ಚಂದ್ರನು ಭಾನುವಾರ ಸಿಂಹ ರಾಶಿಯಲ್ಲೇ ಇರಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗಿಗಳಿಗೆ ಕಿರಿಕಿರಿ ಉಂಟಾಗಬಹುದು. ಕಟಕ ರಾಶಿಯವರಿಗೆ ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (9-10-2023)
ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಹೆಚ್ಚಾಗಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗಿಗಳಿಗೆ ಕಿರಿಕಿರಿ ಉಂಟಾಗಬಹುದು. ಆರೋಗ್ಯ ಮಧ್ಯಮವಾಗಿರಲಿದೆ. ಮಾನಸಿಕ ಒತ್ತಡವು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ವೃಷಭ: ಆತ್ಮವಿಶ್ವಾಸದಿಂದ ಮಾಡುವ ಕಾರ್ಯದಿಂದ ಯಶಸ್ಸು ಕೀರ್ತಿ ಸಿಗಲಿದೆ. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿ ಇರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9
ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ. ಕುಟುಂಬದಲ್ಲಿ ಸಂಗಾತಿಯ ಬೆಂಬಲ, ಸಲಹೆ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಕಟಕ: ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ಸಿಂಹ: ನಿಮ್ಮ ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ಸಾಧ್ಯವಾದಷ್ಟು ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು,ಕೀರ್ತಿ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 9
ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ.
ಮುಂದಾಗುವ ಕಾರ್ಯಗಳ ಬಗೆಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು ನೆಮ್ಮದಿ ತರಲಿದೆ. ಹೂಡಿಕೆ ವ್ಯವಹಾರಕ್ಕೆ ಕೈ ಹಾಕಬೇಡಿ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 1
ವೃಶ್ಚಿಕ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ದೀರ್ಘಕಾಲದ ಕೆಲಸ-ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ ಮಾಡುವಿರಿ. ಜೀವನದಲ್ಲಿ ಅಭದ್ರತೆಯು ಕಾಡಬಹುದು. ಯಾವುದನ್ನು ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ. ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9
ಮಾಟ ಮಂತ್ರವನ್ನು ಏಕೆ ಮಾಡುತ್ತಾರೆ? ಹೇಗೆ ಮಾಡುತ್ತಾರೆ?
ಮಕರ: ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯದಲ್ಲಿ ಏರುಪೇರಾಗಲಿದೆ. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ ಇದೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ. ಅಗತ್ಯವಸ್ತುಗಳ ಖರೀದಿ ಖರ್ಚು ಹೆಚ್ಚಾಗಲಿದೆ. ಅಮೂಲ್ಯ ವಸ್ತುಗಳ ಕುರಿತು ಗಮನ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6
ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?
ಮೀನ: ಅನೇಕ ಮೂಲಗಳಿಂದ ಹಣಕಾಸು ಬರಲಿದೆ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ ಇದೆ. ಮಾನಸಿಕ ನೆಮ್ಮದಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com