ಚಂದ್ರನು ತುಲಾ ರಾಶಿಯಿಂದ ಗುರುವಾರ ಮಧ್ಯಾಹ್ನ 01:29 ಕ್ಕೆ ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮಿಥುನ ರಾಶಿಯವರು ಭೂ ಸಂಬಂಧಿ ವ್ಯವಹಾರಗಳಲ್ಲಿ ಲಾಭವಾಗಲಿದೆ.ಉತ್ಸಾಹದ ಜೊತೆಗೆ ನಿಮ್ಮ ಕನಸು ನನಸಾಗುವ ಕಾಲ ಕೂಡಿ ಬರಲಿದೆ.ವ್ಯಾಪಾರದಲ್ಲಿ ಅಧಿಕ ಲಾಭ ಸಿಗಲಿದೆ. ಜೀವನ ಸಂಗಾತಿಯ ಮಹತ್ವ ಮನವರಿಕೆ ಆಗಲಿದೆ.ಆರೋಗ್ಯ ಪರಿಪೂರ್ಣವಾಗಿರಲಿದೆ.ಉದ್ಯೋಗಿಗಳಿಗೆ ಕೊಂಚ ಮಟ್ಟಿನ ಕಿರಿಕಿರಿ ಸಾಧ್ಯತೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (31-10-2024)
ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷ.
ತಿಥಿ: ಚತುರ್ದಶಿ 15:52 ವಾರ: ಗುರುವಾರ
ನಕ್ಷತ್ರ: ಚಿತ್ತಾ 24:43 ಯೋಗ: ವಿಷ್ಕುಂಭ 09:49
ಕರಣ: ಶಕುನಿ 15:52 ಅಮೃತಕಾಲ: ಸಂಜೆ 05:32 ರಿಂದ 07:20
ದಿನದ ವಿಶೇಷ: ನರಕ ಚತುರ್ದಶಿ, ಉಲ್ಕಾ ದರ್ಶನ
ಸೂರ್ಯೋದಯ : 06:12 ಸೂರ್ಯಾಸ್ತ : 05:54
ಮೇಷ: ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ಈ ದಿನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಾಗಲಿದೆ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ ಇದೆ. ಕಲೆ ಮತ್ತು ರಂಗಭೂಮಿಯ ಜತೆ ಸಂಪರ್ಕ ಹೊಂದಿರುವವರು ಸೃಜನಶೀಲವಾಗಿ ಹೊಸ ಅವಕಾಶಗಳನ್ನು ಪಡೆಯುತ್ತಾರೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಧುರತೆ ಇರಲಿದೆ. ಅದೃಷ್ಟ ಸಂಖ್ಯೆ: 7
ವೃಷಭ: ದೀರ್ಘಕಾಲೀನ ಅನಾರೋಗ್ಯದಿಂದ ಬಳಲುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟುಮಾಡುತ್ತದೆ. ಅನಗತ್ಯ ವಿಷಯಗಳ ಬಗ್ಗೆ ಸಮಯ ಕೊಡಬೇಡಿ.ಸಂಗಾತಿಯ ಸಲಹೆ ಹಿತಕರವೆನಿಸಲಿದೆ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ಮಿಥುನ: ಭೂ ಸಂಬಂಧಿ ವ್ಯವಹಾರಗಳಲ್ಲಿ ಲಾಭವಾಗಲಿದೆ.ಉತ್ಸಾಹದ ಜೊತೆಗೆ ನಿಮ್ಮ ಕನಸು ನನಸಾಗುವ ಕಾಲ ಕೂಡಿ ಬರಲಿದೆ.ವ್ಯಾಪಾರದಲ್ಲಿ ಅಧಿಕ ಲಾಭ ಸಿಗಲಿದೆ. ಜೀವನ ಸಂಗಾತಿಯ ಮಹತ್ವ ಮನವರಿಕೆ ಆಗಲಿದೆ.ಆರೋಗ್ಯ ಪರಿಪೂರ್ಣವಾಗಿರಲಿದೆ.ಉದ್ಯೋಗಿಗಳಿಗೆ ಕೊಂಚ ಮಟ್ಟಿನ ಕಿರಿಕಿರಿ ಸಾಧ್ಯತೆ.ಕೌಟುಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4
