Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌! Vistara News
Connect with us

ಪ್ರಮುಖ ಸುದ್ದಿ

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ವೃಶ್ಚಿಕ ರಾಶಿಯಿಂದ ಬುಧವಾರ ಬೆಳಗ್ಗೆ 10:06ಕ್ಕೆ ಧನಸ್ಸು ರಾಶಿಗೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಗೆ ಗಮನ ಹರಿಸುವಿರಿ. ವೃಷಭ ರಾಶಿಯವರಿಗೆ ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ಇರಲಿ. ಕಟಕ ರಾಶಿಯವರಿಗೆ ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (20-09-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ
ತಿಥಿ:
ಪಂಚಮಿ 14:15 ವಾರ: ಬುಧವಾರ
ನಕ್ಷತ್ರ: ವಿಶಾಖಾ 14:57 ಯೋಗ: ವಿಷ್ಕುಂಭ 27:03
ಕರಣ: ಬಾಲವ 14:15 ಅಮೃತಕಾಲ: ಮುಂಜಾನೆ 04:55 ಯಿಂದ 06:34ವರೆಗೆ

ಸೂರ್ಯೋದಯ : 06:14  ಸೂರ್ಯಾಸ್ತ : 06:45

ರಾಹುಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ:
ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಗೆ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬದಲ್ಲಿ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತೀರ್ಮಾನಗಳು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜನೆ ಮಾಡುವಿರಿ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಪರಿಪೂರ್ಣ ಆರೋಗ್ಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದ್ದು, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ ಆಗಲಿದೆ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ತರಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ. ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸುವುದು. ಆದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು, ಇದರ ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

1 ರಿಂದ 15 ನೇ ತಾರೀಖಿನ ಒಳಗೆ ಹುಟ್ಟಿದ್ದರೆ ಇದನ್ನು ತಪ್ಪದೇ ತಿನ್ನಿರಿ

Horoscope Today

ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಆಗುವ ಸಾಧ್ಯತೆ ಇದೆ. ಅತಿರೇಕವಾಗಿ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ನಿಮ್ಮ ಸಹಾಯ ಮಾಡುವ ಗುಣ,ಇತರರಿಂದ ಪ್ರಶಂಸೆ ಸಿಗಲಿದೆ.ವ್ಯಾಪರ ವ್ಯವಹಾರದಲ್ಲಿ ಪ್ರಗತಿ.ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ಆರೋಗ್ಯ ಉತ್ತಮ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?

Horoscope Today

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?

Weather Update: ಜೂನ್ 1ರಿಂದ ಆರಂಭವಾಗುವ ಮುಂಗಾರು, ಸಾಮಾನ್ಯವಾಗಿ ಸೆಪ್ಟೆಂಬರ್ 17ರಿಂದ ಕ್ಷೀಣಿಸಲಾರಂಭಿಸುತ್ತದೆ. ಆದರೆ, ಬಾರಿ ಸೆಪ್ಟೆಂಬರ್ 25ರಿಂದ ಮಳೆ ಹಿಂತೆಗೆಯುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

VISTARANEWS.COM


on

Edited by

Weather Update and Monsoon starts withdrawing from India
Koo

ನವದೆಹಲಿ: ವಾಡಿಕೆಗಿಂತ ಎಂಟು ದಿನಗಳಷ್ಟು ತಡವಾಗಿ ಭಾರತದಲ್ಲಿ (India) ಮುಂಗಾರು ಕ್ಷೀಣಿಸುತ್ತಿದೆ (Monsoon Withdrawing) ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ಸೋಮವಾರ ಹೇಳಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ವಾಡಿಕೆಯಂತೆ ಸೆಪ್ಟೆಂಬರ್ 17ರಿಂದಲೇ ಮುಂಗಾರು ದುರ್ಬಲವಾಗಬೇಕಿತ್ತು. ಆದರೆ, ಸೆಪ್ಟೆಂಬರ್ 25ರಿಂದ ಮುಂಗಾರು ಕ್ಷೀಣವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ(Weather Update).

ನೈಋತ್ಯ ರಾಜಸ್ಥಾನದ ಭಾಗಗಳಿಂದ ನೈಋತ್ಯ ಮಾನ್ಸೂನ್ ಸೆಪ್ಟೆಂಬರ್ 25ರಿಂದಲೇ ಕ್ಷೀಣಿಸಲಾರಂಭಿಸಿದೆ. ರಾಜಸ್ಥಾನದಲ್ಲಿ ಸಾಮಾನ್ಯವವಾಗಿ ಸೆಪ್ಟೆಂಬರ್ 17ರಿಂದಲೇ ಮುಂಗಾರು ಹಿಂತೆಗೆಯಲಾರಂಭಿಸುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ವಾಯುವ್ಯ ಭಾರತದಲ್ಲಿ ಮುಂಗಾರು ಕ್ಷೀಣವಾಗಲಾರಂಭಿಸಿದರೆ ಭಾರತದಲ್ಲಿ ಒಟ್ಟಾರೆ ಮಳೆಗಾಲ ಅಂತ್ಯವಾಗುವ ಕಾಲ ಸನ್ನಿಹಿತವಾದಂತೆಯೇ ಎನ್ನಲಾಗುತ್ತದೆ. ಪ್ರಸಕ್ತ ಮುಂಗಾರಿನಲ್ಲಿ ಭಾರತದಲ್ಲಿ 780.3 ಮಿಲಿ ಮೀಟರ್ ಮಳೆಯಾಗಿದೆ. ಆದರೆ, ವಾಡಿಕೆಯಂತೆ 832.4 ಮಿಲಿ ಮೀಟರ್ ಮಳೆಯಾಗಬೇಕಿತ್ತು. ಅಂದರೆ, ಈ ವರ್ಷ ಮಳೆ ಕೊರತೆಯಾಗಿದೆ.

