Site icon Vistara News

Dina Bhavishya : ದಿನದ ಮಟ್ಟಿಗೆ ಖರ್ಚು ಹೆಚ್ಚು; ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Dina Bhavishya

ಚಂದ್ರನು ಶನಿವಾರ ವೃಷಭ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಕಟಕ ರಾಶಿಯವರು ಅನಗತ್ಯ ಖರ್ಚಿನ ಹೊರತಾಗಿಯೂ ನಿಮ್ಮ ಆರ್ಥಿಕ ಭಾಗವು ಬಲವಾಗಿರುತ್ತದೆ. ನಿಮ್ಮ ಆಕರ್ಷಣೆ ಹಾಗೂ ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ವಾಹನ ಚಾಲನೆ ಮಾಡುವಾಗ ಜಾಗೃತೆ ವಹಿಸಿ, ಅಪಘಾತ ಸಂಭವ.ಆರೋಗ್ಯದ ಕುರಿತು ಕಾಳಜಿ ವಹಿಸಿ.ಉದ್ಯೋಗಿಗಳಿಗೆ ಶುಭ ಫಲ.ಮನದ ಬಯಕೆ ಈಡೇರುವ ಆಶಾಭಾವನೆ ಮೂಡಲಿದೆ. ವೃಶ್ಚಿಕ ರಾಶಿಯವರು ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರಿಕೆ ವಹಿಸಿ.ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ, ವ್ಯತಿರಿಕ್ತವಾದ ಪರಿಣಾಮದಿಂದಾಗಿ ಸ್ನೇಹದಲ್ಲಿ ಬಿರುಕು ಮೂಡುವ ಸಾಧ್ಯತೆ.ಅನಗತ್ಯ ಖರ್ಚು ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (21-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ.
ತಿಥಿ: ಚೌತಿ 18:13 ವಾರ: ಶನಿವಾರ
ನಕ್ಷತ್ರ: ಅಶ್ವಿನಿ 24:35 ಯೋಗ: ವ್ಯಾಘಾತ 11:35
ಕರಣ: ಭವ 07:40 ಅಮೃತಕಾಲ: ರಾತ್ರಿ 08:13 ರಿಂದ 09:41
ದಿನದ ವಿಶೇಷ: ಸಂಕಷ್ಟಹರ ಚತುರ್ಥಿ, ಅಂತಾರಾಷ್ಟ್ರೀಯ ಶಾಂತಿ ದಿನ

ಸೂರ್ಯೋದಯ : 06:09   ಸೂರ್ಯಾಸ್ತ : 06:19

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ
6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ನಿಮ್ಮ ಹಾಸ್ಯದ ಮನೋಭಾವನೆ ಇತರರನ್ನು ಆಕರ್ಷಿಸುವುದು. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಿರಿ. ಅಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ವೃಷಭ: ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು, ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಏತನ್ಮಧ್ಯೆ ಅತಿಥಿಗಳ ಆಗಮನ ಹರ್ಷ ತರುವುದು.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

ಮಿಥುನ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಿನ ಆಗುವ ಕೆಲಸಗಳ ಬಗೆಗೆ ಕಾರ್ಯ ಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವ ಸಾಧ್ಯತೆ ಇದೆ. ಕೋಪದಿಂದ ಏನನ್ನು ಸಾಧಿಸಲಾಗದು.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

ಕಟಕ: ಅನಗತ್ಯ ಖರ್ಚಿನ ಹೊರತಾಗಿಯೂ ನಿಮ್ಮ ಆರ್ಥಿಕ ಭಾಗವು ಬಲವಾಗಿರುತ್ತದೆ. ನಿಮ್ಮ ಆಕರ್ಷಣೆ ಹಾಗೂ ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ವಾಹನ ಚಾಲನೆ ಮಾಡುವಾಗ ಜಾಗೃತೆ ವಹಿಸಿ, ಅಪಘಾತ ಸಂಭವ.ಆರೋಗ್ಯದ ಕುರಿತು ಕಾಳಜಿ ವಹಿಸಿ.ಉದ್ಯೋಗಿಗಳಿಗೆ ಶುಭ ಫಲ.ಮನದ ಬಯಕೆ ಈಡೇರುವ ಆಶಾಭಾವನೆ ಮೂಡಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