ಕಟಕ: ದೈಹಿಕ ಆಯಾಸ ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ದೇಹದ ಮೇಲೆ ಹೆಚ್ಚು ಒತ್ತಡ ಹಾಕುವ ಯಾವುದೇ ದೈಹಿಕ ಪರಿಶ್ರಮವನ್ನು ತಪ್ಪಿಸಲು ಪ್ರಯತ್ನಿಸಿ. ವಿಶ್ರಾಂತಿ ತೆಗೆದುಕೊಳ್ಳಿ. ಹಳೆಯ ನೆನಪುಗಳು ತಮಗೆ ಸಂತಸ ತರಲಿದೆ.ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ, ಆದಷ್ಟು ಸಂಯಮ ಕಳೆದುಕೊಳ್ಳುವುದು ಬೇಡ.ಉದ್ಯೋಗಿಗಳಿಗೆ ಕಿರಿಕಿರಿ.ಆರ್ಥಿಕ ವ್ಯವಹಾರಗಳಲ್ಲಿ ಅಧಿಕ ಲಾಭ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8
ಸಿಂಹ: ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟುಮಾಡುತ್ತದೆ. ಆರೋಗ್ಯದ ಕಡೆ ವಿಶೇಷ ಗಮನ ಹರಿಸಿ.ಅಧಿಕ ರಕ್ತ ಒತ್ತಡದ ರೋಗಿಗಳು ಆಲಸ್ಯವನ್ನು ಮಾಡಲೇಬೇಡಿ.ಉದ್ಯೋಗಿಗಳಿಗೆ ಪ್ರಶಂಸೆ, ಪ್ರೋತ್ಸಾಹ ಸಿಗಲಿದೆ.ಅರ್ಥಿಕವಾಗಿ ಸಾಧಾರಣ ಪ್ರಗತಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಕನ್ಯಾ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ.ಯಾವುದೇ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ಹೂಡಿಕೆ ಮಾಡುವುದು ಬೇಡ, ನಷ್ಟ ಸಾಧ್ಯತೆ, ಎಚ್ಚರಿಕೆ ಇರಲಿ.ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸ ವಾತಾವರಣ ಇರಲಿದೆ. ಸೃಜನಶೀಲತೆಯಿಂದ ಕೆಲಸ ಮಾಡುವವರಿಗೆ ಪ್ರೋತ್ಸಾಹ ಸಿಗಲಿದೆ. ಅನಿರೀಕ್ಷಿತ ಪ್ರತಿಫಲಗಳನ್ನು ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ.ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಆರೋಗ್ಯ ಚೆನ್ನಾಗಿರುತ್ತದೆ. ಒಡಹುಟ್ಟಿದವರು ನಿಮ್ಮ ಸಹಾಯ ಯಾಚಿಸಬಹುದು.ಆರ್ಥಿಕವಾಗಿ ನಿಮಗೆ ಮಧ್ಯಮ ಫಲ ಇರಲಿದೆ.ಸ್ನೇಹಿತರ ವರ್ಗದಿಂದ ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು.ಉದ್ಯೋಗಿಗಳಿಗೆ ಕೆಲಸದ ಒತ್ತಡ ಇದ್ದರೂ ದೈಹಿಕವಾಗಿ ನೀವು ಸದೃಢವಾಗಿ ಕೆಲಸ ನಿಭಾಯಿಸುವಲ್ಲಿ ಯಶಸ್ಸು ಪಡೆಯುವಿರಿ.ಕೌಟುಂಬಿಕವಾಗಿ ಶುಭ ಫಲವಿದೆ. ಅದೃಷ್ಟ ಸಂಖ್ಯೆ: 7
