ಪ್ರಮುಖ ಸುದ್ದಿ
Dina Bhavishya : ಈ ರಾಶಿಯವರು ಹೂಡಿಕೆ ಮಾಡಿದರೆ ನಷ್ಟ ಗ್ಯಾರಂಟಿ!
Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ
ಪಾಡ್ಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಚಂದ್ರನು ಶುಕ್ರವಾರ ಮಧ್ಯಾಹ್ನ 01:44 ಕ್ಕೆ ತುಲಾ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗಲಿದೆ. ಮಿಥುನ ರಾಶಿಯ ವಿವಾಹಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಕಟಕ ರಾಶಿಯವರಿಗೆ ಈ ಹಿಂದೆ ನೀಡಿದ ಹಣ ಮರಳುವ ಸಾಧ್ಯತೆ ಇದೆ. ಕನ್ಯಾ ರಾಶಿಯ ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದ್ದು, ಕಿರಿಕಿರಿ ಸಾಧ್ಯತೆ ಇದೆ. ವೃಶ್ಚಿಕ ರಾಶಿಯವರು ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವುದು ಬೇಡ. ಜತೆಗೆ ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದರಿಂದ ನಷ್ಟವಾಗುವ ಸಾಧ್ಯತೆ ಇದೆ. ಇತರೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (15-09-2023)
ಮೇಷ: ಮಾನಸಿಕವಾಗಿ ನೆಮ್ಮದಿ ಸಿಗಲಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು ಹೆಚ್ಚಾಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕಾರ್ಯ ಸ್ಥಳದಲ್ಲಿ ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗಲಿದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3
ವೃಷಭ: ಆರೋಗ್ಯದ ಕುರಿತಾಗಿ ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ನಿಮ್ಮ ನಡವಳಿಕೆಯಿಂದಾಗಿ ಕುಟುಂಬದ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಮಾತುಕತೆ ಇರಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ಮಿಥುನ: ಹೂಡಿಕೆ ವ್ಯವಹಾರದಲ್ಲಿ ತೊಡಗುವ ಸಾಧ್ಯತೆ ಇದೆ. ಬಿಡುವಿರದ ಕೆಲಸದ ಮಧ್ಯೆಯು ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತರೊಂದಿಗೆ ಮಾತುಕತೆ ಇರಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ.ಉದ್ಯೋಗಿಗಳಿಗೆ ಶುಭ ಫಲ. ವಿವಾಹಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಕಟಕ: ಪ್ರಯಾಣವನ್ನು ಬೆಳೆಸುವ ಸಾಧ್ಯತೆ, ಇದರಿಂದ ನೀವು ದೈಹಿಕವಾಗಿ ಬಳಲಲಿದ್ದೀರಿ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಈ ಹಿಂದೆ ನೀಡಿದ ಹಣ ಮರಳುವ ಸಾಧ್ಯತೆ ಇದೆ. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಸಿಂಹ: ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆ ಇದೆ. ಅನಾವಶ್ಯಕ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಉತ್ಸಾಹದ ದಿನ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2
ಕನ್ಯಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಗತ್ಯ ಖರ್ಚುಗಳ ಮೇಲೆ ನಿಯಂತ್ರಣ ಸಾಧಿಸುವಿರಿ. ಜೀವನದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದ್ದು, ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಹೆಚ್ಚಿನ ಒತ್ತಡ ಇರಲಿದೆ. ಮನೆಯಲ್ಲಿನ ಭಿನ್ನಾಭಿಪ್ರಾಯಗಳು ನಿಮ್ಮ ಏಕಾಗ್ರತೆಗೆ ಧಕ್ಕೆ ತರುವ ಸಾಧ್ಯತೆ ಇದೆ. ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ದೈಹಿಕ ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3
ವೃಶ್ಚಿಕ: ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವುದು ಬೇಡ. ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದರಿಂದ ನಷ್ಟವಾಗುವ ಸಾಧ್ಯತೆ ಇದೆ. ಕೆಲವು ರಹಸ್ಯ ಸುದ್ದಿಗಳಿಂದ ಅಚ್ಚರಿ ಆಗಬಹುದು.ನಿಮ್ಮ ಅಚ್ಚು ಕಟ್ಟು ಕೆಲಸದಿಂದ ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4
ಧನಸ್ಸು: ಆರ್ಥಿಕ ಪ್ರಗತಿ ಸಾಧಾರಣವಾಗಿದೆ. ಆದರೆ ಒತ್ತಡ ಹೆಚ್ಚಾಗಲಿದೆ. ಪ್ರಮುಖ ಕೆಲಸ ಕಾರ್ಯಗಳು ನಿಧಾನವಾಗಿ ಸಾಗಲಿದೆ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾತುಕತೆ ಮಾಡುವಿರಿ. ಉದ್ಯೋಗಿಗಳಿಗೆ ಶುಭ ಫಲ. ದೈಹಿಕ ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1
ಉತ್ತಮ ಸಂಸಾರಕ್ಕೆ ವಾಸ್ತು ಎಷ್ಟು ಮುಖ್ಯ?
ಮಕರ: ಅನೇಕ ಕಾರಣಾಂತರಗಳಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಕಂಡರು, ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆ ಇರಲಿದೆ. ವ್ಯಾಪಾರದ ಉದ್ದೇಶದಿಂದಾಗಿ ಕೈಕೊಂಡ ಪ್ರವಾಸದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಕುಂಭ: ಮನರಂಜನೆಗಾಗಿ ಸಮಯವನ್ನು ಕಳೆಯುವಿರಿ. ಸೃಜನಶೀಲ ಕಾರ್ಯಗಳಿಂದಾಗಿ ವ್ಯಕ್ತಿತ್ವ ಪ್ರಕಾಶಿಸುವ ಸಾಧ್ಯತೆ ಇದೆ. ನಿಮ್ಮ ಅನುಭವಗಳನ್ನು ಇತರರೊಂದಿಗೆ ಹಂಚಿಕೊಳ್ಳುವಿರಿ.ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಪಡೆಯುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8
ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?
