Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಚೇರಿಯಲ್ಲಿ ನಡೆಯಲಿದೆ ಪಿತೂರಿ! Vistara News
Connect with us

ಪ್ರಮುಖ ಸುದ್ದಿ

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಚೇರಿಯಲ್ಲಿ ನಡೆಯಲಿದೆ ಪಿತೂರಿ!

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ಅಮವಾಸ್ಯೆ ಅಹೋರಾತ್ರಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavisya september 14 regarding job news
Koo

ಚಂದ್ರನು ಸಿಂಹ ರಾಶಿಯಿಂದ ಬುಧವಾರ 01:18ಕ್ಕೆ ಕನ್ಯಾ ರಾಶಿಯನ್ನು ಪ್ರವೇಶಿಸಿದ್ದು, ಶುಕ್ರವಾರ ಮಧ್ಯಾಹ್ನ 1.43ರವರೆಗೆ ಅಲ್ಲಿಯೇ ನೆಲೆಸಲಿದ್ದಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯ ಉದ್ಯೋಗಿಗಳಿಗೆ ಕಚೇರಿಯಲ್ಲಿ ಪಿತೂರಿ ನಡೆಯಲಿದೆ. ಹೀಗಾಗಿ ಅಂಥವರ ಬಗ್ಗೆ ಎಚ್ಚರಿಕೆ ಇರಲಿ. ಮಿಥುನ ರಾಶಿಯವರಿಗೆ ಬಂಧುಗಳು ಟೀಕೆ ಮಾಡುವ ಸಾಧ್ಯತೆ ಇದೆ. ಆದರೆ, ಸಂಯಮವನ್ನು ಕಳೆದುಕೊಳ್ಳುವುದು ಬೇಡ. ತುಲಾ ರಾಶಿಯವರಿಗೆ ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಇತರೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (14-09-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ
ತಿಥಿ:
ಅಮವಾಸ್ಯೆ ಅಹೋರಾತ್ರಿ ವಾರ: ಗುರುವಾರ
ನಕ್ಷತ್ರ: ಪೂರ್ವ ಫಾಲ್ಗುಣಿ 28:52 ಯೋಗ: ಸಾಧ್ಯ 26:57
ಕರಣ: ಚತುಷ್ಪಾದ 17:59 ಅಮೃತಕಾಲ: ರಾತ್ರಿ 09:44ರಿಂದ 11:31ರ ವರೆಗೆ
ದಿನದ ವಿಶೇಷ: ಬೆನಕನ ಅಮಾವಾಸ್ಯೆ

ಸೂರ್ಯೋದಯ : 06:09  ಸೂರ್ಯಾಸ್ತ : 06:22

ರಾಹುಕಾಲ: ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ:
ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವವರ ಬಗ್ಗೆ ಎಚ್ಚರಿಕೆ ಇರಲಿ. ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕವಾಗುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಸಾಧಿಸುವಿರಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಸಾಧಿಸಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಉತ್ತಮ ಆರೋಗ್ಯ ಪ್ರಾಪ್ತಿಯಾಗಲಿದೆ. ಸಹೋದ್ಯೋಗಿಗಳಿಂದ ಕಿರಿಕಿರಿ ಸಾಧ್ಯತೆ ಇದ್ದು, ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಬಂಧುಗಳು ಟೀಕೆ ಮಾಡುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಒತ್ತಡ ಇರಲಿದ್ದು, ಮಾನಸಿಕ ನೆಮ್ಮದಿ ಹಾಳಾಗುವ ಸಾಧ್ಯತೆ ಇದೆ. ಹೀಗಾಗಿ ಸಂಯಮದಿಂದ ವರ್ತಿಸಿ. ಆರ್ಥಿಕ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಆತುರದ ತೀರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ – ವ್ಯವಹಾರದಲ್ಲಿ ಪ್ರಗತಿ ಸಾಧಿಸುವಿರಿ. ಆರೋಗ್ಯ ಪರಿಪೂರ್ಣವಾಗಿರುತ್ತದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವಾಗಲಿದೆ. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಸಾಧಿಸುವಿರಿ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸ ಆಗಲಿದೆ. ಹಣಕಾಸು ಪ್ರಗತಿ ಸಾಧಿಸುವಿರಿ. ಬಂಧುಗಳ ಭೇಟಿ ಕೊಂಚ ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಕುಟುಂಬದ ಸದಸ್ಯರ ಆರೋಗ್ಯದ ಕಡೆ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು. ದಿನದ ಮಟ್ಟಿಗೆ ಖರ್ಚು ಹೆಚ್ಚಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತ ಸ್ನೇಹಿತ- ಸಂಬಂಧಿಗಳ ಸಮಸ್ಯೆಗಳಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಊಟ ಮಾಡಲು ದಿಕ್ಕು ಇದೆ; ಹಣಕಾಸು ಅಭಿವೃದ್ಧಿಗೆ ಹೇಗೆ ಊಟ ಮಾಡಬೇಕೆಂದು ಇಲ್ಲಿ ನೋಡಿ!

Horoscope Today

ಮಕರ: ಆರೋಗ್ಯ ಉತ್ತಮವಾಗಿರಲಿದೆ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತರುವುದು. ಅತಿರೇಕವಾಗಿ ಎಲ್ಲಿಯೂ ಮಾತನಾಡಬೇಡಿ. ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಹಿರಿಯರ ಮಾರ್ಗದರ್ಶನ ಸಿಗುವುದು. ಉತ್ತಮ ಆರೋಗ್ಯವನ್ನು ಹೊಂದಲಿದ್ದೀರಿ. ಅನಿರೀಕ್ಷಿತ ಖರ್ಚು ಉಂಟಾಗಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ.
ಅದೃಷ್ಟ ಸಂಖ್ಯೆ: 3

ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?