ವೃಶ್ಚಿಕ: ದೈಹಿಕವಾಗಿ ಮಾನಸಿಕವಾಗಿ ಬಳಲವ ಸಾಧ್ಯತೆ, ಆದಷ್ಟು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ.ಆಧ್ಯಾತ್ಮ ಮತ್ತು ಯೋಗ ಹೆಚ್ಚಿನ ನೆಮ್ಮದಿ ತರಲಿದೆ.ಹೂಡಿಕೆ ವ್ಯವಹಾರಗಳಲ್ಲಿ ಲಾಭ ಸಿಗಲಿದೆ.ಪ್ರೇಮಿಗಳಿಗೆ ಶುಭ ಸೂಚನೆ ಸಿಗಲಿದೆ.ಸಹದ್ಯೋಗಿಗಳು ನಿಮ್ಮ ಹಿಂದೆ ಪಿತೂರಿ ನಡೆಸುವ ಸಾಧ್ಯತೆ ಆದಷ್ಟು ಎಚ್ಚರಿಕೆ ಇರಲಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9
ಧನಸ್ಸು: ಆರ್ಥಿಕವಾಗಿ ಸುಧಾರಣೆ ಆಗುವುದರಿಂದ,ಇಂದು ಕೊಂಚ ನೆಮ್ಮದಿಯಿಂದ ಇರುವಿರಿ.ದೀರ್ಘಕಾಲದ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಅದೃಷ್ಟದ ಬಾಗಿಲು ತೆರೆದು ಹೊಸ ಅವಕಾಶಗಳು ಸಿಗಲಿವೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6
ಮಕರ: ಸಾಲದ ಮರುಪಾವತಿ ಆಗಲಿದೆ ಹೀಗಾಗಿ ಆರ್ಥಿಕವಾಗಿ ಸದೃಢ.ದೈಹಿಕ ಆರೋಗ್ಯದ ಕಡೆ ಕೊಂಚ ಗಮನ ಹರಿಸಿ.ಅನಗತ್ಯ ಅನುಮಾನ ದಿನದ ಕೊನೆಯಲ್ಲಿ ನೆಮ್ಮದಿ ಹಾಳು ಮಾಡುವ ಸಾಧ್ಯತೆ,ಅದರ ಕಡೆಗೆ ಗಮನ ಹರಿಸದಿರಿ.ವಿದ್ಯಾರ್ಥಿಗಳು ಹೆಚ್ಚಿನ ಶ್ರಮ ಪಟ್ಟರೆ ಭರವಸೆಯ ಹೊಸ ಅವಕಾಶಗಳು ಸಿಕ್ಕಾವು ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ತೊಡಗಿ.ಉದ್ಯೋಗಿಗಳಿಗೆ ಒತ್ತಡ ಇದ್ದರೂ ಯಾವುದೇ ತೊಂದರೆ ಇಲ್ಲ ಯಶಸ್ವಿಯಾಗಿ ಕಾರ್ಯ ನಿರ್ವಹಿಸುವಿರಿ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ಕುಂಭ: ಸರಿಯಾದ ಆಲೋಚನೆಗಳು ಹಾಗೂ ಕಾರ್ಯಗಳು ನಿಮಗೆ ಅಗತ್ಯವಿರುವ ಸಮಾಧಾನವನ್ನು ತರುತ್ತವೆ.ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ, ತಾತ್ಸಾರ ಮನೋಭಾವ ಬೇಡ.ಸಂಗಾಂತಿಯೊಂದಿಗೆ ವಿನಾಕಾರಣ ವಾದಕ್ಕೆ ಇಳಿದೆ ಮನೆಯಲ್ಲಿ ನೆಮ್ಮದಿ ವಾತಾವರಣ ಹಾಳು ಮಾಡುವುದು ಬೇಡ.ಉದ್ಯೋಗಿಗಳಿಗೆ ಭಯದ ವಾತಾವರಣ ನಿರ್ಮಾಣವಾಗಲಿದೆ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4
ಮೀನ: ಉದ್ಯೋಗದ ಸ್ಥಳದಲ್ಲಿ ನೀವು ಯಾವುದೇ ದೊಡ್ಡ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅದರಿಂದ ಹೊರಬರಬಹುದು.ಕುಟುಂಬದಲ್ಲಿ ಸ್ತ್ರೀ ಸದಸ್ಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು.ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ.
ಆರ್ಥಿಕವಾಗಿ ಬಲ ಹೆಚ್ಚಲಿದೆ. ಉದ್ಯೋಗಿಗಳಿಗೆ ಶುಭ ಫಲ.ದಾಂಪತ್ಯದಲ್ಲಿ ಮಧುರತೆ ಇರಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com