Site icon Vistara News

Dina Bhavishya : ಈ ರಾಶಿಯವರಿಗೆ ಹಣ ಗಳಿಸುವ ವಿವಿಧ ಮಾರ್ಗಗಳು ಪುಷ್ಟಿ ನೀಡಲಿವೆ

Dina Bhavishya

ಚಂದ್ರನು ಭಾನುವಾರ ವೃಶ್ಚಿಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಹಣ ಗಳಿಸುವ ವಿವಿಧ ಮಾರ್ಗಗಳು ಪುಷ್ಟಿ ನೀಡಲಿವೆ. ಅನಗತ್ಯವಾಗಿ ಇತರರ ಬಗ್ಗೆ ಮನೆಯಲ್ಲಿ ಚರ್ಚಿಸುವುದು ಬೇಡ, ಮನೆಯ ವಾತಾವರಣ ಕೆಡುವ ಸಾಧ್ಯತೆ ಇದೆ. ವೃಷಭ ರಾಶಿಯವರು ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ, ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಸಾಧ್ಯವಾದಷ್ಟು ತಾಳ್ಮೆಯಿಂದ ಇರಿ. ಭೂಮಿ, ಆಸ್ತಿ ಖರೀದಿ ವ್ಯವಹಾರದಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಖರ್ಚು ಹೆಚ್ಚಾಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (8-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ.
ತಿಥಿ: ಪಂಚಮಿ 19:57 ವಾರ: ಭಾನುವಾರ
ನಕ್ಷತ್ರ: ಅನುರಾಧ 15:29 ಯೋಗ: ಇಂದ್ರ 24:03
ಕರಣ: ಭವ 06:49 ದಿನದ ವಿಶೇಷ: ಖುಷಿ ಪಂಚಮಿ, ಸಂತ ಮೇರಿ ಹಬ್ಬ, ವಿದ್ಯಾವಾರಿಧಿ ತೀರ್ಥರ ಆರಾಧನೆ

ಸೂರ್ಯೋದಯ : 06:09   ಸೂರ್ಯಾಸ್ತ : 06:25

ರಾಹುಕಾಲ: ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಹಣ ಗಳಿಸುವ ವಿವಿಧ ಮಾರ್ಗಗಳು ಪುಷ್ಟಿ ನೀಡಲಿವೆ. ಅನಗತ್ಯವಾಗಿ ಇತರರ ಬಗ್ಗೆ ಮನೆಯಲ್ಲಿ ಚರ್ಚಿಸುವುದು ಬೇಡ, ಮನೆಯ ವಾತಾವರಣ ಕೆಡುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಆರೋಗ್ಯದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

ವೃಷಭ: ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ, ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಸಾಧ್ಯವಾದಷ್ಟು ತಾಳ್ಮೆಯಿಂದ ಇರಿ. ಭೂಮಿ, ಆಸ್ತಿ ಖರೀದಿ ವ್ಯವಹಾರದಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಖರ್ಚು ಹೆಚ್ಚಾಗಲಿದೆ. ಆರೋಗ್ಯ ಹಾಗೂ ಉದ್ಯೋಗದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

ಮಿಥುನ: ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಭವಿಷ್ಯದ ಹೂಡಿಕೆ ಕುರಿತು ಯೋಚಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ದಿನದ ಮಟ್ಟಿಗೆ ಕಿರಿಕಿರಿಯಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ 2

ಕಟಕ: ಹೊಸ ವ್ಯವಹಾರದಲ್ಲಿ ತೊಡಗುವಿರಿ. ಆತುರದ ತೀರ್ಮಾನಗಳನ್ನು ಮಾಡುವುದು ಬೇಡ. ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸುವಿರಿ. ಸಂಗಾತಿಯ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

ಸಿಂಹ: ಅತಿಯಾದ ವ್ಯಾಮೋಹ ದುಃಖಕ್ಕೆ ಕಾರಣವಾಗಬಹುದು. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ನಿಮ್ಮ ಶಕ್ತಿ ಮತ್ತು ನಿಮ್ಮ ಮುಂದಿನ ಯೋಜನೆಗಳನ್ನು ಮರು ನಿರ್ಣಯಿಸುವ ಸಮಯ. ಆರೋಗ್ಯದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

ಕನ್ಯಾ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ ಇದೆ. ಪ್ರಯಾಣ ಬೆಳೆಸುವ ಸಾಧ್ಯತೆಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸ ಕಾರ್ಯಗಳು ನಿಧಾನಗತಿಯಲ್ಲಿರಲಿದೆ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

ವೃಶ್ಚಿಕ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಜನಪ್ರೀಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ ಮಾಡುವಿರಿ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

ಧನಸ್ಸು: ಅತಿಯಾದ ಚಿಂತೆ, ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳನ್ನು ಕೇಳುವಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

ಮಕರ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದ್ದು, ಹೂಡಿಕೆಯ ಕುರಿತು ಆಲೋಚನೆ ಮಾಡುವಿರಿ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ ಮಾಡುವಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕತೆಯಿಂದ ಚಾಲನೆ ಮಾಡಿ, ಅಪಘಾತ ಸಂಭವ ಇದೆ. ಅವಸರದಲ್ಲಿ ಕೆಲಸ ಮಾಡುವುದು ಬೇಡ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ದಿಢೀರ್ ಪ್ರಯಾಣ ಬೆಳೆಸಬೇಕಾಗಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ. ಅದೃಷ್ಟ ಸಂಖ್ಯೆ: 2

ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ, ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version