ಚಂದ್ರನು ಸಿಂಹ ರಾಶಿಯಿಂದ ಭಾನುವಾರ ರಾತ್ರಿ 11:48ಕ್ಕೆ ಕನ್ಯಾರಾಶಿಗೆ ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿಯ ಒರಟು ವರ್ತನೆ ನಿಮ್ಮ ಮೇಲೆ ಒತ್ತಡ ಹಾಕಬಹುದು. ವ್ಯಾಪಾರ-ವ್ಯವಹಾರದಲ್ಲಿ ಲಾಭ ಇರಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ತಿಂಗಳ ಆರಂಭದ ದಿನವೇ ಉದ್ಯೋಗದ ಸ್ಥಳದಲ್ಲಿ ನೀವು ಕಿರಿಕಿರಿ ಅನುಭವಿಸುವ ಸಾಧ್ಯತೆ ಇರುವುದರಿಂದ ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ವೃಷಭ ರಾಶಿಯವರು ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ. ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ. ನಿಮ್ಮ ಆಕರ್ಷಣೆ ಹಾಗೂ ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ವಿಶೇಷ ಅನುಕೂಲ ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (1-09-2024)
ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ಚತುರ್ದಶಿ 29:21 ವಾರ: ಭಾನುವಾರ
ನಕ್ಷತ್ರ: ಆಶ್ಲೇಷಾ 21:47 ಯೋಗ: ಪರಿಘ 17:48
ಕರಣ: ವಿಷ್ಟಿ (ಭದ್ರ) 16:27 ಅಮೃತಕಾಲ: ರಾತ್ರಿ 08:04 ರಿಂದ 09:49
ದಿನದ ವಿಶೇಷ: ಹುಬ್ಬಳ್ಳಿ ಗುರುಸಿದ್ದೇಶ್ವರ ರಥ, ತಳಕಲ್ಲ ವೀರಭದ್ರ ರಥ
ಸೂರ್ಯೋದಯ : 06:09 ಸೂರ್ಯಾಸ್ತ : 06:30
ಮೇಷ: ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿಯ ಒರಟು ವರ್ತನೆ ನಿಮ್ಮ ಮೇಲೆ ಒತ್ತಡ ಹಾಕಬಹುದು. ವ್ಯಾಪಾರ-ವ್ಯವಹಾರದಲ್ಲಿ ಲಾಭ ಇರಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ತಿಂಗಳ ಆರಂಭದ ದಿನವೇ ಉದ್ಯೋಗದ ಸ್ಥಳದಲ್ಲಿ ನೀವು ಕಿರಿಕಿರಿ ಅನುಭವಿಸುವ ಸಾಧ್ಯತೆ ಇರುವುದರಿಂದ ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7
ವೃಷಭ: ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ. ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ. ನಿಮ್ಮ ಆಕರ್ಷಣೆ ಹಾಗೂ ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ವಿಶೇಷ ಅನುಕೂಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಮಿಥುನ: ಜೀವನ ಸಂಗಾತಿಯೊಂದಿಗೆ ಸೇರಿ ಇಂದು ನೀವು ಭವಿಷ್ಯಕ್ಕೆ ಯಾವುದೇ ಆರ್ಥಿಕ ಯೋಜನೆಯನ್ನು ಮಾಡಬಹುದು. ಈ ಯೋಜನೆ ಯಶಸ್ವಿಯಾಗಲಿದೆ. ಹತಾಶೆಯ ಭಾವನೆ ನಿಮ್ಮನ್ನು ಆವರಿಸಲು ಬಿಡಬೇಡಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಹೊಸ ಅವಕಾಶಗಳು ತೆರೆದುಕೊಳ್ಳಲಿವೆ. ಪ್ರೇಮಿಗಳಿಗೆ ಶುಭ ಸೂಚನೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5
ಕಟಕ: ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಅನಿರೀಕ್ಷಿತ ಲಾಭದ ಮೂಲಕ ಆರ್ಥಿಕ ಬಲಗಳು ಸುಧಾರಿಸುತ್ತವೆ. ನಿಮ್ಮ ಸಹೋದ್ಯೋಗಿಗಳು ಎಂದಿಗಿಂತಲೂ ಉತ್ತಮವಾಗಿ ನಿಮ್ಮನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುತ್ತಾರೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8
