Site icon Vistara News

Dina Bhavishya : ಈ ರಾಶಿಯ ವಿವಾಹಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ

dina bhavishya

ಚಂದ್ರನು ಭಾನುವಾರವು ಕುಂಭ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರಿಗೆ ಮಾನಸಿಕವಾಗಿ ನೆಮ್ಮದಿ ಹಾಳಾಗಲಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು ಇರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕಾರ್ಯಸ್ಥಳದಲ್ಲಿ ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪ ಇರಲಿದೆ. ಮಿಥುನ ರಾಶಿಯವರು ಹೂಡಿಕೆ ವ್ಯವಹಾರದಲ್ಲಿ ತೊಡಗುವ ಸಾಧ್ಯತೆ ಇದೆ. ಬಿಡುವಿರದ ಕೆಲಸದ ಮಧ್ಯೆಯು ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ವಿವಾಹಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (15-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ.
ತಿಥಿ: ದ್ವಾದಶಿ 18:11 ವಾರ: ಭಾನುವಾರ
ನಕ್ಷತ್ರ: ಶ್ರವಣಾ 18:48 ಯೋಗ: ಅತಿಗಂಡ 15:12
ಕರಣ: ಭವ 07:30/ ಬಾಲವ 18:11 ಅಮೃತಕಾಲ: ಬೆಳಗ್ಗೆ 09:10ರಿಂದ 10:39
ದಿನದ ವಿಶೇಷ: ವಾಮನ ಜಯಂತಿ, ತಿರುಓಣಂ

ಸೂರ್ಯೋದಯ : 06:09   ಸೂರ್ಯಾಸ್ತ : 06:21

ರಾಹುಕಾಲ: ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಮಾನಸಿಕವಾಗಿ ನೆಮ್ಮದಿ ಹಾಳಾಗಲಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು ಇರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕಾರ್ಯಸ್ಥಳದಲ್ಲಿ ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪ ಇರಲಿದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

ವೃಷಭ: ಆರೋಗ್ಯದ ಕುರಿತಾಗಿ ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ನಿಮ್ಮ ನಡವಳಿಕೆಯಿಂದಾಗಿ ಕುಟುಂಬದ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

ಮಿಥುನ: ಹೂಡಿಕೆ ವ್ಯವಹಾರದಲ್ಲಿ ತೊಡಗುವ ಸಾಧ್ಯತೆ ಇದೆ. ಬಿಡುವಿರದ ಕೆಲಸದ ಮಧ್ಯೆಯು ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ವಿವಾಹಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಕಟಕ: ಪ್ರಯಾಣವನ್ನು ಬೆಳೆಸುವ ಸಾಧ್ಯತೆ, ಇದರಿಂದ ನೀವು ದೈಹಿಕವಾಗಿ ಬಳಲಲಿದ್ದೀರಿ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಈ ಹಿಂದೆ ನೀಡಿದ ಹಣ ಮರಳುವ ಸಾಧ್ಯತೆ ಇದೆ. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

ಸಿಂಹ: ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳಿವೆ. ಅನಾವಶ್ಯಕ ಕಾರಣಗಳಿಂದ ಖರ್ಚು ಇರಲಿದೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಉತ್ಸಾಹದ ದಿನವಿದು. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

ಕನ್ಯಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಗತ್ಯ ಖರ್ಚುಗಳ ಮೇಲೆ ನಿಯಂತ್ರಣ ಸಾಧಿಸುವಿರಿ. ಜೀವನದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡ ಇದೆ, ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಒತ್ತಡ ಇರಲಿದೆ. ಮನೆಯಲ್ಲಿನ ಭಿನ್ನಾಭಿಪ್ರಾಯಗಳು ನಿಮ್ಮ ಏಕಾಗ್ರತೆಗೆ ಧಕ್ಕೆ ತರುವ ಸಾಧ್ಯತೆ ಇದೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ದೈಹಿಕ ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

ವೃಶ್ಚಿಕ: ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವುದು ಬೇಡ, ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದರಿಂದ ನಷ್ಟವಾಗುವ ಸಾಧ್ಯತೆ ಇದೆ. ಕೆಲವು ರಹಸ್ಯ ಸುದ್ದಿಗಳಿಂದ ನಿಮಗೆ ಅಚ್ಚರಿ. ನಿಮ್ಮ ಅಚ್ಚು-ಕಟ್ಟು ಕೆಲಸದಿಂದ ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿ. ಆರೋಗ್ಯ ಪರಿಪೂರ್ಣವಾಗಿರಲಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

ಧನಸ್ಸು: ಆರ್ಥಿಕ ಪ್ರಗತಿ ಸಾಧಾರಣವಾಗಿರುವುದರಿಂದ ಒತ್ತಡ ಇರಲಿದೆ. ಪ್ರಮುಖ ಕೆಲಸ ಕಾರ್ಯಗಳು ನಿಧಾನವಾಗಿ ಸಾಗುವುದು. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾತುಕತೆ ಇದೆ. ಉದ್ಯೋಗಿಗಳಿಗೆ ಶುಭ ಫಲ.ದೈಹಿಕ ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

ಮಕರ: ಅನೇಕ ಕಾರಣಾಂತರಗಳಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಕಂಡರು,ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ವ್ಯಾಪಾರದ ಉದ್ದೇಶದಿಂದಾಗಿ ಕೈಕೊಂಡ ಪ್ರವಾಸದಲ್ಲಿ ಯಶಸ್ಸು. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ಕುಂಭ: ಮನರಂಜನೆಗಾಗಿ ಸಮಯವನ್ನು ಕಳೆಯುವಿರಿ. ಸೃಜನಶೀಲ ಕಾರ್ಯಗಳಿಂದಾಗಿ ವ್ಯಕ್ತಿತ್ವ ಪ್ರಕಾಶಿಸುವ ಸಾಧ್ಯತೆ ಇದೆ. ನಿಮ್ಮ ಅನುಭವಗಳನ್ನು ಇತರರೊಂದಿಗೆ ಹಂಚಿಕೊಳ್ಳುವಿರಿ. ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಪಡೆಯುವ ಸಾಧ್ಯತೆಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

ಮೀನ: ಆಹಾರದ ವ್ಯತ್ಯಾಸದ ಕ್ರಮದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರು, ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version