Horoscope Today

ಮೀನ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು ಲಭ್ಯವಾಗಲಿದೆ. ಪಾಲುದಾರಿಕೆ ವ್ಯವಹಾರವು ನಷ್ಟ ತರುತ್ತದೆ. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Happiest Employees: ಅಮೆರಿಕದ ಹ್ಯಾಪಿಯೆಸ್ಟ್ ಕಂಪನಿಗಳ ಟಾಪ್‍ 20 ಪಟ್ಟಿಯಲ್ಲಿ ಭಾರತದ 3 ಕಂಪನಿ!

Happiest Employees: ಇನ್‌ಡೀಡ್ ಜಾಬ್ ಸೈಟ್ ನಡೆಸಿದ ಸಮೀಕ್ಷೆಯಲ್ಲಿ ಅಮೆರಿಕ ಟಾಪ್ 20 ಸಂತೋಷದಾಯಕ ಕಂಪನಿಗಳ ಪಟ್ಟಿಯಲ್ಲಿ ಟಿಸಿಎಸ್, ವಿಪ್ರೋ ಮತ್ತು ಇನ್ಫೋಸಿಸ್ ಸ್ಥಾನಪಡೆದುಕೊಂಡಿವೆ.

VISTARANEWS.COM


on

Edited by

3 Indian companies among America's happiest employees top 20 company list
Koo

ನವದೆಹಲಿ: ಉದ್ಯೋಗ ಹುಡುಕಲು ನೆರವು ನೀಡುವ ಜಾಲತಾಣ ಇನ್‌ಡೀಡ್ (Indeed Survey) ನಡೆಸಿದ ಉದ್ಯೋಗಿಗಳು ಯೋಗಕ್ಷೇಮ ಸಮೀಕ್ಷೆಯಲ್ಲಿ ಭಾರತೀಯ ಮೂಲದ ಮೂರು ಕಂಪನಿಗಳು ಸ್ಥಾನ ಪಡೆದುಕೊಂಡಿವೆ(Indian Company). ಅಮೆರಿಕದ ಉದ್ಯೋಗಿಗಳ ಯೋಗಕ್ಷೇಮ ಕೈಗೊಳ್ಳುವ ಕಂಪನಿಗಳ ಪಟ್ಟಿಯಲ್ಲಿ ಲವ್ಸ್ ಟ್ರಾವೆಲ್ ಸ್ಟಾಪ್ಸ್ ಆ್ಯಂಡ್ ಸ್ಟೋರ್ಸ್(Love’s Travel Stops & County Stores) ಮೊದಲ ಸ್ಥಾನದಲ್ಲಿದೆ. ಅತ್ಯಂತ ಸಂತೋಷದಾಯಕ ಉದ್ಯೋಗಿಗಳನ್ನು ಹೊಂದಿರುವ ಈ ಪಟ್ಟಿಯಲ್ಲಿ ಟೆಕ್ ದೈತ್ಯ ಕಂಪನಿಗಳಾದ ಟಿಸಿಎಸ್(TCS), ಇನ್ಫೋಸಿಸ್ (Infosys) ಮತ್ತು ವಿಪ್ರೋ (Wipro) ಕ್ರಮವಾಗಿ, 4, 8 ಮತ್ತು 9 ಸ್ಥಾನವನ್ನು ಪಡೆದುಕೊಂಡಿವೆ.

ಪ್ರಥಮ ಸ್ಥಾನದಲ್ಲಿರುವ ಲವ್ಸ್ ಟ್ರಾವೆಲ್ ಸ್ಟಾಪ್ಸ್ ಆ್ಯಂಡ್ ಕಂಟ್ರಿ ಸ್ಟೋರ್, 100 ಅಂಕಗಳ ಪೈಕಿ 83 ಅಂಕವನ್ನು ಸಂಪಾದಿಸಿದೆ. ಸಾವಿರಾರು ಅನಾಮಧೇಯ ಉದ್ಯೋಗಿಗಳ ವಿಮರ್ಶೆ, ಸಂತೋಷ, ಒತ್ತಡದ ಹಂತಗಳು, ಉದ್ಯೋಗ ಸಂತೃಪ್ತಿ ಮತ್ತು ಉದ್ದೇಶ ಸೇರಿ ಅನೇಕ ಸಂಗತಿಗಳ ಆಧಾರದ ಮೇಲೆ ಜಪಾನ್ ಮೂಲದ ಇನ್‌ಡೀಡ್ ಜಾಬ್ ಸೈಟ್ ಸಮೀಕ್ಷೆಯನ್ನು ಪೂರ್ತಿಗೊಳಿಸಿದೆ.

ಸಾವಿರಕ್ಕಿಂತಲೂ ಹೆಚ್ಚು ಉದ್ಯೋಗಿಗಳು ಇರುವ ಕಂಪನಿಗಳನ್ನು ಸಮೀಕ್ಷೆಗೆ ಪರಿಗಣಿಸಲಾಗಿದೆ. ಏರ್‌ಲೈನ್ಸ್‌ನಿಂದ ಕನ್ಸಲ್ಟನ್ಸೀಸ್, ಫಾಸ್ಟ್ ಫುಡ್ ಚೈನ್ ಕಂಪನಿಗಳವರೆಗೆ ಹಲವು ವಿಧದ ಕಂಪನಿಗಳನ್ನು ಸಮೀಕ್ಷೆಗೆ ಪರಿಗಣಿಸಲಾಗಿದೆ.