ವಾಯುವ್ಯ ಭಾರತದಿಂದ ಮಾನ್ಸೂನ್ ಹಿಂದೆ ಸರಿಯುವ ಪ್ರಕ್ರಿಯೆಯು ಭಾರತೀಯ ಉಪಖಂಡದಿಂದ ಮಳೆಗಾಲ ಅಂತ್ಯವಾಗುವುದನ್ನು ಸೂಚಿಸುತ್ತದೆ. ಮಾನ್ಸೂನ್ ಹಿಂದೆ ಸರಿಯುವುದು ಯಾವುದೇ ವಿಳಂಬವು ದೀರ್ಘವಾದ ಮಳೆಗಾಲವನ್ನು ಅರ್ಥೈಸುತ್ತದೆ. ಇದು ಕೃಷಿ ಉತ್ಪಾದನೆಯ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಲಿದೆ. ವಿಶೇಷವಾಗಿ ವಾಯುವ್ಯ ಭಾರತದಲ್ಲಿ ಮಾನ್ಸೂನ್ ಮಳೆಯು ರಾಬಿ ಬೆಳೆ ಉತ್ಪಾದನೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.

ಈ ಸುದ್ದಿಯನ್ನೂ ಓದಿ: Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಭಾರತದಲ್ಲಿ ಮುಂಗಾರು ಮಳೆಯ ಜೂನ್ 1ರಂದು ಕೇರಳದ ಮೂಲಕ ಪ್ರವೇಶಿಸುತ್ತದೆ. ಜುಲೈ 8ರ ವೇಳೆಗೆ ಇಡೀ ದೇಶವನ್ನು ಮುಂಗಾರು ಆವರಿಸುತ್ತದೆ. ಸೆಪ್ಟೆಂಬರ್ 17ರ ಹೊತ್ತಿಗೆ ಕ್ಷೀಣವಾಗಲಾರಂಭಿಸುತ್ತದೆ. ಅಕ್ಟೋಬರ್ 15ರ ವೇಳೆ ಮಾನ್ಸೂನ್ ಸಂಪೂರ್ಣವಾಗಿ ದೇಶದಿಂದ ಮಾಯವಾಗುತ್ತದೆ ಎಂದು ಭಾರತೀಯ ಹವಮಾನ ಇಲಾಖೆ ತಿಳಿಸಿದೆ.

ಮುಂಗಾರಿನಲ್ಲಿ ಭಾರತವು ಇಲ್ಲಿಯವರೆಗೆ 796.4 ಮಿಮೀ ಮಳೆಯನ್ನು ಪಡೆದಿದೆ. ಇದು, ವಾಡಿಕೆ ಮಳೆ 843.2 ಮಿಮೀಗೆ ಹೋಲಿಸಿದರೆ, ಶೇ.6ರಷ್ಟು ಕೊರತೆಯಾಗಿದೆ. ಸಾಮಾನ್ಯವಾಗಿ, ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ನಾಲ್ಕು ತಿಂಗಳ ಅವಧಿಯಲ್ಲಿ ದೇಶವು ಸರಾಸರಿ 870 ಮಿಮೀ ಮಳೆಯನ್ನು ಪಡೆಯುತ್ತದೆ. ಆದರೆ, ಪ್ರಸಕ್ತ ಮಳೆಗಾಲದಲ್ಲಿ ಕೊರತೆ ಎದುರಾಗಿದ್ದು, ಬರಗಾಲದ ಛಾಯೆ ಆವರಿಸಿದೆ. ಈಗಾಗಲೇ, ಕರ್ನಾಟಕದಲ್ಲಿ ಬರಗಾಲಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ಕರ್ನಾಟಕ

Cauvery water dispute : ಕಾವೇರಿ ವಿಷಯದಲ್ಲಿ ಪ್ರಧಾನಿ ಮಧ್ಯ ಪ್ರವೇಶಕ್ಕೆ ಸಲಹೆ ಮಾಡಿದ್ದೆ: ಸರ್ಕಾರ ಕೇಳಲಿಲ್ಲವೆಂದ ಎಚ್‌ಡಿಕೆ

Cauvery water dispute : ಕಾವೇರಿ ನೀರು ಬಿಟ್ಟ ಮೊದಲ ದಿನವೇ ಪ್ರಧಾನಿಗಳ ಮಧ್ಯ ಪ್ರವೇಶಕ್ಕೆ ಸಲಹೆ ಮಾಡಿದ್ದೆ: ಸರಕಾರ ನನ್ನ ಮಾತು ಕೇಳಲಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್.ಡಿ.‌ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಸಂಸದ ಬಸವರಾಜ್ ಹಾಗೂ ಸಚಿವ ಕೆ.ಎನ್.‌ ರಾಜಣ್ಣ ವಿರುದ್ಧವೂ ಕಿಡಿಕಾರಿದ್ದಾರೆ.

VISTARANEWS.COM


on

Edited by

HD Kumaraswamy infront of KRS Dam
Koo

ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ (Cauvery water dispute) ಸಂಬಂಧಪಟ್ಟಂತೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಹಾಗೂ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಸೂಚನೆ ನೀಡಿದ ದಿನವೇ ನಾನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮಧ್ಯ ಪ್ರವೇಶ ಮಾಡಬೇಕು ಎಂದು ನಾನು ಹೇಳಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (Former Chief Minister HD Kumaraswamy) ಅವರು ಹೇಳಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಈಗಲೂ ಪ್ರಧಾನಮಂತ್ರಿಗಳಿಗೆ ಮಧ್ಯಪ್ರವೇಶ ಮಾಡುವಂತೆ ನಾನು ಒತ್ತಾಯ ಮಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: Congress Politics : ಕೆ.ಎನ್‌. ರಾಜಣ್ಣಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಸುರ್ಜೇವಾಲ!

