Site icon Vistara News

Dina Bhavishya : ಈ ರಾಶಿಯವರಿಗೆ ಇಂದು ಸಂಗಾತಿಯ ಮಾತು ಕಿರಿಕಿರಿ ತರಲಿದೆ!

daily horoscope predictions for September 03 2023 husband and wife quarrel

ಚಂದ್ರನು ಶುಕ್ರವಾರ ಬೆಳಗ್ಗೆ 09:24ಕ್ಕೆ ಮೇಷ ರಾಶಿಗೆ ಪ್ರವೇಶ ಮಾಡಿದ್ದು, ಭಾನುವಾರ ಬೆಳಗ್ಗೆ 10:59ಕ್ಕೆ ವೃಷಭ ರಾಶಿಯನ್ನು ಪ್ರವೇಶ ಮಾಡಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಕರ್ಕಾಟಕ, ತುಲಾ, ವೃಶ್ಚಿಕ ಮತ್ತು ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ತುಲಾ ರಾಶಿಯವರು ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಬೇಕಿದೆ. ಮಾನಸಿಕ ಒತ್ತಡದಿಂದ ದೂರವಿರಲು ಯೋಗ, ಪ್ರಾಣಾಯಾಮ, ಧ್ಯಾನಗಳನ್ನು ಮಾಡಬೇಕಿದೆ. ಮಕರ ರಾಶಿಯವರಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚುತ್ತದೆ. ಮೀನ ರಾಶಿಯವರಿಗೆ ಸಂಗಾತಿಯ ಮಾತುಗಳು ಅಹಿತಕರ ಎನಿಸಬಹುದಾಗಿದೆ. ಇತರೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (3-09-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ಚತುರ್ಥಿ 18:23 ವಾರ: ಭಾನುವಾರ
ನಕ್ಷತ್ರ: ರೇವತಿ 10:37 ಯೋಗ: ವೃದ್ಧಿ 27:10
ಕರಣ: ಭವ 07:31 ಅಮೃತ ಕಾಲ: ಬೆಳಗ್ಗೆ 08:25 ರಿಂದ 09:54 ರವರೆಗೆ
ದಿನದ ವಿಶೇಷ: ಸಂಕಷ್ಟ ಚತುರ್ಥಿ

ಸೂರ್ಯೋದಯ : 06:09  ಸೂರ್ಯಾಸ್ತ : 06:29

ರಾಹುಕಾಲ: ಸಂಜೆ 4.30 ರಿಂದ 6.00
ಗುಳಿಕಕಾಲ: ಸಂಜೆ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ನಿಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಳ್ಳುವಿರಿ. ಅನಗತ್ಯ ಮಾನಸಿಕ ಒತ್ತಡ ಬೇಡ. ಹಣಕಾಸು ಪ್ರಗತಿಯನ್ನು ಸಾಧಿಸುವಿರಿ. ವ್ಯಾಪಾರ – ವ್ಯವಹಾರದಲ್ಲಿ ಪ್ರಗತಿ ಇರಲಿದ್ದು, ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ವೃಷಭ: ಉತ್ಸಾಹದಿಂದ ಕಾಲ ಕಳೆಯುವಿರಿ. ನಿಮ್ಮ ಬಳಿ ಯಾರಾದರೂ ಆರ್ಥಿಕ ಸಹಾಯವನ್ನು ಕೇಳಬಹುದು. ಇಂದು ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲವಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚು. ‌ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ಮಿಥುನ: ಅನಾವಶ್ಯಕ ವಿಚಾರಗಳಿಂದ ಮಾನಸಿಕವಾಗಿ ವಿಚಲಿತರಾಗುವುದು ಬೇಡ. ಸಕಾರಾತ್ಮಕವಾಗಿ ಆಲೋಚಿಸಿ. ಇದರಿಂದ ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆಯನ್ನು ನೀವು ಕಾಣಬಹುದಾಗಿದೆ. ಆರೋಗ್ಯ ಮಧ್ಯಮ ಪ್ರಮಾಣದಲ್ಲಿದ್ದರೆ, ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ವ್ಯಾಪಾರ – ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಶುಭ ಫಲವಿದ್ದರೆ, ಕೌಟುಂಬಿಕವಾಗಿ ಉತ್ತಮ ಫಲ.
ಅದೃಷ್ಟ ಸಂಖ್ಯೆ: 8

ಕಟಕ: ಅನೇಕ ಒತ್ತಡಗಳು ದೂರವಾಗಿ ಇಂದು ಹರ್ಷದಿಂದ ಕಾಲ ಕಳೆಯುವಿರಿ. ಸಂಗಾತಿಯೊಂದಿಗೆ ಪ್ರಮುಖ ಯೋಜನೆಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಹಾಗೂ ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲವಿದ್ದರೆ, ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