ಈ ಸುದ್ದಿಯನ್ನೂ ಓದಿ: Best Company of 2023: ‘ಟೈಮ್’ 100 ಬೆಸ್ಟ್‌ ಕಂಪನಿಗಳ ಲಿಸ್ಟ್‌ನಲ್ಲಿ ಭಾರತದ ಏಕೈಕ ಬೆಂಗಳೂರಿನ ಕಂಪನಿ!

ಆ 20 ಕಂಪನಿಗಳು ಯಾವವು?

ಲವ್ಸ್ ಟ್ರಾವೆಲ್ ಸ್ಟಾಪ್ಸ್ ಆ್ಯಂಡ್ ಕಂಟ್ರಿ ಸ್ಟೋರ್ಸ್, ಎಚ್ ಆ್ಯಂಡ್ ಆರ್ ಬ್ಲಾಕ್, ಡೆಲ್ಟಾ ಏರ್ ಲೈನ್ಸ್, ಟಾಟಾ ಕನ್ಸಲ್ಟನ್ಸಿ ಸರ್ವೀಸಸ್, ಅಕ್ಸೆಂಚರ್, ಐಬಿಎಂ, ಎಲ್3ಹ್ಯಾರಿಸ್, ವಿಪ್ರೋ, ಇನ್ಫೋಸಿಸ್, ನೈಕ್, ವ್ಯಾನ್ಸ್, ಇನ್-ಎನ್-ಔಟ್ ಬರ್ಗರ್, ಕಾಗ್ನಿಜಂಟ್ ಟೆಕ್ನಾಲಜಿ ಸಲೂಷನ್ಸ್, ಹಾಲ್ಮಾರ್ಕ್, ಮೈಕ್ರೋಸಾಫ್ಟ್, ನಾರ್ತ್‌ರಾಪ್ ಗ್ರುಮ್ಮನ್, ಫೆಡ್‌ಎಕ್ಸ್ ಫ್ರೈಟ್, ಡಚ್ ಬ್ರದರ್ಸ್ ಕಾಫಿ, ಆ್ಯಪಲ್.

ವಿದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ಕ್ರಿಕೆಟ್

Team India : ಪಾಕಿಸ್ತಾನವನ್ನು ಹಿಮ್ಮೆಟ್ಟಿಸಿ 3 ಮಾದರಿಯ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಮಾಡಿದ ಟೀಮ್ ಇಂಡಿಯಾ

ಆಸ್ಟ್ರೆಲಿಯಾ ವಿರುದ್ಧದ ಏಕ ದಿನ ಸರಣಿಯ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ ಭಾರತ ತಂಡ (Team India) ವಿಶೇಷ ಹಿರಿಮೆಯನ್ನು ತನ್ನದಾಗಿಸಿಕೊಂಡಿದೆ.

VISTARANEWS.COM


on

Team india
Koo

ಮೊಹಾಲಿ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಭರ್ಜರಿ ಗೆಲುವು ಸಾಧಿಸುವ ಮೂಲಕ ಮೂರೂ ಮಾದರಿಯ ಕ್ರಿಕೆಟ್​ನಲ್ಲಿ ನಂ.1 ಸ್ಥಾನಕ್ಕೇರಿದೆ. ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಪಾಕಿಸ್ತಾನವನ್ನು ಅಗ್ರಸ್ಥಾನದಿಂದ ಕೆಳಗಿಳಿಸಲು ಟೀಮ್ ಇಂಡಿಯಾಗೆ ಜಯದ ಅಗತ್ಯವಿತ್ತು. ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್​ಗಳ ಸುಲಭ ಗೆಲುವು ಸಾಧಿಸಿದ ಬಳಿಕ ಅಪರೂಪದ ದಾಖಲೆ ಮಾಡಿದೆ.

ಟೆಸ್ಟ್ ಹಾಗೂ ಟಿ20 ರ್ಯಾಂಕಿಂಗ್​ನಲ್ಲಿ ಟೀಂ ಇಂಡಿಯಾ ನಂ.1 ಸ್ಥಾನದಲ್ಲಿತ್ತು. ಈಗ ಅವರು ಏಕದಿನ ಪಂದ್ಯಗಳಲ್ಲಿಯೂ ನಂಬರ್ ಒನ್ ಆಗಿದ್ದಾರೆ. ವಿಶೇಷವೆಂದರೆ, ಮೆನ್ ಇನ್ ಬ್ಲೂ ಇತಿಹಾಸದಲ್ಲಿ ಎಲ್ಲಾ ಸ್ವರೂಪಗಳಲ್ಲಿ ನಂ.1 ಶ್ರೇಯಾಂಕವನ್ನು ಪಡೆದ ಎರಡನೇ ತಂಡವಾಗಿದೆ. ಇದಕ್ಕೂ ಮುನ್ನ 2012ರ ಆಗಸ್ಟ್​​ನಲ್ಲಿ ದಕ್ಷಿಣ ಆಫ್ರಿಕಾ ಮಾತ್ರ ಈ ಸಾಧನೆ ಮಾಡಿತ್ತು. ಅದೇ ರೀತಿ ಈ ಸಾಧನೆ ಮಾಡಿರುವ ಏಷ್ಯಾದ ಮೊದಲ ತಂಡ ಎನಿಸಿಕೊಂಡಿದೆ.