ಮೀನ: ಆಹಾರದ ವ್ಯತ್ಯಾಸದ ಕ್ರಮದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರು, ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗಗುವಿರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | [email protected]
ಕ್ರಿಕೆಟ್
Team India : ಪಾಕಿಸ್ತಾನವನ್ನು ಹಿಮ್ಮೆಟ್ಟಿಸಿ 3 ಮಾದರಿಯ ಕ್ರಿಕೆಟ್ನಲ್ಲಿ ವಿಶೇಷ ದಾಖಲೆ ಮಾಡಿದ ಟೀಮ್ ಇಂಡಿಯಾ
ಆಸ್ಟ್ರೆಲಿಯಾ ವಿರುದ್ಧದ ಏಕ ದಿನ ಸರಣಿಯ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ ಭಾರತ ತಂಡ (Team India) ವಿಶೇಷ ಹಿರಿಮೆಯನ್ನು ತನ್ನದಾಗಿಸಿಕೊಂಡಿದೆ.
ಮೊಹಾಲಿ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಭರ್ಜರಿ ಗೆಲುವು ಸಾಧಿಸುವ ಮೂಲಕ ಮೂರೂ ಮಾದರಿಯ ಕ್ರಿಕೆಟ್ನಲ್ಲಿ ನಂ.1 ಸ್ಥಾನಕ್ಕೇರಿದೆ. ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಪಾಕಿಸ್ತಾನವನ್ನು ಅಗ್ರಸ್ಥಾನದಿಂದ ಕೆಳಗಿಳಿಸಲು ಟೀಮ್ ಇಂಡಿಯಾಗೆ ಜಯದ ಅಗತ್ಯವಿತ್ತು. ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್ಗಳ ಸುಲಭ ಗೆಲುವು ಸಾಧಿಸಿದ ಬಳಿಕ ಅಪರೂಪದ ದಾಖಲೆ ಮಾಡಿದೆ.
ಟೆಸ್ಟ್ ಹಾಗೂ ಟಿ20 ರ್ಯಾಂಕಿಂಗ್ನಲ್ಲಿ ಟೀಂ ಇಂಡಿಯಾ ನಂ.1 ಸ್ಥಾನದಲ್ಲಿತ್ತು. ಈಗ ಅವರು ಏಕದಿನ ಪಂದ್ಯಗಳಲ್ಲಿಯೂ ನಂಬರ್ ಒನ್ ಆಗಿದ್ದಾರೆ. ವಿಶೇಷವೆಂದರೆ, ಮೆನ್ ಇನ್ ಬ್ಲೂ ಇತಿಹಾಸದಲ್ಲಿ ಎಲ್ಲಾ ಸ್ವರೂಪಗಳಲ್ಲಿ ನಂ.1 ಶ್ರೇಯಾಂಕವನ್ನು ಪಡೆದ ಎರಡನೇ ತಂಡವಾಗಿದೆ. ಇದಕ್ಕೂ ಮುನ್ನ 2012ರ ಆಗಸ್ಟ್ನಲ್ಲಿ ದಕ್ಷಿಣ ಆಫ್ರಿಕಾ ಮಾತ್ರ ಈ ಸಾಧನೆ ಮಾಡಿತ್ತು. ಅದೇ ರೀತಿ ಈ ಸಾಧನೆ ಮಾಡಿರುವ ಏಷ್ಯಾದ ಮೊದಲ ತಂಡ ಎನಿಸಿಕೊಂಡಿದೆ.
ಐಸಿಸಿ ರ್ಯಾಂಕಿಂಗ್ನಲ್ಲಿ ಟೀಂ ಇಂಡಿಯಾ ಅಂಕ
- ಟೆಸ್ಟ್ – 264 ಅಂಕಗಳು
- ಟಿ20ಐ – 118 ಅಂಕ
- ಏಕದಿನ – 116 ಅಂಕ
ಪಾಕಿಸ್ತಾನ ಇನ್ನೂ ಪೈಪೋಟಿಯಲ್ಲಿದೆ
ವಿಶ್ವಕಪ್ ಪ್ರಾರಂಭವಾಗುವ ಮೊದಲು ಪಾಕಿಸ್ತಾನವು ಅಗ್ರಸ್ಥಾನವನ್ನು ಮರಳಿ ಪಡೆಯಲು ಸಾಧ್ಯವಾಗಿರುವುದರಿಂದ ಎಲ್ಲಗೂ ಇಲ್ಲಿಗೆ ಮುಗಿದಿಲ್ಲ. . ಆಸ್ಟ್ರೇಲಿಯಾ ಇನ್ನು ಮುಂದೆ ವಿಶ್ವಕಪ್‌ಗೆ ಹೋಗುವ ನಂ.1 ತಂಡವಾಗಲು ರೇಸ್ನಲ್ಲಿ ಇಲ್ಲವಾಧರೂ ಆಸ್ಟ್ರೇಲಿಯಾ ಭಾರತದ ವಿರುದ್ಧದ ಉಳಿದ ಎರಡು ಪಂದ್ಯಗಳನ್ನು ಗೆದ್ದರೆ ಪಾಕಿಸ್ತಾನ ಇನ್ನೂ ನಂ.1 ಆಗಬಹುದು.
ಇದನ್ನೂ ಓದಿ : ind vs aus : ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ, ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ 1-0 ಮುನ್ನಡೆ
ಎಲ್ಲ ಮೂರು ಮಾದರಿಗಳಲ್ಲಿ ನಂಬರ್ 1 ಸ್ಥಾನ ಪಡೆದ ಭಾರತ ತಂಡಕ್ಕೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶುಭಾಶಯ ಸಲ್ಲಿಸಿದ್ದಾರೆ.
🇮🇳 Numero Uno in Test, ODI, and T20I cricket.
