Site icon Vistara News

Dina Bhavishya : ಮನೆಯಲ್ಲಿ ಕಲಹ ತಪ್ಪಿದ್ದಲ್ಲ! ಈ ರಾಶಿಯವರು ಇಂದು ಮೌನಕ್ಕೆ ಶರಣಾಗಿ

Dina Bhavihshya

ಚಂದ್ರನು ಮಂಗಳವಾರವೂ ಮಿಥುನ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಅನೇಕ ವಿಚಾರಗಳು ಮಾನಸಿಕ ಒತ್ತಡ ತರುವ ಸಾಧ್ಯತೆ ಇದೆ. ವೃಷಭ ರಾಶಿಯವರು ಕುಟುಂಬದಲ್ಲಿ ವಿನಾಕಾರಣ ಕಲಹಗಳು ನಡೆಯದಂತೆ ಎಚ್ಚರಿಕೆ ವಹಿಸಿ. ಸಿಂಹ ರಾಶಿಯವರು ಪಾಲುದಾರಿಕೆ ವ್ಯವಹಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿ ಆಗುವ ಸಾಧ್ಯತೆ ಇದ್ದು, ಎಚ್ಚರ ವಹಿಸಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (31-10-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷ.
ತಿಥಿ:
ತದಿಗೆ 21:29 ವಾರ: ಮಂಗಳವಾರ
ನಕ್ಷತ್ರ: ರೋಹಿಣಿ 27:56 ಯೋಗ:ವರಿಯಾನ 15:32
ಕರಣ: ವಣಿಜ 09:51 ಅಮೃತ ಕಾಲ: ಮಧ್ಯರಾತ್ರಿ 12:46 ರಿಂದ 2:22ರವರೆಗೆ
ದಿನದ ವಿಶೇಷ: ರಾಷ್ಟ್ರೀಯ ಏಕೀಕರಣ ದಿನ, ಮಿಳಿಗಾತ್ರಿ ಜಾತ್ರೆ, ಮುದಿನೂರ ರಥ, ಇರಂಬಾವಿ ರಥ

ಸೂರ್ಯೋದಯ : 06:13  ಸೂರ್ಯಾಸ್ತ : 5:53

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ನಿಮ್ಮ ವೈಯಕ್ತಿಕ ಜೀವನದಲ್ಲಿ ಇತರರು ಹಸ್ತಕ್ಷೇಪ ಮಾಡದಂತೆ ಎಚ್ಚರಿಕೆ ವಹಿಸಿ. ಅನೇಕ ವಿಚಾರಗಳು ಮಾನಸಿಕ ಒತ್ತಡ ತರುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಹಣಕಾಸು ವ್ಯವಹಾರದಲ್ಲಿ ಸಾಧರಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ವೃಷಭ: ಬಹಳ ದಿನಗಳ ಕನಸು ನನಸಾಗಲಿದೆ. ಭೂ ಸಂಬಂಧಿ ವ್ಯವಹಾರದಲ್ಲಿ ಯಶಸ್ಸು ಸಿಗಲಿದೆ. ಇಂದು ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ, ಪ್ರೋತ್ಸಾಹ ಸಿಗಲಿದೆ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಕುಟುಂಬದಲ್ಲಿ ವಿನಾಕಾರಣ ಕಲಹಗಳು ನಡೆಯದಂತೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಮಿಥುನ: ಅತ್ಯಂತ ಉತ್ಸಾಹದ ದಿನವಿದು. ಆತುರದಲ್ಲಿ ಹಣ ಹೂಡಿಕೆ ಮಾಡುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಮಕ್ಕಳ ಕುರಿತಾಗಿ ಚಿಂತಿಸಿ ಉತ್ಸಾಹ ಕಳೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಕಟಕ: ಅನಾವಶ್ಯಕ ಒತ್ತಡಕ್ಕೆ ಒಳಗಾಗಬೇಡಿ. ಮನೆಯಲ್ಲಿನ ಕಲಹಗಳಿಗೆ ನೀವು ಧ್ವನಿಯಾಗುವುದು ಬೇಡ. ಪ್ರತಿಭೆಗೆ ತಕ್ಕ ಪ್ರೋತ್ಸಾಹ ಸಿಗುವುದು. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸಂಗಾತಿಯ ಬೆಂಬಲ ಸಿಗಲಿದೆ.
ಅದೃಷ್ಟ ಸಂಖ್ಯೆ: 8