ಐಸಿಸಿ ರ್ಯಾಂಕಿಂಗ್​​ನಲ್ಲಿ ಟೀಂ ಇಂಡಿಯಾ ಅಂಕ

  • ಟೆಸ್ಟ್ – 264 ಅಂಕಗಳು
  • ಟಿ20ಐ – 118 ಅಂಕ
  • ಏಕದಿನ – 116 ಅಂಕ

ಪಾಕಿಸ್ತಾನ ಇನ್ನೂ ಪೈಪೋಟಿಯಲ್ಲಿದೆ

ವಿಶ್ವಕಪ್ ಪ್ರಾರಂಭವಾಗುವ ಮೊದಲು ಪಾಕಿಸ್ತಾನವು ಅಗ್ರಸ್ಥಾನವನ್ನು ಮರಳಿ ಪಡೆಯಲು ಸಾಧ್ಯವಾಗಿರುವುದರಿಂದ ಎಲ್ಲಗೂ ಇಲ್ಲಿಗೆ ಮುಗಿದಿಲ್ಲ. . ಆಸ್ಟ್ರೇಲಿಯಾ ಇನ್ನು ಮುಂದೆ ವಿಶ್ವಕಪ್​​ಗೆ ಹೋಗುವ ನಂ.1 ತಂಡವಾಗಲು ರೇಸ್​ನಲ್ಲಿ ಇಲ್ಲವಾಧರೂ ಆಸ್ಟ್ರೇಲಿಯಾ ಭಾರತದ ವಿರುದ್ಧದ ಉಳಿದ ಎರಡು ಪಂದ್ಯಗಳನ್ನು ಗೆದ್ದರೆ ಪಾಕಿಸ್ತಾನ ಇನ್ನೂ ನಂ.1 ಆಗಬಹುದು.

ಇದನ್ನೂ ಓದಿ : ind vs aus : ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ, ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ 1-0 ಮುನ್ನಡೆ

ಎಲ್ಲ ಮೂರು ಮಾದರಿಗಳಲ್ಲಿ ನಂಬರ್​ 1 ಸ್ಥಾನ ಪಡೆದ ಭಾರತ ತಂಡಕ್ಕೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಶುಭಾಶಯ ಸಲ್ಲಿಸಿದ್ದಾರೆ.

ಈ ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದ್ದಕ್ಕಾಗಿ ಟೀಮ್​ ಇಂಡಿಯಾಗೆ ಹೃತ್ಪೂರ್ವಕ ಅಭಿನಂದನೆಗಳು. ಮೈದಾನದಲ್ಲಿ ಶ್ರೇಷ್ಠತೆಯನ್ನು ಬೆನ್ನಟ್ಟುವಾಗ ಈ ತಂಡವು ಮಾಡಿದ ಕಠಿಣ ಪರಿಶ್ರಮವನ್ನು ರ್ಯಾಂಕ್​ಗಳನ್ನು ಪ್ರತಿಬಿಂಬಿಸುತ್ತವೆ. ವಿಶ್ವಕಪ್​ಗೆ ಸ್ವಲ್ಪ ಮುಂಚಿತವಾಗಿ ಇದು ಅದ್ಭುತ ಸಾಧನೆಯಾಗಿದೆ. ಮೊಹಾಲಿಯಲ್ಲಿ ನಡೆದ ಗೆಲುವಿನೊಂದಿಗೆ ಆಸ್ಟ್ರೇಲಿಯಾ ವಿರುದ್ಧ 1-0 ಮುನ್ನಡೆ ಸಾಧಿಸಿದೆ. ಆವೇಗವನ್ನು ಮುಂದುವರಿಸೋಣ. ಎಂದು ಬರೆದಿದ್ದಾರೆ.

ಭಾರತ ತಂಡದ ಸಾಧನೆ ರೀ ರೀತಿ ಇದೆ

  • ನಂ.1 ಟೆಸ್ಟ್ ತಂಡ – ಭಾರತ
  • ನಂ.1 ಟಿ20 ತಂಡ- ಭಾರತ
  • ನಂ.1 ಏಕದಿನ ತಂಡ – ಭಾರತ
  • ನಂ.1 ಟಿ20 ಬ್ಯಾಟ್ಸ್ಮನ್ – ಸೂರ್ಯ
  • ನಂ.1 ಏಕದಿನ ಬೌಲರ್ – ಸಿರಾಜ್
  • ನಂ.1 ಟೆಸ್ಟ್ ಬೌಲರ್ – ಅಶ್ವಿನ್
  • ನಂ.1 ಟೆಸ್ಟ್ ಆಲ್ರೌಂಡರ್ – ಜಡೇಜಾ
  • ನಂ.2 ಟೆಸ್ಟ್ ಆಲ್ರೌಂಡರ್ – ಅಶ್ವಿನ್
  • ನಂ.2 ಏಕದಿನ ಬ್ಯಾಟ್ಸ್ಮನ್ – ಗಿಲ್
  • ನಂ.2 ಟಿ20 ಆಲ್ರೌಂಡರ್- ಹಾರ್ದಿಕ್
  • ನಂ.3 ಟೆಸ್ಟ್ ಬೌಲರ್ – ಜಡೇಜಾ

Continue Reading

ಕರ್ನಾಟಕ

Cabinet Meeting: ಸೆ.26ರವರೆಗೆ ನೀರು ಬಿಡುಗಡೆ ಫಿಕ್ಸ್‌; ಬಳಿಕ ಬಿಡುವುದಿಲ್ಲ ಎಂದು ಅಧಿವೇಶನ ಕರೆದು ನಿರ್ಣಯ?

