ಪ್ರಮುಖ ಸುದ್ದಿ
Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್!
Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ತದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಚಂದ್ರನು ಸೋಮವಾರ 12:58ಕ್ಕೆ ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನುಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಅದಷ್ಟು ಎಚ್ಚರವಾಗಿರಿ ಮೋಸ ಹೋಗುವ ಸಾಧ್ಯತೆ ಇದೆ. ವೃಷಭ ರಾಶಿಯವರಿಗೆ ಪ್ರೀತಿ ಪಾತ್ರರಿಂದಲೇ ಕಿರಿಕಿರಿ ಸಾಧ್ಯತೆ ಇದೆ. ಕಟಕ ರಾಶಿಯವರಿಗೆ ಬಹುದಿನಗಳ ಕನಸು ನನಸಾಗುವ ಸಮಯವಿದು. ಕುಂಭ ರಾಶಿಯ ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ಇತರೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (18-09-2023)
ಮೇಷ: ಈ ದಿನ ಮೋಸ ಹೋಗುವ ಸಾಧ್ಯತೆ ಇದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಸಾಧಾರಣವಾಗಿರಲಿದೆ. ಹೊಸದೊಂದು ವಸ್ತು ಖರೀದಿಯು ಸಂತೋಷ ತರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ವೃಷಭ: ಶಾಂತ ಮನಸ್ಥಿತಿ ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗುವುದು. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ. ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುವುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2
ಮಿಥುನ: ಜೀವನದಲ್ಲಿ ಅಭದ್ರತೆಯಿಂದಾಗಿ ಮಾನಸಿಕ ಒತ್ತಡ ಹೆಚ್ಚಾಗಲಿದೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕಛೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಕಟಕ: ಬಿಡುವಿಲ್ಲದ ಕೆಲಸದಿಂದ ಆಯಾಸ ಉಂಟಾಗಲಿದೆ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನ ಮಾಡುವಿರಿ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ನಿಮಗೆ ಖರ್ಚಿನ ದಿನವಿದು. ಬಹುದಿನಗಳ ಕನಸು ನನಸಾಗುವ ಸಮಯವಿದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಸಿಂಹ: ಆಪ್ತರು ನಿಮ್ಮ ತಾಳ್ಮೆ ಪರಿಕ್ಷಿಸುವವರು. ಯಾವುದೇ ವಿಷಯಗಳಲ್ಲಿ ದೃಢ ನಿರ್ಧಾರ, ರಾಜಿಯಾಗದ ಗುಣ ಇರಲಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನೋ ಒತ್ತಡ ಹೆಚ್ಚಾಗಲಿದೆ. ಉದ್ಯೋಗ ಹಾಗೂ ಆರೋಗ್ಯದಲ್ಲಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಕನ್ಯಾ: ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುವಿರಿ. ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಆರೋಗ್ಯ ಉತ್ತಮವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ನಿಮ್ಮ ಹಿಂದೆ ಪಿತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3
ವೃಶ್ಚಿಕ: ಆಹಾರದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಆಪ್ತರೊಂದಿಗಿನ ಮಾತುಕತೆಯಲ್ಲಿ ವ್ಯತಿರಿಕ್ತವಾದ ಪರಿಣಾಮದಿಂದಾಗಿ ಜಗಳವಾಗುವ ಸಾಧ್ಯತೆ ಇದೆ. ಆದಷ್ಟು ಮಾತು ನಿಯಂತ್ರಣದಲ್ಲಿರಲಿ.ಇದರ ಮಧ್ಯೆ ಉದ್ಯೋಗದ ಸ್ಥಳದಲ್ಲಿ ಕೌಶಲ್ಯದ ಕೆಲಸ ನಿಮಗೆ ಯಶಸ್ಸು ತಂದು ಕೊಡುವುದು.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಧನಸ್ಸು: ಅತಿಯಾದ ಒತ್ತಡದ ಕಾರ್ಯ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಆಪ್ತರೊಂದಿಗೆ ಪ್ರಯಾಣ ಮಾಡುವ ವಿಚಾರವಾಗಿ ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಗಣಪತಿ ಹಬ್ಬವನ್ನು ಹೇಗೆ ಆಚರಿಸಬೇಕು? ಇಲ್ಲಿದೆ ನೋಡಿ ಮಾಹಿತಿ
ಮಕರ: ನಿಸ್ವಾರ್ಥ ಮನೋಭಾವದ ಕಾರ್ಯ ಸಿದ್ಧಿ ಮಾಡುವುದು. ಈ ಹಿಂದೆ ಮಾಡಿದ ಹೊಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚು.ಅನಗತ್ಯವಾಗಿ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ಕುಂಭ: ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅಗತ್ಯ.ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಹೊಸದಾಗಿ ಕಾರ್ಯ ಪ್ರಾರಂಭಿಸುವುದು ದಿನದ ಮಟ್ಟಿಗೆ ಬೇಡ. ಜೀವನದ ಭವಿಷ್ಯದ ಬಗೆಗೆ ಅತಿಯಾಗಿ ಚಿಂತಿಸಿ ಮನಸ್ಥಿತಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?
ಮೀನ: ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯದಿಂದ ಮಾನಸಿಕ ಅಸಮತೋಲನ ಉಂಟಾಗಬಹುದು. ನಡೆದು ಹೋದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ಅತಿಥಿಗಳ ಆಗಮನ ಹರ್ಷ ತರುವುದು. ಉದ್ಯೋಗದ ಬಗ್ಗೆ ಸಾಧಾರಣ. ಕೌಟುಂಬಿಕ ವ್ಯಾಜ್ಯಗಳು ಹುಟ್ಟುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | [email protected]
ಕ್ರಿಕೆಟ್
ind vs aus : ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ, ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ 1-0 ಮುನ್ನಡೆ
ಭಾರತ ತಂಡ ಗೆಲುವಿನ ಬಳಿಕ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ (ind vs aus) 1-0 ಮುನ್ನಡೆ ಪಡೆಯಿತು.
