಅವರಿಗೊಂದು ದೂರು ಕೊಡಬೇಕು ಎಂದು ಅಂದುಕೊಳ್ಳುತ್ತಾರೆ. ಆದರೆ, ಇದಕ್ಕೆ ಅವರಿಗೆ ಯಾವ ಮಾರ್ಗ ಎಂಬುದು ಮಾತ್ರ ತಿಳಿದಿರುವುದಿಲ್ಲ. ಇದಕ್ಕೆ ಈಗ ಎರಡು ಮಾರ್ಗಗಳು ಇವೆ. ಒಂದೋ ಸಿಎಂ ನಡೆಸುವ ಜನತಾ ದರ್ಶನ ಕಾರ್ಯಕ್ರಮಕ್ಕೆ ಆಗಮಿಸಿ ದೂರು ಸಲ್ಲಿಸುವುದು, ಇಲ್ಲವೇ 1902 ಸಹಾಯವಾಣಿಗೆ (Helpline Number) ಕರೆ ಮಾಡಿ ಜನತಾ ದರ್ಶನದ ಅಡಿ ದೂರನ್ನು ದಾಖಲಿಸುವುದನ್ನು ಮಾಡಬಹುದಾಗಿದೆ. ಹೀಗೆ ಮಾಡಿದರೂ ನೇರವಾಗಿಯೇ ಸಿಎಂಗೆ ದೂರು ದಾಖಲಿಸಿದಂತೆ ಆಗುತ್ತದೆ.

ಕರೆ ಮಾಡಿ ಸಿಎಂಗೆ ಹೀಗೆ ದೂರು ನೀಡಿ!

1902 ಸಹಾಯವಾಣಿಯನ್ನು ರಾಜ್ಯ ಸರ್ಕಾರ ಈಗಾಗಲೇ ತೆರೆದಿದೆ. ಜನತಾ ದರ್ಶನಕ್ಕೆ ದೂರದ ಊರಿನಿಂದ ಹೋಗಲು ಆಗದವರು, ತೀವ್ರ ಸಮಸ್ಯೆ ಎದುರಿಸುತ್ತಿರುವವರು ಯಾರಾದರೂ ಇದ್ದರೆ ಸಿಎಂ ಗಮನಕ್ಕೆ ತರುವ ಸಂಬಂಧ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಸಾಕು. ಅಲ್ಲಿ ನಿಮ್ಮ ಸಮಸ್ಯೆಗಳನ್ನು ಹೇಳಬೇಕು. ಅವರು ನಿಮ್ಮ ಅಹವಾಲುಗಳನ್ನು ಆಧರಿಸಿ ಅದನ್ನು ಜನತಾ ದರ್ಶನ ಕೆಟಗರಿ ಅಡಿ ದೂರು ದಾಖಲು ಮಾಡಿಕೊಳ್ಳುತ್ತಾರೆ.

ಹೀಗೆ ದೂರು ದಾಖಲು ಮಾಡುವಾಗ ನಿಮ್ಮ ಸಮಸ್ಯೆ, ವಿಳಾಸ, ಮೊಬೈಲ್‌ ಸಂಖ್ಯೆಯನ್ನು ಪಡೆದು ಅದರಲ್ಲಿ ನಮೂದು ಮಾಡಲಾಗುತ್ತದೆ. ಈ ದೂರು ಸಿಎಂ ಜನತಾ ದರ್ಶನ ಕೆಟಗರಿ ಮೂಲಕ ಸಂಬಂಧಪಟ್ಟ ಇಲಾಖೆಗೆ ರವಾನೆ ಮಾಡಲಾಗುತ್ತದೆ. ಆದರೆ, ಮುಂದಿನ ಹಂತದ ಬಗ್ಗೆ ಸ್ಪಷ್ಟತೆಯನ್ನು ನೀಡಲಾಗಿಲ್ಲ.

ಮುಂದಿನ ಕ್ರಮ ಏನು?