ಸಿಂಹ: ಪಾಲುದಾರಿಕೆ ವ್ಯವಹಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿ ಆಗುವ ಸಾಧ್ಯತೆ ಇದ್ದು, ಎಚ್ಚರ ವಹಿಸಿ. ಹಿರಿಯರ ಮಾರ್ಗದರ್ಶನ ಪಡೆಯಿರಿ. ಅತಿಯಾದ ಆತ್ಮವಿಶ್ವಾಸದಲ್ಲಿ ದುಡುಕುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಕನ್ಯಾ: ವ್ಯಾಪಾರ ವ್ಯವಹಾರಗಳಲ್ಲಿ ಕಾರ್ಯ ಸಿದ್ಧಿಯಾಗಲಿದೆ. ಪ್ರಯಾಣದಿಂದ ಲಾಭ ಬರಲಿದೆ. ತಾಳ್ಮೆಯಿಂದ ಕಾಯ್ದು ಕೊಂಡಿರುವ ಕೆಲಸವು ಫಲ ನೀಡುವುದು. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಪ್ರಶಂಸೆ ಹಾಗೂ ಪ್ರೋತ್ಸಾಹ ಸಿಗುವುದು. ನಿಮ್ಮ ಸಭ್ಯ ನಡವಳಿಕೆ ಮೆಚ್ಚುಗೆ ಪಡೆಯುತ್ತದೆ. ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆದರೂ ಯಾವುದಾದರೂ ಒಂದು ಕೊರತೆ ಕಾಡಬಹುದು. ಆಧ್ಯಾತ್ಮದ ಹಾದಿಯಲ್ಲಿ ಹೆಜ್ಜೆ ಹಾಕಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ವೃಶ್ಚಿಕ: ಅತಿಯಾದ ಮಾನಸಿಕ ಒತ್ತಡ ನಿಮ್ಮನ್ನು ಜರ್ಜರಿತರನ್ನಾಗಿ ಮಾಡಬಹುದು. ಇದರಿಂದ ಹೊರ ಬನ್ನಿ. ಮನೆಯಲ್ಲಿ ಮಾತಿಗೆ ಮಾತು ಬೆಳೆದು ಕಲಹವಾಗುವ ಸಾಧ್ಯತೆ ಇದೆ. ಮೌನದಿಂದ ಕಾರ್ಯ ಸಾಧಿಸಿ.
ಅದೃಷ್ಟ ಸಂಖ್ಯೆ: 9

ಮಾಯೆಗೆ ಆಕರ್ಷಿತರಾದರೆ ಕೊನೆಯಲ್ಲಿ ಏನಾಗುತ್ತದೆ?

ಧನಸ್ಸು: ದೀರ್ಘಕಾಲದ ಅನಾರೋಗ್ಯ ನಿಮ್ಮನ್ನು ಹಿಂಸೆಗೆ ಗುರಿ ಮಾಡಬಹುದು. ವಿಶ್ವಾಸದಿಂದ ಕಾರ್ಯ ಸಾಧನೆ ಮಾಡಿ ಶುಭವಾಗಲಿದೆ. ಆರ್ಥಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಮಕರ: ಅತಿಯಾದ ಭರವಸೆಯಿಂದ ದುಡುಕುವುದು ಬೇಡ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ನಿಮ್ಮ ಪ್ರತಿ ಸ್ಪರ್ಧಿಗಳು ಕೆಟ್ಟದನ್ನು ಮಾಡಬಹುದು. ಆರೋಗ್ಯವು ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:6

ಕುಂಭ: ಭೂ ವ್ಯವಹಾರದಲ್ಲಿ ಅನುಕೂಲತೆ ಇರಲಿದೆ. ಸಂಬಂಧಿಕರು ಮತ್ತು ಸ್ನೇಹಿತರಿಂದ ಅನಿರೀಕ್ಷಿತ ಉಡುಗೊರೆಗಳು ದೊರೆಯಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಮೀನ: ಮಕ್ಕಳ ಆರೋಗ್ಯದ ಬಗ್ಗೆ ಗಮನ ಹರಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version