ಮೊಹಾಲಿ: ಪ್ರವಾಸಿ ಆಸ್ಟ್ರೇಲಿಯಾ (ind vs aus ) ವಿರುದ್ಧದ ಏಕ ದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ಗಳ ಸುಲಭ ಗೆಲುವು ಸಾಧಿಸಿದೆ. ಭಾರತ ತಂಡದ ಪರ ಬೌಲಿಂಗ್ನಲ್ಲಿ 51 ರನ್ಗಳಿಗೆ 5 ವಿಕೆಟ್ ಉರುಳಿಸಿದ ಮೊಹಮ್ಮದ್ ಶಮಿ ಹಾಗೂ ಬ್ಯಾಟಿಂಗ್ ಮೂಲಕ ತಲಾ ಅರ್ಧ ಶತಕಗಳನ್ನು ಬಾರಿಸಿದ ಶುಭ್ಮನ್ ಗಿಲ್ (74) ಹಾಗೂ ಋತುರಾಜ್ ಗಾಯಕ್ವಾಡ್ (71), ಸೂರ್ಯಕುಮಾರ್ ಯಾದವ್ (50), ಮತ್ತು ಕೆ. ಎಲ್ ರಾಹುಲ್ (58*) ಗೆಲುವಿನ ರೂವಾರಿಗಳು ಎನಿಸಿಕೊಂಡರು. ಈ ವಿಜಯದ ಮೂಲಕ ಭಾರತ ತಂಡ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿತು.
ಇಲ್ಲಿನ ಐಎಸ್ ಬಿಂದ್ರಾ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 50 ಓವರ್ಗಳಲ್ಲಿ 276 ರನ್ಗಳಿಗೆ ಆಲ್ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಭಾರತ ತಂಡ. 48.4 ಓವರ್ಗಳಲ್ಲಿ. 5 ವಿಕೆಟ್ ಕಳೆದುಕೊಂಡು 281 ರನ್ ಬಾರಿಸಿ ಜಯಶಾಲಿಯಾಯಿತು.
ಗುರಿ ಬೆನ್ನಟ್ಟಲು ಆರಂಭಿಸಿದ ಭಾರತ ತಂಡ ಋತುರಾಜ್ ಗಾಯಕ್ವಾಡ್ ಹಾಗೂ ಶುಭ್ ಮನ್ ಗಿಲ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಉತ್ತಮ ಆರಂಭ ಪಡೆಯಿತು. ಈ ಜೋಡಿ ಮೊದಲ ವಿಕೆಟ್ಗೆ 142 ರನ್ ಬಾರಿಸಿ ವಿಶ್ವಾಸ ಮೂಡಿಸಿತು. ಇವರಿಬ್ಬರೂ ಆಸ್ಟ್ರೇಲಿಯಾದ ಬೌಲರ್ಗಳನ್ನು ಹಿಮ್ಮಟ್ಟಿಸಿದರು.
ಆದರೆ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬಂದ ಶ್ರೇಯಸ್ ಅಯ್ಯರ್ ಮತ್ತೆ ವೈಫಲ್ಯ ಕಂಡರು. 3 ರನ್ಗೆ ಅವರು ರನ್ಔಟ್ ಆದರು. ಅನಗತ್ಯ ರನ್ ಕದಿಯಲು ಮುಂದಾದ ಅವರು ತಾವಿನ್ನೂ ಲಯ ಕಂಡುಕೊಂಡಿಲ್ಲ ಎಂಬುದನ್ನು ಸೂಚಿಸಿದಂತಿತ್ತು. ಅವರು ಔಟಾದ ಬಳಿಕ ಭಾರತಕ್ಕೆ ಸ್ವಲ್ಪ ಹಿನ್ನಡೆ ಉಂಟಾಯಿತು. ಆದರೆ ಈ ಇಬ್ಬರೂ ಬ್ಯಾಟರ್ಗಳು ಆಸೀಸ್ ಸ್ಪಿನ್ನರ್ ಆ್ಯಡಂ ಜಂಪಾ ಅವರ ಎಸೆತಗಳಿವೆ ವಿಕೆಟ್ ಒಪ್ಪಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಆಡಲು ಬಂದ ಇಶಾನ್ ಕಿಶನ್ ಭರವಸೆ ಮೂಡಿಸಿದರೂ 18 ರನ್ಗಳಿಗೆ ಔಟಾದರು. ಈ ವೇಳೆ ಭಾರತ ತಂಡ 185 ರನ್ಗಳಿಗೆ 4 ವಿಕೆಟ್ ಕಳೆದುಕೊಂಡು ಆತಂಕಕ್ಕೆ ಒಳಗಾಯಿತು.
ಈ ವೇಳೆ ಜತೆಯಾದ ಸೂರ್ಯಕುಮಾರ್ ಯಾದವ್ ಹಾಗೂ ನಾಯಕ ಕೆ. ಎಲ್ ರಾಹುಲ್ ಅರ್ಧ ಶತಕಗಳನ್ನು ಬಾರಿಸಿ ಭಾರತವನ್ನು ಗೆಲುವಿನತ್ತ ಮುನ್ನಡೆಸಿದರು. ಇವರಿಬ್ಬರೂ 80 ರನ್ಗಳ ಜತೆಯಾಟ ಆಡಿದರು.
ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡದ ಪರ ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ ಗರಿಷ್ಠ 52 ರನ್ ಗಳಿಸಿದರು. ಜೋಶ್ ಇಂಗ್ಲಿಷ್ 45, ಸ್ಟೀವ್ ಸ್ಮಿತ್ 41, ಮಾರ್ನಸ್ ಲಾಬುಷೇನ್ 39, ಕ್ಯಾಮರೂನ್ ಗ್ರೀನ್ 31, ಮಾರ್ಕಸ್ ಸ್ಪೋಯಿನಿಸ್ 29 ಮತ್ತು ನಾಯಕ ಪ್ಯಾಟ್ ಕಮಿನ್ಸ್ 21 ರನ್ ಗಳಿಸಿ ಔಟಾಗದೆ ಉಳಿದರು. ಸ್ಮಿತ್ ಹಾಗೂ ವಾರ್ನರ್ ಭಾರತ ತಂಡದ ಬೌಲರ್ಗಳನ್ನು ಕಾಡಿದರಲ್ಲದೆ, ದೊಡ್ಡ ಮೊತ್ತ ಪೇರಿಸುವ ಆತಂಕ ಮೂಡಿಸಿದರು. ಆದರೆ, ಮೊಹಮ್ಮದ್ ಶಮಿ ಭಾರತದ ಭಯವನ್ನು ದೂರ ಮಾಡಿದರು. ಬುಮ್ರಾ.ಅಶ್ವಿನ್ ಹಾಗೂ ಜಡೇಜಾ ತಲಾ ಒಂದು ವಿಕೆಟ್ ಪಡೆಯುವ ಮೂಲಕ ಶಮಿಗೆ ಉತ್ತಮ ಬೆಂಬಲ ನೀಡಿದರು.
