Site icon Vistara News

Dina Bhavishya : ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ

Dina bhavishya

ಚಂದ್ರನು ಮೀನ ರಾಶಿಯಿಂದ ಬುಧವಾರ ಮೇಷ ರಾಶಿಯನ್ನು ಬೆಳಗ್ಗೆ 05:24 ಕ್ಕೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ ಇದೆ. ಹಣಕಾಸು ಪ್ರಗತಿಯಲ್ಲಿ ಸಾಧಾರಣವಾಗಿರಲಿದೆ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷವಾಗಿರಲಿದೆ. ಆರೋಗ್ಯದಲ್ಲಿ ಉತ್ತಮವಾಗಿರಲಿದೆ. ಮಿಥುನ ರಾಶಿಯವರು ಜೀವನದಲ್ಲಿ ಅಭದ್ರತೆ ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ.ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ.ಕಛೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (18-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ.
ತಿಥಿ: ಹುಣ್ಣಿಮೆ 08:03 ವಾರ: ಬುಧವಾರ
ನಕ್ಷತ್ರ: ಪೂರ್ವ ಭಾದ್ರಪದ 10:59 ಯೋಗ: ಗಂಡ 23:27
ಕರಣ: ಭವ 08:03 / ಬಾಲವ 18:11 ಅಮೃತಕಾಲ: ಬೆಳಗಿನ ಜಾವ 03:51 ರಿಂದ 05:15
ದಿನದ ವಿಶೇಷ: ಮಹಾಲಯ ಪಿತೃ ಪಕ್ಷಾರಂಭ, ಅನಂತನ ಹುಣ್ಣಿಮೆ, ಚಾತುರ್ಮಾಸ್ಯ ವ್ರತ ಸಮಾಪ್ತಿ

ಸೂರ್ಯೋದಯ : 06:09   ಸೂರ್ಯಾಸ್ತ : 06:19

ರಾಹುಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ ಇದೆ. ಹಣಕಾಸು ಪ್ರಗತಿಯಲ್ಲಿ ಸಾಧಾರಣವಾಗಿರಲಿದೆ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷವಾಗಿರಲಿದೆ. ಆರೋಗ್ಯದಲ್ಲಿ ಉತ್ತಮವಾಗಿರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

ವೃಷಭ: ಶಾಂತ ಮನಸ್ಥಿತಿ ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗುವುದು. ದಿನದ ಮಟ್ಟಿಗೆ ಖರ್ಚು ಹೆಚ್ಚು. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ .ವ್ಯಾಪರ ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ.ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುವುದು.ಕೌಟುಂಬಿಕವಾಗಿ ಮಿಶ್ರ ಫಲ.ಅದೃಷ್ಟ ಸಂಖ್ಯೆ: 2

ಮಿಥುನ: ಜೀವನದಲ್ಲಿ ಅಭದ್ರತೆ ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ.ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ.ಕಛೇರಿ ಕೆಲಸಗಳು ನಿಧಾನವಾಗಿ ಸಾಗುವುದು.ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

ಕಟಕ: ಬಿಡುವಿಲ್ಲದ ಕೆಲಸದಿಂದ ಆಯಾಸ.ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನ.ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ.ಸ್ವಲ್ಪ ಖರ್ಚಿನ ದಿನ.ಬಹುದಿನಗಳ ಕನಸು ನನಸಾಗುವ ಸಮಯ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

ಸಿಂಹ: ಆಪ್ತರು ನಿಮ್ಮ ತಾಳ್ಮೆ ಪರಿಕ್ಷಿಸುವವರು.ಯಾವುದೇ ವಿಷಯಗಳಲ್ಲಿ ದೃಢ ನಿರ್ಧಾರ,ರಾಜಿಯಾಗದ ಗುಣ.ಹಣಕಾಸು ವ್ಯವಹಾರದಲ್ಲಿ ಪ್ರಗತಿ.ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನೋ ಒತ್ತಡ.ಉದ್ಯೋಗ ಆರೋಗ್ಯದಲ್ಲಿ ಉತ್ತಮ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಕನ್ಯಾ: ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುವಿರಿ.ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ.ಹಣಕಾಸು ಪ್ರಗತಿ ಸಾಧಾರಣ.ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆರೋಗ್ಯ ಉತ್ತಮ.ಅನಿವಾರ್ಯ ಕಾರಣಗಳಿಂದ ಖರ್ಚು ಸಾಧ್ಯತೆ.ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ.ನಿಮ್ಮ ಹಿಂದೆ ಪೀತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

ವೃಶ್ಚಿಕ: ಆಹಾರದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ. ಆಪ್ತರೊಂದಿಗಿನ ಮಾತುಕತೆಯಲ್ಲಿ ವ್ಯತಿರಿಕ್ತವಾದ ಪರಿಣಾಮದಿಂದಾಗಿ ಜಗಳವಾಗುವ ಸಾಧ್ಯತೆ, ಆದಷ್ಟು ಮಾತು ನಿಯಂತ್ರಣದಲ್ಲಿರಲಿ.ಇದರ ಮಧ್ಯೆ ಉದ್ಯೋಗದ ಸ್ಥಳದಲ್ಲಿ ಕೌಶಲ್ಯದ ಕೆಲಸ ನಿಮಗೆ ಯಶಸ್ಸು ತಂದು ಕೊಡುವುದು.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

ಧನಸ್ಸು: ಅತಿಯಾದ ಒತ್ತಡದ ಕಾರ್ಯ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ.ಆಪ್ತರೊಂದಿಗೆ ಪ್ರಯಾಣ ಮಾಡುವ ವಿಚಾರ.ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

ಮಕರ: ನಿಸ್ಪೃಹ ಮನೋಭಾವದಿಂದ ಕಾರ್ಯ ಸಿದ್ಧಿ ಮಾಡುವುದು.ಈ ಹಿಂದೆ ಮಾಡಿದ ಹೊಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚು.ಅನಗತ್ಯವಾಗಿ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ಕುಂಭ: ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅಗತ್ಯ.ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ವ್ಯಾಪಾರದಲ್ಲಿ ಪ್ರಗತಿ.ಹೊಸದಾಗಿ ಕಾರ್ಯ ಪ್ರಾರಂಭಿಸುವುದು ದಿನದ ಮಟ್ಟಿಗೆ ಬೇಡ.ಜೀವನದ ಭವಿಷ್ಯದ ಬಗೆಗೆ ಅತಿಯಾಗಿ ಚಿಂತಿಸಿ ಮನಸ್ಥಿತಿಯನ್ನು ಹಾಳು ಮಾಡಿಕೊಳ್ಳುವುದು ಬೇಡ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

ಮೀನ: ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯದಿಂದ ಮಾನಸಿಕ ಅಸಮತೋಲನ.ನಡೆದು ಹೋದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ.ಉದ್ಯೋಗಿಗಳಿಗೆ ಸಾಧಾರಣ ಫಲ.ಕೌಟಂಬಿಕ ವ್ಯಾಜ್ಯಗಳು ಹುಟ್ಟುವ ಸಾಧ್ಯತೆ.ಕೌಟಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version