ಚಂದ್ರನು ಧನಸ್ಸು ರಾಶಿಯಿಂದ ಬುಧವಾರ ಬೆಳಿಗ್ಗೆ 05:38 ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಷಭ ರಾಶಯವರು ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (9-10-2024)
ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷ.
ತಿಥಿ: ಷಷ್ಠಿ 12:13 ವಾರ: ಬುಧವಾರ
ನಕ್ಷತ್ರ: ಮೂಲಾ 29:14 ಯೋಗ: ಸೌಭಾಗ್ಯ 06:35
ಕರಣ: ತೈತುಲ 12:13 ಅಮೃತಕಾಲ: ಮಧ್ಯಾಹ್ನ 12:30 ರಿಂದ 02:11
ದಿನದ ವಿಶೇಷ: ಶರನ್ನವರಾತ್ರಿ ಏಳನೇ ದಿವಸ ಕಾಲರಾತ್ರಿ ಅವತಾರ.
ಸೂರ್ಯೋದಯ : 06:09 ಸೂರ್ಯಾಸ್ತ : 06:05
ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಇರಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಆರೋಗ್ಯ ಮಧ್ಯಮವಾಗಿರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1
ವೃಷಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 9
ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ. ಕುಟುಂಬದಲ್ಲಿ ಸಂಗಾತಿಯ ಬೆಂಬಲ ಸಲಹೆ ಸಿಗಲಿದೆ. ದಿನ ಮಟ್ಟಿಗೆ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7
ಕಟಕ: ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚು, ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2
ಸಿಂಹ: ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು,ಕೀರ್ತಿ, ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 9
ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ಮುಂದೆಯಾಗುವ ಕಾರ್ಯಗಳ ಬಗೆಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.ಅದೃಷ್ಟ ಸಂಖ್ಯೆ: 7
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ:ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು. ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ.ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 1
ವೃಶ್ಚಿಕ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣ.ದೀರ್ಘಕಾಲದ ಕೆಲಸಕಾರ್ಯಗಳಲ್ಲಿ ಯಶಸ್ಸು. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ, ಜೀವನದಲ್ಲಿ ಅಭದ್ರತೆಯು ಕಾಡಬಹುದು.ಯಾವುದನ್ನು ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ.ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9
ಮಕರ: ಆರ್ಥಿಕ ಪ್ರಗತಿ ಉತ್ತಮ. ಆರೋಗ್ಯದಲ್ಲಿ ಕೊಂಚ ಏರು-ಪೇರು. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ. ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ.ಅಗತ್ಯವಸ್ತುಗಳ ಖರೀದಿ ಗಾಡಿ ಖರ್ಚು. ಅಮೂಲ್ಯ ವಸ್ತುಗಳ ಕುರಿತು ಲಕ್ಷ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6
ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ. ಮಾನಸಿಕ ನೆಮ್ಮದಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com