ಇದನ್ನೂ ಓದಿ: Mohammed Shami : ಬೌಲಿಂಗ್ನಲ್ಲಿ ಹೊಸ ಮಿಂಚು ಸೃಷ್ಟಿಸಿದ ಮೊಹಮ್ಮದ್ ಶಮಿ; ಏನಿದು ಸಾಧನೆ
ತವರಿನಲ್ಲಿ ನಡೆಯಲಿರುವ ವಿಶ್ವಕಪ್‌ಗೆ ಪೂರ್ವ ಸಿದ್ಧತೆ ನಡೆಸಲು ಈ ಸರಣಿ ಭಾರತದ ಪಾಲಿಗೆ ಮಹತ್ವದನಿಸಿದೆ. ಮೊದಲೆರಡು ಪಂದ್ಯಗಳಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ಕಲ್ಪಿಸಲಾಗಿದೆ.
ಕರ್ನಾಟಕ
Cat Eyed Snake : ಬೆಕ್ಕಿನ ಕಣ್ಣಿನ ಸುಂದರಿಯರನ್ನು ನೋಡೇ ಇರ್ತೀರಿ, ಬೆಕ್ಕಿನ ಕಣ್ಣಿನ ಹಾವು ನೋಡಿದ್ದೀರಾ?
ಪುತ್ತೂರು (ದಕ್ಷಿಣ ಕನ್ನಡ): ನೀವು ಖಂಡಿತವಾಗಿಯೂ ಬೆಕ್ಕಿನ ಕಣ್ಣಿನ ಸುಂದರಿಯರನ್ನು (Cat eyed Beauties) ನೋಡಿರುತ್ತೀರಿ. ನಮ್ಮ ಐಶ್ವರ್ಯ ರೈ (Aishwarya Rai), ಏಮಿ ಜಾಕ್ಸನ್ (Amy Jackson), ಹಾಲಿವುಡ್‌ನ ಹಲವು ನಟಿಯರು ತಮ್ಮ ಸುಂದರವಾದ ಕಣ್ಣುಗಳಿಗಾಗಿಯೇ ಹೆಸರುವಾಸಿ. ಅವರೆಲ್ಲ ನಿಮಗೆ ಗೊತ್ತು. ಆದರೆ, ಬೆಕ್ಕಿನ ಕಣ್ಣಿನ ಹಾವು (Cat Eyed Snake) ನಿಮಗೆ ಗೊತ್ತಾ? ನೋಡಿದ್ದೀರಾ? ನೋಡಿಲ್ಲ ಅಂದರೆ ಒಮ್ಮೆ ನೋಡಿಬಿಡಿ ಅಂತ ಕೆಲವು ದಿನದ ಹಿಂದೆ ಈ ಹಾವೇ ಪುತ್ತೂರಿನ ಒಂದು ಮನೆಗೆ ಬಂದಿತ್ತು!
ಪುತ್ತೂರಿನ ಬಲ್ನಾಡು ನಿವಾಸಿ ರವಿಕೃಷ್ಣ ಕಲ್ಲಜೆ ಎಂಬವರ ಮನೆಗೆ ಇತ್ತೀಚೆಗೆ ಒಂದು ಹಾವು ಬಂದಿತ್ತು. ಬಂದಿತ್ತು ಅನ್ನುವುದಕ್ಕಿಂತಲೂ ನೇರವಾಗಿ ಬಂದು ಮನೆಯೊಂದರ ಒಳಗಿನ ಟೇಬಲ್ ಮೇಲೆ ಆರಾಮವಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿತ್ತು. ಸಾಮಾನ್ಯವಾಗಿ ಹಾವುಗಳು ಜನ ಸಂಚಾರ ಇದ್ದರೆ ಹೆದರುತ್ತವೆ. ಆದರೆ, ಇದು ಮಾತ್ರ ಮನೆಯ ಸದಸ್ಯನೋ ಎನ್ನುವ ಹಾಗೆ ಮಲಗಿಕೊಂಡಿತ್ತು.
ರವಿಕೃಷ್ಣ ಅವರು ಜಗಲಿಗೆ ಬಂದಾಗ ಟೇಬಲ್ ಮೇಲೆ ಹಳದಿ ಬಣ್ಣದ ವಸ್ತು ಬಿದ್ದಿದೆ ಅನಿಸಿತು. ಹತ್ತಿರ ಹೋಗಿ ನೋಡಿದಾಗಲೇ ಗೊತ್ತಾದದ್ದು ಅದು ಹಾವು ಅಂತ. ನೋಡಿದರೆ ಕಂದು ಬಣ್ಣದ ಪಟ್ಟೆ ಪಟ್ಟೆಗಳನ್ನು ಹೊಂದಿದ್ದ ಅದು ಅತ್ಯಂತ ವಿಷಕಾರಿ ಕನ್ನಡಿ ಹಾವು ಅನಿಸುತ್ತಿತ್ತು. ಅಬ್ಬಾ ದೇವರೇ.. ಕನ್ನಡಿ ಹಾವು ಮನೆಯೊಳಗೆ ಬಂದಿದೆ ಏನು ಮಾಡುವುದು ಎಂದು ಯೋಚಿಸಿದ ರವಿಕೃಷ್ಣ ಅವರಿಗೆ ನೆನಪಾದದ್ದು ಪುತ್ತೂರಿನ ಯುವ ಉರಗತಜ್ಞ ತೇಜಸ್ ಬನ್ನೂರು ಅವರು.
ಸಣ್ಣ ವಯಸ್ಸಿನಿಂದಲೇ ಹಾವುಗಳ ಬಗ್ಗೆ ಕುತೂಹಲ ತಳೆದಿರುವ ತೇಜಸ್ ಅವರು ಕನ್ನಡಿ ಹಾವು ಮನೆಯ ಟೇಬಲ್‌ನಲ್ಲಿ ಮಲಗಿದೆ ಎಂಬ ಸುದ್ದಿ ಕೇಳಿ ಓಡೋಡಿ ಬಂದರು.
ಇದು ಕನ್ನಡಿ ಹಾವಲ್ಲರಿ.. ಬೆಕ್ಕಿನ ಕಣ್ಣಿನ ಹಾವು ಅಂದ್ರು ತೇಜಸ್!
ತೇಜಸ್ ಅವರು ಓಡೋಡಿ ಬಂದು ಟೇಬಲ್ ಹತ್ತಿರ ಹೋದರು. ಮಲಗಿದ್ದ ಹಾವನ್ನು ನೋಡಿ ಅವರು ʻಓ ಇದಾ.. ಇದು ಕನ್ನಡಿ ಹಾವಲ್ಲ ಮಾರಾಯ್ರೆ.. ಇದು ಭಾರಿ ಪಾಪದ ಹಾವುʼ ಎಂದರು. ಕಿರಿಯ ವಯಸ್ಸಿನಲ್ಲೇ ಹಾವು ಹಿಡಿದು ಅವುಗಳ ರಕ್ಷಣೆ ಮಾಡುತ್ತಿರುವ ತೇಜಸ್ ಕಳೆದ ಹಲವು ವರ್ಷಗಳಿಂದ ಹಲವು ರೀತಿಯ, ಹಲವು ಪ್ರಕಾರದ ಹಾವುಗಳನ್ನು ರಕ್ಷಣೆ ಮಾಡಿದ್ದು, ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿದ ಹಾವನ್ನು ರಕ್ಷಿಸಿದ್ದಾರೆ.