Cabinet Meeting : ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಕಾವೇರಿ ಬಿಕ್ಕಟ್ಟು ಚರ್ಚೆಯಾಗಿದೆ. ಸುಪ್ರೀಂ ಕೋರ್ಟ್‌ ಸೂಚನೆಯಂತೆ ಸೆ. 26ರವರೆಗೆ ನೀರು ಬಿಡುಗಡೆ ಮಾಡುವುದು, ಮುಂದೆ ಮತ್ತೊಮ್ಮೆ ಆದೇಶ ನೀಡದಂತೆ ಅಧಿವೇಶನ ಕರೆದು ನೀರು ಬಿಡುವುದಿಲ್ಲ ಎಂಬ ನಿರ್ಣಯ ತೆಗೆದುಕೊಳ್ಳುವುದು ಎಂಬ ಬಗ್ಗೆ ಚರ್ಚೆ ನಡೆದಿದೆ.

VISTARANEWS.COM


on

Edited by

Cauvery Dispute cabinet meeting
Koo

ಬೆಂಗಳೂರು: ತಮಿಳುನಾಡಿಗೆ ಪ್ರತಿ ದಿನವೂ 5000 ಕ್ಯೂಸೆಕ್‌ ನೀರು ಬಿಡಲು ಆದೇಶಿಸಿರುವ ಸುಪ್ರೀಂಕೋರ್ಟ್‌ ತೀರ್ಪನ್ನು (Supreme Court) ಶಾಸನಾತ್ಮಕವಾಗಿ ಎದುರಿಸಲು ರಾಜ್ಯ ಸರ್ಕಾರ (State Government) ತೀರ್ಮಾನ ಮಾಡಿದಂತೆ ಕಾಣಿಸುತ್ತಿದೆ. ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ (Cabinet Meeting) ಈ ಬಗ್ಗೆ ಚರ್ಚೆ ನಡೆದಿದೆ. ಸುಪ್ರೀಂಕೋರ್ಟ್‌ನ ಆದೇಶವನ್ನು ನೇರವಾಗಿ ಉಲ್ಲಂಘಿಸಿದರೆ ಅದು ನ್ಯಾಯಾಂಗ ನಿಂದನೆಯಾಗುತ್ತದೆ. ಹೀಗಾಗಿ ವಿಧಾನಸಭಾ ಅಧಿವೇಶನ (Assembly session) ಕರೆದು ಅದಕ್ಕೆ ಶಾಸನಾತ್ಮಕ ಒಪ್ಪಿಗೆಯನ್ನು ಪಡೆದು ಉಲ್ಲಂಘಿಸಿದರೆ ನ್ಯಾಯಾಂಗ ನಿಂದನೆಯಿಂದ ತಪ್ಪಿಸಿಕೊಳ್ಳಬಹುದು ಎಂಬ ಚಿಂತನೆ ನಡೆದಿದೆ.

ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮೂರು ಗಂಟೆಗಳ ಕಾಲ ವಿಸ್ತೃತ ಚರ್ಚೆ ನಡೆದು ಮೂರು ದಿನಗಳ ಕಾಲ ವಿಶೇಷ ಅಧಿವೇಶನ ಕರೆಯುವ ಬಗ್ಗೆ ಚಿಂತನೆ ನಡೆಯಿತು. ಈ ಅಧಿವೇಶನದಲ್ಲಿ ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿ ಹಾಗೂ ಕಾವೇರಿ ನೀರು ಬಿಡುಗಡೆ ಮಾಡಬೇಕಾದ ಇಕ್ಕಟ್ಟಿನ ಪರಿಸ್ಥಿತಿ ಬಗ್ಗೆ ಚರ್ಚೆ ಮಾಡಲು ಚಿಂತಿಸಲಾಗಿದೆ. ಆದರೆ, ಯಾವಾಗ ಅಧಿವೇಶನ ಎನ್ನುವುದು ಇನ್ನಷ್ಟೇ ತೀರ್ಮಾನ ಆಗಬೇಕಾಗಿದೆ.

ಸಭೆಯ ಬಳಿಕ ಸುದ್ದಿ ಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌ ಈ ವಿಚಾರದ ಬಗ್ಗೆ ಹೆಚ್ಚು ವಿವರ ನೀಡಲಿಲ್ಲ. ಆದರೆ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಸುಪ್ರೀಂಕೋರ್ಟ್‌ ತೀರ್ಮಾನದಂತೆ ಸೆ. 26ರವರೆಗೆ ನೀರು ಬಿಡುತ್ತೇವೆ. ಮುಂದಿನ ವಿಚಾರಕ್ಕೆ ಹೊಸ ತಂತ್ರ ಮಾಡುತ್ತೇವೆ ಎಂದರು. ಇದು ಅಧಿವೇಶನ ತಂತ್ರ ಇರಬಹುದು ಎಂದು ಹೇಳಲಾಗುತ್ತಿದೆ. ಅಂದರೆ ಸೆಪ್ಟೆಂಬರ್‌ 26ರವರೆಗೆ ನೀರು ಬಿಡುಗಡೆ ಮಾಡುವುದು, ಮುಂದೆ ಮತ್ತೊಮ್ಮೆ ನೀರು ಬಿಡುಗಡೆಗೆ ಆದೇಶ ನೀಡದಂತೆ ಶಾಸನಾತ್ಮಕ ತಂತ್ರ ಅನುಸರಿಸುವ ಚಿಂತನೆ ಇದೆನ್ನಲಾಗಿದೆ.