ನೀರು ಬಿಡಬೇಡಿ ಅಂತ ಮೊದಲ ದಿನವೇ ನಾನು ಹೇಳಿದ್ದೆ. ಸುಪ್ರೀಂ ಕೋರ್ಟಿಗೆ (Supreme Court) ತಮಿಳುನಾಡಿನವರು ಅರ್ಜಿ ಹಾಕಿದ್ದಾರೆ. ನಮ್ಮ ರಾಜ್ಯದಿಂದ ಕೂಡ ಅರ್ಜಿ ಹಾಕಿ. ಅಲ್ಲಿವರೆಗೂ ನೀರು ಬಿಡಬೇಡಿ ಎಂದು ಹೇಳಿದ್ದೆ. ನನ್ನ ಒತ್ತಡಕ್ಕೆ ಸರ್ವಪಕ್ಷ ಸಭೆ (All party meeting) ಕೂಡ ಕರೆದಿದ್ದರು ಎಂದು ರಾಜ್ಯ ಸರ್ಕಾರದ ಮೇಲೆ ಕುಮಾರಸ್ವಾಮಿ ಆರೋಪ ಮಾಡಿದರು.

ಸಚಿವರು ಹೋಗಿ ಏನು ಮಾತನಾಡಿಕೊಂಡು ಬಂದರು?

ಕುಮಾರಸ್ವಾಮಿ ಅವರು ಅಮಿತ್ ಶಾ (Amit Shah) ಅವರ ಜತೆ ಮಾತಾಡಿಕೊಂಡು‌ ಬಂದಿದ್ದಾರೆ. ಅಲ್ಲೇ ಕಾವೇರಿ ವಿಚಾರವಾಗಿ ಮಾತಾಡಬೇಕಿತ್ತು ಎಂದು ಸಚಿವರೊಬ್ಬರ ಹೇಳಿಕೆಯ ಬಗ್ಗೆ ಕಿಡಿಕಾರಿದ ಅವರು, ಅವರು ಮೊದಲೇ ಹೇಳಿದ್ದರೆ ಮಾತಾಡಿಕೊಂಡು ಬರುತ್ತಿದ್ದೆ. ಅವರೂ ಹೋಗಿ ಕೇಂದ್ರ ಮಂತ್ರಿಗಳನ್ನು ಭೇಟಿ ಮಾಡಿಕೊಂಡು ಬಂದರಲ್ಲ, ಏನು ಮಾತಾಡಿಕೊಂಡು ಬಂದಿದ್ದಾರೆ ಎಂದು ತಿರುಗೇಟು ನೀಡಿದರು.

ಎಚ್‌.ಡಿ. ದೇವೇಗೌಡರ ಬದ್ಧತೆ ಇವರಿಗೆ ಇದೆಯಾ?

ಸುಪ್ರೀಂ ಕೋರ್ಟ್ ಮುಂದೆ ಈ ಸರ್ಕಾರ ಏನು ವಾಸ್ತವಾಂಶ ಇಟ್ಟಿದೆ ಎಂದು ಹೇಳಲಿ. ‌ಎಚ್‌.ಡಿ. ದೇವೇಗೌಡರ (HD DeveGowda) ಬದ್ಧತೆ ಇವರಿಗೆ ಇದೆಯಾ? ಇವರಿಂದ ಕಲೀಬೇಕಾ? ಎಂದು ಖಾರವಾಗಿ ಪ್ರಶ್ನಿಸಿದ ಎಚ್.ಡಿ. ಕುಮಾರಸ್ವಾಮಿ, ಹಿಂದೆ ಇದೇ ಸಿದ್ದರಾಮಯ್ಯ ಸರಕಾರ ಇದ್ದಾಗ ಕಾವೇರಿ ವಿಚಾರದಲ್ಲಿ ಇದೇ ಸ್ಥಿತಿ ಬಂದಾಗ ದೇವೇಗೌಡರ ಮನೆಗೆ ಓಡಿ ಬಂದಿದ್ದರಲ್ಲ. ಆಗ ದೇವೇಗೌಡರು ಗಾಂಧಿ ಪ್ರತಿಮೆ ಬಳಿ ಧರಣಿ ಕೂತರು. ಆಗ ಕೇಂದ್ರ ಸಚಿವರು ಓಡಿ ಬಂದರು. ಅದೆಲ್ಲಾ ಇವರಿಗೆ ಮರೆತುಹೋಗಿರಬೇಕು. ಇವರಿಂದ ನಾವು ಕಲೀಬೇಕಿಲ್ಲ ಎಂದು ಅವರು ಚಾಟಿ ಬೀಸಿದರು.

ಸುಪ್ರೀಂ ಕೋರ್ಟ್ ಮುಂದೆ ತಮಿಳುನಾಡು ಅರ್ಜಿ ಹಾಕಿಕೊಂಡಿದೆ. ನಾವೂ ಅರ್ಜಿ ಹಾಕಿಕೊಂಡಿದ್ದರೆ ಅಲ್ಲಿಯವರೆಗೂ ನೀರು ಉಳಿಯುತ್ತಿತ್ತು. ಅಷ್ಟು ಸಾಮಾನ್ಯ ತಿಳಿವಳಿಕೆಯೂ ಈ ಸರ್ಕಾರಕ್ಕೆ ಇಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು.

ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಸಭೆಗೆ ತಮಿಳುನಾಡು ಅಧಿಕಾರಿಗಳು ಖುದ್ದು ಹಾಜರಾಗುತ್ತಾರೆ. ನಮ್ಮ ಅಧಿಕಾರಿಗಳು ವರ್ಚುವಲ್ ಮೂಲಕ ಭಾಗವಹಿಸುತ್ತಾರೆ. ಹೀಗಿದ್ದಾಗ ಪ್ರಾಧಿಕಾರದ ಮುಂದೆ ಇವರು ಏನು ವಾಸ್ತವಾಂಶ ಇಡಲು ಸಾಧ್ಯ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಸಂಸದ ಬಸವರಾಜ್, ರಾಜಣ್ಣ ವಿರುದ್ಧ ಎಚ್ಡಿಕೆ ಕಿಡಿ

ತುಮಕೂರು ಜಿಲ್ಲೆಯ ಜನರು ಎಚ್.ಡಿ. ದೇವೇಗೌಡರಿಗೆ ಮತ ಹಾಕಬಾರದು ಎಂದು ಹೇಳಿಕೆ ನೀಡಿರುವ ಸಂಸದ ಜಿ.ಎಸ್. ಬಸವರಾಜು ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹರಿಹಾಯ್ದರು.