ಹೀಗಾಗಿ ಅವರಿಗೆ ನೋಡಿದ ಕೂಡಲೇ ಹಾವು ಯಾವುದೆಂದು ಗೊತ್ತಾಗಿದೆ. ಅವರು ಹಾವನ್ನು ಕೈಯಲ್ಲೇ ಹಿಡಿದು ಹೇಳಿದರು: ನೋಡಿ ಇದು ಪಶ್ಚಿಮ ಘಟ್ಟದಂತಹ ದಟ್ಟ ಅರಣ್ಯಗಳ ಮಧ್ಯೆಯೂ ಅಪರೂಪವಾಗಿ ಕಾಣಸಿಗುವ ಬೆಕ್ಕು ಕಣ್ಣಿನ ಹಾವು. ನೋಡಿ, ಇದರ ಕಣ್ಣು ನೋಡಿ, ಐಶ್ವರ್ಯ ರೈ ಕಣ್ಣಿನ ಹಾಗೆ ಇಲ್ವಾ? ಈ ಕಣ್ಣಿನಿಂದಲೇ ಈ ಹಾವಿಗೆ ಈ ಹೆಸರು ಬಂದಿದೆ.
ಹಾವನ್ನು ಕೈಯಲ್ಲಿ ಹಿಡಿದೇ ತೇಜಸ್ ಹಾವಿನ ಕಥೆ ಹೇಳುತ್ತಾ ಹೋದರು
- ಇದರ ಹೆಸರು ಫಾರೆಸ್ಟಿನ್ ಕ್ಯಾಟ್ ಸ್ನೇಕ್-Forestian Cat snake (ಬೆಕ್ಕಿನ ಕಣ್ಣಿನ ಹಾವು)
- ದಟ್ಟ ಅರಣ್ಯದಲ್ಲಿ ಸ್ವಚ್ಛಂದವಾಗಿ ವಿಹರಿಸುವ ಅಪರೂಪದ ಹಾವಿದು
- ಬೆಕ್ಕಿನ ಕಣ್ಞಿನಂತೆ ಬಿಳಿ ಕಣ್ಣುಗಳನ್ನು ಹೊಂದಿರುವ ಈ ಹಾವು ರಾತ್ರಿ ವೇಳೆಯಲ್ಲೇ ಸಂಚರಿಸುತ್ತದೆ.
- ರಾತ್ರಿಯಲ್ಲಿ ಬೆಕ್ಕಿನ ಕಣ್ಣುಗಳಂತೆಯೇ ಹೊಳೆಯುವ ಈ ಹಾವಿನ ಕಣ್ಣುಗಳು ಅತ್ಯಂತ ಆಕರ್ಷಕವೂ ಆಗಿದೆ.
- ರಾತ್ರಿ ವೇಳೆಯಲ್ಲೇ ಬೇಟೆಗಿಳಿಯುವ ಈ ಹಾವು ಹಕ್ಕಿಗಳ ಮೊಟ್ಟೆ, ಸಣ್ಣ ಗಾತ್ರದ ಹಕ್ಕಿ, ಓತಿಕ್ಯಾತ ಸೇರಿದಂತೆ ಹಲವು ಸಣ್ಣ ಗಾತ್ರದ ಪ್ರಾಣಿ ಪಕ್ಷಿಗಳನ್ನು ಬೇಟೆಯಾಡುತ್ತದೆ.
- ವಿಷಕಾರಿಯಲ್ಲದ ಈ ಹಾವು ತನ್ನ ರಕ್ಷಣೆಗಾಗಿ ಕಚ್ಚುತ್ತದೆ. ಆದರೆ ಈ ಹಾವು ಕಚ್ಚಿದಲ್ಲಿ ಯಾವುದೇ ತೊಂದರೆಯೂ ಇಲ್ಲ.
- ಹಳದಿ ಬಣ್ಣದಲ್ಲಿ ಕಂದು ಬಣ್ಣದ ಪಟ್ಟೆಗಳನ್ನು ಹೊಂದಿರುವ ಈ ಹಾವು ಕನ್ನಡಿ ಹಾವನ್ನೇ ಹೋಲುತ್ತವೆ.
- ಅಪರೂಪದ ಈ ಹಾವುಗಳು ಜನರ ಕಣ್ಣಿಗೆ ಬಿದ್ದಲ್ಲಿ ಕನ್ನಡಿ ಹಾವಿನ ಚಹರೆಯಿಂದಾಗಿ ಕೊಲ್ಲಲ್ಪಡುವುದೂ ಉಂಟು.
- ಸಣ್ಣ ಗಾತ್ರದಿಂದ ದೊಡ್ಡ ಗಾತ್ರದವರೆಗೆ ಬೆಳೆಯುವ ಈ ಹಾವು ಕೇರೆ ಹಾವಿನಷ್ಟೇ ಉದ್ದಕ್ಕೆ ಬೆಳೆಯುತ್ತದೆ.
ಮರಳಿ ದಟ್ಟ ಕಾನನ ಸೇರಿದ ಬೆಕ್ಕಿನ ಕಣ್ಣಿನ ಹಾವು
ತೇಜಸ್ ಅವರ ಪ್ರೀತಿಯ ಕೈಗಳಿಗೆ ಸಿಕ್ಕಿದ ಈ ಹಾವು ಇದೀಗ ಅದರ ಮೂಲ ವಾಸಸ್ಥಾನವಾದ ದಟ್ಟ ಅರಣ್ಯವನ್ನು ತಲುಪಿದೆ. ಇಂಥ ಹಾವನ್ನು ನೋಡಿದ ಉರಗತಜ್ಞ ತೇಜಸ್ ಪುತ್ತೂರಿನಲ್ಲಿ ಈ ರೀತಿಯ ಹಾವು ಪತ್ತೆಯಾಗಿರುವುದೇ ಅಪರೂಪ ಎಂದಿದ್ದಾರೆ. ಸಿಟಿ ನೋಡ್ಕೊಂಡು ಹೋಗೋಣ ಅಂತ ಬಂದಿರಬೇಕು ಎಂದು ನಕ್ಕರಂತೆ ರವಿಕೃಷ್ಣ ಕಲ್ಲಜೆ.
ದೇಶ
Money Guide: ಅತ್ಯುತ್ತಮ ನಿವೃತ್ತ ಜೀವನಕ್ಕಾಗಿ ಟಾಪ್ 10 ಹಣ ಉಳಿತಾಯದ ಟಿಪ್ಸ್!