ಇದನ್ನೂ ಓದಿ: Cauvery Dispute : ಕಾವೇರಿ ಹೋರಾಟಕ್ಕೆ ಧುಮುಕಿದ ಆದಿಚುಂಚನಗಿರಿ ಶ್ರೀ; ರೈತ ಪರ ನಿರ್ಧಾರ ತೆಗೆದುಕೊಳ್ಳಲು ಹಕ್ಕೊತ್ತಾಯ

ಕೇಂದ್ರದಿಂದ ಬರ ಪರಿಹಾರಕ್ಕೆ ಬೇಡಿಕೆ

ರಾಜ್ಯದಲ್ಲಿ ಬರಗಾಲದ ಸ್ಥಿತಿಯಿಂದಾಗಿ 40,432 ಕೋಟಿ ರೂ. ನಷ್ಟ ಉಂಟಾಗಿದೆ. ಹೀಗಾಗಿ ಕೇಂದ್ರದಿಂದ ಪರಿಹಾರಕ್ಕಾಗಿ 4860 ಕೋಟಿ ರೂ. ಬೇಡಿಕೆ ಇಡುತ್ತಿದ್ದೇವೆ ಎಂದು ಎಚ್‌.ಕೆ. ಪಾಟೀಲ್‌ ಹೇಳಿದರು.

ಕೃಷಿ ಬೆಳೆ ನಷ್ಟದ ಪ್ರಮಾಣ 39,039 ಲಕ್ಷ ಹೆಕ್ಟೇರ್‌ ಆಗಿದೆ. ಕೃಷಿ ನಷ್ಟಕ್ಕೆ ಎನ್‌ಡಿಎಸ್‌ ಎನ್‌ಡಿಆರ್‌ಎಫ್‌ ಪ್ರಕಾರ 3824.67 ಕೋಟಿ ರೂ. ಪರಿಹಾರ ಕೋರುತ್ತಿದ್ದೇವೆ. ತೋಟಗಾರಿಕೆ ಬೆಳೆ ನಷ್ಟ 26655 ಕೋಟಿ ರೂ.ಆಗಿದೆ. ತೋಟಗಾರಿಕೆಗೆ 206 ಕೋಟಿರೂ. ಪರಿಹಾರ ಕೋರಿಕೆಗೆ ನಿರ್ಧಾರ ಮಾಡಲಾಗಿದೆ. 195 ಪಶು ಶಿಬಿರಕ್ಕಾಗಿ 104 ಕೋಟಿ ರೂ, 624 ಮೇವು ಬ್ಯಾಂಕ್ ಸ್ಥಾಪನೆಗೆ 126 ಕೋಟಿ ರೂ, ಔಷಧಗಳಿಗೆ 25 ಕೋಟಿ ರೂ. ಆಹಾರಕ್ಕಾಗಿ ಮೇವು ಬೀಜಕ್ಕೆ 50 ಕೋಟಿ ರೂ. ಕೇಳಲಾಗುವುದು ಎಂದು ತಿಳಿಸಿದರು.

ಕೃಷಿ ನವೋದ್ಯಮ ಯೋಜನೆ ಜಾರಿ

ಕೃಷಿ ಪ್ರೋತ್ಸಾಹಿಸಲು ಕೃಷಿ ನವೋದ್ಯಮ ಯೋಜನೆ ಜಾರಿ ಮಾಡಲಾಗುತ್ತಿದೆ. ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆ ಹೆಚ್ಚಿಸಲು ಹಾಗೂ ಕೃಷಿ ಪದವೀಧರರು, ಆಸಕ್ತ ಪ್ರಗತಿಪರ ರೈತರು ಕೃಷಿಯಲ್ಲಿ ನವೋದ್ಯಮ ಆರಂಭಿಸಲು ಮತ್ತು ಕೃಷಿಯಲ್ಲಿ ನವೀನ‌ ಪರಿಕಲ್ಪನೆಗಳ ವಾಣಿಜ್ಯೀಕರಣ ಉತ್ತೇಜಿಸಲು ಕೃಷಿ ನವೋದ್ಯಮ ಯೋಜನೆ ಜಾರಿಗೆ ಅನುಮೋದನೆ ನೀಡಲಾಯಿತು ಎಂದು ಎಚ್.‌ಕೆ. ಪಾಟೀಲ್‌ ತಿಳಿಸಿದರು.

Continue Reading

ಕ್ರಿಕೆಟ್

ind vs aus : ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ, ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ 1-0 ಮುನ್ನಡೆ

ಭಾರತ ತಂಡ ಗೆಲುವಿನ ಬಳಿಕ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ (ind vs aus) 1-0 ಮುನ್ನಡೆ ಪಡೆಯಿತು.

VISTARANEWS.COM


on

Ruturaj Gaikwad
Koo

ಮೊಹಾಲಿ: ಪ್ರವಾಸಿ ಆಸ್ಟ್ರೇಲಿಯಾ (ind vs aus ) ವಿರುದ್ಧದ ಏಕ ದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್​ಗಳ ಸುಲಭ ಗೆಲುವು ಸಾಧಿಸಿದೆ. ಭಾರತ ತಂಡದ ಪರ ಬೌಲಿಂಗ್​ನಲ್ಲಿ 51 ರನ್​ಗಳಿಗೆ 5 ವಿಕೆಟ್​ ಉರುಳಿಸಿದ ಮೊಹಮ್ಮದ್ ಶಮಿ ಹಾಗೂ ಬ್ಯಾಟಿಂಗ್ ಮೂಲಕ ತಲಾ ಅರ್ಧ ಶತಕಗಳನ್ನು ಬಾರಿಸಿದ ಶುಭ್​ಮನ್​ ಗಿಲ್​ (74) ಹಾಗೂ ಋತುರಾಜ್​ ಗಾಯಕ್ವಾಡ್​ (71), ಸೂರ್ಯಕುಮಾರ್​ ಯಾದವ್​ (50), ಮತ್ತು ಕೆ. ಎಲ್​ ರಾಹುಲ್​ (58*) ಗೆಲುವಿನ ರೂವಾರಿಗಳು ಎನಿಸಿಕೊಂಡರು. ಈ ವಿಜಯದ ಮೂಲಕ ಭಾರತ ತಂಡ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿತು.

