ಚಂದ್ರನು ಮಂಗಳವಾರ ಸಂಜೆ 04:06ಕ್ಕೆ ಮಿಥುನ ರಾಶಿಯನ್ನು (Gemini) ಪ್ರವೇಶಿಸಿದ್ದು, ಶುಕ್ರವಾರದವರೆಗೆ ಇಲ್ಲಿಯೇ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ತುಲಾ ರಾಶಿಯವರ ಕುಟುಂಬದ ಸದಸ್ಯರ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ಕುಂಭ ರಾಶಿಯವರಿಗೆ ವ್ಯಾಪಾರ-ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರಲಿದೆ. ಇತರೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (7-09-2023)
ಮೇಷ: ಆರೋಗ್ಯದಲ್ಲಿ ಪ್ರಗತಿ ಕಾಣಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭವಾಗಲಿದೆ. ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5
ವೃಷಭ: ಕೈಗೆ ಬಂದ ತುತ್ತು ಬಾಯಿಗೆ ಬರುವ ಮುನ್ನ ಜಾಗ್ರತೆಯಿಂದಿರಿ. ಕೋಪದ ಕೈಗೆ ಬುದ್ಧಿ ಕೊಡುವುದು ಬೇಡ. ತಾಳ್ಮೆಯಿಂದ ವರ್ತಿಸಿ. ಕೆಲಸ ಕಾರ್ಯಗಳು ನಿಧಾನವಾಗಲಿದೆ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4
ಮಿಥುನ: ಆಪ್ತ ವ್ಯಕ್ತಿಗಳಿಂದ ಸಲಹೆ ಸಿಗಲಿದೆ. ಆರ್ಥಿಕವಾಗಿ ಬಲ ಸಿಗಲಿದೆ. ದ್ವಂದ್ವ ಸ್ವಭಾವದರಾದ ನೀವು ಆಂತರಿಕ ಭಯದಿಂದ ಬಳಲುತ್ತಿರುವ ಹಾಗೆ ಭಾಸವಾಗುವುದು. ಆರೋಗ್ಯದಲ್ಲಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಕಟಕ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಹೊಸ ವ್ಯವಹಾರದಲ್ಲಿ ತೊಡಗುವಿರಿ. ಆದರೆ, ಆತುರದ ತಿರ್ಮಾನಗಳು ಬೇಡ. ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಸಿಂಹ: ಅತಿಯಾದ ವ್ಯಾಮೋಹ ದುಃಖಕ್ಕೆ ಕಾರಣವಾಗಬಹುದು. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ನಿಮ್ಮ ಶಕ್ತಿ ಮತ್ತು ನಿಮ್ಮ ಮುಂದಿನ ಯೋಜನೆಗಳನ್ನು ಮರು ನಿರ್ಣಯಿಸುವ ಸಮಯ ಬಂದಿದೆ. ಆರೋಗ್ಯದಲ್ಲಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಕನ್ಯಾ: ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಅತಿಥಿಗಳ ಆಗಮನ ಸಂತಸ ತರುವುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಆಪ್ತರ ಮಾತುಗಳು ಅಗಾದ ಪರಿಣಾಮ ಬೀರುವ ಸಾಧ್ಯತೆ ಇದೆ. ಹಣಕಾಸು ವ್ಯವಹಾರ ಕುಂಠಿತವಾಗಲಿದೆ. ಕುಟುಂಬದ ಸದಸ್ಯರ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ದೃತಿಗೆಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ವೃಶ್ಚಿಕ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಉದಾರಿತನವನ್ನು ಬೇರೆಯವರು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6
ಧನಸ್ಸು: ದೈಹಿಕವಾಗಿ ಆಯಾಸವಾಗುವುದು. ಅತಿಯಾದ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಕೆಲಸ ಕಾರ್ಯಗಳಲ್ಲಿ ನಿಧಾನಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 3
ಸ್ತ್ರೀ ಶಾಪದಿಂದ ನಿಜವಾಗಿಯೂ ಕೆಟ್ಟದ್ದಾಗುತ್ತಾ?
ಮಕರ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ಎಂದಿಗಿಂತ ಇಂದು ಉತ್ಸಾಹದಿಂದ ಇರುವಿರಿ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಪ್ರೀತಿ ಅಂಕುರವಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3
ಕುಂಭ: ಭರವಸೆಯು ನಿಮ್ಮ ಕೆಲಸದಲ್ಲಿ ಸಹಾಯ ಮಾಡುವುದು. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ವ್ಯಾಪಾರ-ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?
ಮೀನ: ಪ್ರೀತಿ, ಭರವಸೆ, ನಂಬಿಕೆ, ಸಹಾನುಭೂತಿ, ಆಶಾವಾದ ಮತ್ತು ನಿಷ್ಠೆಗಳಂಥ ಧನಾತ್ಮಕ ಭಾವನೆಗಳನ್ನು ಗ್ರಹಿಸಲು ಮನಸ್ಸು ಹಾತೊರೆಯಲಿದೆ. ನಿಮ್ಮ ಕಾರ್ಯದಲ್ಲಿ ಪ್ರಗತಿ ಕಾಣುವಿರಿ. ಹಿರಿಯರ ಆಶೀರ್ವಾದ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com