Money Guide: ನಿಮ್ಮ ನಿವೃತ್ತಿಯ ದಿನಗಳು ಅತ್ಯುತ್ತಮ ಆಗಿರಬೇಕು ಎಂದಾದರೆ, ವೃತ್ತಿಯ ಆರಂಭದಿಂದಲೇ ಉಳಿತಾಯವನ್ನು ಆರಂಭಿಸಿ.
ಹಣವನ್ನು ಉಳಿತಾಯ (Money Saving) ಮಾಡುವುದೂ ಒಂದು ಕಲೆ. ದುಡಿಮೆಯ ದಿನಗಳಲ್ಲಿ ಒಂದಿಷ್ಟು ಹಣವನ್ನು ಉಳಿತಾಯದ ಮಾಡಿದರೆ, ನಿವೃತ್ತಿಯ ದಿನಗಳನ್ನು (Retirement Life) ನೆಮ್ಮದಿಯಾಗಿ ಕಳೆಯಬಹುದು. ಇಲ್ಲದಿದ್ದರೆ, ದುಡಿಯುವ ಕಸುವು ಇಲ್ಲದ ಸಮಯದಲ್ಲಿ ಹಣಕ್ಕಾಗಿ ಪರದಾಡಬೇಕಾಗುತ್ತದೆ. ಹಾಗಾಗಿ, ನಿಮ್ಮ ವೃತ್ತಿಯ ಆರಂಭದ ದಿನಗಳಿಂದಲೇ ನಿವೃತ್ತಿಯ ಬಗ್ಗೆ ಪ್ಲ್ಯಾನ್ ಮಾಡಿ(Plan for Retirement life), ಹಣವನ್ನು ಉಳಿತಾಯ ಮಾಡಬೇಕು. ನಿವೃತ್ತಿಯ ಅಂಚಿಗೆ ಬರುವಷ್ಟರಲ್ಲಿ ದೊಡ್ಡ ಮೊತ್ತದ ಉಳಿತಾಯ ನಿಮಗಾಗಿ ಕಾಯುತ್ತಿರುತ್ತದೆ. ಹಾಗಾಗಿ, ಈಗನಿಂದಲೇ ನೀವು ಉಳಿತಾಯ ಮತ್ತು ನಿವೃತ್ತಿಯ ದಿನಗಳಿಗಾಗಿ ಹೂಡಿಕೆಯ ಪ್ಲ್ಯಾನ್ ಮಾಡುವುದು ಶುರು ಮಾಡಿ(Money Guide).
ನಿವೃತ್ತಿಗಾಗಿ ಹಣ ಉಳಿಸುವ ಮಾರ್ಗಗಳು….
1.ಉಳಿತಾಯ ಬೇಗ ಆರಂಭಿಸಿ
ಉತ್ತಮ ನಿವೃತ್ತಿ ಜೀವನಕ್ಕಾಗಿ ವೃತ್ತಿ ಆರಂಭದ ದಿನಗಳಿಂದಲೇ ಉಳಿತಾಯವನ್ನು ಆರಂಭಿಸಬೇಕು. ಚಿಕ್ಕ ಮೊತ್ತದ ಸೇವಿಂಗ್ ಕೂಡ ನಿವೃತ್ತಿ ಹೊತ್ತಿಗೆ ಬಹುದೊಡ್ಡ ಮೊತ್ತವಾಗಿ ಬದಲಾಗಿರುತ್ತದೆ.
2.ಟಾರ್ಗೆಟ್ ಸೆಟ್ ಮಾಡಿಕೊಳ್ಳಿ
ನಿಮ್ಮ ನಿರೀಕ್ಷಿತ ವೆಚ್ಚಗಳು ಮತ್ತು ಜೀವನಶೈಲಿಯ ಆಧಾರದ ಮೇಲೆ ನಿವೃತ್ತಿಗಾಗಿ ನಿಮಗೆ ಎಷ್ಟು ಹಣ ಬೇಕು ಎಂದು ನಿರ್ಧರಿಸಿ. ಹಣದುಬ್ಬರ ಮತ್ತು ಆರೋಗ್ಯ ವೆಚ್ಚಗಳಂತಹ ಅಂಶಗಳನ್ನು ಪರಿಗಣಿಸಿ ಸೇವಿಂಗ್ ಆರಂಭಿಸಿ. ಸ್ಪಷ್ಟವಾದ ನಿವೃತ್ತಿ ಗುರಿಯನ್ನು ಹಾಕಿಕೊಳ್ಳುವುದರಿಂದ ಹಣ ಉಳಿಕೆಯಲ್ಲಿ ಸ್ಪಷ್ಟತೆ ದೊರೆಯುತ್ತದೆ.
3.ರಿಟೈರ್‌ಮೆಂಟ್ ಬಜೆಟ್ ತಯಾರಿಸಿ
ನಿಮ್ಮ ಸದ್ಯದ ಆದಾಯ ಮತ್ತು ವೆಚ್ಚದ ಅನುಸಾರ ನಿಮ್ಮ ನಿವೃತ್ತಿಯ ಬಜೆಟ್ ತಯಾರಿಸಿ. ಅನವಶ್ಯವಾಗಿ ಎಲ್ಲೆಲ್ಲಿ ಹಣ ಪೋಲಾಗುತ್ತಿದೆ ಎಂದು ಗುರುತಿಸಿಕೊಳ್ಳಿ ಮತ್ತು ಅಂಥ ಹಣವನ್ನು ಉಳಿಕೆಯ ಪಟ್ಟಿಗೆ ಸೇರಿಸಿ. ಈ ಮೂಲಕ ರಿಟೈರ್ ಫಂಡ್ ಕ್ರೋಡೀಕರಿಸಬಹುದು.
4.ರಿಟೈರ್‌ಮೆಂಟ್ ಅಕೌಂಟ್!
ಭಾರತದಲ್ಲಿ ನಾನಾ ಅಕೌಂಟ್‌ಗಳು ಚಾಲ್ತಿಯಲ್ಲಿವೆ. ಅವುಗಳ ಮೂಲಕ ರಿಟೈರ್ಮೆಂಟ್ ಪ್ಲ್ಯಾನ್ ಮಾಡಬಹುದು. ಇಪಿಎಫ್, ಪಿಪಿಎಫ್, ಎನ್‌ಪಿಎಸ್, ಎಫ್‌ಡಿ ಇತ್ಯಾದಿ ಖಾತೆಗಳ ಮೂಲಕ ಸೇವಿಂಗ್ ಹೆಚ್ಚಿಸುತ್ತಾ ಹೋದಂತೆ ನಿವೃತ್ತಿ ಸಮಯದಯಲ್ಲಿ ತುಂಬಾ ಸಹಕಾರಿಯಾಗುತ್ತದೆ.