— Jay Shah (@JayShah) September 22, 2023
Heartiest congratulations to #TeamIndia for achieving this historic milestone. The rankings reflect the hard work put in by this team as they chase excellence on the field. This is fantastic achievement just ahead of the World Cup.… pic.twitter.com/wR4JDlqBJy
ಈ ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದ್ದಕ್ಕಾಗಿ ಟೀಮ್ ಇಂಡಿಯಾಗೆ ಹೃತ್ಪೂರ್ವಕ ಅಭಿನಂದನೆಗಳು. ಮೈದಾನದಲ್ಲಿ ಶ್ರೇಷ್ಠತೆಯನ್ನು ಬೆನ್ನಟ್ಟುವಾಗ ಈ ತಂಡವು ಮಾಡಿದ ಕಠಿಣ ಪರಿಶ್ರಮವನ್ನು ರ್ಯಾಂಕ್ಗಳನ್ನು ಪ್ರತಿಬಿಂಬಿಸುತ್ತವೆ. ವಿಶ್ವಕಪ್‌ಗೆ ಸ್ವಲ್ಪ ಮುಂಚಿತವಾಗಿ ಇದು ಅದ್ಭುತ ಸಾಧನೆಯಾಗಿದೆ. ಮೊಹಾಲಿಯಲ್ಲಿ ನಡೆದ ಗೆಲುವಿನೊಂದಿಗೆ ಆಸ್ಟ್ರೇಲಿಯಾ ವಿರುದ್ಧ 1-0 ಮುನ್ನಡೆ ಸಾಧಿಸಿದೆ. ಆವೇಗವನ್ನು ಮುಂದುವರಿಸೋಣ. ಎಂದು ಬರೆದಿದ್ದಾರೆ.
ಭಾರತ ತಂಡದ ಸಾಧನೆ ರೀ ರೀತಿ ಇದೆ
- ನಂ.1 ಟೆಸ್ಟ್ ತಂಡ – ಭಾರತ
- ನಂ.1 ಟಿ20 ತಂಡ- ಭಾರತ
- ನಂ.1 ಏಕದಿನ ತಂಡ – ಭಾರತ
- ನಂ.1 ಟಿ20 ಬ್ಯಾಟ್ಸ್ಮನ್ – ಸೂರ್ಯ
- ನಂ.1 ಏಕದಿನ ಬೌಲರ್ – ಸಿರಾಜ್
- ನಂ.1 ಟೆಸ್ಟ್ ಬೌಲರ್ – ಅಶ್ವಿನ್
- ನಂ.1 ಟೆಸ್ಟ್ ಆಲ್ರೌಂಡರ್ – ಜಡೇಜಾ
- ನಂ.2 ಟೆಸ್ಟ್ ಆಲ್ರೌಂಡರ್ – ಅಶ್ವಿನ್
- ನಂ.2 ಏಕದಿನ ಬ್ಯಾಟ್ಸ್ಮನ್ – ಗಿಲ್
- ನಂ.2 ಟಿ20 ಆಲ್ರೌಂಡರ್- ಹಾರ್ದಿಕ್
- ನಂ.3 ಟೆಸ್ಟ್ ಬೌಲರ್ – ಜಡೇಜಾ
ಕರ್ನಾಟಕ
Cabinet Meeting: ಸೆ.26ರವರೆಗೆ ನೀರು ಬಿಡುಗಡೆ ಫಿಕ್ಸ್; ಬಳಿಕ ಬಿಡುವುದಿಲ್ಲ ಎಂದು ಅಧಿವೇಶನ ಕರೆದು ನಿರ್ಣಯ?
Cabinet Meeting : ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಕಾವೇರಿ ಬಿಕ್ಕಟ್ಟು ಚರ್ಚೆಯಾಗಿದೆ. ಸುಪ್ರೀಂ ಕೋರ್ಟ್ ಸೂಚನೆಯಂತೆ ಸೆ. 26ರವರೆಗೆ ನೀರು ಬಿಡುಗಡೆ ಮಾಡುವುದು, ಮುಂದೆ ಮತ್ತೊಮ್ಮೆ ಆದೇಶ ನೀಡದಂತೆ ಅಧಿವೇಶನ ಕರೆದು ನೀರು ಬಿಡುವುದಿಲ್ಲ ಎಂಬ ನಿರ್ಣಯ ತೆಗೆದುಕೊಳ್ಳುವುದು ಎಂಬ ಬಗ್ಗೆ ಚರ್ಚೆ ನಡೆದಿದೆ.
ಬೆಂಗಳೂರು: ತಮಿಳುನಾಡಿಗೆ ಪ್ರತಿ ದಿನವೂ 5000 ಕ್ಯೂಸೆಕ್ ನೀರು ಬಿಡಲು ಆದೇಶಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು (Supreme Court) ಶಾಸನಾತ್ಮಕವಾಗಿ ಎದುರಿಸಲು ರಾಜ್ಯ ಸರ್ಕಾರ (State Government) ತೀರ್ಮಾನ ಮಾಡಿದಂತೆ ಕಾಣಿಸುತ್ತಿದೆ. ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ (Cabinet Meeting) ಈ ಬಗ್ಗೆ ಚರ್ಚೆ ನಡೆದಿದೆ. ಸುಪ್ರೀಂಕೋರ್ಟ್‌ನ ಆದೇಶವನ್ನು ನೇರವಾಗಿ ಉಲ್ಲಂಘಿಸಿದರೆ ಅದು ನ್ಯಾಯಾಂಗ ನಿಂದನೆಯಾಗುತ್ತದೆ. ಹೀಗಾಗಿ ವಿಧಾನಸಭಾ ಅಧಿವೇಶನ (Assembly session) ಕರೆದು ಅದಕ್ಕೆ ಶಾಸನಾತ್ಮಕ ಒಪ್ಪಿಗೆಯನ್ನು ಪಡೆದು ಉಲ್ಲಂಘಿಸಿದರೆ ನ್ಯಾಯಾಂಗ ನಿಂದನೆಯಿಂದ ತಪ್ಪಿಸಿಕೊಳ್ಳಬಹುದು ಎಂಬ ಚಿಂತನೆ ನಡೆದಿದೆ.
ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮೂರು ಗಂಟೆಗಳ ಕಾಲ ವಿಸ್ತೃತ ಚರ್ಚೆ ನಡೆದು ಮೂರು ದಿನಗಳ ಕಾಲ ವಿಶೇಷ ಅಧಿವೇಶನ ಕರೆಯುವ ಬಗ್ಗೆ ಚಿಂತನೆ ನಡೆಯಿತು. ಈ ಅಧಿವೇಶನದಲ್ಲಿ ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿ ಹಾಗೂ ಕಾವೇರಿ ನೀರು ಬಿಡುಗಡೆ ಮಾಡಬೇಕಾದ ಇಕ್ಕಟ್ಟಿನ ಪರಿಸ್ಥಿತಿ ಬಗ್ಗೆ ಚರ್ಚೆ ಮಾಡಲು ಚಿಂತಿಸಲಾಗಿದೆ. ಆದರೆ, ಯಾವಾಗ ಅಧಿವೇಶನ ಎನ್ನುವುದು ಇನ್ನಷ್ಟೇ ತೀರ್ಮಾನ ಆಗಬೇಕಾಗಿದೆ.
ಸಭೆಯ ಬಳಿಕ ಸುದ್ದಿ ಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಈ ವಿಚಾರದ ಬಗ್ಗೆ ಹೆಚ್ಚು ವಿವರ ನೀಡಲಿಲ್ಲ. ಆದರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸುಪ್ರೀಂಕೋರ್ಟ್ ತೀರ್ಮಾನದಂತೆ ಸೆ. 26ರವರೆಗೆ ನೀರು ಬಿಡುತ್ತೇವೆ. ಮುಂದಿನ ವಿಚಾರಕ್ಕೆ ಹೊಸ ತಂತ್ರ ಮಾಡುತ್ತೇವೆ ಎಂದರು. ಇದು ಅಧಿವೇಶನ ತಂತ್ರ ಇರಬಹುದು ಎಂದು ಹೇಳಲಾಗುತ್ತಿದೆ. ಅಂದರೆ ಸೆಪ್ಟೆಂಬರ್ 26ರವರೆಗೆ ನೀರು ಬಿಡುಗಡೆ ಮಾಡುವುದು, ಮುಂದೆ ಮತ್ತೊಮ್ಮೆ ನೀರು ಬಿಡುಗಡೆಗೆ ಆದೇಶ ನೀಡದಂತೆ ಶಾಸನಾತ್ಮಕ ತಂತ್ರ ಅನುಸರಿಸುವ ಚಿಂತನೆ ಇದೆನ್ನಲಾಗಿದೆ.
ಇದನ್ನೂ ಓದಿ: Cauvery Dispute : ಕಾವೇರಿ ಹೋರಾಟಕ್ಕೆ ಧುಮುಕಿದ ಆದಿಚುಂಚನಗಿರಿ ಶ್ರೀ; ರೈತ ಪರ ನಿರ್ಧಾರ ತೆಗೆದುಕೊಳ್ಳಲು ಹಕ್ಕೊತ್ತಾಯ
ಕೇಂದ್ರದಿಂದ ಬರ ಪರಿಹಾರಕ್ಕೆ ಬೇಡಿಕೆ
ರಾಜ್ಯದಲ್ಲಿ ಬರಗಾಲದ ಸ್ಥಿತಿಯಿಂದಾಗಿ 40,432 ಕೋಟಿ ರೂ. ನಷ್ಟ ಉಂಟಾಗಿದೆ. ಹೀಗಾಗಿ ಕೇಂದ್ರದಿಂದ ಪರಿಹಾರಕ್ಕಾಗಿ 4860 ಕೋಟಿ ರೂ. ಬೇಡಿಕೆ ಇಡುತ್ತಿದ್ದೇವೆ ಎಂದು ಎಚ್.ಕೆ. ಪಾಟೀಲ್ ಹೇಳಿದರು.
ಕೃಷಿ ಬೆಳೆ ನಷ್ಟದ ಪ್ರಮಾಣ 39,039 ಲಕ್ಷ ಹೆಕ್ಟೇರ್ ಆಗಿದೆ. ಕೃಷಿ ನಷ್ಟಕ್ಕೆ ಎನ್‌ಡಿಎಸ್ ಎನ್‌ಡಿಆರ್‌ಎಫ್ ಪ್ರಕಾರ 3824.67 ಕೋಟಿ ರೂ. ಪರಿಹಾರ ಕೋರುತ್ತಿದ್ದೇವೆ. ತೋಟಗಾರಿಕೆ ಬೆಳೆ ನಷ್ಟ 26655 ಕೋಟಿ ರೂ.ಆಗಿದೆ. ತೋಟಗಾರಿಕೆಗೆ 206 ಕೋಟಿರೂ. ಪರಿಹಾರ ಕೋರಿಕೆಗೆ ನಿರ್ಧಾರ ಮಾಡಲಾಗಿದೆ. 195 ಪಶು ಶಿಬಿರಕ್ಕಾಗಿ 104 ಕೋಟಿ ರೂ, 624 ಮೇವು ಬ್ಯಾಂಕ್ ಸ್ಥಾಪನೆಗೆ 126 ಕೋಟಿ ರೂ, ಔಷಧಗಳಿಗೆ 25 ಕೋಟಿ ರೂ. ಆಹಾರಕ್ಕಾಗಿ ಮೇವು ಬೀಜಕ್ಕೆ 50 ಕೋಟಿ ರೂ. ಕೇಳಲಾಗುವುದು ಎಂದು ತಿಳಿಸಿದರು.