ಸಿಂಹ: ಧರ್ಮಕಾರ್ಯಗಳು / ಹವನಗಳು / ಮಂಗಳಕರ ಸಮಾರಂಭಗಳನ್ನು ಮನೆಯಲ್ಲಿ ಕೈಗೊಳ್ಳವ ಸಾಧ್ಯತೆ ಇದೆ. ಅತಿಯಾದ ದ್ವೇಷದ ಭಾವನೆಯಿಂದ ನಿಮ್ಮ ಮನಸ್ಸುನ್ನು ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದಲ್ಲಿ ಕೊಂಚ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಅನುಭವಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7
ಕನ್ಯಾ: ಕೆಲವು ಅನಿವಾರ್ಯ ಸಂದರ್ಭಗಳು ನಿಮಗೆ ಅಹಿತಕರವೆನಿಸಬಹುದು. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಇದು ನಿಮ್ಮ ಮನಸ್ಥಿತಿಯನ್ನು ಬದಲಾಯಿಸುವುದಷ್ಟೇ ಅಲ್ಲದೇ ನಿಮ್ಮ ತಪ್ಪು ತಿಳುವಳಿಕೆಗಳನ್ನೂ ಹೋಗಲಾಡಿಸುತ್ತದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ದಿನದ ಮಟ್ಟಿಗೆ ಆದಾಯಕ್ಕಿಂತ ಹೆಚ್ಚಿನ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಸ್ನೇಹಿತರ ಜತೆಗಿನ ನಿಮ್ಮ ಅಪಾರ್ಥ ಕೆಲವು ಅಹಿತಕರ ಪ್ರತಿಕ್ರಿಯೆಗಳನ್ನು ಉಂಟುಮಾಡಬಹುದು. ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸಂಯಮದಿಂದ ವರ್ತಿಸಿ. ನಿಮ್ಮ ವೈಯಕ್ತಿಕ ರಂಗದಲ್ಲಿ ಮುಖ್ಯ ಬೆಳವಣಿಗೆಯಾಗುತ್ತಿದ್ದು, ಇದು ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರಲಿದೆ. ಆರ್ಥಿವಾಗಿ ಉತ್ತಮ ಫಲ ಇರಲಿದೆ. ಆರೋಗ್ಯದ ಬಗೆಗೆ ಜಾಗೃತಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7
ವೃಶ್ಚಿಕ: ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಪ್ರಮುಖ ಕೆಲಸಗಳಲ್ಲಿ ವಿಳಂಬವಾಗುವ ಸಾಧ್ಯತೆ ಇದೆ. ಅನೇಕ ಒತ್ತಡದಿಂದ ಹೊರಬರುವಿರಿ. ಹಣಕಾಸಿನಲ್ಲಿ ಸುಧಾರಣೆ, ದೀರ್ಘಕಾಲದ ಬಾಕಿ ಮರುಪಾವತಿ ಆಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದಲ್ಲಿ ದಿನದ ಕೊನೆಯಲ್ಲಿ ಮನಸ್ತಾಪ ಆದಷ್ಟು ಮಾತಿಗೆ ವಿರಾಮವಿರಲಿ. ಅದೃಷ್ಟ ಸಂಖ್ಯೆ: 9
ಧನಸ್ಸು: ಚಿಕ್ಕ ಪುಟ್ಟ ವಿಷಯಗಳಿಗೆ ತಲೆಕೆಡಿಸಿಕೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವುದು ಬೇಡ. ನೀವು ಇತರರ ಮಾತುಗಳನ್ನು ನಂಬಿ ಇಂದು ಹೂಡಿಕೆ ಮಾಡಿದಲ್ಲಿ ಇಂದು ಆರ್ಥಿಕ ನಷ್ಟದ ಸಾಧ್ಯತೆಯಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಆಲಸ್ಯದಿಂದಾಗಿ ಕಿರಿಕಿರಿ ಅನುಭವಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6
ಮಕರ: ಬಹು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕೆಲಸ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ವಿದೇಶ ಪ್ರವಾಸಕ್ಕೆ ಕಾಯುತ್ತಿರುವವರಿಗೆ ಶುಭ ಸೂಚನೆ ಸಿಗಲಿದೆ. ಸೃಜನಶೀಲ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಇರಲಿದೆ. ಅದೃಷ್ಟ ಸಂಖ್ಯೆ: 6
ಕುಂಭ: ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ಇಂದು ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು ಮತ್ತು ನೀವು ಹಣದ ಲಾಭವನ್ನು ಪಡೆಯಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆ ಇಮ್ಮಡಿ ಆಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4
ಮೀನ: ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ಕೆಲವು ಊಹೆಗಳು ಲಾಭ ತರುತ್ತವೆ. ಪ್ರಮುಖ ವ್ಯಕ್ತಿಗಳೊಂದಿಗೆ ಮಾತನಾಡುವಾಗ ಜಾಗೃತೆ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com