5.ಹೂಡಿಕೆ ಮಾಡಿ
ಷೇರುಗಳು, ನಿರ್ದಿಷ್ಟ ಆದಾಯ ತರುವ ಹೂಡಿಕೆಗಳು, ರಿಯಲ್ ಎಸ್ಟೇಟ್ ಸೇರಿದಂತೆ ಇನ್ನಿತರ ಹೂಡಿಕೆಗಳನ್ನು ಆಯ್ದುಕೊಳ್ಳಬಹುದು. ನೀವು ಯಾವುದೇ ರೀತಿಯ ಹೂಡಿಕೆಯ ಸಾಧನವನ್ನು ಆಯ್ಕೆ ಮಾಡಿಕೊಳ್ಳಿ. ಆದರೆ, ಅದಕ್ಕಿಂತ ಮುಂಚೆ ಅದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಮುಂದುವರಿಯರಿ.
6.ಅನವಶ್ಯ ವೆಚ್ಚ ಬೇಡ
ನಿಮ್ಮ ನಿವೃತ್ತಿಯ ದಿನಗಳು ಅತ್ಯುತ್ತಮವಾಗಿರಬೇಕು ಎಂದಾದರೆ, ಈಗಿನಿಂದಲೂ ಅನವಶ್ಯ ವೆಚ್ಚಗಳನ್ನು ದೂರ ಮಾಡಿ. ನಿಮ್ಮ ರಿಟೈರ್ಮೆಂಟ್ ಖಾತೆಗಳಿಗೆ ಆಟೋಮೆಟಿಕ್ ಆಗಿ ದುಡ್ಡು ಪೇ ಆಗುವ ಹಾಗೆ ಮಾಡಿ. ನಿಮ್ಮ ಸಂಬಳದಲ್ಲಿ ಇನ್‌ಕ್ರಿಮೆಂಟ್ ಆದಾಗಲೆಲ್ಲ. ಈ ರೀತಿಯ ಪರಿಹಾರವನ್ನು ಕಂಡುಕೊಳ್ಳಬಹುದು.
7.ಪರ್ಯಾಯ ಉಳಿತಾಯ
ಮ್ಯೂಚವಲ್ ಫಂಡ್ಸ್, ಷೇರುಗಳು, ಬಾಂಡ್‌ಗಳಂಥ ಪರ್ಯಾಯ ಉಳಿತಾಯದ ಮಾರ್ಗಗಳನ್ನು ಹುಡುಕಿಕೊಳ್ಳಬಹುದು. ಕೇವಲ ಹಣವನ್ನು ಫಿಕ್ಸೆಡ್ ಡಿಪಾಸೆಟ್ ಮಾಡುವುದು ಮಾತ್ರವೇ ಉಳಿತಾಯದ ಮಾರ್ಗವಲ್ಲ. ಉಳಿತಾಯದ ಜತೆಗೆ ಹಣ ಹೆಚ್ಚಾಗುವ ಮಾರ್ಗಗಳಿವೆ. ಅವುಗಳನ್ನು ಶೋಧಿಸಬಹುದು. ಆದರೆ, ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ.
8.ತೆರಿಗೆ ಮಾಹಿತಿ ಇರಲಿ
ತೆರಿಗೆ ಕಾನೂನುಗಳು, ಹೂಡಿಕೆ ಆಯ್ಕೆಗಳು ಮತ್ತು ನಿವೃತ್ತಿ ಯೋಜನೆ ತಂತ್ರಗಳಲ್ಲಿನ ಬದಲಾವಣೆಗಳ ಬಗ್ಗೆ ನಿಮಗೆ ಅಪ್‌ಡೇಟೆಡ್ ಮಾಹಿತಿ ಇರುವುದು ಉತ್ತಮ. ತಿಳುವಳಿಕೆಯುಳ್ಳ ಹಣಕಾಸಿನ ನಿರ್ಧಾರಗಳನ್ನು ಮಾಡಲು ಈ ರೀತಿಯ ಅಪ್‌ಡೇಟೆಡ್ ಮಾಹಿತಿ ಇದ್ದರೆ ಬೆಸ್ಟ್ ಹೂಡಿಕೆ ಮಾಡಲು ಸಾಧ್ಯವಾಗುತ್ತದೆ.
9.ರಿಟೈರ್ಮೆಂಟ್ ಫಂಡ್ ಮುಟ್ಟಬೇಡಿ
ಯಾವುದೇ ಕಾರಣಕ್ಕೂ ನಿಮ್ಮ ನಿವೃತ್ತಿ ಉಳಿತಾಯವನ್ನು ಇತರ ವೆಚ್ಚಗಳಿಗಾಗಿ ಬಳಸಲು ಹೋಗಲೇಡಿ. ಉಳಿತಾಯದ ಹಣವನ್ನು ಬಳಸಲಾರಂಭಿಸಿದರೆ, ನಿವೃತ್ತಿಯ ಸಮಯದಲ್ಲಿ ಮತ್ತೆ ನೀವು ಹಣವಿಲ್ಲದೇ ಪರದಾಡಬೇಕಾಗುತ್ತದೆ. ಹಾಗಾಗಿ, ಎಂಥದ್ದೇ ಸಂದರ್ಭದಲ್ಲಿ ನಿವೃತ್ತಿಗಾಗಿ ತೆಗೆದಿಟ್ಟ ಅಥವಾ ಸೇವಿಂಗ್ ಮಾಡಿದ ಹಣವನ್ನು ಸದ್ಯದ ವೆಚ್ಚಕ್ಕೆ ಬಳಸಲು ಮುಂದಾಗಬೇಡಿ.
ಈ ಸುದ್ದಿಯನ್ನೂ ಓದಿ: Money Guide: ಪಿಪಿಎಫ್, ಎನ್‌ಎಸ್‌ಸಿ, ಎಸ್‌ಸಿಎಸ್‌ಎಸ್ ಖಾತೆ ಸ್ಥಗಿತವಾಗದಂತೆ ನೋಡಿಕೊಳ್ಳಿ
10.ತುರ್ತು ನಿಧಿ ಇರಲಿ
ಅನಿರೀಕ್ಷಿತ ವೆಚ್ಚಗಳಿಗಾಗಿ ತುರ್ತು ನಿಧಿಯನ್ನು ನಿರ್ವಹಣೆ ಮಾಡುವುದು ಉತ್ತಮ. ಯಾಕೆಂದರೆ, ತುರ್ತು ನಿಧಿ ನಿಮ್ಮ ಬಳಿ ಇದ್ದರೆ ನೀವು ನಿಮ್ಮ ಸೇವಿಂಗ್ಸ್ ಅನ್ನು ವೆಚ್ಚಗಳಿಗೆ ಬಳಸಲು ಮುಂದಾಗುವುದಿಲ್ಲ. ಇಲ್ಲದಿದ್ದರೆ, ಉಳಿತಾಯದ ಹಣವನ್ನೇ ನೀವು ತುರ್ತು ಅಗತ್ಯಗಳಿಗೆ ಬಳಸುತ್ತೀರಿ. ಆಗ ನಿಮ್ಮ ನಿವೃತ್ತಿಯ ಎಲ್ಲ ಪ್ಲ್ಯಾನ್ ಹಾಳಾಗುತ್ತದೆ.
