ಚಂದ್ರನು ಮೀನ ರಾಶಿಯಿಂದ ಸೋಮವಾರ ಮೇಷ ರಾಶಿಯನ್ನು ರಾತ್ರಿ 11:48 ಕ್ಕೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯ ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಜತೆಗೆ ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗಲಿದೆ. ವೃಷಭ ರಾಶಿಯವರು ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅಧಿಕ ರಕ್ತದ ಒತ್ತಡ ಇರುವವರು ಯಾವುದೇ ಕಾರಣಕ್ಕೂ ತಾತ್ಸಾರ ಮಾಡುವುದು ಬೇಡ. ತುಲಾ ರಾಶಿಯವರು ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಹೆಚ್ಚಿನ ಒತ್ತಡದೊಂದಿಗೆ, ಮನೆಯಲ್ಲಿನ ಭಿನ್ನಾಭಿಪ್ರಾಯಗಳು ನಿಮ್ಮ ಏಕಾಗ್ರತೆಗೆ ಧಕ್ಕೆ ತರುವ ಸಾಧ್ಯತೆ ಇದೆ. ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ವೃಶ್ಚಿಕ ರಾಶಿಯವರು ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವುದು ಬೇಡ, ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದರಿಂದ ನಷ್ಟವಾಗುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (15-01-2024)
ಮೇಷ: ಇಂದು ನೀವೂ ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಮಾನಸಿಕವಾಗಿ ನೆಮ್ಮದಿ ಇರಲಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು ಮಾಡುವಿರಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಜತೆಗೆ ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3
ವೃಷಭ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅಧಿಕ ರಕ್ತದ ಒತ್ತಡ ಇರುವವರು ಯಾವುದೇ ಕಾರಣಕ್ಕೂ ತಾತ್ಸಾರ ಮಾಡುವುದು ಬೇಡ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ ಇವೆ. ಕೌಟುಂಬಿಕವಾಗಿ ಸಾಧಾರಣ. ಅದೃಷ್ಟ ಸಂಖ್ಯೆ: 2
ಮಿಥುನ: ಆಧ್ಯಾತ್ಮಿಕ ವಿಚಾರಗಳಿಂದ, ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ. ಇದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅನಿವಾರ್ಯ ಕಾರಣಗಳಿಂದ ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ಕಟಕ: ಯಾವುದೇ ಆಪ್ತ ಸಂಬಂಧಿಕರ ಬೆಂಬಲದಿಂದ ನೀವು ನಿಮ್ಮ ವ್ಯಾಪಾರದಲ್ಲಿ ಉತ್ತಮವಾಗಿ ಮಾಡಬಹುದು. ಇದು ನಿಮಗೆ ಆರ್ಥಿಕ ಲಾಭವನ್ನು ನೀಡುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಸಿಂಹ: ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳಿವೆ. ಅನಾವಶ್ಯಕ ಕಾರಣಗಳಿಂದ ಖರ್ಚು ಮಾಡುವಿರಿ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಉತ್ಸಾಹದ ದಿನವಿದು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2
ಕನ್ಯಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಗತ್ಯ ಖರ್ಚುಗಳ ಮೇಲೆ ನಿಯಂತ್ರಣ ಸಾಧಿಸುವಿರಿ. ಜೀವನದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡದಿಂದಾಗಿ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಹೆಚ್ಚಿನ ಒತ್ತಡದೊಂದಿಗೆ, ಮನೆಯಲ್ಲಿನ ಭಿನ್ನಾಭಿಪ್ರಾಯಗಳು ನಿಮ್ಮ ಏಕಾಗ್ರತೆಗೆ ಧಕ್ಕೆ ತರುವ ಸಾಧ್ಯತೆ ಇದೆ. ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ದೈಹಿಕ ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3
ವೃಶ್ಚಿಕ: ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವುದು ಬೇಡ, ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದರಿಂದ ನಷ್ಟವಾಗುವ ಸಾಧ್ಯತೆ ಇದೆ. ಕೆಲವು ರಹಸ್ಯ ಸುದ್ದಿಗಳಿಂದ ನಿಮಗೆ ಅಚ್ಚರಿ ಆಗಲಿದೆ. ನಿಮ್ಮ ಅಚ್ಚು ಕಟ್ಟು ಕೆಲಸದಿಂದ ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4
ಧನಸ್ಸು: ಆರ್ಥಿಕ ಪ್ರಗತಿ ಸಾಧಾರಣವಾಗಿರುವುದರಿಂದ ಒತ್ತಡ ಹೆಚ್ಚಲಿದೆ. ಪ್ರಮುಖ ಕೆಲಸ ಕಾರ್ಯಗಳು ನಿಧಾನವಾಗಿ ಸಾಗಲಿದೆ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಶುಭ ಫಲ. ದೈಹಿಕ ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1
ಮಕರ: ಅನೇಕ ಕಾರಣಾಂತರಗಳಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಕಂಡರೂ, ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ವ್ಯಾಪಾರದ ಉದ್ದೇಶದಿಂದಾಗಿ ಕೈಗೊಂಡ ಪ್ರವಾಸದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಕುಂಭ: ಮನರಂಜನೆಗಾಗಿ ಸಮಯವನ್ನು ಕಳೆಯುವಿರಿ. ಸೃಜನಶೀಲ ಕಾರ್ಯಗಳಿಂದಾಗಿ ವ್ಯಕ್ತಿತ್ವ ಪ್ರಕಾಶಿಸುವ ಸಾಧ್ಯತೆ ಇದೆ. ನಿಮ್ಮ ಅನುಭವಗಳನ್ನು ಇತರರೊಂದಿಗೆ ಹಂಚಿಕೊಳ್ಳುವಿರಿ.ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಪಡೆಯುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8
ಮೀನ: ಆಹಾರದ ವ್ಯತ್ಯಾಸದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಲಿದೆ. ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com