ಚಂದ್ರನು ಶುಕ್ರವಾರ ಬೆಳಗ್ಗೆ 09:24ಕ್ಕೆ ಮೇಷ ರಾಶಿಗೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಆರೋಗ್ಯದ ಕುರಿತು ಹೆಚ್ಚು ಗಮನಹರಿಸಬೇಕು. ಆರೋಗ್ಯ ಸಂಬಂಧಿ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಧನಸ್ಸು ರಾಶಿಯವರು ಆಪ್ತರೊಂದಿಗೆ ಅತಿಯಾದ ಸಲುಗೆ ಒಳ್ಳೆಯದಲ್ಲ, ಇದು ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಕುಂಭ ರಾಶಿಯವರು ಖರ್ಚಿನ ವಿಷಯಗಳಿಗೆ ಕಡಿವಾಣ ಹಾಕಿ. ಇತರೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (1-09-2023)
ಮೇಷ: ಆರೋಗ್ಯ ಸಂಬಂಧಿ ಖರ್ಚು ಹೆಚ್ಚಾಗಲಿದೆ. ಅಪರೂಪದ ವ್ಯಕ್ತಿಗಳ ಪರಿಚಯವಾಗಲಿದೆ. ಅನೇಕ ವಿಚಾರಗಳು ಮನಸ್ಸಿನ ಆಳಕ್ಕೆ ಇಳಿಯುತ್ತವೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 7
ವೃಷಭ: ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದು ಉತ್ತಮ. ಕಾಲಹರಣ ಮಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ದಿನದ ಮಟ್ಟಿಗೆ ಖರ್ಚು. ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಮಿಥುನ: ಬುದ್ಧಿವಂತಿಕೆಯಿಂದ ವರ್ತಿಸಿ, ಕಾರ್ಯದಲ್ಲಿ ಯಶಸ್ಸು ಸಿಗುವುದು. ಯಾರನ್ನೂ ನಂಬಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಸ್ನೇಹಿತರೊಂದಿಗೆ ಮಾತು, ದಿನದ ಕೊನೆಯ ಭಾಗದಲ್ಲಿ ಮಾನಸಿಕವಾಗಿ ದುರ್ಬಲವಾಗುವ ಸಾಧ್ಯತೆ ಇದೆ. ಗುರು ದತ್ತಾತ್ರೇಯನನ್ನು ಆರಾಧಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5
ಕಟಕ: ಆಪ್ತರೊಂದಿಗೆ ಅತಿಯಾದ ಸಲುಗೆ ಒಳ್ಳೆಯದಲ್ಲ, ಇದು ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆತುರದ ಮಾತುಗಳಿಗೆ ನಿಯಂತ್ರಣ ಇರಲಿ. ಉದ್ಯೋಗಿಗಳಿಗೆ ಯಶಸ್ಸು. ಅತಿಥಿಗಳ ಆಗಮನದಿಂದ ಕಾರ್ಯ ವಿಳಂಬವಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8
ಸಿಂಹ: ಬಿಡುವಿರದಂತೆ ಕೆಲಸದ ಒತ್ತಡ ಹೆಚ್ಚಾಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಹಣಕಾಸು, ಹೂಡಿಕೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಉದ್ಯೋಗಿಗಳಿಗೆ ಉತ್ತಮ ಅವಕಾಶ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಕನ್ಯಾ: ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ದಿನದ ಮಟ್ಟಿಗೆ ಖರ್ಚು. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ. ಆಪ್ತರೊಂದಿಗೆ ಮಾತುಕತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ದೀರ್ಘಕಾಲದ ಪ್ರಯತ್ನ ನಿಮಗೆ ಯಶಸ್ಸು ತಂದು ಕೊಡುವುದು. ಕುಟುಂಬದ ಆಪ್ತರು, ಸ್ನೇಹಿತರಿಂದ ಉಡುಗೊರೆ ಸಿಗುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಸಾಧಾರಣವಾಗಿರಲಿದೆ. ಆರೋಗ್ಯ ಉತ್ತಮವಾಗಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7
ವೃಶ್ಚಿಕ: ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡುವುದು. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಹಣಕಾಸು ಉತ್ತಮ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9
ಧನಸ್ಸು: ಕುಟುಂಬದ ಸಮಸ್ಯೆಗಳು ನಿಮ್ಮನ್ನು ಮಾನಸಿಕವಾಗಿ ದೈಹಿಕವಾಗಿ ಬಳಲುವಂತೆ ಮಾಡಬಹುದು. ಹಿರಿಯರ ಮಾರ್ಗದರ್ಶನ ಪಡೆಯಿರಿ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಿ. ಸಂಗಾತಿಯ ಮಧುರ ಮಾತುಗಳು ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ದಾಂಪತ್ಯ ಜೀವನಕ್ಕೆ ಸೂರ್ಯನಿಂದ ತೊಂದರೆಯಾಗುತ್ತಾ?
ಮಕರ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿದೆ. ಇಂದಿನ ದಿವಸ ಯಾರೊಂದಿಗೂ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಸದಸ್ಯರ ವರ್ತನೆ ಕೋಪವನ್ನು ತರಿಸುವುದು. ಆಲಸ್ಯದಿಂದ ಉತ್ತಮ ಕೆಲಸವನ್ನು ಮುಂದುಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ಕುಂಭ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಖರ್ಚಿನ ವಿಷಯಗಳಿಗೆ ಕಡಿವಾಣ ಹಾಕಿ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಸಂಗಾತಿಯು ಸೃಷ್ಟಿಸುವ ಸಮಸ್ಯೆಗಳನ್ನು ಬುದ್ಧಿವಂತಿಕೆಯಿಂದ ನಿಭಾಯಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?
ಮೀನ: ಕಾಲಹರಣ ಮಾಡುವ ಬದಲು ಸೃಜನಾತ್ಮಕ ಕೆಲಸ ಕಾರ್ಯಗಳಲ್ಲಿ ತೊಡಗಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರ್ಥಿಕವಾಗಿ ಬಲಿಷ್ಠರಾಗುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com