ಕ್ರಿಕೆಟ್
T20 World Cup : 2024 ಟಿ20 ವಿಶ್ವ ಕಪ್ ಪಂದ್ಯಗಳು ಎಲ್ಲೆಲ್ಲಿ ನಡೆಯುತ್ತವೆ ಎಂಬ ಮಾಹಿತಿ ಇಲ್ಲಿದೆ
ಅಮೆರಿಕದ ಮೂರು ಸ್ಥಳ ಹಾಗೂ ವೆಸ್ಟ್ ಇಂಡೀಸ್ನ 7 ಸ್ಥಳಗಳು ಸೇರಿ ಒಟ್ಟು 10 ಕಡೆ ವಿಶ್ವ ಕಪ್ (T20 World Cup) ಪಂದ್ಯಗಳು ಆಯೋಜನೆಗೊಳ್ಳಲಿವೆ.
ದುಬೈ: 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಐಸಿಸಿ ಶುಕ್ರವಾರ ಪ್ರಕಟಿಸಿದೆ. ವೆಸ್ಟ್ ಇಂಡೀಸ್ ಮತ್ತು ಯುಎಸ್ಎ (ಅಮೆರಿಕ) ಮುಂದಿನ ವರ್ಷ ಜೂನ್ನಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ ಅನ್ನು ಜಂಟಿಯಾಗಿ ಆಯೋಜಿಸಲಿದೆ. ಮೆಗಾ ಈವೆಂಟ್ನಲ್ಲಿ ಒಟ್ಟು 20 ತಂಡಗಳು ಭಾಗವಹಿಸಲಿವೆ. ಐಸಿಸಿ ಬುಧವಾರ ಯುಎಸ್ಎಯಲ್ಲಿ ಪಂದ್ಯ ನಡೆಯಲಿರುವ ಮೂರು ಸ್ಥಳಗಳನ್ನು ಬಹಿರಂಗಪಡಿಸಿದೆ. ಕೆರಿಬಿಯನ್ ರಾಷ್ಟ್ರಗಳಿಂದ ಏಳು ಸ್ಥಳಗಳನ್ನು ಅಂತಿಮಗೊಳಿಸಲಾಗಿದೆ.
ಆಂಟಿಗುವಾ ಮತ್ತು ಬಾರ್ಬುಡಾ, ಬಾರ್ಬಡೋಸ್, ಡೊಮಿನಿಕಾ, ಗಯಾನಾ, ಸೇಂಟ್ ಲೂಸಿಯಾ, ಟ್ರಿನಿಡಾಡ್ ಮತ್ತು ಟೊಬಾಗೊ ಮತ್ತು ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್ ವೆಸ್ಟ್ ಇಂಡೀಸ್ನಿಂದ ಆಯ್ಕೆಯಾದ ಏಳು ಸ್ಥಳಗಳಾಗಿವೆ, ಡಲ್ಲಾಸ್ನ ಗ್ರ್ಯಾಂಡ್ ಪ್ರೈರಿ, ಫ್ಲೋರಿಡಾದ ಬ್ರೋವರ್ಡ್ ಕೌಂಟಿ ಮತ್ತು ನ್ಯೂಯಾರ್ಕ್ನ ನಸ್ಸಾವು ಕೌಂಟಿ ಯುಎಸ್ಎಯಲ್ಲಿ ವಿಶ್ವ ಕಪ್ ಪಂದ್ಯಗಳಿಗೆ ಆತಿಥ್ಯ ವಹಿಸಲಿವೆ.
All the venues for the ICC Men's #T20WorldCup 2024 have been locked in 🔒
— ICC (@ICC) September 22, 2023
More 👇
ಐಸಿಸಿ ಪುರುಷರ ಟಿ 20 ವಿಶ್ವಕಪ್‌ಗೆ ಆತಿಥ್ಯ ವಹಿಸಲಿರುವ ಏಳು ಕೆರಿಬಿಯನ್ ಸ್ಥಳಗಳನ್ನು ಘೋಷಿಸಲು ನಾವು ಸಂತೋಷಪಡುತ್ತೇವೆ, ಟ್ರೋಫಿಗಾಗಿ 20 ತಂಡಗಳು ಸ್ಪರ್ಧಿಸುತ್ತಿವೆ ಎಂದು ಐಸಿಸಿ ಮುಖ್ಯ ಕಾರ್ಯನಿರ್ವಾಹಕ ಜೆಫ್ ಅಲ್ಲಾರ್ಡೈಸ್ ಹೇಳಿದರು. ಅವೆಲ್ಲವೂ ಆಟಗಾರರು ಮತ್ತು ಅಭಿಮಾನಿಗಳೊಂದಿಗೆ ಜನಪ್ರಿಯ ಸ್ಥಳಗಳಾಗಿವೆ. ಇದು ಈವೆಂಟ್ಗೆ ಅದ್ಭುತ ರೂಪ ಕೊಡಲಿದೆ ಎಂದು ಹೇಳಿದ್ದಾರೆ.
ವೆಸ್ಟ್ ಇಂಡೀಸ್ಗೆ ಮೂರನೇ ಆತಿಥ್ಯ
ಇದು ವೆಸ್ಟ್ ಇಂಡೀಸ್ ಆತಿಥ್ಯ ವಹಿಸುತ್ತಿರುವ ಮೂರನೇ ಐಸಿಸಿ ಹಿರಿಯ ಪುರುಷರ ಪಂದ್ಯಾವಳಿಯಾಗಿದೆ. ಈ ಪಂದ್ಯಗಳು ಕ್ರಿಕೆಟ್ ಅಭಿಮಾನಿಗಳಿಗೆ ಕೆರಿಬಿಯನ್ ನಲ್ಲಿ ಕ್ರಿಕೆಟ್ ಅನ್ನು ಆನಂದಿಸುವ ವಿಶಿಷ್ಟ ಅನುಭವ ನೀಡಲಿದೆ. ಕ್ರೀಡೆಯ ಕಡೆಗೆ ನಮ್ಮ ನಿರಂತರ ಬದ್ಧತೆ ಮತ್ತು ಬೆಂಬಲಕ್ಕಾಗಿ ಕ್ರಿಕೆಟ್ ವೆಸ್ಟ್ ಇಂಡೀಸ್ ಮತ್ತು ಏಳು ಆತಿಥೇಯ ಸರ್ಕಾರಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.