ಅದ್ಯಾರೋ ಎಂಪಿ ಬಸವರಾಜ್ ಎಂಬ ವ್ಯಕ್ತಿಯ ಹೇಳಿಕೆ ಗಮನಿಸಿದೆ. ಆ ಜಿಲ್ಲೆಗೆ ಈ ವ್ಯಕ್ತಿಯ ಕೊಡುಗೆ ಏನು? ಈತನ ದರ್ಪದ ಹೇಳಿಕೆಯನ್ನು ಗಮನಿಸಿದ್ದೇನೆ. ಮತ್ತೆ ತುಮಕೂರಿನಲ್ಲಿ ದೇವೇಗೌಡರು ಸೋಲಿಸಬೇಕು ಅಂದಿದ್ದಾರೆ. ದೇವೇಗೌಡರು ಆ ಜಿಲ್ಲೆಗೆ ಏನೂ ಮಾಡಿಲ್ಲವಾದರೆ, ಈಗ ನೀನೇ ಎಂಪಿ ಆಗಿದೀಯಲ್ಲಪ್ಪಾ? ಏನು ಮಾಡಿದೀಯಪ್ಪಾ ಜಿಲ್ಲೆಗೆ ಎಂದು ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: CM Siddaramaiah : 2ನೇ ಅವಧಿಗೆ ಚಾಮರಾಜನಗರಕ್ಕೆ ಸಿಎಂ ಭೇಟಿ; ಮೌಢ್ಯಕ್ಕೆ ಸೆಡ್ಡು ಹೊಡೆದ ಸಿದ್ದರಾಮಯ್ಯ

ದೇವೇಗೌಡ ಹೆಸರು ಹೇಳಿ ರಾಜಕೀಯಕ್ಕೆ ಬಂದವರು

ಈ ಸರ್ಕಾರದ ಸಹಕಾರ ಸಚಿವ ಕೆ.ಎನ್.‌ ರಾಜಣ್ಣ, ದೇವೇಗೌಡರು ಚುನಾವಣೆಗೆ ನಿಲ್ಲಬೇಕು, ನಾವು ಋಣ ತೀರಿಸಬೇಕು ಅಂತ ವ್ಯಂಗ್ಯವಾಗಿ ಹೇಳಿದ್ದಾರೆ. ಕಳೆದ ಚುನಾವಣೆಯಲ್ಲಿ ನೀವು ಋಣ ತೀರಿಸಿದ್ದು ನೋಡಿದ್ದೇವೆ. ಇವರೆಲ್ಲ ದೇವೇಗೌಡರ ಹೆಸರು ಹೇಳಿಕೊಂಡು ರಾಜಕೀಯಕ್ಕೆ ಬಂದವರು. ಈ ಹಿಂದೆ ದೇವೇಗೌಡರು ಹುಷಾರಿಲ್ಲದಿದ್ದರೂ ಹೋಗಿ ಇವರ ಪರ ಪ್ರಚಾರ ಮಾಡಿದ್ದಕ್ಕೆ ಇವರು ಗೆದ್ದಿದ್ದು. ಆಗ ಕೇವಲ 700 ಮತಗಳ ಅಂತರದಿಂದ ಗೆದಿದ್ದನ್ನು ಮರೆತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

Continue Reading

ಕರ್ನಾಟಕ

Janata Darshana: ಏಕಕಾಲದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜನತಾ ದರ್ಶನ: ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ ಚಿಂತನೆ

Janata Darshana: ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಮತ್ತು ಎಸ್‌ಪಿಗಳು ಜನತಾ ದರ್ಶನದ ಮೂಲಕ ಜನರ ಅಹವಾಲು ಕೇಳಬೇಕು ಎಂಬ ಸಿದ್ದರಾಮಯ್ಯ ಸೂಚನೆಗೆ ಅತ್ಯುತ್ತಮ ಫಲಿತಾಂಶ ದೊರೆತಿದೆ.

VISTARANEWS.COM


on

Edited by

DK Shivakumar Janata Darshan at Anekal
ಬೆಂಗಳೂರಿನ ಆನೆಕಲ್‌ನಲ್ಲಿ ನಡೆದ ಜನತಾದರ್ಶನಕ್ಕೆ ಆಗಮಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಸ್ವಾಗತ
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaih) ಅವರ ಸೂಚನೆಯಂತೆ ಇದೇ ಮೊಟ್ಟ ಮೊದಲ ಬಾರಿಗೆ ರಾಜ್ಯಾದ್ಯಂತ ಏಕ‌ಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ (Janata Darshana) ಕಾರ್ಯಕ್ರಮ ನಡೆದಿದ್ದು, ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದೆ. ಗದಗ ಮತ್ತು ಬೆಳಗಾವಿ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ಜನತಾ ದರ್ಶನ ನಡೆದಿದೆ.

ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6663 ಅರ್ಜಿ, ಅಹವಾಲುಗಳು ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನೆಯಾಗಿವೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ.