ಒಂದು ವೇಳೆ 1092 ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಾದರೆ ನಿಮಗೊಂದು ಐಡಿ ಸಂಖ್ಯೆಯನ್ನು ನೀಡಲಾಗುತ್ತದೆ. ನೀವು ದಾಖಲು ಮಾಡಲಾದ ದೂರು ಸಿಎಂ ಕಾರ್ಯಾಲಯಕ್ಕೆ ಹೋಗುತ್ತದೆ. ಅಲ್ಲಿಂದ ಮುಂದಿನ ಪ್ರಕ್ರಿಯೆ ಏನು? ನಿಮ್ಮ ದೂರಿನ ಸ್ಥಿತಿ-ಗತಿ ಏನಾಯಿತು ಎಂಬ ಬಗ್ಗೆ ತಿಳಿಯಬೇಕು ಎಂದಿದ್ದರೆ, ಜನಸ್ಪಂದನ ಪೋರ್ಟಲ್‌ ಅಥವಾ ಜನಸ್ಪಂದನ ಪಿಜಿಆರ್‌ಎಸ್‌ ಪೋರ್ಟಲ್‌ಗೆ ಭೇಟಿ ನೀಡಿ ಅಲ್ಲಿ “ಸಿಪಿಗ್ರಾಮ್ಸ್‌ ಕುಂದುಕೊರತೆ ಸ್ಥಿತಿಯನ್ನು ಪರಿಶೀಲಿಸಿ ಆಯ್ಕೆ ಮೇಲೆ ಕ್ಲಿಕ್‌ ಮಾಡಬೇಕು. ಬಳಿಕ ನಿಮ್ಮ ಸಿಪಿಗ್ರಾಮ್ಸ್‌ ಗ್ರೀವಿಯನ್ಸ್‌ ನಂಬರ್‌ (CPGRAMS Grievance Number) ಅಥವಾ ನಿಮ್ಮ ನೋಂದಾಯಿತ ಮೊಬೈಲ್‌ ಸಂಖ್ಯೆಯನ್ನು ನಮೂದು ಮಾಡಿದರೆ ಅಲ್ಲಿ ಅಹವಾಲು ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸುತ್ತದೆ. ಇಲ್ಲವೇ ನೇರವಾಗಿ 1902 ಸಂಖ್ಯೆಗೆ ಕರೆ ಮಾಡಿದರೆ ನಿಮಗೆ ಅಲ್ಲಿನ ಸಿಬ್ಬಂದಿ ಸಹ ಅಹವಾಲಿನ ಸ್ಟೇಟಸ್‌ ಬಗ್ಗೆ ತಿಳಿಸಿಕೊಡಲಿದ್ದಾರೆ.

ಪ್ರಕ್ರಿಯೆ ಹೇಗಿರಲಿದೆ?

ಸಾರ್ವಜನಿಕರಿಂದ ಮುದ್ದಾಂ/ಆನ್‌ಲೈನ್‌ನಲ್ಲಿ ಸ್ವೀಕೃತವಾಗುವ ಕುಂದುಕೊರತೆ/ಅಹವಾಲುಗಳನ್ನು ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಯಲ್ಲಿ ದಾಖಲಿಸಿ, ಸ್ವೀಕೃತಿಯನ್ನು ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಸ್ವೀಕೃತಿ ಸಂಖ್ಯೆ ಬಳಸಿ ತಮ್ಮ ಕುಂದುಕೊರತೆ/ಅಹವಾಲಿನ ಸ್ಥಿತಿಗತಿಯನ್ನು ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಯಲ್ಲಿ ಅಥವಾ 1902 ಸಂಖ್ಯೆಗೆ ಕರೆಮಾಡಿ ತಿಳಿದುಕೊಳ್ಳಬಹುದು.

ಇದನ್ನೂ ಓದಿ: Gruha Lakshmi : ಗೃಹಲಕ್ಷ್ಮಿ ಹಣ ಇನ್ನೂ ಬಂದಿಲ್ಲವೇ? ಹಾಗಾದರೆ ದೂರು ಕೊಡೋಕೆ ರೆಡಿ ಆಗಿ!