ಇಲ್ಲಿನ ಐಎಸ್​ ಬಿಂದ್ರಾ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 50 ಓವರ್​ಗಳಲ್ಲಿ 276 ರನ್​ಗಳಿಗೆ ಆಲ್​ಔಟ್​ ಆಯಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಭಾರತ ತಂಡ. 48.4 ಓವರ್​ಗಳಲ್ಲಿ. 5 ವಿಕೆಟ್​ ಕಳೆದುಕೊಂಡು 281 ರನ್ ಬಾರಿಸಿ ಜಯಶಾಲಿಯಾಯಿತು.

ಗುರಿ ಬೆನ್ನಟ್ಟಲು ಆರಂಭಿಸಿದ ಭಾರತ ತಂಡ ಋತುರಾಜ್ ಗಾಯಕ್ವಾಡ್ ಹಾಗೂ ಶುಭ್​ ಮನ್​ ಗಿಲ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಉತ್ತಮ ಆರಂಭ ಪಡೆಯಿತು. ಈ ಜೋಡಿ ಮೊದಲ ವಿಕೆಟ್​ಗೆ 142 ರನ್​ ಬಾರಿಸಿ ವಿಶ್ವಾಸ ಮೂಡಿಸಿತು. ಇವರಿಬ್ಬರೂ ಆಸ್ಟ್ರೇಲಿಯಾದ ಬೌಲರ್​ಗಳನ್ನು ಹಿಮ್ಮಟ್ಟಿಸಿದರು.

ಆದರೆ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್​ ಮಾಡಲು ಬಂದ ಶ್ರೇಯಸ್​ ಅಯ್ಯರ್ ಮತ್ತೆ ವೈಫಲ್ಯ ಕಂಡರು. 3 ರನ್​ಗೆ ಅವರು ರನ್​ಔಟ್ ಆದರು. ಅನಗತ್ಯ ರನ್​ ಕದಿಯಲು ಮುಂದಾದ ಅವರು ತಾವಿನ್ನೂ ಲಯ ಕಂಡುಕೊಂಡಿಲ್ಲ ಎಂಬುದನ್ನು ಸೂಚಿಸಿದಂತಿತ್ತು. ಅವರು ಔಟಾದ ಬಳಿಕ ಭಾರತಕ್ಕೆ ಸ್ವಲ್ಪ ಹಿನ್ನಡೆ ಉಂಟಾಯಿತು. ಆದರೆ ಈ ಇಬ್ಬರೂ ಬ್ಯಾಟರ್​ಗಳು ಆಸೀಸ್ ಸ್ಪಿನ್ನರ್ ಆ್ಯಡಂ ಜಂಪಾ ಅವರ ಎಸೆತಗಳಿವೆ ವಿಕೆಟ್ ಒಪ್ಪಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಆಡಲು ಬಂದ ಇಶಾನ್​ ಕಿಶನ್ ಭರವಸೆ ಮೂಡಿಸಿದರೂ 18 ರನ್​ಗಳಿಗೆ ಔಟಾದರು. ಈ ವೇಳೆ ಭಾರತ ತಂಡ 185 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಆತಂಕಕ್ಕೆ ಒಳಗಾಯಿತು.

ಈ ವೇಳೆ ಜತೆಯಾದ ಸೂರ್ಯಕುಮಾರ್ ಯಾದವ್​ ಹಾಗೂ ನಾಯಕ ಕೆ. ಎಲ್​ ರಾಹುಲ್​ ಅರ್ಧ ಶತಕಗಳನ್ನು ಬಾರಿಸಿ ಭಾರತವನ್ನು ಗೆಲುವಿನತ್ತ ಮುನ್ನಡೆಸಿದರು. ಇವರಿಬ್ಬರೂ 80 ರನ್​ಗಳ ಜತೆಯಾಟ ಆಡಿದರು.

ಮೊದಲು ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ ತಂಡದ ಪರ ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ ಗರಿಷ್ಠ 52 ರನ್ ಗಳಿಸಿದರು. ಜೋಶ್ ಇಂಗ್ಲಿಷ್ 45, ಸ್ಟೀವ್ ಸ್ಮಿತ್ 41, ಮಾರ್ನಸ್ ಲಾಬುಷೇನ್ 39, ಕ್ಯಾಮರೂನ್ ಗ್ರೀನ್ 31, ಮಾರ್ಕಸ್ ಸ್ಪೋಯಿನಿಸ್ 29 ಮತ್ತು ನಾಯಕ ಪ್ಯಾಟ್ ಕಮಿನ್ಸ್ 21 ರನ್ ಗಳಿಸಿ ಔಟಾಗದೆ ಉಳಿದರು. ಸ್ಮಿತ್ ಹಾಗೂ ವಾರ್ನರ್​ ಭಾರತ ತಂಡದ ಬೌಲರ್​ಗಳನ್ನು ಕಾಡಿದರಲ್ಲದೆ, ದೊಡ್ಡ ಮೊತ್ತ ಪೇರಿಸುವ ಆತಂಕ ಮೂಡಿಸಿದರು. ಆದರೆ, ಮೊಹಮ್ಮದ್ ಶಮಿ ಭಾರತದ ಭಯವನ್ನು ದೂರ ಮಾಡಿದರು. ಬುಮ್ರಾ.ಅಶ್ವಿನ್ ಹಾಗೂ ಜಡೇಜಾ ತಲಾ ಒಂದು ವಿಕೆಟ್ ಪಡೆಯುವ ಮೂಲಕ ಶಮಿಗೆ ಉತ್ತಮ ಬೆಂಬಲ ನೀಡಿದರು.