ಕೃಷಿ ನವೋದ್ಯಮ ಯೋಜನೆ ಜಾರಿ
ಕೃಷಿ ಪ್ರೋತ್ಸಾಹಿಸಲು ಕೃಷಿ ನವೋದ್ಯಮ ಯೋಜನೆ ಜಾರಿ ಮಾಡಲಾಗುತ್ತಿದೆ. ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆ ಹೆಚ್ಚಿಸಲು ಹಾಗೂ ಕೃಷಿ ಪದವೀಧರರು, ಆಸಕ್ತ ಪ್ರಗತಿಪರ ರೈತರು ಕೃಷಿಯಲ್ಲಿ ನವೋದ್ಯಮ ಆರಂಭಿಸಲು ಮತ್ತು ಕೃಷಿಯಲ್ಲಿ ನವೀನ ಪರಿಕಲ್ಪನೆಗಳ ವಾಣಿಜ್ಯೀಕರಣ ಉತ್ತೇಜಿಸಲು ಕೃಷಿ ನವೋದ್ಯಮ ಯೋಜನೆ ಜಾರಿಗೆ ಅನುಮೋದನೆ ನೀಡಲಾಯಿತು ಎಂದು ಎಚ್.ಕೆ. ಪಾಟೀಲ್ ತಿಳಿಸಿದರು.
ಕ್ರಿಕೆಟ್
ind vs aus : ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ, ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ 1-0 ಮುನ್ನಡೆ
ಭಾರತ ತಂಡ ಗೆಲುವಿನ ಬಳಿಕ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ (ind vs aus) 1-0 ಮುನ್ನಡೆ ಪಡೆಯಿತು.
ಮೊಹಾಲಿ: ಪ್ರವಾಸಿ ಆಸ್ಟ್ರೇಲಿಯಾ (ind vs aus ) ವಿರುದ್ಧದ ಏಕ ದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ಗಳ ಸುಲಭ ಗೆಲುವು ಸಾಧಿಸಿದೆ. ಭಾರತ ತಂಡದ ಪರ ಬೌಲಿಂಗ್ನಲ್ಲಿ 51 ರನ್ಗಳಿಗೆ 5 ವಿಕೆಟ್ ಉರುಳಿಸಿದ ಮೊಹಮ್ಮದ್ ಶಮಿ ಹಾಗೂ ಬ್ಯಾಟಿಂಗ್ ಮೂಲಕ ತಲಾ ಅರ್ಧ ಶತಕಗಳನ್ನು ಬಾರಿಸಿದ ಶುಭ್ಮನ್ ಗಿಲ್ (74) ಹಾಗೂ ಋತುರಾಜ್ ಗಾಯಕ್ವಾಡ್ (71), ಸೂರ್ಯಕುಮಾರ್ ಯಾದವ್ (50), ಮತ್ತು ಕೆ. ಎಲ್ ರಾಹುಲ್ (58*) ಗೆಲುವಿನ ರೂವಾರಿಗಳು ಎನಿಸಿಕೊಂಡರು. ಈ ವಿಜಯದ ಮೂಲಕ ಭಾರತ ತಂಡ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿತು.
ಇಲ್ಲಿನ ಐಎಸ್ ಬಿಂದ್ರಾ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 50 ಓವರ್ಗಳಲ್ಲಿ 276 ರನ್ಗಳಿಗೆ ಆಲ್ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಭಾರತ ತಂಡ. 48.4 ಓವರ್ಗಳಲ್ಲಿ. 5 ವಿಕೆಟ್ ಕಳೆದುಕೊಂಡು 281 ರನ್ ಬಾರಿಸಿ ಜಯಶಾಲಿಯಾಯಿತು.
ಗುರಿ ಬೆನ್ನಟ್ಟಲು ಆರಂಭಿಸಿದ ಭಾರತ ತಂಡ ಋತುರಾಜ್ ಗಾಯಕ್ವಾಡ್ ಹಾಗೂ ಶುಭ್ ಮನ್ ಗಿಲ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಉತ್ತಮ ಆರಂಭ ಪಡೆಯಿತು. ಈ ಜೋಡಿ ಮೊದಲ ವಿಕೆಟ್ಗೆ 142 ರನ್ ಬಾರಿಸಿ ವಿಶ್ವಾಸ ಮೂಡಿಸಿತು. ಇವರಿಬ್ಬರೂ ಆಸ್ಟ್ರೇಲಿಯಾದ ಬೌಲರ್ಗಳನ್ನು ಹಿಮ್ಮಟ್ಟಿಸಿದರು.
ಆದರೆ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬಂದ ಶ್ರೇಯಸ್ ಅಯ್ಯರ್ ಮತ್ತೆ ವೈಫಲ್ಯ ಕಂಡರು. 3 ರನ್ಗೆ ಅವರು ರನ್ಔಟ್ ಆದರು. ಅನಗತ್ಯ ರನ್ ಕದಿಯಲು ಮುಂದಾದ ಅವರು ತಾವಿನ್ನೂ ಲಯ ಕಂಡುಕೊಂಡಿಲ್ಲ ಎಂಬುದನ್ನು ಸೂಚಿಸಿದಂತಿತ್ತು. ಅವರು ಔಟಾದ ಬಳಿಕ ಭಾರತಕ್ಕೆ ಸ್ವಲ್ಪ ಹಿನ್ನಡೆ ಉಂಟಾಯಿತು. ಆದರೆ ಈ ಇಬ್ಬರೂ ಬ್ಯಾಟರ್ಗಳು ಆಸೀಸ್ ಸ್ಪಿನ್ನರ್ ಆ್ಯಡಂ ಜಂಪಾ ಅವರ ಎಸೆತಗಳಿವೆ ವಿಕೆಟ್ ಒಪ್ಪಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಆಡಲು ಬಂದ ಇಶಾನ್ ಕಿಶನ್ ಭರವಸೆ ಮೂಡಿಸಿದರೂ 18 ರನ್ಗಳಿಗೆ ಔಟಾದರು. ಈ ವೇಳೆ ಭಾರತ ತಂಡ 185 ರನ್ಗಳಿಗೆ 4 ವಿಕೆಟ್ ಕಳೆದುಕೊಂಡು ಆತಂಕಕ್ಕೆ ಒಳಗಾಯಿತು.
ಈ ವೇಳೆ ಜತೆಯಾದ ಸೂರ್ಯಕುಮಾರ್ ಯಾದವ್ ಹಾಗೂ ನಾಯಕ ಕೆ. ಎಲ್ ರಾಹುಲ್ ಅರ್ಧ ಶತಕಗಳನ್ನು ಬಾರಿಸಿ ಭಾರತವನ್ನು ಗೆಲುವಿನತ್ತ ಮುನ್ನಡೆಸಿದರು. ಇವರಿಬ್ಬರೂ 80 ರನ್ಗಳ ಜತೆಯಾಟ ಆಡಿದರು.
ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡದ ಪರ ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ ಗರಿಷ್ಠ 52 ರನ್ ಗಳಿಸಿದರು. ಜೋಶ್ ಇಂಗ್ಲಿಷ್ 45, ಸ್ಟೀವ್ ಸ್ಮಿತ್ 41, ಮಾರ್ನಸ್ ಲಾಬುಷೇನ್ 39, ಕ್ಯಾಮರೂನ್ ಗ್ರೀನ್ 31, ಮಾರ್ಕಸ್ ಸ್ಪೋಯಿನಿಸ್ 29 ಮತ್ತು ನಾಯಕ ಪ್ಯಾಟ್ ಕಮಿನ್ಸ್ 21 ರನ್ ಗಳಿಸಿ ಔಟಾಗದೆ ಉಳಿದರು. ಸ್ಮಿತ್ ಹಾಗೂ ವಾರ್ನರ್ ಭಾರತ ತಂಡದ ಬೌಲರ್ಗಳನ್ನು ಕಾಡಿದರಲ್ಲದೆ, ದೊಡ್ಡ ಮೊತ್ತ ಪೇರಿಸುವ ಆತಂಕ ಮೂಡಿಸಿದರು. ಆದರೆ, ಮೊಹಮ್ಮದ್ ಶಮಿ ಭಾರತದ ಭಯವನ್ನು ದೂರ ಮಾಡಿದರು. ಬುಮ್ರಾ.ಅಶ್ವಿನ್ ಹಾಗೂ ಜಡೇಜಾ ತಲಾ ಒಂದು ವಿಕೆಟ್ ಪಡೆಯುವ ಮೂಲಕ ಶಮಿಗೆ ಉತ್ತಮ ಬೆಂಬಲ ನೀಡಿದರು.
ಇದನ್ನೂ ಓದಿ: Mohammed Shami : ಬೌಲಿಂಗ್ನಲ್ಲಿ ಹೊಸ ಮಿಂಚು ಸೃಷ್ಟಿಸಿದ ಮೊಹಮ್ಮದ್ ಶಮಿ; ಏನಿದು ಸಾಧನೆ
ತವರಿನಲ್ಲಿ ನಡೆಯಲಿರುವ ವಿಶ್ವಕಪ್‌ಗೆ ಪೂರ್ವ ಸಿದ್ಧತೆ ನಡೆಸಲು ಈ ಸರಣಿ ಭಾರತದ ಪಾಲಿಗೆ ಮಹತ್ವದನಿಸಿದೆ. ಮೊದಲೆರಡು ಪಂದ್ಯಗಳಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ಕಲ್ಪಿಸಲಾಗಿದೆ.
ಕರ್ನಾಟಕ
Cat Eyed Snake : ಬೆಕ್ಕಿನ ಕಣ್ಣಿನ ಸುಂದರಿಯರನ್ನು ನೋಡೇ ಇರ್ತೀರಿ, ಬೆಕ್ಕಿನ ಕಣ್ಣಿನ ಹಾವು ನೋಡಿದ್ದೀರಾ?
ಪುತ್ತೂರು (ದಕ್ಷಿಣ ಕನ್ನಡ): ನೀವು ಖಂಡಿತವಾಗಿಯೂ ಬೆಕ್ಕಿನ ಕಣ್ಣಿನ ಸುಂದರಿಯರನ್ನು (Cat eyed Beauties) ನೋಡಿರುತ್ತೀರಿ. ನಮ್ಮ ಐಶ್ವರ್ಯ ರೈ (Aishwarya Rai), ಏಮಿ ಜಾಕ್ಸನ್ (Amy Jackson), ಹಾಲಿವುಡ್‌ನ ಹಲವು ನಟಿಯರು ತಮ್ಮ ಸುಂದರವಾದ ಕಣ್ಣುಗಳಿಗಾಗಿಯೇ ಹೆಸರುವಾಸಿ. ಅವರೆಲ್ಲ ನಿಮಗೆ ಗೊತ್ತು. ಆದರೆ, ಬೆಕ್ಕಿನ ಕಣ್ಣಿನ ಹಾವು (Cat Eyed Snake) ನಿಮಗೆ ಗೊತ್ತಾ? ನೋಡಿದ್ದೀರಾ? ನೋಡಿಲ್ಲ ಅಂದರೆ ಒಮ್ಮೆ ನೋಡಿಬಿಡಿ ಅಂತ ಕೆಲವು ದಿನದ ಹಿಂದೆ ಈ ಹಾವೇ ಪುತ್ತೂರಿನ ಒಂದು ಮನೆಗೆ ಬಂದಿತ್ತು!
ಪುತ್ತೂರಿನ ಬಲ್ನಾಡು ನಿವಾಸಿ ರವಿಕೃಷ್ಣ ಕಲ್ಲಜೆ ಎಂಬವರ ಮನೆಗೆ ಇತ್ತೀಚೆಗೆ ಒಂದು ಹಾವು ಬಂದಿತ್ತು. ಬಂದಿತ್ತು ಅನ್ನುವುದಕ್ಕಿಂತಲೂ ನೇರವಾಗಿ ಬಂದು ಮನೆಯೊಂದರ ಒಳಗಿನ ಟೇಬಲ್ ಮೇಲೆ ಆರಾಮವಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿತ್ತು. ಸಾಮಾನ್ಯವಾಗಿ ಹಾವುಗಳು ಜನ ಸಂಚಾರ ಇದ್ದರೆ ಹೆದರುತ್ತವೆ. ಆದರೆ, ಇದು ಮಾತ್ರ ಮನೆಯ ಸದಸ್ಯನೋ ಎನ್ನುವ ಹಾಗೆ ಮಲಗಿಕೊಂಡಿತ್ತು.