ಎಪಿಐ ಮೂಲಕ ನಿರ್ವಹಣೆ

ಸ್ವೀಕರಿಸಲಾದ ಕುಂದುಕೊರತೆ/ಅಹವಾಲುಗಳನ್ನು ವಿಷಯದ ಆಧಾರದಲ್ಲಿ ಸಂಬಂಧಿಸಿದ ಇಲಾಖೆಗಳ/ಅಧೀನ ಸಂಸ್ಥೆಗಳ ಅಧಿಕಾರಿಗಳ ಲಾಗಿನ್‌ಗಳಿಗೆ ತಕ್ಷಣ ರವಾನಿಸಲಾಗುತ್ತದೆ. ಮುಖ್ಯಮಂತ್ರಿಗಳ ಜನತಾದರ್ಶನದಲ್ಲಿ ಸ್ವೀಕೃತವಾದ ಕುಂದುಕೊರತೆ/ಅಹವಾಲುಗಳನ್ನು ಸ್ವಯಂಚಾಲಿತವಾಗಿ ಸಂಬಂಧಪಟ್ಟ ಇಲಾಖಾ ಕಾರ್ಯದರ್ಶಿಗಳ ಇ-ಆಫೀಸ್‌ ಲಾಗಿನ್‌ಗೆ ಕಳುಹಿಸುವ ವ್ಯವಸ್ಥೆ ಅಳವಡಿಸಲಾಗಿದೆ. ಇ-ಆಫೀಸ್‌ನಲ್ಲಿ ಸದರಿ ಕಡತದ ಪ್ರತಿ ಹಂತದ ಚಲನೆಯನ್ನು API ಮೂಲಕ ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಗೆ ಒದಗಿಸಲಾಗುತ್ತದೆ. ಸ್ವೀಕೃತವಾದ ಅಹವಾಲುಗಳ ಪ್ರಗತಿ ಪರಿಶೀಲಿಸಲು ಪ್ರತ್ಯೇಕ ಡ್ಯಾಶ್‌ಬೋರ್ಡ್‌ ಅಭಿವೃದ್ಧಿಪಡಿಸಲಾಗಿದೆ. ಈ ಡ್ಯಾಶ್‌ಬೋರ್ಡ್‌ನಲ್ಲಿ ಇಲಾಖಾ/ಜಿಲ್ಲಾವಾರು ಸ್ವೀಕೃತವಾದ ಕುಂದುಕೊರತೆ ಮತ್ತು ಅಹವಾಲುಗಳ ಸಂಖ್ಯೆ, ವಿಲೇ ಮಾಡಲಾದ ಮತ್ತು ಬಾಕಿ ಉಳಿದಿರುವ ಕುಂದುಕೊರತೆ ಮತ್ತು ಅಹವಾಲುಗಳ ವಿವರ ಲಭ್ಯವಿದೆ.

Continue Reading
Advertisement
Ishwar Sahu
ದೇಶ44 mins ago

ಮುಸ್ಲಿಮರಿಂದ ಹತ್ಯೆಗೀಡಾದ ಯುವಕನ ತಂದೆ 7 ಬಾರಿಯ ಕಾಂಗ್ರೆಸ್ ಶಾಸಕನನ್ನು ಸೋಲಿಸಿದರು!

Jyothi Reddy CEO of American Company
ಅಂಕಣ47 mins ago

Raja Marga Column : ಅನ್ನಕ್ಕಾಗಿ ಕಲ್ಲು ಒಡೆಯೋ ಕೆಲಸ ಮಾಡ್ತಿದ್ದ ಆಕೆ ಈಗ ಅಮೆರಿಕನ್‌ ಕಂಪನಿ ಸಿಇಓ!

Venkataramana Reddy
ದೇಶ1 hour ago

ತೆಲಂಗಾಣದಲ್ಲಿ ಹಾಲಿ, ಭಾವಿ ಸಿಎಂಗಳನ್ನೇ ಸೋಲಿಸಿದ ಬಿಜೆಪಿಯ ವೆಂಕಟರಮಣ ರೆಡ್ಡಿ; ಯಾರಿವರು?

Complaint to CM Siddaramaiah
ಕರ್ನಾಟಕ1 hour ago

Complaint to CM : ಸಿಎಂಗೆ ದೂರು ನೀಡಬೇಕೇ? ಈ ನಂಬರ್‌ಗೆ ಕರೆ ಮಾಡಿ!

women enjoying in rain
ಉಡುಪಿ2 hours ago

Karnataka Weather : ಮಳೆಯೊಂದಿಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Mizoram Election Result
ದೇಶ2 hours ago

Mizoram Election Result: ಮಿಜೋರಾಂ ಫಲಿತಾಂಶಕ್ಕೆ ಕ್ಷಣಗಣನೆ; ಯಾರಿಗೆ ಗೆಲುವು?

4 state election results shows us that, freebies are not the way for win elections
ದೇಶ2 hours ago

ವಿಸ್ತಾರ ಸಂಪಾದಕೀಯ: ವಿಧಾನಸಭೆ ಚುನಾವಣೆ ಫಲಿತಾಂಶ; ‘ಗ್ಯಾರಂಟಿ’ಯೇ ಅಂತಿಮವಲ್ಲ!

ead your daily horoscope predictions for december 4th 2023
ಪ್ರಮುಖ ಸುದ್ದಿ3 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Sphoorti Salu
ಸುವಚನ3 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Mizoram Election Result will be announced on December 4, 2023
ದೇಶ8 hours ago

Mizoram Election Result: ಇಂದು ಮಿಜೋರಾಂ ಎಲೆಕ್ಷನ್ ರಿಸಲ್ಟ್; ಮತ ಎಣಿಕೆ ಒಂದು ದಿನ ಮುಂದೂಡಿದ್ದೇಕೆ?

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ3 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ20 hours ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