ಜನತಾ ದರ್ಶನ ಕಲ್ಪನೆ ಹುಟ್ಟಿದ್ದು ಹೇಗೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಡಿಪಿ ಸಭೆಗಳನ್ನು ಅತ್ಯಂತ ಗಂಭೀರವಾಗ ನಡೆಸುತ್ತಿದ್ದಾರೆ. ಅವರು ಜಿಲ್ಲೆಗಳಿಗೆ ಭೇಟಿ ನೀಡುವಾಗ ಹಲವಾರು ಮಂದಿ ಅವರ ಮುಂದೆ ಅಹವಾಲು ಹೇಳಿಕೊಳ್ಳಲು ಬರುತ್ತಿದ್ದಾರೆ. ಇದನ್ನು ಗಮನಿಸಿದ ಅವರು ಸಿಎಂ ಬಂದಾಗ ಜನರ ದೂರು ನೀಡಲು ಬರುತ್ತಾರೆ ಎಂದರೆ ಅವರಿಗೆ ಹೇಳಿಕೊಳ್ಳಲು ಇದೆ ಎಂದಾಯಿತು. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲೂ ಜನತಾ ದರ್ಶನ ನಡೆಸಬೇಕು ಎಂಬ ಸೂಚನೆಯನ್ನು ನೀಡಿದರು. ಇತ್ತೀಚೆಗೆ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳ ಮೀಟಿಂಗ್‌ನಲ್ಲಿ ಈ ಸೂಚನೆ ನೀಡಲಾಗಿತ್ತು.

ಕಂದಾಯ ಇಲಾಖೆಯ ಅಹವಾಲುಗಳದೇ ಸಿಂಹಪಾಲು

ಸ್ವೀಕರಿಸಲಾಗಿರುವ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು ಆಗಿವೆ. ಸಂಜೆ 6:30 ಗಂಟೆವರೆಗೆ ಸಿಕ್ಕಿರುವ ಅಂಕಿ ಅಂಶಗಳ ಪ್ರಕಾರ 2100 ಕ್ಕೂ ಹೆಚ್ಚು ಅಹವಾಲುಗಳು ಕಂದಾಯ ಇಲಾಖೆಗೆ ಸೇರಿದ್ದಾಗಿವೆ. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ ಅಹವಾಲುಗಳಿವೆ. ಸಾವಿರಕ್ಕೂ ಅಧಿಕ ಅಹವಾಲುಗಳು ಈ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಮೂರನೇ ಅತಿ ಹೆಚ್ಚು ಅಹವಾಲುಗಳು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ್ದಾಗಿವೆ.

ಜಿಪಂ ಸಿಇಒಗಳ ಮುಂದೆ ಹೆಚ್ಚು ದೂರು, ಎಸ್‌ಪಿಗಳ ಮುಂದೆ ಕಡಿಮೆ ದೂರು

ಜಿಲ್ಲಾಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಎದುರಿಗೆ ಅತಿ ಹೆಚ್ಚು ಸಮಸ್ಯೆಗಳು ಮತ್ತು ಅಹವಾಲುಗಳು ಸಲ್ಲಿಕೆಯಾಗಿವೆ. ಉಳಿದಂತೆ ಜಿಲ್ಲಾಧಿಕಾರಿಗಳ ಮುಂದೆ ಸಲ್ಲಿಕೆಯಾದವುಗಳಾಗಿವೆ. ಜಿಲ್ಲಾ ರಕ್ಷಣಾಧಿಕಾರಿಗಳ ಎದುರಿಗೆ ಕೆಲವು ಜಿಲ್ಲೆಗಳನ್ನು ಹೊರತು ಪಡಿಸಿದರೆ ಹೆಚ್ಚಿನ‌ ಕಡೆ ಅತಿ ಕಡಿಮೆ ಅಹವಾಲುಗಳು ಸಲ್ಲಿಕೆ ಆಗಿರುವುದು ಆಶ್ಚರ್ಯದ ಜತೆಗೆ ವಿಶ್ಲೇಷಣೆ ಮಾಡಬೇಕಾದ ಸಂಗತಿಯಾಗಿದೆ.

ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಹವಾಲು, ಹಾಸನ ದ್ವಿತೀಯ

ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಹವಾಲುಗಳು ದಾಖಲಾಗಿವೆ. 774 ಅಹವಾಲುಗಳ ಮೂಲಕ ಹಾವೇರಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, 432 ಅಹವಾಲುಗಳ ಮೂಲಕ ಹಾಸನ ಎರಡನೇ ಸ್ಥಾನದಲ್ಲಿ, 423 ಅಹವಾಲುಗಳ ಮೂಲಕ ಕೋಲಾರ ಜಿಲ್ಲೆ ಮೂರನೇ ಸ್ಥಾನದಲ್ಲಿದೆ.

ಒಟ್ಟು ಅರ್ಜಿ ರೂಪದಲ್ಲಿ ಬಂದ ಅಹವಾಲುಗಳನ್ನು ದಾಖಲಿಸಿಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರಕ್ಕೆ ಪ್ರಯತ್ನಿಸುವ ಪ್ರಕ್ರಿಯೆ ಒಂದು ಕಡೆ ನಡೆದಿದೆ. ಮತ್ತೊಂದು ಕಡೆ ಅರ್ಜಿ ಇಲ್ಲದೆ ಮೌಖಿಕವಾಗಿ ಬಂದ ಅಹವಾಲುಗಳನ್ನೂ ದಾಖಲಿಸಿಕೊಳ್ಳುವ ಜತೆಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.

ಮೌಖಿಕ ದೂರುಗಳನ್ನೂ ಬರೆದುಕೊಂಡ ಅಧಿಕಾರಿಗಳು

ಮೌಖಿಕವಾಗಿ ದೂರು ಕೊಡಲು ಬಂದವರನ್ನು ಕುಳ್ಳಿರಿಸಿ ಅಧಿಕಾರಿ ಮತ್ತು ಸಿಬ್ಬಂದಿಯೇ ಅಹವಾಲುಗಳನ್ನು ಬರೆದು, ಬಳಿಕ ಅದನ್ನು ಓದಿ ಹೇಳಿ ಅರ್ಜಿದಾರರಿಂದ ಸಹಿ ಪಡೆದು ದಾಖಲಿಸಿಕೊಳ್ಳುವ ಪ್ರಯತ್ನಗಳೂ ನಡೆದಿವೆ.