ಸಿಂಹ: ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ವಿಚಲಿತರಾಗುವಂತೆ ಮಾಡಬಹುದು. ಕುಲ ದೇವರ ಆರಾಧನೆ, ಕ್ಷೇತ್ರ ದರ್ಶನದಿಂದ ಮಾನಸಿಕ ನೆಮ್ಮದಿ ದೊರೆಯಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ವ್ಯಾಪಾರ – ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಕನ್ಯಾ: ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಅಲ್ಲದೆ, ಜವಾಬ್ದಾರಿ ಸಹ ಹೆಚ್ಚಲಿದೆ. ವ್ಯಾಪಾರ – ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ವಿವಾಹ ಅಪೇಕ್ಷಿತರಿಗೆ ಸಿಹಿ ಸುದ್ಧಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ ದೊರೆಯಲಿದೆ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಮಾನಸಿಕ ಒತ್ತಡದಿಂದ ದೂರವಿರಲು ಯೋಗ, ಪ್ರಾಣಾಯಾಮ, ಧ್ಯಾನಗಳನ್ನು ಮಾಡಿ. ಆರ್ಥಿಕ ಸಹಾಯದ ಬೇಡಿಕೆ ಬರಲಿದೆ. ಆಪ್ತರೊಂದಿಗೆ ಸಮಯ ಕಳೆಯಲು ಅವಕಾಶ ಸಿಗಲಿದೆ. ಕುಟುಂಬದವರ ಸಹಕಾರ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ – ವ್ಯವಹಾರ ಉತ್ತಮವಾಗಿರಲಿದ್ದು, ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ವೃಶ್ಚಿಕ: ಅನಿರೀಕ್ಷಿತ ಪ್ರಯಾಣ ಬಂದೊದಗಬಹುದು. ದೇಹದ ಆಯಾಸ ಹೆಚ್ಚಾಗುವ ಸಾಧ್ಯತೆ ಇದೆ. ಒತ್ತಡದಿಂದ ಮನಸ್ಸಿನ ಹತೋಟಿ ತಪ್ಪುವ ಸಾಧ್ಯತೆ ಇದೆ. ತಾಳ್ಮೆ ತೆಗೆದುಕೊಳ್ಳುವುದು ಅವಶ್ಯಕ. ವ್ಯಾಪಾರ – ವ್ಯವಹಾರದಲ್ಲಿ ಇಮ್ಮಡಿ ಲಾಭ ದೊರೆಯಲಿದೆ. ಆರ್ಥಿಕವಾಗಿ ಬಲಿಷ್ಠವಾಗುವಿರಿ. ಆದಾಯದ ಮೂಲಗಳು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಧನಸ್ಸು: ಆರೋಗ್ಯದ ಕಡೆಗೆ ಹೆಚ್ಚು ಗಮನ ಇರಲಿ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಕುಟುಂಬದ ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಮನೆಯಲ್ಲಿ ಒಡೆದುಹೋದ ಕನ್ನಡಿಯಿದ್ದರೆ ಒಳಿತಲ್ಲವೇ?

ಮಕರ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚುತ್ತದೆ. ಆಪ್ತರೊಂದಿಗೆ ಸಮಯ ಕಳೆಯವಿರಿ. ಅನೇಕ ಭಿನ್ನಾಭಿಪ್ರಾಯಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡಬಹುದು. ಹಾಗಾಗಿ ಮಾನಸಿಕ ಆರೋಗ್ಯಕ್ಕಾಗಿ ದತ್ತಾತ್ರೇಯ ಗುರುಗಳ ಆರಾಧನೆ ಮಾಡಿ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಉತ್ತಮ ಫಲ.
ಅದೃಷ್ಟ ಸಂಖ್ಯೆ: 9

ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ತೊಡಗಿದರೆ ಯಶಸ್ಸು, ಕೀರ್ತಿ ಸಿಗಲಿದೆ. ಅನಾವಶ್ಯಕವಾಗಿ ಒತ್ತಡಕ್ಕೆ ಒಳಗಾಗುವುದು ಬೇಡ. ಆರ್ಥಿಕ ಪ್ರಗತಿ ಸಾಧಿಸುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತರಿಂದ ಉಡುಗೊರೆ ಸಿಗುವುದು. ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವ ಬುದ್ಧಿ ನಿಮ್ಮದಾಗಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?

ಮೀನ: ದೈಹಿಕ ಆರೋಗ್ಯ ಉತ್ತಮವಾಗಿರಲಿದ್ದು, ಮಾನಸಿಕ ಆರೋಗ್ಯದ ಕಡೆ ಗಮನ ಹರಿಸಿ. ನೀವು ನಡೆದಿರುವ ಘಟನೆ ನೆನಪಿಸಿ ಕೊರಗುವುದು ಬೇಡ. ಸಂಗಾತಿಯ ಮಾತುಗಳು ಅಹಿತಕರ ಎನಿಸಬಹುದು. ಕುಟುಂಬದ ಸದಸ್ಯರ ಅಡ್ಡಿಯ ಕಾರಣದಿಂದ ನಿಮ್ಮ ದಿನ ಸ್ವಲ್ಪ ಏರುಪೇರಾಗಬಹುದು. ಆದರೆ, ಆಪ್ತರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version