Site icon Vistara News

Dina Bhavishya : ಅತ್ಯಂತ ಪ್ರಭಾವಿ ಜನರ ಬೆಂಬಲ ಈ ರಾಶಿಯವರ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತೆ

Dina Bhavishya

ಚಂದ್ರನು ಧನಸ್ಸು ರಾಶಿಯಿಂದ ಬುಧವಾರ ರಾತ್ರಿ 10:37ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಧನಸ್ಸು ರಾಶಿಯವರು ಭೂಮಿ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕೂಡಿಬರಲಿದೆ. ಮಿಥುನ ರಾಶಿಯವರು ಏಕಪಕ್ಷೀಯ ವ್ಯಾಮೋಹದಿಂದ ಒತ್ತಡ ಇರಲಿದೆ. ಭರವಸೆಯ ಹೊಸ ಅವಕಾಶಗಳು ತಪ್ಪದಂತೆ ನೋಡಿಕೊಳ್ಳಿ. ಆರ್ಥಿಕ ಪ್ರಗತಿ ಮಧ್ಯಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಬದಲಾವಣೆ ಆಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (11-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ.
ತಿಥಿ: ಅಷ್ಟಮಿ 23:46 ವಾರ: ಬುಧವಾರ
ನಕ್ಷತ್ರ: ಜೇಷ್ಠಾ 21:20 ಯೋಗ: ಪ್ರೀತಿ 23:53
ಕರಣ: ವಿಷ್ಟಿ (ಭದ್ರ) 11:34 ಅಮೃತಕಾಲ: ಮಧ್ಯಾಹ್ನ 12:05ರಿಂದ 01:46
ದಿನದ ವಿಶೇಷ: ಜ್ಯೇಷ್ಠದೇವಿ ಪೂಜಾ

ಸೂರ್ಯೋದಯ : 06:09   ಸೂರ್ಯಾಸ್ತ : 06:23

ರಾಹುಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಅತಿರೇಕದ ಮಾತುಗಳು ಜಗಳ ಉಂಟುಮಾಡಬಹುದು. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ ಇರಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರಾಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ವೃಷಭ: ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕುಟುಂಬದ ಆಪ್ತರಿಂದ ಆಮಂತ್ರಣ ಸಿಗಲಿದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ಮಿಥುನ: ಏಕಪಕ್ಷೀಯ ವ್ಯಾಮೋಹದಿಂದ ಒತ್ತಡ ಇರಲಿದೆ. ಭರವಸೆಯ ಹೊಸ ಅವಕಾಶಗಳು ತಪ್ಪದಂತೆ ನೋಡಿಕೊಳ್ಳಿ. ಆರ್ಥಿಕ ಪ್ರಗತಿ ಮಧ್ಯಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಬದಲಾವಣೆ ಆಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

ಕಟಕ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿರೇಕದಲ್ಲಿ ಯಾವುದೇ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

ಸಿಂಹ: ಕೋಪದಿಂದ ಕಾರ್ಯದಲ್ಲಿ ಹಾನಿಯಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಸಂಬಂಧಿಗಳೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿಯಾಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

ಕನ್ಯಾ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಪಾಲುದಾರಿಕೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ನಂಬಿದ ವ್ಯಕ್ತಿಗಳು ನಿಮ್ಮನ್ನು ಮೋಸಗೊಳಿಸಬಹುದು. ತಪ್ಪು ತಿಳುವಳಿಕೆ ಉಂಟಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಸಕಾರಾತ್ಮಕ ಆಲೋಚನೆಗಳಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹಳೆಯ ವಿಚಾರ ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

ವೃಶ್ಚಿಕ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಅಮೂಲ್ಯ ವಸ್ತುಗಳು ಕೈಗೆ ಸಿಗುವುದರಿಂದ ಸಂತಸವಾಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

ಧನಸ್ಸು: ಭೂಮಿ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕೂಡಿಬರಲಿದೆ. ಕುಟುಂಬದಲ್ಲಿ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

ಮಕರ: ಭರವಸೆಯ ಹೊಸ ಜೀವನ ಶುರುವಾಗಲಿದೆ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಆರ್ಥಿಕ ಪ್ರಗತಿ ಇರಲಿದೆ. ನೀವು ಮಾಡಿದ ಕೆಲಸ ಕಾರ್ಯಗಳ ಫಲಿತಾಂಶ ಬೇರೆಯವರು ತೆಗೆದುಕೊಂಡು ಪ್ರಶಂಸೆ ಪಡುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

ಕುಂಭ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವುದು. ಅವಶ್ಯಕ ವಸ್ತುಗಳ ಖರೀದಿ ಮಾಡುವಿರಿ. ಅಷ್ಟೇ ಆರ್ಥಿಕ ಲಾಭ ಇರಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ, ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯದಲ್ಲಿ ತೊಡಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

ಮೀನ: ಹಳೆಯ ನೋವು ಉಲ್ಬಣಗೊಳ್ಳುವ ಸಾಧ್ಯತೆ ಇದೆ, ಆರೋಗ್ಯದ ಕಡೆಗೆ ಗಮನ ಇರಲಿ.ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಸಂಬಂಧಿಗಳೊಂದಿಗೆ ಮಾತುಕತೆ. ಉದ್ಯೋಗಿಗಳಿಗೆ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version