Site icon Vistara News

Dina Bhavishya : ಈ ರಾಶಿಯವರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ!

dina bhavishya

ಚಂದ್ರನು ಮಂಗಳವಾರ ಸಂಜೆ 04:06ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸಿದ್ದು, ಬುಧವಾರವೂ ಇಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ ಮುಂದುವರಿಯಿರಿ. ಮೇಷ ಹಾಗೂ ಮಿಥುನ, ವೃಶ್ಚಿಕ ರಾಶಿಯ ಉದ್ಯೋಗಿಗಳಿಗೆ ಕೆಲಸದ ಸ್ಥಳದಲ್ಲಿ ಕಿರಿಕಿರಿ ಇರಲಿದೆ. ಧನಸ್ಸು ರಾಶಿಯವರಿಗೆ ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಇತರೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (6-09-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ಸಪ್ತಮಿ 15:37 ವಾರ: ಬುಧವಾರ
ನಕ್ಷತ್ರ: ಕೃತ್ತಿಕಾ 09:18 ಯೋಗ: ಹರ್ಷಣ 22:24
ಕರಣ: ಭವ 15:37 ಅಮೃತಕಾಲ: ಬೆಳಗ್ಗೆ 06:54 ಯಿಂದ 08:31ವರೆಗೆ
ದಿನದ ವಿಶೇಷ: ಶ್ರೀಕೃಷ್ಣ ಜನ್ಮಾಷ್ಟಮಿ, ದಶಫಲ ವ್ರತ, ರಾಷ್ಟ್ರೀಯ ಪುಸ್ತಕ ದಿನ,

ಸೂರ್ಯೋದಯ : 06: 15  ಸೂರ್ಯಾಸ್ತ : 06:46

ರಾಹುಕಾಲ: ಸಾಯಂಕಾಲ 3.00 ರಿಂದ 4.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ ಮುಂದುವರಿಯಿರಿ. ಆಪ್ತ ವ್ಯಕ್ತಿಗಳಿಗೆ ಸಹಾಯ ಮಾಡುವಿರಿ. ಮನೆಯಲ್ಲಿ ಕಲಹಗಳಿಗೆ ಆಗದಂತೆ ನೋಡಿಕೊಳ್ಳಿ. ಆರೋಗ್ಯ ಪರಿಪೂರ್ಣವಾಗಿ ಇರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಉಂಟಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ವೃಷಭ: ಅತಿರೇಕದಲ್ಲಿ ಮಾತನಾಡುವ ಮುನ್ನ ಯೋಚಿಸಿ. ತಿಳಿಯದೆ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 3

ಮಿಥುನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಸ್ನೇಹಿತರಿಗೆ ಸಹಾಯ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸಕರಾತ್ಮಕ ಆಲೋಚನೆಗಳು ಪುಷ್ಟಿ ನೀಡುತ್ತದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಕಟಕ: ಕೆಲಸ ಕಾರ್ಯಗಳಲ್ಲಿ ಒತ್ತಡ ಉಂಟು ಮಾಡುವ ವಿಚಾರಗಳಿಂದ ದೂರ ಇರಿ. ತಾಳ್ಮೆ ಇರಲಿ. ಹಣದ ಸಹಾಯ ಬೇಡುವ ಸಾಧ್ಯತೆ ಇದೆ, ಆದರೆ ಆಲೋಚಿಸಿ ಮುಂದುವರಿಯಿರಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಸಿಂಹ: ಇತರರು ನಿಮ್ಮ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತಪಡಿಸಲಿದ್ದಾರೆ. ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗ, ಆರೋಗ್ಯ, ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಕನ್ಯಾ: ನಿಮ್ಮ ಒತ್ತಡವನ್ನು ಬೇರೊಬ್ಬರ ಮೇಲೆ ಹಾಕಿ ಕೋಪ ಮಾಡಿಕೊಳ್ಳುವುದು ಬೇಡ. ಬದಲಿಗೆ ಸಮಾಧಾನದಿಂದ ವರ್ತಿಸಿ. ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆಪ್ತರೊಂದಿಗೆ ಬಾಲ್ಯದ ನೆನಪು ಹಂಚಿಕೊಳ್ಳುವಿರಿ. ಮನಸ್ಸಿನ ಒತ್ತಡ ಈ ಮೂಲಕ ಹೊರಹಾಕುವಿರಿ. ಆರೋಗ್ಯ ಮಧ್ಯಮವಾಗಿರಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ ಸಿಗಲಿದೆ. ಕಾರ್ಯದಲ್ಲಿ ನಿಧಾನ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಪ್ರತಿಫಲ ಸಿಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಧನಸ್ಸು: ಚುರುಕುತನದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ.
ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಹೊಸ ಸ್ನೇಹಿತರ ಪರಿಚಯ ಆಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಸ್ತ್ರೀ ಶಾಪದಿಂದ ನಿಜವಾಗಿಯೂ ಕೆಟ್ಟದ್ದಾಗುತ್ತಾ?

ಮಕರ: ಸಮಯ ವ್ಯರ್ಥಮಾಡಿ ಕೊರಗುವುದು ಬೇಡ. ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಉತ್ತಮ ಆಲೋಚನೆಗಳು ಇರಲಿ. ಹಳೆಯ ನೆನಪುಗಳು ಮಾನಸಿಕ ಒತ್ತಡ ಉಂಟು ಮಾಡುವ ಸಾಧ್ಯತೆ ಇದೆ. ದೈಹಿಕ ಆರೋಗ್ಯ ಉತ್ತಮವಾಗಿರಲಿದೆ. ವಿನಾಕಾರಣ ಕುಟುಂಬ ಸದಸ್ಯರೊಂದಿಗೆ ಕಲಹಗಳು ಸೃಷ್ಟಿ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಕುಂಭ: ಅಧಿಕ ಶ್ರಮದಿಂದ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ, ಕಾಳಜಿ ಇರಲಿ. ಸಾಂಕ್ರಮಿಕ ರೋಗದ ಬಾಧಿಸಲಿದೆ, ಆದಷ್ಟು ಮುಂಜಾಗ್ರತೆ ವಹಿಸುವುದು ಒಳ್ಳೆಯದು. ಸ್ನೇಹಿತರ ಸಹಕಾರ ಸಿಗಲಿದೆ. ಸಂಗಾತಿಯೊಂದಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?

ಮೀನ: ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು. ಆರೋಗ್ಯ ಪರಿಪೂರ್ಣ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ಮಾಡಿಕೊಡಬೇಡಿ. ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಮನಸ್ಸಿನ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆಯಿಂದ ತಂದುಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version