ಸಿಂಹ:ಕುಟುಂಬದ ಆಪ್ತರ ಹಾಗೂ ಸ್ನೇಹಿತರ ಸೂಕ್ತ ಸಲಹೆ ಸಹಕಾರ ಸಿಗುವುದು.ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ವಿಶ್ರಾಂತಿ ಸಿಗಲಿದೆ.ಹಣಕಾಸು ಪ್ರಗತಿ ಉತ್ತಮ.ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ಅಗತ್ಯವಿದ್ದಷ್ಟೆ ಮಾತನಾಡಿ,ಸಮಾಧಾನದಿಂದ ವರ್ತಿಸಿ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

ಕನ್ಯಾ: ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ. ಖರ್ಚು ಹೆಚ್ಚಾಗುವ ಸಾಧ್ಯತೆ.ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ.ಕು ಟುಂಬದ ಅಸಹಕಾರದಿಂದ ಕಿರಿಕಿರಿ .ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆಪ್ತ ಸಂಬಂಧಿಕರಿಂದ ಸಹಾಯ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ.ಹಣಕಾಸು ಪ್ರಗತಿ.ಹಳೆಯ ವಿಚಾರಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ, ಎಚ್ಚರಿಕೆ ಇರಲಿ.ಉತ್ತಮ ಆರೋಗ್ಯ, ಉದ್ಯೋಗದಲ್ಲಿ ಸಾಧಾರಣ.ಕುಟುಂಬದ ಸಹಕಾರ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ವೃಶ್ಚಿಕ: ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರಿಕೆ ವಹಿಸಿ.ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ, ವ್ಯತಿರಿಕ್ತವಾದ ಪರಿಣಾಮದಿಂದಾಗಿ ಸ್ನೇಹದಲ್ಲಿ ಬಿರುಕು ಮೂಡುವ ಸಾಧ್ಯತೆ.ಅನಗತ್ಯ ಖರ್ಚು.ಆರೋಗ್ಯ ಸಾಧಾರಣ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ಧನಸ್ಸು: ಅನಿರೀಕ್ಷಿತ ಪ್ರಯಾಣ.ಆತುರದ ಭರದಲ್ಲಿ ಅತಿರೇಕದ ಮಾತುಗಳು ಜಗಳ ಇರಬಹುದು, ಸಮಾಧಾನದಿಂದ ವರ್ತಿಸಿ.ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ, ಎಚ್ಚರಿಕೆ ಇರಲಿ.ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ವರ್ತಿಸಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ಮಕರ: ಆರೋಗ್ಯ ಉತ್ತಮ.ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು.ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಭರವಸೆ.ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಪ್ರಯತ್ನಿಸುವಿರಿ.ಸಮಾರಂಭದ ಆಮಂತ್ರಣ ಬರುವ ಸಾಧ್ಯತೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕುಂಭ: ಆಹಾರದ ಕ್ರಮ ಆರೋಗ್ಯದಲ್ಲಿ ವ್ಯತ್ಯಾಸ ಮೂಡಿಸಬಹುದು.ಅಮೂಲ್ಯ ವಸ್ತುಗಳ ಬಗೆಗೆ ಕಾಳಜಿ ವಹಿಸಿ.ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು.ಉದ್ಯೋಗದಲ್ಲಿ ಪ್ರಗತಿ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

ಮೀನ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ.ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಭರವಸೆ ಮೂಡಲಿದೆ.ಆರೋಗ್ಯ ಉತ್ತಮ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version