ರವಿಕೃಷ್ಣ ಅವರು ಜಗಲಿಗೆ ಬಂದಾಗ ಟೇಬಲ್ ಮೇಲೆ ಹಳದಿ ಬಣ್ಣದ ವಸ್ತು ಬಿದ್ದಿದೆ ಅನಿಸಿತು. ಹತ್ತಿರ ಹೋಗಿ ನೋಡಿದಾಗಲೇ ಗೊತ್ತಾದದ್ದು ಅದು ಹಾವು ಅಂತ. ನೋಡಿದರೆ ಕಂದು ಬಣ್ಣದ ಪಟ್ಟೆ ಪಟ್ಟೆಗಳನ್ನು ಹೊಂದಿದ್ದ ಅದು ಅತ್ಯಂತ ವಿಷಕಾರಿ ಕನ್ನಡಿ ಹಾವು ಅನಿಸುತ್ತಿತ್ತು. ಅಬ್ಬಾ ದೇವರೇ.. ಕನ್ನಡಿ ಹಾವು ಮನೆಯೊಳಗೆ ಬಂದಿದೆ ಏನು ಮಾಡುವುದು ಎಂದು ಯೋಚಿಸಿದ ರವಿಕೃಷ್ಣ ಅವರಿಗೆ ನೆನಪಾದದ್ದು ಪುತ್ತೂರಿನ ಯುವ ಉರಗತಜ್ಞ ತೇಜಸ್ ಬನ್ನೂರು ಅವರು.
ಸಣ್ಣ ವಯಸ್ಸಿನಿಂದಲೇ ಹಾವುಗಳ ಬಗ್ಗೆ ಕುತೂಹಲ ತಳೆದಿರುವ ತೇಜಸ್ ಅವರು ಕನ್ನಡಿ ಹಾವು ಮನೆಯ ಟೇಬಲ್‌ನಲ್ಲಿ ಮಲಗಿದೆ ಎಂಬ ಸುದ್ದಿ ಕೇಳಿ ಓಡೋಡಿ ಬಂದರು.
ಇದು ಕನ್ನಡಿ ಹಾವಲ್ಲರಿ.. ಬೆಕ್ಕಿನ ಕಣ್ಣಿನ ಹಾವು ಅಂದ್ರು ತೇಜಸ್!
ತೇಜಸ್ ಅವರು ಓಡೋಡಿ ಬಂದು ಟೇಬಲ್ ಹತ್ತಿರ ಹೋದರು. ಮಲಗಿದ್ದ ಹಾವನ್ನು ನೋಡಿ ಅವರು ʻಓ ಇದಾ.. ಇದು ಕನ್ನಡಿ ಹಾವಲ್ಲ ಮಾರಾಯ್ರೆ.. ಇದು ಭಾರಿ ಪಾಪದ ಹಾವುʼ ಎಂದರು. ಕಿರಿಯ ವಯಸ್ಸಿನಲ್ಲೇ ಹಾವು ಹಿಡಿದು ಅವುಗಳ ರಕ್ಷಣೆ ಮಾಡುತ್ತಿರುವ ತೇಜಸ್ ಕಳೆದ ಹಲವು ವರ್ಷಗಳಿಂದ ಹಲವು ರೀತಿಯ, ಹಲವು ಪ್ರಕಾರದ ಹಾವುಗಳನ್ನು ರಕ್ಷಣೆ ಮಾಡಿದ್ದು, ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿದ ಹಾವನ್ನು ರಕ್ಷಿಸಿದ್ದಾರೆ.
ಹೀಗಾಗಿ ಅವರಿಗೆ ನೋಡಿದ ಕೂಡಲೇ ಹಾವು ಯಾವುದೆಂದು ಗೊತ್ತಾಗಿದೆ. ಅವರು ಹಾವನ್ನು ಕೈಯಲ್ಲೇ ಹಿಡಿದು ಹೇಳಿದರು: ನೋಡಿ ಇದು ಪಶ್ಚಿಮ ಘಟ್ಟದಂತಹ ದಟ್ಟ ಅರಣ್ಯಗಳ ಮಧ್ಯೆಯೂ ಅಪರೂಪವಾಗಿ ಕಾಣಸಿಗುವ ಬೆಕ್ಕು ಕಣ್ಣಿನ ಹಾವು. ನೋಡಿ, ಇದರ ಕಣ್ಣು ನೋಡಿ, ಐಶ್ವರ್ಯ ರೈ ಕಣ್ಣಿನ ಹಾಗೆ ಇಲ್ವಾ? ಈ ಕಣ್ಣಿನಿಂದಲೇ ಈ ಹಾವಿಗೆ ಈ ಹೆಸರು ಬಂದಿದೆ.
ಹಾವನ್ನು ಕೈಯಲ್ಲಿ ಹಿಡಿದೇ ತೇಜಸ್ ಹಾವಿನ ಕಥೆ ಹೇಳುತ್ತಾ ಹೋದರು
- ಇದರ ಹೆಸರು ಫಾರೆಸ್ಟಿನ್ ಕ್ಯಾಟ್ ಸ್ನೇಕ್-Forestian Cat snake (ಬೆಕ್ಕಿನ ಕಣ್ಣಿನ ಹಾವು)
- ದಟ್ಟ ಅರಣ್ಯದಲ್ಲಿ ಸ್ವಚ್ಛಂದವಾಗಿ ವಿಹರಿಸುವ ಅಪರೂಪದ ಹಾವಿದು
- ಬೆಕ್ಕಿನ ಕಣ್ಞಿನಂತೆ ಬಿಳಿ ಕಣ್ಣುಗಳನ್ನು ಹೊಂದಿರುವ ಈ ಹಾವು ರಾತ್ರಿ ವೇಳೆಯಲ್ಲೇ ಸಂಚರಿಸುತ್ತದೆ.
- ರಾತ್ರಿಯಲ್ಲಿ ಬೆಕ್ಕಿನ ಕಣ್ಣುಗಳಂತೆಯೇ ಹೊಳೆಯುವ ಈ ಹಾವಿನ ಕಣ್ಣುಗಳು ಅತ್ಯಂತ ಆಕರ್ಷಕವೂ ಆಗಿದೆ.
