ಚಂದ್ರನು ಶನಿವಾರ ರಾತ್ರಿ 09:18 ಗಂಟೆಗೆ ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು. ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಮಿಥುನ ಹಾಗೂ ಮೀನ ರಾಶಿಯ ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕನ್ಯಾ ರಾಶಿಯ ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (30-09-2023)
ಮೇಷ: ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು. ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಸಂಗಾತಿಯ ಆರೋಗ್ಯದ ಕುರಿತು ಕಾಳಜಿವಹಿಸಿ. ನೀವೂ ಕೊಟ್ಟಿರುವ ಹಣ ನಿಮಗೆ ಮರಳಿ ಸಿಗಬಹುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ವೃಷಭ: ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆ ಇದೆ. ಈ ಹಿಂದೆ ಹೂಡಿಕೆ ಮಾಡಿದ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಮನೆ ಕೆಲಸ ಸುಸ್ತು ಮಾಡುತ್ತದೆ. ನಿಮ್ಮನ್ನು ಮಾನಸಿಕ ಒತ್ತಡದಲ್ಲಿರಿಸುತ್ತದೆ. ಇಂದು ನೀವು ಆಪ್ತ ಮತ್ತು ಹಳೆಯ ಸ್ನೇಹಿತನನ್ನು ಭೇಟಿಯಾಗುವ ಮೂಲಕ ಹಿಂದಿನ ಸುವರ್ಣ ದಿನಗಳಲ್ಲಿ ಕಳೆದುಹೋಗಬಹುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4
ಮಿಥುನ: ಉತ್ಸಾಹ ತುಂಬಿದ ವಾತಾವರಣ ಇರಲಿದೆ. ಇಂದು ನೀವು ಉತ್ಸಾಹದಲ್ಲಿ ಇರುತ್ತಿರಿ. ಅನಾವಶ್ಯಕ ಖರ್ಚು ಮಾಡಿ ಆಮೇಲೆ ಒದ್ದಾಡುವುದು ಬೇಡ. ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಕಟಕ: ನೀವು ಇತರರನ್ನು ಶ್ಲಾಘಿಸುವ ಮೂಲಕ ಯಶಸ್ಸನ್ನು ಆನಂದಿಸುವ ಸಾಧ್ಯತೆ ಇದೆ. ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ಸಿಂಹ: ಆತ್ಮವಿಶ್ವಾಸತೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ ಇದೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕಬೇಕು. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4
ಕನ್ಯಾ: ಸಕಾರಾತ್ಮಕ ಆಲೋಚನೆಗಳು ನಿಮಗೆ ಪುಷ್ಟಿ ನೀಡಲಿವೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ. ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸದೃಢವಾಗಿ ಇರುವಿರಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5
ವೃಶ್ಚಿಕ: ಹಳೆಯ ಸ್ನೇಹಿತರೊಂದಿಗೆ ಆತ್ಮೀಯ ಮಾತುಕತೆಯಲ್ಲಿ ತೊಡಗುವಿರಿ. ಭವಿಷ್ಯದ ಜೀವನಕ್ಕಾಗಿ ಹೂಡಿಕೆ ಕುರಿತು ಆಲೋಚನೆ ಮಾಡುವಿರಿ. ಸಂಗಾತಿಯಿಂದ ಸಲಹೆ ಪಡೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಧನಸ್ಸು: ಅನೇಕ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕೋರ್ಟ್ ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಮಕರ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೋ ಮೂಲದಿಂದ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಕುಟುಂಬದ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಮಾತಿಗೆ ವಿರಾಮ ನೀಡಿ. ಉದ್ಯೋಗಿಗಳಿಗೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ಕುಂಭ: ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡುವ ಸಾಧ್ಯತೆ ಇದೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದಲಿದ್ದೀರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?
ಮೀನ: ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ ,ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನು ಸರಿಗೊಳಿಸಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com