ರಾಜ್ಯಾದ್ಯಂತ ಏಕ ಕಾಲಕ್ಕೆ ನಡೆಸಿದ ಜನತಾ ದರ್ಶನ ನಮಗೂ ಮೊದಲ ಅನುಭವ. ನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ರೀತಿಯ ಪ್ರತಿಕ್ರಿಯೆ ಸಾರ್ವಜನಿಕರಿಂದ ಸಿಕ್ಕಿದೆ. ಅಧಿಕಾರಿಗಳ‌ ಸ್ಪಂದನೆ ಕೂಡ ಸಮಾಧಾನಕರವಾಗಿದೆ. ಇವತ್ತಿನ ಅನುಭವದ ಹಿನ್ನೆಲೆಯಲ್ಲಿ ಮುಂದಿನ‌ ಜನತಾ ದರ್ಶನದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಪ್ರಯತ್ನ ಮಾಡುತ್ತೇವೆ ಎನ್ನುವ ಅಭಿಪ್ರಾಯಗಳು ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳಿಂದ ವ್ಯಕ್ತವಾಗಿದೆ.

ಹಿಂದಿನ ಸುದ್ದಿ : Janata Darshan: ಸೆ.25ರಂದು ಎಲ್ಲ ಜಿಲ್ಲೆಗಳಲ್ಲಿ ʼಜನತಾ ದರ್ಶನʼ ನಡೆಸಲು ಸಿಎಂ ಸೂಚನೆ

DK Shivakumar Janata Darshan at Anekal

ಎರಡು ಜಿಲ್ಲೆಗಳಲ್ಲಿ ನಾಳೆ ಜನತಾ ದರ್ಶನ

  1. ಅನಿವಾರ್ಯ ಕಾರಣಗಳಿಂದ ಗದಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಜನತಾ ದರ್ಶನ ನಡೆಯಲಿಲ್ಲ. ಬೆಳಗಾವಿಯಲ್ಲಿ ನಾಳೆ (ಸೆ 26 ರ ಮಂಗಳವಾರ) ನಡೆಯಲಿದೆ.
  2. ಮೈಸೂರು ಜಿಲ್ಲೆಯ ಜನತಾ ದರ್ಶನದಲ್ಲಿನ ಕುಂದುಕೊರತೆ ಮನವಿಗಳನ್ನು IPGRS ನಲ್ಲಿ upload ಮಾಡುವಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ಎಲ್ಲಾ ಅರ್ಜಿಗಳನ್ನು Manually ಸ್ವೀಕರಿಸಲಾಗಿದ್ದು ಬಳಿಕ upload ಮಾಡಲಿದ್ದಾರೆ.
  3. ಹಾವೇರಿ ಜಿಲ್ಲೆಯಲ್ಲಿ ಬೆಳೆ ಹಾನಿ ಪರಿಹಾರದ ಸಂಬಂಧ ಸಾವಿರಾರು ಅರ್ಜಿಗಳು ಬಂದಿವೆ. ಸ್ವೀಕರಿಸುವ ವೇಳೆ ಕೆಲವು ಅನಾನುಕೂಲಗಳು ಸಂಭವಿಸಿದ್ದರಿಂದ ಅವುಗಳನ್ನೂ upload ಮಾಡಲು ಸಾಧ್ಯವಾಗಿಲ್ಲ
  4. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದ ಊಟಕ್ಕೂ ತೆರಳದೆ ಜನತಾ ದರ್ಶನದ ಸ್ಥಳದಲ್ಲೇ ಊಟ ಮಾಡುತ್ತಾ ಸ್ಪಂದಿಸಿದ ಅಧಿಕಾರಿ-ಸಿಬ್ಬಂದಿ.
  5. ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ನಡೆದ ಜನತಾ ದರ್ಶನ. ಎಲ್ಲಾ ಪಕ್ಷದ ಶಾಸಕರು-ಜನಪ್ರತಿನಿಧಿಗಳು ಜನತಾ ದರ್ಶನದಲ್ಲಿ ಭಾಗಿ
Continue Reading

ಪ್ರಮುಖ ಸುದ್ದಿ

Actor Darshan : ನಾವಷ್ಟೇ ಕಾಣ್ಸೋದಾ? ಹೇಳಿಕೆಯಿಂದ ರೈತರ ಕೆಂಗಣ್ಣಿಗೆ ಗುರಿಯಾದ ನಟ ದರ್ಶನ್‌; ಕ್ಷಮೆ ಯಾಚನೆಗೆ ಆಗ್ರಹ

Actor Darshan : ಕಾವೇರಿ ಹೋರಾಟ ಅಂದರೆ ನಾವು ಮಾತ್ರ ಕಾಣ್ಸೋದಾ? ೩೬ ಕೋಟಿ ಮಾಡಿದೋನು ಕಾಣಿಸೊಲ್ವಾ ಎಂಬ ನಟ ದರ್ಶನ್‌ ಹೇಳಿಕೆ ವಿವಾದವಾಗಿದೆ. ರೈತರು ದರ್ಶನ್‌ ಕ್ಷಮೆ ಯಾಚನೆಗೆ ಒತ್ತಾಯಿಸಿದ್ದಾರೆ.

VISTARANEWS.COM


on

Edited by

protest against Actor Darshan
Koo

ಮಂಡ್ಯ: ಕಾವೇರಿ ಹೋರಾಟ (Cauvery protest) ಎಂದ ಕೂಡಲೇ ನಿಮ್ಮ ಕಣ್ಣಿಗೆ ದರ್ಶನ್, ಸುದೀಪ್ , ಶಿವಣ್ಣ, ಯಶ್, ಅಭಿ ಮಾತ್ರ ಕಾಣೋದಾ? ಬೇರೆ ತಮಿಳು ಚಿತ್ರದಲ್ಲಿ ಕೋಟಿ ಕೋಟಿ ಮಾಡಿದವನು ಕಾಣ್ತಿಲ್ವ? ಎಂಬ ನಟ ದರ್ಶನ್‌ (Actor Darshan) ಅವರ ಹೇಳಿಕೆ ಮಂಡ್ಯದ ರೈತರ (Farmers of Mandya) ಕೆಂಗಣ್ಣಿಗೆ ಗುರಿಯಾಗಿದೆ.

ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ (Mandya Jilla raitha hitha rakshana samiti) ಮಂಡ್ಯದಲ್ಲಿ ನಡೆಸುತ್ತಿರುವ ಧರಣಿಯಲ್ಲಿ ದರ್ಶನ್‌ ಅವರ ಹೇಳಿಕೆ ಪ್ರಸ್ತಾಪವಾಗಿದೆ. ಇದೊಂದು ಬೇಜವಾಬ್ದಾರಿತನ ಹೇಳಿಕೆಯಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ಮಾತ್ರವಲ್ಲ, ನಟ ದರ್ಶನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆಯುತ್ತಿರುವ ಹೋರಾಟ ವೇಳೆ ಮಾತನಾಡಿದ ಪ್ರತಿಭಟನಾಕಾರರು, ದರ್ಶನ್‌ ಅವರು ರೀತಿ ಮಾತನಾಡಬಾರದಿತ್ತು. ನಾವು ಒಂದು ತಿಂಗಳಿನಿಂದ ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟಕ್ಕೆ ದರ್ಶನ್ ಬಂದ್ರೆ ಬಲಸಿಗುತ್ತದೆ ಎಂದು ಭಾವಿಸಿದ್ದೆವು. ಆದರೆ, ನೀವು ನಮ್ಮನ್ನೇ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದೀರಿʼʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾವು ಹೋರಾಟಕ್ಕೆ ನೀಡಿದ ಆಮಂತ್ರಣವನ್ನೇ ತಪ್ಪಾಗಿ ಭಾವಿಸಿ ಈ ರೀತಿಯಾಗಿ ಮಾತನಾಡಿದ್ದು ತಪ್ಪು. ಕಾವೇರಿ ಕೊಳ್ಳದ ಜಿಲ್ಲೆಯವರಾಗಿ ಹೋರಾಟಗಾರರ ಬಗ್ಗೆ ಕೇವಲವಾಗಿ ಮಾತನಾಡಬಾರದು ಎಂದು ಹೇಳಿದ ಪ್ರತಿಭಟನಾಕಾರರು, ನಟ ದರ್ಶನ್ ಅವರು ಕೂಡಲೇ ರೈತರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಒಬ್ಬ ಜವಾಬ್ದಾರಿಯುತ ನಟನಾಗಿ ಹೋರಾಟಕ್ಕೆ ದನಿಗೂಡಿಸಿ ಎಂದು ಆಗ್ರಹಿಸಿದರು.

ಏನು ಹೇಳಿದ್ದರು ನಟ ದರ್ಶನ್‌?

ಕಾವೇರಿ ನೀರಿಗಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಚಿತ್ರ ನಟರು ಯಾರೂ ಯಾಕೆ ಭಾಗವಹಿಸುತ್ತಿಲ್ಲ, ಅವರೇಕೆ ಮೌನ ಎಂದು ಕನ್ನಡ ಪರ ಹೋರಾಟಗಾರರು ಪ್ರಶ್ನೆ ಮಾಡಿದ್ದರು. ಈ ಮಾತು ಬರುತ್ತಿದ್ದಂತೆಯೇ ಚಿತ್ರ ನಟರೆಲ್ಲ ಟ್ವೀಟ್‌ ಮಾಡುವ ಮೂಲಕ ಬೆಂಬಲ ಸಾರಿದ್ದರು. ನಟ ದರ್ಶನ್‌ ಕೂಡಾ ತಮ್ಮ ಬೆಂಬಲ ನೀಡಿದ್ದರು.

ಈ ನಡುವೆ ಮೈಸೂರಿನ ಟಿ. ನರಸೀಪುರದ ಬನ್ನೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದು ವಿವಾದಕ್ಕೆ ತಿರುಗಿದೆ. ನನ್ನ ಈ ಮಾತು ವಿವಾದಕ್ಕೆ ಒಳಗಾಗುತ್ತದೆ, ವಿವಾದಾತ್ಮಕ ಮಾತನ್ನೇ ಆಡುತ್ತೇನೆ ಎಂದೇ ಪ್ರಸ್ತಾವಿಸಿ ಈ ಮಾತುಗಳನ್ನು ಹೇಳಿದ್ದರು.

ಇದನ್ನೂ ಓದಿ: Actor Darshan : ಕಾವೇರಿ ಹೋರಾಟಕ್ಕೆ ನಾನು, ಸುದೀಪ್‌, ಶಿವಣ್ಣ, ಯಶ್ ಮಾತ್ರಾ ಕಾಣ್ಸೋದಾ?; ನಟ ದರ್ಶನ್‌ ಆಕ್ರೋಶ

ನಟ ದರ್ಶನ್‌ ಅವರು ಹೇಳಿದ್ದು ಇಷ್ಟು….