- ರಾತ್ರಿ ವೇಳೆಯಲ್ಲೇ ಬೇಟೆಗಿಳಿಯುವ ಈ ಹಾವು ಹಕ್ಕಿಗಳ ಮೊಟ್ಟೆ, ಸಣ್ಣ ಗಾತ್ರದ ಹಕ್ಕಿ, ಓತಿಕ್ಯಾತ ಸೇರಿದಂತೆ ಹಲವು ಸಣ್ಣ ಗಾತ್ರದ ಪ್ರಾಣಿ ಪಕ್ಷಿಗಳನ್ನು ಬೇಟೆಯಾಡುತ್ತದೆ.
- ವಿಷಕಾರಿಯಲ್ಲದ ಈ ಹಾವು ತನ್ನ ರಕ್ಷಣೆಗಾಗಿ ಕಚ್ಚುತ್ತದೆ. ಆದರೆ ಈ ಹಾವು ಕಚ್ಚಿದಲ್ಲಿ ಯಾವುದೇ ತೊಂದರೆಯೂ ಇಲ್ಲ.
- ಹಳದಿ ಬಣ್ಣದಲ್ಲಿ ಕಂದು ಬಣ್ಣದ ಪಟ್ಟೆಗಳನ್ನು ಹೊಂದಿರುವ ಈ ಹಾವು ಕನ್ನಡಿ ಹಾವನ್ನೇ ಹೋಲುತ್ತವೆ.
- ಅಪರೂಪದ ಈ ಹಾವುಗಳು ಜನರ ಕಣ್ಣಿಗೆ ಬಿದ್ದಲ್ಲಿ ಕನ್ನಡಿ ಹಾವಿನ ಚಹರೆಯಿಂದಾಗಿ ಕೊಲ್ಲಲ್ಪಡುವುದೂ ಉಂಟು.
- ಸಣ್ಣ ಗಾತ್ರದಿಂದ ದೊಡ್ಡ ಗಾತ್ರದವರೆಗೆ ಬೆಳೆಯುವ ಈ ಹಾವು ಕೇರೆ ಹಾವಿನಷ್ಟೇ ಉದ್ದಕ್ಕೆ ಬೆಳೆಯುತ್ತದೆ.
ಮರಳಿ ದಟ್ಟ ಕಾನನ ಸೇರಿದ ಬೆಕ್ಕಿನ ಕಣ್ಣಿನ ಹಾವು
ತೇಜಸ್ ಅವರ ಪ್ರೀತಿಯ ಕೈಗಳಿಗೆ ಸಿಕ್ಕಿದ ಈ ಹಾವು ಇದೀಗ ಅದರ ಮೂಲ ವಾಸಸ್ಥಾನವಾದ ದಟ್ಟ ಅರಣ್ಯವನ್ನು ತಲುಪಿದೆ. ಇಂಥ ಹಾವನ್ನು ನೋಡಿದ ಉರಗತಜ್ಞ ತೇಜಸ್ ಪುತ್ತೂರಿನಲ್ಲಿ ಈ ರೀತಿಯ ಹಾವು ಪತ್ತೆಯಾಗಿರುವುದೇ ಅಪರೂಪ ಎಂದಿದ್ದಾರೆ. ಸಿಟಿ ನೋಡ್ಕೊಂಡು ಹೋಗೋಣ ಅಂತ ಬಂದಿರಬೇಕು ಎಂದು ನಕ್ಕರಂತೆ ರವಿಕೃಷ್ಣ ಕಲ್ಲಜೆ.
-
ಪ್ರಮುಖ ಸುದ್ದಿ13 hours ago
Lina Mukherjee: ಇಸ್ಲಾಮಿಕ್ ದೇಶದಲ್ಲಿ ಹಂದಿ ಮಾಂಸ ತಿಂದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ!
-
ಪ್ರಮುಖ ಸುದ್ದಿ4 hours ago
Ipsos poll Survey: ಟ್ರುಡೋ ಜನಪ್ರಿಯತೆ ಕುಸಿತ, ಕೆನಡಾ ಪಿಎಂ ಆಗಲು ಪ್ರತಿಪಕ್ಷ ನಾಯಕನೇ ಬೆಸ್ಟ್!
-
ಉಡುಪಿ10 hours ago
FB Profile Deleted: 20ಕ್ಕೂ ಅಧಿಕ ಹಿಂದು ಜಾಗರಣ ವೇದಿಕೆ ನಾಯಕರ ಫೇಸ್ ಬುಕ್ ಪ್ರೊಫೈಲ್ ಏಕಕಾಲದಲ್ಲಿ ಡಿಲೀಟ್!
-
ಸುವಚನ18 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕಲೆ/ಸಾಹಿತ್ಯ23 hours ago
Painting: ಕೇವಲ 328 ರೂ.ಗೆ ಖರೀದಿಸಿದ ಪೇಂಟಿಂಗ್ 1.5 ಕೋಟಿ ರೂಪಾಯಿಗೆ ಹರಾಜು!
-
ಕರ್ನಾಟಕ23 hours ago
Honey Bee Attack: ಶವ ಸಂಸ್ಕಾರಕ್ಕೆಂದು ಹೋದವರ ಮೇಲೆ ಹೆಜ್ಜೇನು ದಾಳಿ; 10 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
-
ಗ್ಯಾಜೆಟ್ಸ್6 hours ago
YouTube: ಯುಟ್ಯೂಬ್ ವಿಡಿಯೋ ಮಾಡುವುದು ಇನ್ನೂ ಸುಲಭ! ಹೊಸ ಎಡಿಟಿಂಗ್ ಆ್ಯಪ್ ಲಾಂಚ್
-
ಆರೋಗ್ಯ16 hours ago
Health Tips: ಎಳನೀರು ಒಳ್ಳೆಯದೆಂದು ಕುಡಿಯುವ ಮೊದಲು ಅದರ ಅವಗುಣಗಳೂ ಗೊತ್ತಿರಲಿ!