ಚಂದ್ರನು ಸಿಂಹ ರಾಶಿಯಲ್ಲೆ ನೆಲಸಲಿದ್ದು, ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಕಟಕ ರಾಶಿಯವರಿಗೆ ಮಾನಸಿಕವಾಗಿ ದೈಹಿಕವಾಗಿ ಆರೋಗ್ಯ ಪರಿಪೂರ್ಣವಾಗಿರಲಿದೆ. ಹರ್ಷ ತುಂಬಿದ ಮನಸ್ಸು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಹಳೆಯ ಬಾಕಿ ಮರುಪಾವತಿ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯಮಿಗಳಿಗೆ ಒಳ್ಳೆಯ ದಿನ. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರವಾಸ ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (27-09-2024)
ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ.
ತಿಥಿ: ದಶಮಿ 13:19 ವಾರ: ಶುಕ್ರವಾರ
ನಕ್ಷತ್ರ: ಪುಷ್ಯ 25:19 ಯೋಗ: ಶಿವ 23:32
ಕರಣ: ವಿಷ್ಟಿ (ಭದ್ರ) 13:19 ಅಮೃತಕಾಲ: ಸಂಜೆ 06:28 ರಿಂದ 08:11
ದಿನದ ವಿಶೇಷ: ವಿದ್ಯಾಪಯೋನಿಧಿ ತೀರ್ಥರ ಆರಾಧನೆ
ಸೂರ್ಯೋದಯ : 06:09 ಸೂರ್ಯಾಸ್ತ : 06:12
ಮೇಷ: ನಿಮ್ಮ ಆಪ್ತರು ಸಮಸ್ಯೆಯನ್ನು ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು, ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಅನಗತ್ಯ ಒತ್ತಡ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಸಂಗಾತಿಯ ಮಧುರ ಮಾತುಗಳು ಹಿತವೆನಿಸುಬಹುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7
ವೃಷಭ: ದೀರ್ಘಕಾಲದ ಪ್ರಯತ್ನ ನಿಮಗೆ ಯಶಸ್ಸು ತಂದು ಕೊಡಲಿದೆ. ಈ ಹಿಂದೆ ನೀವು ಮಾಡಿದ ಸಹಾಯ ಇಂದು ಫಲ ನೀಡಲಿದೆ. ಹಿರಿಯರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ವ್ಯಾಪಾರದಲ್ಲಿ ಅಭಿವೃದ್ಧಿ ಕಾಣಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6
ಮಿಥುನ: ಹತಾಶೆಯ ಭಾವನೆಯಿಂದ ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಲಾಭ ಸಿಗುವ ಸಾಧ್ಯತೆ ಇದೆ. ಪ್ರೀತಿ-ಪಾತ್ರರ ಜತೆ ವಾದಗಳಿಗೆ ಕಾರಣವಾಗಬಹುದಾದ ವಿವಾದಾತ್ಮಕ ವಿಷಯಗಳನ್ನು ತಪ್ಪಿಸಿ, ಎಚ್ಚರಿಕೆಯಿಂದ ಮಾತನಾಡಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ ಅದೃಷ್ಟ ಸಂಖ್ಯೆ: 4
ಕಟಕ: ಮಾನಸಿಕವಾಗಿ ದೈಹಿಕವಾಗಿ ಆರೋಗ್ಯ ಪರಿಪೂರ್ಣವಾಗಿರಲಿದೆ. ಹರ್ಷ ತುಂಬಿದ ಮನಸ್ಸು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಹಳೆಯ ಬಾಕಿ ಮರುಪಾವತಿ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯಮಿಗಳಿಗೆ ಒಳ್ಳೆಯ ದಿನ. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರವಾಸ ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7
ಸಿಂಹ: ಬಹಳ ದಿನಗಳಿಂದ ಕಾಡುತ್ತಿರುವ ಸಮಸ್ಯಗೆ ಪರಿಹಾರ ಸಿಗಲಿದೆ. ಭವಿಷ್ಯದ ಹೂಡಿಕೆ ವ್ಯವಹಾರದ ಕುರಿತಾಗಿ ಆಲೋಚನೆ ಮಾಡುವಿರಿ. ನಿಮ್ಮ ಹಿಂದೆ ನಿಮಗೆ ಆಗದವರು ಪಿತೂರಿ ನಡೆಸುವ ಸಾಧ್ಯತೆ ಇದೆ ಅಂತವರಿಂದ ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6
ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಒತ್ತಡ ತುಂಬಿದ ವಾತಾವರಣದಿಂದ ಆಯಾಸ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ತೊಡಗಿರುವವರಿಗೆ ದಿನದ ಮಟ್ಟಿಗೆ ಹೆಚ್ಚಿನ ಲಾಭ ಸಿಗಲಿದೆ. ಕುಟುಂಬ ಸಮೇತರಾಗಿ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7
ವೃಶ್ಚಿಕ: ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಾಗಲಿದೆ. ನಿಮ್ಮ ಸಂತೋಷದ ಸಂಗತಿಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ.ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8
ಧನಸ್ಸು: ಕೆಲವು ಪ್ರಮುಖ ನಿರ್ಧಾರಗಳು ನಿಮ್ಮ ಮೇಲೆ ಪರಿಣಾಮ ಬೀರಬಹುದು. ಅದರ ಹೊರತಾಗಿ ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಕುಟುಂಬ ಸದಸ್ಯರ ಮಾತುಗಳು ನಿಮ್ಮನ್ನು ಘಾಸಿಗೊಳಿಸಬಹುದು.
ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಮಿಶ್ರ ಫಲ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5
ಮಕರ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅದರಲ್ಲಿಯೂ ಗರ್ಭಿಣಿಯರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಅನಾವಶ್ಯಕ ಖರ್ಚುಗಳಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಸಂಬಂಧ ಪಡದೆ ಇರುವ ವಿಷಯದ ಕುರಿತು ಮೂಗು ತೂರಿಸುವುದು ಬೇಡ. ಟೀಕೆಗಳನ್ನು ಎದುರಿಸಬೇಕಾದಿತು, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5
ಕುಂಭ: ವಿವಾದಾತ್ಮಕ ವಿಷಯಗಳಿಂದ ದೂರ ಇರಿ, ಮಾತಿನಲ್ಲಿ ಹಿಡಿತವಿರಲಿ. ತಮ್ಮ ಬಳಿ ಯಾರಾದರೂ ಹಣದ ಸಹಾಯ ಬೇಡುವ ಸಾಧ್ಯತೆ ಇದೆ, ಆಲೋಚಿಸಿ ಹೆಜ್ಜೆ ಇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಮೀನ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆ ಮಾರ್ಗಸೂಚಿಯಾಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ಉದ್ಯೋಗಿಗಳಿಗೆ ಅಭದ್ರತೆಯ ಭಾವನೆ ಕಾಡಲಿದೆ. ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com