ಇದನ್ನೂ ಓದಿ: Mohammed Shami : ಬೌಲಿಂಗ್​ನಲ್ಲಿ ಹೊಸ ಮಿಂಚು ಸೃಷ್ಟಿಸಿದ ಮೊಹಮ್ಮದ್ ಶಮಿ; ಏನಿದು ಸಾಧನೆ

ತವರಿನಲ್ಲಿ ನಡೆಯಲಿರುವ ವಿಶ್ವಕಪ್‌ಗೆ ಪೂರ್ವ ಸಿದ್ಧತೆ ನಡೆಸಲು ಈ ಸರಣಿ ಭಾರತದ ಪಾಲಿಗೆ ಮಹತ್ವದನಿಸಿದೆ. ಮೊದಲೆರಡು ಪಂದ್ಯಗಳಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ಕಲ್ಪಿಸಲಾಗಿದೆ.

Continue Reading
Advertisement
3 Indian companies among America's happiest employees top 20 company list
ಪ್ರಮುಖ ಸುದ್ದಿ11 mins ago

Happiest Employees: ಅಮೆರಿಕದ ಹ್ಯಾಪಿಯೆಸ್ಟ್ ಕಂಪನಿಗಳ ಟಾಪ್‍ 20 ಪಟ್ಟಿಯಲ್ಲಿ ಭಾರತದ 3 ಕಂಪನಿ!

Team india
ಕ್ರಿಕೆಟ್15 mins ago

Team India : ಪಾಕಿಸ್ತಾನವನ್ನು ಹಿಮ್ಮೆಟ್ಟಿಸಿ 3 ಮಾದರಿಯ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಮಾಡಿದ ಟೀಮ್ ಇಂಡಿಯಾ

Cauvery Dispute cabinet meeting
ಕರ್ನಾಟಕ22 mins ago

Cabinet Meeting: ಸೆ.26ರವರೆಗೆ ನೀರು ಬಿಡುಗಡೆ ಫಿಕ್ಸ್‌; ಬಳಿಕ ಬಿಡುವುದಿಲ್ಲ ಎಂದು ಅಧಿವೇಶನ ಕರೆದು ನಿರ್ಣಯ?

Ruturaj Gaikwad
ಕ್ರಿಕೆಟ್1 hour ago

ind vs aus : ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ, ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ 1-0 ಮುನ್ನಡೆ

Cat eyed snake
ಕರ್ನಾಟಕ1 hour ago

Cat Eyed Snake : ಬೆಕ್ಕಿನ ಕಣ್ಣಿನ ಸುಂದರಿಯರನ್ನು ನೋಡೇ ಇರ್ತೀರಿ, ಬೆಕ್ಕಿನ ಕಣ್ಣಿನ ಹಾವು ನೋಡಿದ್ದೀರಾ?

Dakshin Bharat Utsav
ಕರ್ನಾಟಕ1 hour ago

Dakshin Bharat Utsav: ಪ್ರವಾಸೋದ್ಯಮ ಉತ್ತೇಜಿಸಲು ಖಾಸಗಿ ವಲಯಕ್ಕೆ 550 ಸ್ಮಾರಕ ದತ್ತು: ಸಚಿವ ಎಚ್‌.ಕೆ. ಪಾಟೀಲ್

savings
ದೇಶ2 hours ago

Money Guide: ಅತ್ಯುತ್ತಮ ನಿವೃತ್ತ ಜೀವನಕ್ಕಾಗಿ ಟಾಪ್ 10 ಹಣ ಉಳಿತಾಯದ ಟಿಪ್ಸ್!

Mohammed Shami
ಕ್ರಿಕೆಟ್2 hours ago

Mohammed Shami : ಬೌಲಿಂಗ್​ನಲ್ಲಿ ಹೊಸ ಮಿಂಚು ಸೃಷ್ಟಿಸಿದ ಮೊಹಮ್ಮದ್ ಶಮಿ; ಏನಿದು ಸಾಧನೆ

Vijayanagara DC Diwakar MS Visit and inspection of hospital in Hagaribommanahalli
ವಿಜಯನಗರ2 hours ago

Vijayanagara News: ಹಗರಿಬೊಮ್ಮನಹಳ್ಳಿಯ ಆಸ್ಪತ್ರೆ, ಸರ್ಕಾರಿ ಕಚೇರಿಗಳಿಗೆ ಡಿಸಿ ದಿವಾಕರ್‌ ದಿಢೀರ್‌ ಭೇಟಿ

Neegilu Kavya Abhiyan programme at gubbi
ತುಮಕೂರು2 hours ago

Tumkur News: ಗುಬ್ಬಿಯಲ್ಲಿ ನೇಗಿಲು ಕಾವ್ಯ ಅಭಿಯಾನಕ್ಕೆ ಸಾಹಿತಿ ಸಂತೋಷ್ ಮಡೆನೂರು ಚಾಲನೆ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ3 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ18 hours ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ5 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ6 days ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ6 days ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ6 days ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ7 days ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

Dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ರಾಶಿಯವರು ಹೂಡಿಕೆ ಮಾಡಿದರೆ ನಷ್ಟ ಗ್ಯಾರಂಟಿ!

ಟ್ರೆಂಡಿಂಗ್‌