  1. ದರ್ಶನ್, ಸುದೀಪ್ , ಶಿವಣ್ಣ, ಯಶ್, ಅಭಿ ಮಾತ್ರ ನಿಮ್ಮ‌ ಕಣ್ಣಿಗೆ ಕಾಣೋದಾ? ಬೇರೆ ತಮಿಳು ಚಿತ್ರದಲ್ಲಿ ಕೋಟಿ ಕೋಟಿ ಮಾಡಿದವನು ಕಾಣ್ತಿಲ್ವ?
  2. ಇತ್ತೀಚೆಗೆ ತಮಿಳು ಸಿನಿಮಾ ಬಿಡುಗಡೆಯಾಯಿತು. ಆ ಸಿನಿಮಾವನ್ನು ಕನ್ನಡದ ವಿತರಕರೊಬ್ಬರು ಕರ್ನಾಟಕ‌ ಹಂಚಿಕೆಗೆ 6 ಕೋಟಿ ರೂ. ಖರೀದಿ ಮಾಡಿದರು (ಜೈಲರ್‌ ಸಿನಿಮಾ ವಿತರಣೆ ಮಾಡಿದ್ದು ಜಯಣ್ಣ). ಆದರೆ ಅವರು 36-37 ಕೋಟಿ ರೂ. ಸಂಪಾದಿಸಿದರು. ಕನ್ನಡದವರು ತಮಿಳು ಸಿನಿಮಾಗೆ 37 ಕೋಟಿ ರೂ. ಕೊಂಡೊಯ್ಯಲು ಬಿಟ್ಟು ಈಗ ಕನ್ನಡ ಕಲಾವಿದರನ್ನು ಮಾತ್ರ ಹೋರಾಟಕ್ಕೆ ಕರೆಯೋದು ಯಾವ ನ್ಯಾಯ?
  3. 3.ತಮಿಳು ಸಿನಿಮಾಕ್ಕೆ 37 ಕೋಟಿ ರೂ. ಕೊಟ್ರಲ್ಲಾ ಅವರನ್ನು ಹೋರಾಟಕ್ಕೆ ಕರೆಯಿರಿ. ಕನ್ನಡಿಗರು ಕನ್ನಡ ಸಿನಿಮಾನೆ ನೋಡಲ್ಲ. ತಮಿಳು ಸಿನಿಮಾಗೆ 37 ಕೋಟಿ ಕೊಡ್ತೀರಿ. ಇಷ್ಟೆಲ್ಲ ಹಣ ಕನ್ನಡಿಗರು ಸಿನಿಮಾ ನೋಡಿದ್ರಿಂದ‌ ತಾನೆ ಬಂದಿದ್ದು. ಕನ್ನಡಿಗರು ಸಿನಿಮಾ ಮಾಡಿದ್ರೆ ಅದನ್ನ ನೀವು ನೋಡಲ್ಲ. ನೀವು ಬೇರೆ ಭಾಷೆಗೆ ತೋರಿಸುವ ಪ್ರೀತಿ ನಮ್ಮ ಸಿನಿಮಾಗೂ ತೋರಿಸಿ. ಆ ಮೇಲೆ ಕನ್ನಡ ಕಲಾವಿದರನ್ನು ಕರೆಯಿರಿ

Continue Reading
Advertisement
Weather Update and Monsoon starts withdrawing from India
ಕರ್ನಾಟಕ5 mins ago

Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?

HD Kumaraswamy infront of KRS Dam
ಕರ್ನಾಟಕ5 mins ago

Cauvery water dispute : ಕಾವೇರಿ ವಿಷಯದಲ್ಲಿ ಪ್ರಧಾನಿ ಮಧ್ಯ ಪ್ರವೇಶಕ್ಕೆ ಸಲಹೆ ಮಾಡಿದ್ದೆ: ಸರ್ಕಾರ ಕೇಳಲಿಲ್ಲವೆಂದ ಎಚ್‌ಡಿಕೆ

DK Shivakumar Janata Darshan at Anekal
ಕರ್ನಾಟಕ5 mins ago

Janata Darshana: ಏಕಕಾಲದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜನತಾ ದರ್ಶನ: ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ ಚಿಂತನೆ

Surjewala and KN Rajanna
ಕರ್ನಾಟಕ24 mins ago

Congress Politics : ಕೆ.ಎನ್‌. ರಾಜಣ್ಣಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಸುರ್ಜೇವಾಲ!

protest against Actor Darshan
ಪ್ರಮುಖ ಸುದ್ದಿ33 mins ago

Actor Darshan : ನಾವಷ್ಟೇ ಕಾಣ್ಸೋದಾ? ಹೇಳಿಕೆಯಿಂದ ರೈತರ ಕೆಂಗಣ್ಣಿಗೆ ಗುರಿಯಾದ ನಟ ದರ್ಶನ್‌; ಕ್ಷಮೆ ಯಾಚನೆಗೆ ಆಗ್ರಹ

CM Siddaramaiah and HD Devegowda infront of KRS Dam
ಕರ್ನಾಟಕ59 mins ago

Cauvery water dispute : ದೇವೇಗೌಡರ ನೋಡಿ ಕಲಿಯಲು ಬಿಜೆಪಿಗೆ ಸಲಹೆ ನೀಡಿದ ಸಿಎಂ ಸಿದ್ದರಾಮಯ್ಯ!

Chamarajanagara bandh on Sep 27
ಕರ್ನಾಟಕ1 hour ago

Cauvery Protest : ಸೆ. 27ಕ್ಕೆ ಚಾಮರಾಜನಗರ ಬಂದ್‌, ಸಿಎಂ ಸಿದ್ದರಾಮಯ್ಯ ಭೇಟಿಯ ದಿನವೇ ಬಿಸಿ ಮುಟ್ಟಿಸಲು ಪ್ಲ್ಯಾನ್‌

Pooja Hegde
South Cinema1 hour ago

Pooja Hegde: ಖ್ಯಾತ ಕ್ರಿಕೆಟಿಗನ ಜತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಪೂಜಾ ಹೆಗ್ಡೆ?

PM Narendra Modi
ದೇಶ1 hour ago

PM Narendra Modi: ಮಹಿಳಾ ಮೀಸಲು ಜಾರಿ ಮಾಡಿದ್ದು ಯಾರು? ಮಹಿಳೆಯರು ನೆನಪಿಟ್ಟುಕೊಳ್ಳಬೇಕು ಎಂದ ಮೋದಿ

CM Siddaramaiah infront of chamarajanagar male mahadeshwara hills
ಕರ್ನಾಟಕ1 hour ago

CM Siddaramaiah : 2ನೇ ಅವಧಿಗೆ ಚಾಮರಾಜನಗರಕ್ಕೆ ಸಿಎಂ ಭೇಟಿ; ಮೌಢ್ಯಕ್ಕೆ ಸೆಡ್ಡು ಹೊಡೆದ ಸಿದ್ದರಾಮಯ್ಯ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ3 hours ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ5 hours ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ7 hours ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ8 hours ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ15 hours ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ1 day ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

ಟ್ರೆಂಡಿಂಗ್‌