ಚಂದ್ರನು ಶುಕ್ರವಾರ ಕಟಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಚಂದ್ರನ ಬಲವಿರುವ ಮೇಷ ರಾಶಿಯವರು ಅನಗತ್ಯವಾಗಿ ಇತರರ ಬಗ್ಗೆ ಮನೆಯಲ್ಲಿ ಚರ್ಚಿಸುವುದು ಬೇಡ, ಇದರಿಂದ ಮನೆಯ ವಾತಾವರಣ ಕೆಡುವ ಸಾಧ್ಯತೆ ಇದೆ. ವೃಷಭ ರಾಶಿಯವರು ಭೂಮಿ, ಆಸ್ತಿ ಖರೀದಿ ವ್ಯವಹಾರದಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಮಿಥುನ ರಾಶಿಯ ಅರ್ಹ ನೌಕರರಿಗೆ ಇಂದು ಉದ್ಯೋಗದಲ್ಲಿ ಬಡ್ತಿ ಹೊಂದುವ ಅವಕಾಶ ಕೂಡಿಬರಲಿದೆ. ಸಿಂಹ ರಾಶಿಯ ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಇತರೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (8-09-2023)
ಮೇಷ: ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಹಣಗಳಿಸುವ ವಿವಿಧ ಮಾರ್ಗಗಳು ಕಾಣಲಿವೆ. ಅನಗತ್ಯವಾಗಿ ಇತರರ ಬಗ್ಗೆ ಮನೆಯಲ್ಲಿ ಚರ್ಚಿಸುವುದು ಬೇಡ, ಮನೆಯ ವಾತಾವರಣ ಕೆಡುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಆರೋಗ್ಯದಲ್ಲಿ ಸಾಧಾರಣ ಫಲ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9
ವೃಷಭ: ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ, ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಸಾಧ್ಯವಾದಷ್ಟು ತಾಳ್ಮೆಯಿಂದ ಇರಿ. ಭೂಮಿ, ಆಸ್ತಿ ಖರೀದಿ ವ್ಯವಹಾರದಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಖರ್ಚು ಹೆಚ್ಚಾಗಲಿದೆ. ಆರೋಗ್ಯ ಹಾಗೂ ಉದ್ಯೋಗದಲ್ಲಿ ಸಾಧಾರಣ ಫಲ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8
ಮಿಥುನ: ಅನಿವಾರ್ಯವಾಗಿ ಖರ್ಚು ಹೆಚ್ಚಾಗಲಿದ್ದು, ಪ್ರಯಾಣ ಮಾಡುವ ಸಾಧ್ಯತೆ ಇದೆ. ಕುಟುಂಬದಲ್ಲಿ ಯಾವುದೋ ವಿಷಯಕ್ಕೆ ಪರಸ್ಪರರ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ತಾಳ್ಮೆಯಿಂದ ವರ್ತಿಸಿ. ಅರ್ಹ ನೌಕರರಿಗೆ ಇಂದು ಉದ್ಯೋಗದಲ್ಲಿ ಬಡ್ತಿ ಹೊಂದುವ ಅವಕಾಶ ಕೂಡಿಬರಲಿದೆ. ಆರೋಗ್ಯ ಉತ್ತಮ, ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6
ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಸಮಯ ವ್ಯರ್ಥವಾಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6
ಸಿಂಹ: ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ, ಸ್ನೇಹ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರುವುದು. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4
ಕನ್ಯಾ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ ಇದೆ. ಪ್ರಯಾಣ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸ ಕಾರ್ಯಗಳು ನಿಧಾನಗತಿಯಲ್ಲಿರಲಿದೆ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭಫಲ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5
ವೃಶ್ಚಿಕ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಜನಪ್ರಿಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ ನಡೆಯಲಿದೆ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7
ಧನಸ್ಸು: ಅತಿಯಾದ ಚಿಂತೆ, ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ ಇರಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು.ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4
ಮನೆಯ ವಾಸ್ತು ಪುರುಷ ಹೇಗಿರಬೇಕು ?
ಮಕರ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ, ಹೂಡಿಕೆಯ ಕುರಿತು ಆಲೋಚನೆ ಮಾಡಿ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4
ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕತೆಯಿಂದ ಚಾಲನೆ ಮಾಡಿ, ಅಪಘಾತ ಸಂಭವಿಸಬಹುದು. ಅವಸರದಲ್ಲಿ ಕೆಲಸ ಮಾಡುವುದು ಬೇಡ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ದಿಢೀರ್ ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ.
ಅದೃಷ್ಟ ಸಂಖ್ಯೆ: 2
ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?
ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು. ಆರೋಗ್ಯ ಮಧ್ಯಮ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ,ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com