ಕ್ರಿಕೆಟ್ ವೆಸ್ಟ್ ಇಂಡೀಸ್ (ಸಿಡಬ್ಲ್ಯುಐ) ಈ ಹಿಂದೆ 2007 ರಲ್ಲಿ ಐಸಿಸಿ ಏಕದಿನ ವಿಶ್ವಕಪ್ ಮತ್ತು ನಂತರ 2010 ರಲ್ಲಿ ಟಿ 20 ವಿಶ್ವಕಪ್ ಅನ್ನು ಆಯೋಜಿಸಿತ್ತು. ಸಿಡಬ್ಲ್ಯುಐ ಮುಖ್ಯಸ್ಥ ಜಾನಿ ಗ್ರೇವ್ಸ್ ಅವರು ಮೆಗಾ ಐಸಿಸಿ ಈವೆಂಟ್ ಅನ್ನು ಆಯೋಜಿಸಲು ಮಂಡಳಿಯ ಉತ್ಸಾಹವನ್ನು ಪ್ರಕಟಿಸಿದ್ದಾರೆ ಆಯ್ಕೆಯಾದ ಎಲ್ಲಾ ಏಳು ಸ್ಥಳಗಳು ಮೇಲ್ದರ್ಜೆಗೇರುವ ಅರ್ಹತೆ ಹೊಂದಿವೆ ಎಂದು ಹೇಳಿದರು.
ಇದನ್ನೂ ಓದಿ : World Cup 2023 : ಏಕ ದಿನ ವಿಶ್ವ ಕಪ್ನ ಬಹುಮಾನ ಎಷ್ಟು ಗೊತ್ತೇ? ಇಲ್ಲಿದೆ ಎಲ್ಲ ವಿವರ
ಇತಿಹಾಸದಲ್ಲಿ ಅತಿದೊಡ್ಡ ಐಸಿಸಿ ಟಿ 20 ವಿಶ್ವಕಪ್ ಆತಿಥ್ಯ ವಹಿಸಲು ಕೆರಿಬಿಯನ್ ಸ್ಥಳಗಳನ್ನು ನಾವು ಘೋಷಿಸುತ್ತಿರುವುದರಿಂದ ಇದು ರೋಮಾಂಚನಕಾರಿ ಕ್ಷಣ. ಮುಂದಿನ ವರ್ಷ ಜೂನ್ನಲ್ಲಿ 20 ತಂಡಗಳು 55 ಪಂದ್ಯಗಳಲ್ಲಿ ಆಡಲಿವೆ. ಒಂದು ತಲೆಮಾರುಗಳಿಂದ ವೆಸ್ಟ್ ಇಂಡೀಸ್ ನಲ್ಲಿ ನಡೆಯುವ ಅತ್ಯಂತ ಮಹತ್ವದ ಕ್ರೀಡಾಕೂಟವನ್ನು ಆಯೋಜಿಸಲು ಅನುವು ಮಾಡಿಕೊಟ್ಟ ವೆಸ್ಟ್ ಇಂಡೀಸ್ ನ ಸರ್ಕಾರಗಳಿಗೆ ನಾವು ಕೃತಜ್ಞರಾಗಿದ್ದೇವೆ. ಏಳು ಆತಿಥೇಯ ಸರ್ಕಾರಗಳು ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಥಳಗಳು ಮತ್ತು ಅಭ್ಯಾಸ ಸೌಲಭ್ಯಗಳನ್ನು ನವೀಕರಿಸಲು ಬದ್ಧವಾಗಿವೆ. ವೆಸ್ಟ್ ಇಂಡೀಸ್ ಕ್ರಿಕೆಟ್ ಹೆಮ್ಮೆಯ ಪರಂಪರೆಯನ್ನು ಬೆಂಬಲಿಸುವುದನ್ನು ಮತ್ತು ಸಂರಕ್ಷಿಸುವುದನ್ನು ಮುಂದುವರಿಸಿವೆ” ಎಂದು ಜಾನಿ ಗ್ರೇವ್ಸ್ ಹೇಳಿಕೊಂಡಿದ್ದಾರೆ.
-
ಪ್ರಮುಖ ಸುದ್ದಿ12 hours ago
Lina Mukherjee: ಇಸ್ಲಾಮಿಕ್ ದೇಶದಲ್ಲಿ ಹಂದಿ ಮಾಂಸ ತಿಂದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ!
-
ಪ್ರಮುಖ ಸುದ್ದಿ3 hours ago
Ipsos poll Survey: ಟ್ರುಡೋ ಜನಪ್ರಿಯತೆ ಕುಸಿತ, ಕೆನಡಾ ಪಿಎಂ ಆಗಲು ಪ್ರತಿಪಕ್ಷ ನಾಯಕನೇ ಬೆಸ್ಟ್!
-
ಉಡುಪಿ9 hours ago
FB Profile Deleted: 20ಕ್ಕೂ ಅಧಿಕ ಹಿಂದು ಜಾಗರಣ ವೇದಿಕೆ ನಾಯಕರ ಫೇಸ್ ಬುಕ್ ಪ್ರೊಫೈಲ್ ಏಕಕಾಲದಲ್ಲಿ ಡಿಲೀಟ್!
-
ಸುವಚನ17 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕಲೆ/ಸಾಹಿತ್ಯ22 hours ago
Painting: ಕೇವಲ 328 ರೂ.ಗೆ ಖರೀದಿಸಿದ ಪೇಂಟಿಂಗ್ 1.5 ಕೋಟಿ ರೂಪಾಯಿಗೆ ಹರಾಜು!
-
ಕರ್ನಾಟಕ22 hours ago
Honey Bee Attack: ಶವ ಸಂಸ್ಕಾರಕ್ಕೆಂದು ಹೋದವರ ಮೇಲೆ ಹೆಜ್ಜೇನು ದಾಳಿ; 10 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
-
ಆರೋಗ್ಯ15 hours ago
Health Tips: ಎಳನೀರು ಒಳ್ಳೆಯದೆಂದು ಕುಡಿಯುವ ಮೊದಲು ಅದರ ಅವಗುಣಗಳೂ ಗೊತ್ತಿರಲಿ!
-
ಗ್ಯಾಜೆಟ್ಸ್6 hours ago
YouTube: ಯುಟ್ಯೂಬ್ ವಿಡಿಯೋ ಮಾಡುವುದು ಇನ್ನೂ ಸುಲಭ! ಹೊಸ ಎಡಿಟಿಂಗ್ ಆ್ಯಪ್ ಲಾಂಚ್